ಕೃಷ್ಣ ಮೇಲ್ದಂಡೆ ಯೋಜನೆ ಹಂತ- 3; ಸರಕಾರದ ಬದ್ಧತೆ ದೃಢ;ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್

Banglore:

Font size:

ಕೃಷ್ಣ ಮೇಲ್ದಂಡೆ ಯೋಜನೆ ಹಂತ- 3; ಸರಕಾರದ ಬದ್ಧತೆ ದೃಢ;ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್

ಕೃಷ್ಣ ಮೇಲ್ದಂಡೆ ಯೋಜನೆ ಹಂತ -3 ಪೂರ್ಣಗೊಳಿಸಲು ನಮ್ಮ ಸರಕಾರ ಬದ್ಧವಾಗಿದೆ. ಈ ಸಂಬಂಧ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ, ಭೂ ಪರಿಹಾರ ಮತ್ತು ಹೆಚ್ಚುವರಿ ಭೂ ಪರಿಹಾರ ಕೋರಿ ವಿವಿಧ ನ್ಯಾಯಾಲಯಗಳಲ್ಲಿ ಸಲ್ಲಿಸಲಾಗಿರುವ ಪ್ರಕರಣಗಳ ಕುರಿತು ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಖಾತೆ ಹೊತ್ತಿರುವ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಹತ್ವದ ಚರ್ಚೆ ನಡೆಸಲಾಯಿತು. ಸಚಿವರುಗಳಾದ ಎಂ.ಬಿ.ಪಾಟೀಲ, ಹೆಚ್.ಕೆ. ಪಾಟೀಲ್, ಆರ್.ಬಿ. ತಿಮ್ಮಾಪುರ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಮಹತ್ವದ ಯೋಜನೆಯ ಅನುಷ್ಠಾನದಿಂದ ರೈತರಿಗೆ ಶಕ್ತಿ, ಕೃಷಿಗೆ ಪ್ರೋತ್ಸಾಹ ಮತ್ತು ರಾಜ್ಯದ ಅಭಿವೃದ್ಧಿಗೆ ಹೊಸ ಚೈತನ್ಯ ತರಲಿದೆ ಎಂದು ಸಚಿವರು‌ ಹೇಳಿದರು.

Prev Post ಎಸ್‍ಐಟಿ ಷಡ್ಯಂತ್ರದ ಹಿಂದಿನ ಶಕ್ತಿಗಳನ್ನು ಪತ್ತೆ ಮಾಡಲಿ.. ಆಕ್ಷೇಪಣೆಗೆ ಇನ್ನಷ್ಟು ಕಾಲಾವಕಾಶ ಕೊಡಿ: ವಿ.ಸುನೀಲ್‍ಕುಮಾರ್
Next Post ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ ಡಿ.ಕೆ.ಶಿವಕುಮಾರ್