ಸಾರಿಗೆ ಬಸ್ ಹಿಮ್ಮುಖವಾಗಿ ಚಲಿಸಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಸಾವು
From Jayaram Udupi
ಮಂಗಳೂರು
ತಲಪಾಡಿ ಬಳಿ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಿಮ್ಮುಖವಾಗಿ ಚಲಿಸಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಮೃಯಪಟ್ಟಿದ್ದಾರೆ.ಗುರುವಾರ ಮಧ್ಯಾಹ್ನ ವೇಳೆಗೆ ಈ ದುರ್ಘಟನೆ ಸಂಭವಿಸಿದೆ.
ಈ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತ್ಯು ಪಟ್ಟು ಓರ್ವರು ಆಸ್ಪತೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಲಪಾಡಿಯ ಮೇಲಿನ ಪೇಟೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮೃತರು ಕೆ ಸಿ ರೋಡ್ ಮೂಲದವರೆಂದು ತಿಳಿದುಬಂದಿದೆ. ಘಟನೆ ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದ್ದು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದಲ್ಲದೆ, ಒಂದು ಮಗು ಕೂಡ ಸಾವನ್ನಪ್ಪಿದೆ. ಅಪಘಾತದ ಸಮಯದಲ್ಲಿ ಆಶ್ರಯ ನಿಲ್ದಾಣದ ಬಳಿ ನಿಲ್ಲಿಸಿದ್ದ ಆಟೋರಿಕ್ಷಾದಲ್ಲಿ ಕೆಲವರು ಕುಳಿತಿದ್ದರು.
ಇದಲ್ಲದೆ, ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.