RCB ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣ ;ಬಿಜೆಪಿ ಪ್ರತಿಭಟನೆ
RCB ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮತ್ತು ಸಿಎಂ, ಡಿಸಿಎಂ, ಗೃಹಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ಸರ್ಕಾರ ತನ್ನ ಪ್ರಚಾರದ ತೆವಲಿಗೆ ಸರಿಯಾದ ವ್ಯವಸ್ಥೆ ಮಾಡದೆ ಆತುರಾತುರವಾಗಿ ಕಾರ್ಯಕ್ರಮ ಮಾಡಿ ಅಮಾಯಕರ ಬಲಿ ಪಡೆದಿದ್ದನ್ನು ಒಕ್ಕೊರಲಿನಿಂದ ಖಂಡಿಸಲಾಯಿತು.
ಈ ಸಾವುಗಳ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ @NswamyChalavadi, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ @drashwathcn, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ @nrkbjp, ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ದೊಡ್ಡನಗೌಡ ಪಾಟೀಲ್, ಸೇರಿದಂತೆ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.