04.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪಶ್ಚಿಮ ಬಂಗಾಳ ಮೂಲಕ ಉತ್ತರಕ್ಕೆ ಚಲಿಸುವ ಸೂಚನೆಗಳಿದ್ದರೂ, ನಿನ್ನೆ ರಾತ್ರಿ ಪಥ ಬದಲಿಸಿ ಒಡಿಸ್ಸಾ ಕರಾವಳಿ ಮೂಲಕ ಮುನ್ನುಗ್ಗಿದ ಪರಿಣಾಮವಾಗಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ

Bangalore:

Font size:

04.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪಶ್ಚಿಮ ಬಂಗಾಳ ಮೂಲಕ ಉತ್ತರಕ್ಕೆ ಚಲಿಸುವ ಸೂಚನೆಗಳಿದ್ದರೂ, ನಿನ್ನೆ ರಾತ್ರಿ ಪಥ ಬದಲಿಸಿ ಒಡಿಸ್ಸಾ ಕರಾವಳಿ ಮೂಲಕ ಮುನ್ನುಗ್ಗಿದ ಪರಿಣಾಮವಾಗಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅನಿರೀಕ್ಷಿತ ಉತ್ತಮ ಮಳೆಯಾಗಿದೆ. ಇವತ್ತು ಸಹ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆಯ ಹೆಚ್ಚಿರುವ ಸಾಧ್ಯತೆ ಇದೆ. ಈ ವಾತಾವರಣವು ಸೆಪ್ಟೆಂಬರ್ 7ರ ತನಕ ಮುಂದುವರಿಯಲಿದೆ. ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಸೆಪ್ಟೆಂಬರ್ 4ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸೆಪ್ಟೆಂಬರ್ 5ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಳನಾಡು : ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿ ತಲಪಿರುವ ವಾಯುಭಾರ ಕುಸಿತವು, ಸೆಪ್ಟೆಂಬರ್ 5ರ ಸುಮಾರಿಗೆ ಉತ್ತರ ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ.

04.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪಶ್ಚಿಮ ಬಂಗಾಳ ಮೂಲಕ ಉತ್ತರಕ್ಕೆ ಚಲಿಸುವ ಸೂಚನೆಗಳಿದ್ದರೂ, ನಿನ್ನೆ ರಾತ್ರಿ ಪಥ ಬದಲಿಸಿ ಒಡಿಸ್ಸಾ ಕರಾವಳಿ ಮೂಲಕ ಮುನ್ನುಗ್ಗಿದ ಪರಿಣಾಮವಾಗಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅನಿರೀಕ್ಷಿತ ಉತ್ತಮ ಮಳೆಯಾಗಿದೆ.
ಇವತ್ತು ಸಹ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆಯ ಹೆಚ್ಚಿರುವ ಸಾಧ್ಯತೆ ಇದೆ.
ಈ ವಾತಾವರಣವು ಸೆಪ್ಟೆಂಬರ್ 7ರ ತನಕ ಮುಂದುವರಿಯಲಿದೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಸೆಪ್ಟೆಂಬರ್ 4ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸೆಪ್ಟೆಂಬರ್ 5ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಒಳನಾಡು : ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿ ತಲಪಿರುವ ವಾಯುಭಾರ ಕುಸಿತವು, ಸೆಪ್ಟೆಂಬರ್ 5ರ ಸುಮಾರಿಗೆ ಉತ್ತರ ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ.

Prev Post ಜಿಬಿಎ ವ್ಯಾಪ್ತಿಯ ನೂತನ ಪಾಲಿಕೆ ಕಚೇರಿಗಳ ನಿರ್ಮಾಣಕ್ಕೆ ನ. 1 ರಂದು ಭೂಮಿಪೂಜೆ: ಡಿಸಿಎಂ ಡಿ.ಕೆ. ಶಿವಕುಮಾರ್
Next Post ಆರನೇ ಬಾರಿಗೆ ಅವಿರೋಧವಾಗಿ ತುಮಕೂರು ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷರಾಗಿ ಕೆ ಎನ್ ರಾಜಣ್ಣ ಆಯ್ಕೆ