Font size:
ದೆಹಲಿಯಿಂದ ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಬಂದಿಳಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿಕೆ ಶಿವಕುಮಾರ್ ಬರಮಾಡಿಕೊಂಡರು
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ ಅಕ್ರಮದ ವಿರುದ್ಧ ಆಯೋಜಿಸಿರುವ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲು ದೆಹಲಿಯಿಂದ ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಬಂದಿಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪಕ್ಷದ ಶಾಲು ಹೊದೆಸಿ ಬರಮಾಡಿಕೊಂಡರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಇದ್ದರು.