ಬಿಜೆಪಿ ಪಕ್ಷದಿಂದ ಉಡುಪಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ಗಳ ಮುಂದೆ ಧರಣಿ ಸತ್ಯಾಗ್ರಹ
from ;Jayaram Udupi
ಉಡುಪಿ: ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಉಡುಪಿಯಲ್ಲಿ ಇಂದು ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಉಡುಪಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ಗಳ ಮುಂದೆ ಧರಣಿ ಸತ್ಯಾಗ್ರಹ ನಡೆಯಿತು.
೯/೧೧ ನಿವೇಶನಗಳ ಸಮಸ್ಯೆ ಬಗೆಹರಿಸಬೇಕು, ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸುವುದನ್ನು ವಿರೋಧಿಸಿ, ಹಾಗು ಆಶ್ರಯ ಮನೆಗಳ ಬಿಡುಗಡೆಗೆ ಒತ್ತಾಯಿಸಿ ನಡೆದ ಈ ಸತ್ಯಾಗ್ರಹದಲ್ಲಿ ಪಾಲ್ಗೊಂಡ ನಾಯಕರು ಹಾಗು ಜನಪ್ರತಿನಿಧಿಗಳು ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಪಿಂಚಣಿ ರದ್ದತಿಗಳಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ವಿದ್ಯುತ್ ದರ ಎರಿಕೆಯನ್ನು ಖಂಡಿಸಿದರು.
ನಿಟ್ಟೆಯಲ್ಲಿ ಪ್ರತಿಭಟನಾ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಸುನೀಲ್ ಕುಮಾರ್ ಸುಳ್ಯದಿಂದ ಆರಂಭಗೊಂಡು ಬೈಂದೂರಿನವರೆಗೆ ೩೯೯ ಸ್ಥಳಗಳಲ್ಲಿ ಈ ಧರಣಿ ನಡೆಯುತ್ತಿದ್ದು ರಾಜ್ಯ ಸರಕಾರದ ವಿರುದ್ಧ ಜನಾಕ್ರೋಶವನ್ನು ವಿನೂತನ ರೀತಿಯಲ್ಲಿ ಪಂಚಾಯತ್ ಮಟ್ಟದಲ್ಲಿ ವ್ಯಕ್ತಪಡಿಸಲಾಗುತ್ತಿದೆ ಎಂದರು.
ವಿವಿಧೆಡೆ ನಡೆದ ಪ್ರತಿಭಟನೆಗಳಲ್ಲಿ ಶಾಸಕರು ಪಾಲ್ಗೊಂಡು ಮಾತನಾಡಿದರು.