ಆರನೇ ಬಾರಿಗೆ ಅವಿರೋಧವಾಗಿ ತುಮಕೂರು ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ನನ್ನಾಗಿ ಹಾಗೂ ಉಪಾಧ್ಯಕ್ಷರಾಗಿ ಜಿ.ಜೆ.ರಾಜಣ್ಣ ರವರನ್ನು ಆರಿಸಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಆರನೇ ಬಾರಿಗೆ ಅವಿರೋಧವಾಗಿ ತುಮಕೂರು ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ನನ್ನಾಗಿ ಹಾಗೂ ಉಪಾಧ್ಯಕ್ಷರಾಗಿ ಜಿ.ಜೆ.ರಾಜಣ್ಣ ರವರನ್ನು ಆರಿಸಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಗೆಲುವಿನ ಸಂತೋಷ ಕ್ಷಣಿಕ ಆದರೆ ಅದಕ್ಕಾಗಿ ಸವೆಸಿದ ಹಾದಿ ದೀರ್ಘ.
ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ನನ್ನನ್ನು ಆರನೇ ಬಾರಿಗೆ ಅವಿರೋಧವಾಗಿ ತುಮಕೂರು ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ನನ್ನಾಗಿ ಹಾಗೂ ಉಪಾಧ್ಯಕ್ಷರಾಗಿ ಜಿ.ಜೆ.ರಾಜಣ್ಣ ರವರನ್ನು ಆರಿಸಿದ್ದಕ್ಕಾಗಿ ಧನ್ಯವಾದಗಳು.
ಈ ಗೆಲುವಿಗೆ ಕಾರಣರಾದ ಬ್ಯಾಂಕಿನ ನಿರ್ದೇಶಕರಿಗೂ ಹಾಗೂ ಎಲ್ಲಾ ಸಹಕಾರಿಗಳಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು.
ಗೆಲುವಿನ ಸ್ಪೂರ್ತಿ ನಮ್ಮೆಲ್ಲರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಬಳಕೆಯಾಗಲಿ ಎಂದು ನಾನು ಈ ಮೂಲಕ ಆಶಿಸುವೆ. ಎಲ್ಲಾ ಸಮುದಾಯಗಳ ಯುವಜನರು ಸಹಕಾರ ಕ್ಷೇತ್ರಕ್ಕೆ ಬಂದು, ಇನ್ನಷ್ಟು ಹೊಸ ಚಿಂತನೆಗಳು ಬರುವ ಹಾಗೆ ದುಡಿಯುವ ಸಂಕಲ್ಪವನ್ನು ನಾವೆಲ್ಲ ಮಾಡಬೇಕಿದೆ. ಆಗಮಾತ್ರವೇ ಈ ಸಹಕಾರ ಕ್ಷೇತ್ರ ಉಳಿಯಲು ಸಾಧ್ಯ ಇನ್ನಷ್ಟು ಹೊಸ ಕನಸುಗಳೊಂದಿಗೆ ಮುಂದಿವರೆಯೋಣ. ನಮ್ಮ ಬದ್ದತೆಯ ಕೆಲಸ ಕಾರ್ಯಗಳು ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿರಲಿ ಎಂದು ಅವರು ಅಧ್ಯಕ್ಷರಾಗಿ ಅಯ್ಕೆಗೊಂಡ ನಂತರ ಹೇಳಿದ್ದಾರೆ.
ನನ್ನನ್ನು ಮತ್ತೆ ಮತ್ತೆ ಮೇಲೇತ್ತುತಿರುವ ಸಹಕಾರ ಕ್ಷೇತ್ರವನ್ನು ನಾನು ಎಂದಿಗೂ ಮರೆಯುವುದಿಲ್ಲ. ಎಲ್ಲರಿಗೂ ಮತ್ತೊಮ್ಮೆ ಮಗದೊಮ್ಮೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಧಾನಸೌಧದಲ್ಲಿ ಗುರುವಾರ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೀಕ್ಷೆ ನಡೆಯುತ್ತಿದ್ದು, ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಯಲಿದೆ.
ಸಮೀಕ್ಷೆಯಲ್ಲಿ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಸಮೀಕ್ಷೆಗಳನ್ನು ನಡೆಸಲಾಗುವುದು.
ಸಮೀಕ್ಷೆಯ ಪೋಸ್ಟರ್ ಬಿಡುಗಡೆ ವೇಳೆ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಬಾಬು, ಹಿರಿಯ ಅಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

