ವಿರೋಧ ಪಕ್ಷದ ನಾಯಕರಾಗಿದ್ದಾಗ ರೈತ ಪರ ನಿಲ್ಲುವ ಭರವಸೆ ನೀಡಿ, ಈಗ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮತ್ತು ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಮುಖ್ಯಾಂಶಗಳು:
•ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ*
•ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು.
•ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.
• ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.
*ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು.
•1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.
•ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.
• ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.
• ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.
• ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ ಎಂದು ಪ್ರಕಾಶ್ ರಾಜ್ ಅವರು ಹೇಳಿದರು.
• ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
000
ಮೈಸೂರು : ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಬಗ್ಗೆ ಚರ್ಚೆ ಶುರುವಾಗಿರುವಂತೆಯೇ ಕೋಡಿ ಮಠದ ಶ್ರೀಗಳು ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಕುರಿತು ಮಾತನಾಡಿದ ಅವರು, "ಅರಸನ ಅರಮನೆಗೆ ಕಾರ್ಮೋಡ ಕವಿದೀತು" ಎಂದು ಅವರು ನುಡಿದ ಭವಿಷ್ಯವನ್ನು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಕುತ್ತು ಇರುವುದನ್ನು ಸೂಚಿಸಿದ್ದಾರೆಂದು ಅರ್ಥೈಸಲಾಗುತ್ತಿದೆ.
ಇಂದು ಮೈಸೂರಿನ ನಮನ್ ಫೌಂಡೇಷನ್ ಅವರು ನಿರ್ಮಿಸಿರುವ ಧ್ಯಾನ ಕೇಂದ್ರವನು ಉದ್ಘಾಟಿಸಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರಕ್ಕೂ ಸಹ ತೊಂದರೆ ತಪ್ಪಿದ್ದಲ್ಲ ಎಂದು ನುಡಿದಿರುವ ಕೋಡಿ ಮಠದ ಶ್ರೀಗಳು, ಅಧಿಕಾರದಲ್ಲಿರುವವರಿಗೆ ಹಲವು ಅಡಚಣೆ, ಅಡ್ಡಿ ಆತಂಕಗಳು ಎದುರಾಗಲಿವೆ. ಈಗಿನಿಂದಲೇ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಕುರಿತು ಚಿಂತಿಸುವುದು ಉತ್ತಮ ಎಂದು ನುಡಿದರು.
ವಿಶ್ವದಲ್ಲಿ ಹಲವು ದೇಶಗಳು ಯುದ್ದೋನ್ಮಾದಲ್ಲಿವೆ. ಇಸ್ರೇಲ್ - ಇರಾಕ್, ರಷ್ಯಾ - ಉಕ್ರೇನ್ ಮತ್ತು ಭಾರತ - ಪಾಕಿಸ್ತಾನದ ನಡುವಿನ ಸಂಬಂಧಗಳು ಹಳಸುತ್ತಿರುವ ದಿಕ್ಕಿನಲ್ಲಿ ಈ ಕುರಿತು ಭವಿಷ್ಯ ನುಡಿದ ಶ್ರೀಗಳು, ಮನಸುಗಳು ಒಂದಾದಾಗ ಮಾತ್ರ ಯುದ್ಧಗಳು ನಿಲ್ಲುತ್ತವೆ. ಒಂದು ದಿನ ಭಾರತಕ್ಕೆ ಬಹುದೊಡ್ಡ ಆಘಾತ ಕಾದಿದ್ದು, ಇಡೀ ವಿಶ್ವವೇ ನಮ್ಮೆಡೆಗೆ ತಿರುಗಿ ನೋಡಲಿದೆ. ಎಂದು ನುಡಿದಿದ್ದಾರೆ.
sanje
ಬೆಂಗಳೂರು,ಜು.೧೫:ದೇವನಹಳ್ಳಿಯ ಚೆನ್ನರಾಯಪಟ್ಟಣ ಹೋಬಳಿಯ ಸುತ್ತಲಿನ ಗ್ರಾಮಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ರೈತರು ನಡೆಸಿದ ಹೋರಾಟಕ್ಕೆ ಮಣಿದಿರುವ ರಾಜ್ಯಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟು ಅನ್ನದಾತನ ಪರವಾಗಿ ತೀರ್ಮಾನ ಕೈಗೊಂಡಿದೆ.
ದೇವನಹಳ್ಳಿ ಬಳಿಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ರೈತರು ಹಾಗೂ ರೈತ ಮುಖಂಡರ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವನಹಳ್ಳಿ ತಾಲ್ಲೂಕು ಚೆನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.
ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧವಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಛಿಸುವವರ ಜಮೀನನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚಿನ ದರವನ್ನು ಮತ್ತು ಅಭಿವೃದ್ಧಿ ಪಡಿಸಿದ ಜಮೀನನ್ನು ನೀಡಲಾಗುವುದು ಎಂದರು.
ಜಮೀನನ್ನು ಸರ್ಕಾರದ ಸ್ವಾಧೀನಕ್ಕೆ ನೀಡದ ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ. ರೈತರ ಯಾವುದೇ ಜಮೀನುಗಳನ್ನು ಬಲವಂತವಾಗಿ ಭೂಸ್ವಾಧೀನಪಡಿಸಿಕೊಳ್ಳಲ್ಲ. ರೈತರು ಇಚ್ಛಿಸಿದರೆ ಮಾತ್ರ ಜಮೀನನ್ನು ಪಡೆಯುತ್ತೇವೆ ಎಂದು ಸ್ಪಷ್ಟಪಡಿಸಿದರು.
ದೇವನಹಳ್ಳಿಯ ಚೆನ್ನರಾಯಪಟ್ಟಣ ಹೋಬಳಿಯ ಸುಮಾರು ೮ ಗ್ರಾಮಗಳ ೧,೭೭೭ ಎಕರೆ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಂಡು ಅಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಪ್ರಾರಂಭಿಸುವ ಉದ್ದೇಶ ಹೊಂದಿತ್ತು. ಈ ಭೂಸ್ವಾಧೀನಕ್ಕೆ ದೊಡ್ಡ ಮಟ್ಟದ ವಿರೋಧ ವ್ಯಕ್ತವಾಗಿತ್ತು.. ರಾಜ್ಯದಲ್ಲೆಲ್ಲೂ ಈ ರೀತಿಯ ದೊಡ್ಡ ಹೋರಾಟ ನಡೆದಿರಲಿಲ್ಲ. ಇದು ಫಲವತ್ತಾದ ಜಮೀನು, ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಹಾಗಾಗಿ, ಭೂಸ್ವಾಧೀನ ಕೈಬಿಡಬೇಕು ಎಂದು ರೈತ ಪರ ಹೋರಾಟಗಾರರು ಹೇಳಿದ್ದಾರೆ. ಅದರಂತೆ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವ ತೀರ್ಮಾನ ಕೈಗೊಂಡಿದೆ ಎಂದರು.
ಈ ಹಿಂದೆ ನಾನು ವಿರೋಧ ಪಕ್ಷದ ನಾಯಕರಾಗಿದ್ದಾಗ ಈ ಹೋರಾಟಕ್ಕೆ ಬೆಂಬಲ ಸೂಚಿಸಿ ರೈತ ಪರ ನಿಲ್ಲುವಭರವಸೆ ನೀಡಿದ್ದೆ. ಈಗ ನುಡಿದಂತೆ ನಡೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಜಮೀನುಗಳ ಭೂಸ್ವಾಧೀನವನ್ನು ಕೈಬಿಡುವುದರಿಂದ ಕೈಗಾರಿಕೆಗಳು ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ, ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಪ್ರಕಾಶ್ ರೈ ಸ್ವಾಗತ
ದೇವನಹಳ್ಳಿ ಬಳಿಯ ರೈತರ ಜಮೀನುಗಳ ಭೂಸ್ವಾಧೀನ ಕೈಬಿಡುವ ಮುಖ್ಯಮಂತ್ರಿಗಳ ತೀರ್ಮಾನವನ್ನು ಶ್ಲಾಘಿಸಿರುವ ನಟ ಪ್ರಕಾಶ್ ರೈ ಅವರು ಮುಖ್ಯಮಂತ್ರಿಯವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ, ನಡೆಯಲ್ಲೂ ಎಂಬುದನ್ನು ಇಂದು ತೋರಿಸಿಕೊಟ್ಟಿದ್ದಾರೆ.ಭೂಸ್ವಾಧೀನ ಕೈಬಿಟ್ಟಿದ್ದಕ್ಕೆ ಧನ್ಯವಾದ ಎಂದು ರೈತರ ಪರವಾಗಿ ಹೋರಾಟದಲ್ಲಿ ಭಾಗಿಯಾಗಿದ್ದ ಪ್ರಕಾಶ್ ರೈ ಹೇಳಿದರು.
ಈ ಸಂದರ್ಭದಲ್ಲಿ ಸಚಿವರುಗಳಾದ ಎಂ.ಬಿ ಪಾಟೀಲ್, ಕೆ.ಎಚ್ ಮುನಿಯಪ್ಪ, ಹೆಚ್.ಕೆ ಪಾಟೀಲ್, ಕೃಷ್ಣಭೈರೇಗೌಡ, ಪ್ರಿಯಾಂಕಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ ಮತ್ತು ರೈತ ಮುಖಂಡರುಗಳು ಉಪಸ್ಥಿತರಿದ್ದರು.
sanjev
ಬೆಂಗಳೂರು,ಜು.೧೫:ನಿನ್ನೆಯಿಂದ ರಾಜ್ಯಸರ್ಕಾರದ ಸಚಿವರ ಕಾರ್ಯವೈಖರಿಯ ಮೌಲ್ಯಮಾಪನ ನಡೆಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರು ೨ನೇ ದಿನವಾದ ಇಂದೂ ಸಹ ಸಚಿವರುಗಳ ಜತೆ ಪ್ರತ್ಯೇಕ ಸಭೆ ನಡೆಸಿ ಶಾಸಕರ ದೂರು ದುಮ್ಮಾನಗಳಿಗೆ ಸ್ಪಂದಿಸುವಂತೆ ಕಿವಿಮಾತು ಹೇಳಿದರು.
ಕಳೆದ ೨ ವಾರಗಳಿಂದ ಪ್ರತಿ ವಾರವೂ ಮೂರು ದಿನ ರಾಜ್ಯದಲ್ಲಿದ್ದು, ಶಾಸಕರ ಅಹವಾಲು ಆಲಿಸಿದ್ದ ಸುರ್ಜೇವಾಲಾ ಅವರು ನಿನ್ನೆಯಿಂದ ಸಚಿವರುಗಳಿಗೆ ಕಿವಿಮಾತು ಹೇಳುವ ಜತೆಗೆ ಅವರ ಇಲಾಖೆಗಳ ಸಾಧನೆಗಳ ಪರಾಮರ್ಶೆಯೂ ನಡೆಸಿದ್ದು, ಇಂದು ಮಧ್ಯಾಹ್ನದ ಹೊತ್ತಿಗೆ ಸಚಿವರಾದ ಸತೀಶ್ ಜಾರಕಿಹೊಳಿ, ಎಸ್.ಎಸ್ ಮಲ್ಲಿಕಾರ್ಜುನ್, ಬೋಸರಾಜು, ಮಧುಬಂಗಾರಪ್ಪ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿ ಇವರುಗಳು ಭೇಟಿಯಾಗಿದ್ದು, ಮಧ್ಯಾಹ್ನದ ನಂತರ ಸಚಿವರಾದ ಲಕ್ಷ್ಮಿಹೆಬ್ಬಾಳ್ಕರ್, ಡಾ. ಹೆಚ್.ಸಿ ಮಹದೇವಪ್ಪ, ಆರ್.ಬಿ ತಿಮ್ಮಾಪುರ ಸೇರಿದಂತೆ ಹಲವು ಸಚಿವರು ಭೇಟಿಯಾಗಲಿದ್ದಾರೆ. ಈ ಎಲ್ಲ ಸಚಿವರುಗಳ ಜತೆ ಒನ್ ಟು ಒನ್ ಸಭೆ ನಡೆಸಿ ಶಾಸಕರ ಕೆಲಸ ಮಾಡಿಕೊಡುವಂತೆ ತಾಕೀತು ಮಾಡಿದರು.
ಶಾಸಕರ ಕೆಲಸ ಕಾರ್ಯಗಳು ಆಗಬೇಕು. ಶಾಸಕರುಗಳು ಸಚಿವರುಗಳು ಸ್ಪಂದಿಸುತ್ತಿಲ್ಲ ಎಂಬ ದೂರು ನೀಡಿದ್ದಾರೆ. ಈ ರೀತಿಯ ದೂರುಗಳು ಬರದಂತೆ ಕೆಲಸ ಮಾಡಿ ಶಾಸಕರು ಕಾರ್ಯಕರ್ತರ ಅಹವಾಲಿಗೆ ಸ್ಪಂದಿಸಿ ಎಂದು ಸಚಿವರುಗಳಿಗೆ ನಿರ್ದೇಶನ ನೀಢಿದರು.
ನಿನ್ನೆ ಬೆಂಗಳೂರಿಗೆ ಆಗಮಿಸಿರುವ ಸುರ್ಜೇವಾಲಾ ಅವರು ಸಚಿವರಾದ ಜಮೀರ್‌ಅಹ್ಮದ್‌ಖಾನ್, ಭೈರತಿ ಸುರೇಶ್, ರಹೀಂಖಾನ್ ಇವರುಗಳ ಜತೆ ಪ್ರತ್ಯೇಕ ಸಭೆ ನಡೆಸಿದರು. ಇಂದು ಕೆಲ ಸಚಿವರುಗಳ ಜತೆ ಸಭೆ ನಡೆಸಿರುವ ಸುರ್ಜೇವಾಲಾ ಅವರು ನಾಳೆಯೂ ಸಹ ಸಚಿವರುಗಳ ಜತೆ ಸಮಾಲೋಚನೆಗಳನ್ನು ಮುಂದುವರೆಸುವರು. ನಾಳೆ ಸಚಿವರುಗಳ ಜತೆ ಸಭೆ ನಡೆಸಿದ ಬಳಿಕ ಸುರ್ಜೇವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾ ಜತೆಯೂ ಸಭೆ ನಡೆಸಿ ಶಾಸಕರುಗಳ ಹಾಗೂ ಸಚಿವರ ಜತೆಗಿನ ಸಭೆಯ ವಿವರಗಳನ್ನು ಗಮನಕ್ಕೆ ತರುವರು ಎಂದು ಹೇಳಲಾಗಿದೆ.
ಶಾಸಕರ ಅಸಮಾಧಾನ ಅತೃಪ್ತಿಯನ್ನು ಶಮನಗೊಳಿಸುವ ನಿಟ್ಟಿನಲ್ಲಿ ಈ ಸರಣಿ ಸಭೆಗಳನ್ನು ನಡೆಸಿರುವ ಸುರ್ಜೇವಾಲಾ ಅವರು ಅಂತಿಮವಾಗಿ ಹೈಕಮಾಂಡ್‌ಗೂ ವರದಿ ನೀಡುವರು.

