Font size:
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ನಾಯಕರು
ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ): ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಪಕ್ಷದ ಮುಖಂಡರು ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.