Font size:
ಕಾವೇರಿಗೆ ಸೋಮವಾರ ಬಾಗಿನ ಸಮರ್ಪಣೆ
ಮಂಡ್ಯ ಜಿಲ್ಲೆ ಕೆಆರೆಸ್ ಆಣೆಕಟ್ಟೆ 92 ವರ್ಷಗಳ ಇತಿಹಾಸದಲ್ಲಿ ಜೂನ್ ತಿಂಗಳಲ್ಲೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಣೆಕಟ್ಟೆಗೆ ಸೋಮವಾರ ಬಾಗಿನ ಸಮರ್ಪಿಸಿ, ಕಾವೇರಿ ಮಾತೆ ಪ್ರತಿಮೆಗೆ ಪೂಜೆ ಸಲ್ಲಿಸಿದರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಚಿವರಾದ ಚಲುವರಾಯಸ್ವಾಮಿ, ಎಚ್ ಸಿ ಮಹದೇವಪ್ಪ, ವೆಂಕಟೇಶ್, ಬೋಸರಾಜ್, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ರವಿ ಗಣಿಗ, ಉದಯ್, ಹರೀಶ್ ಗೌಡ, ರವಿಶಂಕರ್, ಎ ಆರ್ ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಎಂಎಲ್ಸಿಗಳಾದ ಮಧು ಮಾದೇಗೌಡ, ದಿನೇಶ್ ಗೂಳಿಗೌಡ, ತಮ್ಮಯ್ಯ ಮತ್ತಿತರರು ಭಾಗವಹಿಸಿದ್ದರು.