ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು

Hospet:

Font size:

ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು

- ಕಮಲಾಪುರದಲ್ಲಿ ಸ್ಥಳ ಪರಿಶೀಲನೆ

ಹೊಸಪೇಟೆ ಮೇ 19 : ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವಾವಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ನೂತನ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಉತ್ತಮ ಜಾಗ ಮಂಜೂರು:
ಕಮಲಾಪುರದ ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಉತ್ತಮ ಜಾಗವನ್ನು ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಯಲ್ಲಿ 10 ಏಕರೆ ಜಾಗ ಮಂಜೂರಾಗಿದ್ದು ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ:
ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. 12 ಮೀಟರ್‌ ನಾನೋಸೀಮ್ ಡೋಮ್‌‌ ತಾರಾಲಯ ಹಾಗೆಯೇ ಅತ್ಯಾಧುನಿಕ ಸೌಲಭ್ಯಗಳನು ಹೊಂದಿರುವ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಯುವ ಜನರಲ್ಲಿ ವೈಜ್ಞಾನಿಕ ಮನೋಭಾವ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಆಶಯದಂತೆ ಪ್ರತಿ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸಲಾಗುತ್ತಿದೆ. ಯುನೆಸ್ಕೋ ಪಾರಂಪರಿಕ ತಾಣವಾಗಿರುವ ಹಂಪಿಯಲ್ಲಿ ಉತ್ತಮ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಈ ಸಂಧರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್‌ನ) ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ, ನಮ್ಮ ಕಲ್ಯಾಣ ಕರ್ನಾಟಕದ ಜನಪ್ರಿಯ ಪ್ರವಾಸಿ ತಾಣವೂ ಆಗಿರುವ ವಿಜಯನಗರ ಜಿಲ್ಲೆಯ ಕಮಲಾಪುರದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಸ್ಥಾಪಿಸಲು ಉದ್ದೇಶಿಸಿರುವ ನೂತನ ವಿಜ್ಞಾನ ಕೇಂದ್ರದ ಸ್ಥಳವನ್ನು ಇಂದು ಭೇಟಿನೀಡಿ, ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಯಿತು.

ಈ ಸಂದರ್ಭದಲ್ಲಿ, ವಿಜ್ಞಾನ ತಂತ್ರಜ್ಞಾನ ಇಲಾಖೆಯ ನಿರ್ದೇಶಕರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Prev Post ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮ ಸಂಕಷ್ಟಕ್ಕೆ : ಪ್ರತಿಪಕ್ಷದ ನಾಯಕ ಆರ್ ಅಶೋಕ್ ಆಕ್ರೋಶ
Next Post ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ‘ಭೂ ಗ್ಯಾರಂಟಿ’: ಡಿಸಿಎಂ ಡಿ.ಕೆ. ಶಿವಕುಮಾರ್