ಅರೆಬೆಟ್ಟ ಮತ್ತು ಯಡಕುಮೇರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತ ಲೋಕಾಯುಕ್ತ ಅಧಿಕಾರಿಗಳು ದಾಳಿ photo By AI
From Jayaram Udupi
ಅರೆಬೆಟ್ಟ ಮತ್ತು ಯಡಕುಮೇರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತ
ಮಂಗಳೂರು: ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮೇರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ ೭೪ & ೭೫ರ ನಡುವಿನ ಅರೆಬೆಟ್ಟ ಮತ್ತು ಯಡಕುಮೇರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲು ಬಂಡೆ ಬಿದ್ದಿರುವ ಸ್ಥಳದಿಂದ ಸ್ವಲ್ಪ ದೂರಕ್ಕೆ ಬಂದು ನಿಂತಿದ್ದು, ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದಂತಾಗಿದೆ. ರೈಲು ಸ್ಥಗಿತಗೊಂಡಿದ್ದರಿಂದ ನೂರಾರು ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಕಾಲ ಕಳೆಯುತ್ತಿದ್ದು, ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ. ಕೆಲವು ಪ್ರಯಾಣಿಕರು ಬೇರೆ ವಾಹನದಲ್ಲಿ ತೆರಳುತ್ತಿದ್ದಾರೆ. ರೈಲ್ವೆ ಹಳಿ ಮೇಲೆ ಬಿದ್ದಿರುವ ಮಣ್ಣನ್ನು ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ.
೦೦೦
ಮಂಗಳೂರು: ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಜೂ.೨೧ರಂದು ನಡೆದಿದೆ.
ಶನಿವಾರ ಬೆಳಗ್ಗೆ ೧೧.೩೦ ಗಂಟೆ ವೇಳೆಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಪಾಲಿಕೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಪಾಲಿಕೆಯ ಎಂಜಿನಿಯರಿಂಗ್, ಯೋಜನೆ, ಕಂದಾಯ, ಲೆಕ್ಕ ಪತ್ರವಿಭಾಗಳಲ್ಲಿ ಕಡತಗಳನ್ನು ಪರಿಶೀಲಿಸಿದ್ದಾರೆ. ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರ ಚಂದ್ರ ಅವರ ನೇತೃತ್ವದಲ್ಲಿ ಇಬ್ಬರು ಡಿವೈಎಸ್ ಪಿ, ನಾಲ್ಕು ಮಂದಿ ಇನ್ಸ್ಪೆಕ್ಟರ್ಗಳು ಹಾಗೂ ಸಿಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ