ಅತಿವೃಷ್ಟಿಯಿಂದ ಬೆಳೆ ಹಾನಿ, ರೈತರ ಸಾಲ ಮನ್ನಾಗೆ ನಿಖಿಲ್ ಕುಮಾರಸ್ವಾಮಿ ಆಗ್ರಹ

Gulbarga:

Font size:

ಅತಿವೃಷ್ಟಿಯಿಂದ ಬೆಳೆ ಹಾನಿ, ರೈತರ ಸಾಲ ಮನ್ನಾಗೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಕಲಬುರಗಿ : ರಾಜ್ಯಾದ್ಯಂತ ಭಾರೀ ಮಳೆ ಮತ್ತು ಪ್ರವಾಹದಿಂದ "ವ್ಯಾಪಕ ಬೆಳೆ ಹಾನಿ" ಸಂಭವಿಸಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕೂಡಲೇ ರೈತರ ಸಾಲ ಮನ್ನಾ ಮಾಡಬೇಕೆಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಕಲಬುರಗಿಯ ಎಪಿಎಂಸಿ ಮಾರುಕಟ್ಟೆಯ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಿಂದ ರಾಜ್ಯದಲ್ಲಿ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ. ಇಷ್ಟದರೂ ಸಿಎಂ ಸಿದ್ದರಾಮಯ್ಯ ಅವರು ಕೃಷ್ಣ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮಾಡುವುದು ಬಿಟ್ಟರೆ ಬೇರೆ ಏನು ಮಾಡಿಲ್ಲ. ರಾಜ್ಯದಿಂದ ಕೃಷಿ ಸಚಿವರು ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಕೃಷಿ ಸಚಿವರು ರೈತರ ಸಂಕಷ್ಟವನ್ನು ಆಲಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅತಿವೃಷ್ಟಿಯಿಂದ ಹಾನಿಗೊಳಗಾದ ಒಂದೇ ಒಂದು ಪ್ರದೇಶಕ್ಕೂ ಸಿಎಂ ಇದುವರೆಗೂ ಭೇಟಿ ನೀಡಿಲ್ಲ.ರಾಜ್ಯದ ಕೃಷಿ ಸಚಿವರಂತೂ ಅವರ ಮತಕ್ಷೇತ್ರ ಬಿಟ್ಟು ಹೊರಗೆ ಬಂದೇ ಇಲ್ಲ. ಕಲಬುರಗಿ ಜಿಲ್ಲೆಗಳನ್ನ ಕೃಷಿ ಸಚಿವರು ಮರತೇ ಬಿಟ್ಟಿದ್ದಾರೆ.ಈ ಭಾಗದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದರೂ ಸಹ ಕೃಷಿ ಸಚಿವರು ಭೇಟಿ ನೀಡಿಲ್ಲ ಎಂದು ರಾಜ್ಯ ಕೃಷಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.

ಕಲಬುರಗಿಯಲ್ಲಿ ಒಂದು ಲಕ್ಷದ ಐದು ಸಾವಿರ ಹೆಕ್ಟರ್ ಪ್ರದೇಶ ಹನಿಗೋಳಗಾಗಿದೆ. ಅದರಲ್ಲಿ 58 ಸಾವಿರ ಹೆಕ್ಟರ್ ತೊಗರಿ ಪ್ರದೇಶ ಹಾನಿಯಾಗಿದೆ. ಹತ್ತಿ, ಸೋಯಾಬಿನ್ ಅನೇಕ ಬೆಳೆಗಳು ನಾಶವಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ 50% ಬೆಳೆ ಹಾನಿಯಾಗಿದೆ ಎಂದು ಅವರು ತಿಳಿಸಿದರು.

ಜೆಡಿಎಸ್ ಪಕ್ಷಕ್ಕೆ ಅಧಿಕಾರ ಇರಲಿ ಬಿಡಲಿ ರೈತರ ಪರವಾಗಿ ನಮ್ಮ ಬದ್ಧತೆಯನ್ನು ತೋರಿಸಿದ್ದೇವೆ. ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಕೆಕೆಆರ್ ಡಿ ಬಿ ವತಿಯಿಂದ ಐದು ಸಾವಿರ ಕೋಟಿ ಹಣ ಅಭಿವೃದ್ಧಿ ಮಾಡಲು ಮೀಸಲಿಟ್ಟಿದ್ದೇವೆ ಎಂದು ಭಾಷಣ ಮಾಡುತ್ತಾರೆ. ಇಂತಹ ಸಮಯದಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ಗಳನ್ನು ನೀಡುವುದರ ಮೂಲಕ ರೈತರ ಸಾಲದ ಹೊರೆಯನ್ನ ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.

NDRF ನಿಯಮ ತಿದ್ದುಪಡಿಗೆ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಪ್ರಿಯಾಂಕಾ ಖರ್ಗೆ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.

ಈ ವಿಚಾರದಲ್ಲಿ ಆ ಸರಕಾರ ಈ ಸರಕಾರ ಎನ್ನದೇ ಹಾನಿಗೊಳಗಾಗಿರುವ ರೈತರಿಗೆ ಸೂಕ್ತ ಪರಿಹಾರ ಕೊಡಬೇಕಿದೆ. ಈ ದಿಕ್ಕಿನಲ್ಲಿ ಎಲ್ಲರೂ ಒಂದಾಗಿ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು

ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್‌ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು, ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸಿದೆ ನಿರ್ಲಕ್ಷ್ಯವಹಿಸಿದೆ ಎಂದು ಕಿಡಿಕಾರಿದ್ದಾರೆ.

ಕಲಬುರಗಿಯಲ್ಲಿ ಬೆಳೆ ಹಾನಿಗೀಡಾಗಿರುವ ಸ್ಥಳಗಳಿಗೆ ಭೇಟಿಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿದರು.

Prev Post ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ: ಸಾಂತ್ವನ ಹೇಳಲು ನೀಡುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ
Next Post ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ: ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ‌ ಅಧ್ಯಯನ‌ ನಡೆಸಿ ಪರಿಹಾರ ಹುಡುಕಬೇಕು: ಸಿ.ಎಂ.ಸಿದ್ದರಾಮಯ್ಯ