ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುರಸಭಾ ವತಿಯಿಂದ ಸಚಿವ ಕೆ ಎನ್ ರಾಜಣ್ಣರವರಿಂದ ಉಚಿತ ನೋಟ್ ಪುಸ್ತಕ ವಿತರಣೆ
ಮಧುಗಿರಿ ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ತಾಲ್ಲೂಕಿನ ಹೆಸರಾಂತ ಹಾಗೂ ಇತಿಹಾಸ ಪ್ರಸಿದ್ಧ ಚಿಕ್ಕದಾಳವಾಟ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವವನ್ನು ಮುಂದಿನ ತಿಂಗಳು ನಡೆಯಲಿದ್ದು ಭಕ್ತಾದಿಗಳಿಗೆ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸ ಬೇಕು ಎಂದು ಸಹಕಾರ ಸಚಿವ ಕೆ ಎನ್ .ರಾಜಣ್ಣ
ಹೇಳಿದರು .
ಜಾತ್ರೆಯ ಸಮಯದಲ್ಲಿ ಕುಡಿಯುವ ನೀರು, ವಿದ್ಯುತ್, ಸಾರಿಗೆ ಸೌಲಭ್ಯ ಮತ್ತು ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಇನ್ನಿತರ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುರಸಭಾ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು ಶ್ರದ್ಧೆಯಿಂದ ಓದಿದರೆ ಯಾವ ಸ್ಥಾನ ಬೇಕಾದರೂ ಪಡೆಯಬಹುದು ವಿದ್ಯೆ ಸಾಧಕನ ಸ್ವತೆ ಹೊರೆತು ಸೋಮಾರಿಯ ಸ್ವತಲ್ಲ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಟ್ಟೆ.
ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷ ಲಾಲಾಪೇಟೆ ಮಂಜುನಾಥ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಡಿವೈಎಸ್ಪಿ ಮಂಜುನಾಥ್, ತಹಶೀಲ್ದಾರ್ ಶಿರಿನ್ ತಾಜ್, ಇ.ಒ ಲಕ್ಷ್ಮಣ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ, ಮುಖ್ಯ ಶಿಕ್ಷಕ ರಾಮಣ್ಣ, ಕೆ.ಪಿ.ಸಿ.ಸಿ ಸದಸ್ಯ ಮಲ್ಲಿಕಾರ್ಜುನಯ್ಯ, ಮುಖಂಡರಾದ ತುಂಗೋಟಿ ರಾಮಣ್ಣ, ಹಾಗೂ ಸಮಿತಿಯ ಪದಾಧಿಕಾರಿಗಳು, ಅಧಿಕಾರಿಗಳು, ಮುಖಂಡರುಗಳು ಭಾಗವಹಿಸಿದ್ದರು.