ಅವಿರತವಾಗಿ ಸುರಿಯುತ್ತಿರುವ ಮಳೆ; ಕದ್ರಿ ಸಮೀಪ ಸರ್ಕ್ಯೂಟ್ ಹೌಸ್ ನಿಂದ ಬಿಜೈ ಗೆ ಬರುವ ರಸ್ತೆಯ ಮೇಲಿನ ಗುಡ್ಡ ಕುಸಿತ

Mangalore:

Font size:

ಅವಿರತವಾಗಿ ಸುರಿಯುತ್ತಿರುವ ಮಳೆ; ಕದ್ರಿ ಸಮೀಪ ಸರ್ಕ್ಯೂಟ್ ಹೌಸ್ ನಿಂದ ಬಿಜೈ ಗೆ ಬರುವ ರಸ್ತೆಯ ಮೇಲಿನ ಗುಡ್ಡ ಕುಸಿತ

From Jayaram Udupi

ಮಂಗಳೂರು: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅವಿರತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬುಧವಾರ ರಾತ್ರಿ ಸರಿ ಸುಮಾರು 11:30 ಗಂಟೆಗೆ ಕದ್ರಿ ಸಮೀಪ ಸರ್ಕ್ಯೂಟ್ ಹೌಸ್ ನಿಂದ ಬಿಜೈ ಗೆ ಬರುವ ರಸ್ತೆಯ ಮೇಲಿನ ಗುಡ್ಡ ಕುಸಿದಿದೆ. ಇದರಿಂದ ಏಕಮುಖ ರಸ್ತೆ ಸಂಪೂರ್ಣ ಬಂದ್ ಆಗಿದೆ.

ಈ ನಡುವೆ ಜಿಲ್ಲೆಯಾದ್ಯಂತ ಗುರುವಾರ ಕೂಡಾ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಸಾರಿದೆ.

ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಆತಂಕಿತಗೊಂಡಿದೆ.

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿಯ ಮೇಲೆ ಬಿದ್ದಿದೆ. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಪ್ರಗತಿಯಲ್ಲಿದೆ. ಮಳೆಯಿಂದಾಗಿ ಮಣ್ಣು ಮತ್ತೆ ಮತ್ತೆ ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಮುಂದುವರಿಯುವ ಸಾಧ್ಯತೆ ಇದೆ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ.

Prev Post ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿ ನ್ಯಾಯ ಯೋಧ ರಾಹುಲ್ ಗಾಂಧಿಯವರ ಧೈರ್ಯಕ್ಕೆ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Next Post ಕರ್ಣಾಟಕ ಬ್ಯಾಂಕ್‌ ಲಿಮಿಟೆಡ್‌ನ ಪ್ರಧಾನ ಶಾಖೆಯನ್ನು ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರ ಇಲ್ಲ;ಸಿಇಒ ರಾಘವೇಂದ್ರ ಎಸ್‌. ಭಟ್‌