ಬೆಂಗಳೂರು ನಗರ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ನಗರದ ವಿವಿಧ ವಿಧಾನ ಸಭಾ ಕ್ಷೇತ್ರಗಳಿಲ್ಲಿ ಪ್ರತಿಭಟನೆ ನಡೆಸಿದರು
ಬೆಂಗಳೂರು ನಗರ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ನಗರದ ವಿವಿಧ ವಿಧಾನ ಸಭಾ ಕ್ಷೇತ್ರಗಳಿಲ್ಲಿ ಪ್ರತಿಭಟನೆ ನಡೆಸಿದರು
ಪ್ರತಿಭಟನೆಯಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛÀಲವಾದಿ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್, ಸಂಸದ ಪಿ.ಸಿ.ಮೋಹನ್, ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಮಂಡಲ ಅಧ್ಯಕ್ಷರು, ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿಯ ಕಾಮಾಕ್ಯ ಲೇಔಟ್ ಬಳಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಯಿತು.
ಶಾಸಕ ಎಲ್.ವಿ. ರವಿಸುಬ್ರಮಣ್ಯ ಮತ್ತು ಕಾರ್ಯಕರ್ತರು ರಸ್ತೆ ಸಂಚಾರ ತಡೆ ಚಳವಳಿಯಲ್ಲಿ ಭಾಗವಹಿಸಿದ್ದರು. ರಸ್ತೆ ಗುಂಡಿಗಳನ್ನು ಮುಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತ್ವರಿತವಾಗಿ ರಸ್ತೆ ಗುಂಡಿ ದುರಸ್ತಿಯ ಬಗ್ಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಕಾಪಾಡುವುದಕ್ಕೆ ಇದ್ದಾರೆಯೇ? ಅಥವಾ ಲೂಟಿ ಮಾಡಲು ಇದ್ದಾರೆಯೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಸ್ತೆ ಗುಂಡಿ ಮುಚ್ಚುವ ಸ್ಥಿತಿಯಲ್ಲಿ ಇಲ್ಲ. ಏಕೆಂದರೆ ಸರ್ಕಾರದ ಖಜಾನೆ ಖಾಲಿಯಾಗಿದ್ದು, ರಸ್ತೆ ಗುಂಡಿ ಮುಚ್ಚುವುದಕ್ಕೆ ಅವರ ಬಳಿ ಹಣವಿಲ್ಲ; ಅವರಿಗೆ ಇರುವ ಹಣವನ್ನು ನುಂಗಿ ಸಾಕಾಗಿದೆ ಎಂದು ಅವರು ಟೀಕಿಸಿದರು.
ನ್ಯಾಯಾಲಯ ಆದೇಶ ನೀಡಿದ್ದರೂ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಸರ್ಕಾರ ಮಾಡಲಿಲ್ಲ. ಆಗಿದ್ದ ಹಾಗೆ ರಸ್ತೆ ಗುಂಡಿ ಮುಚ್ಚುವ ಕೆಲಸ ಸರ್ಕಾರ ಮಾಡಿದ್ದರೆ ಇಂದು ಈ ಪರಿಸ್ಥಿತಿ ಇರುತ್ತಿರಲಿಲ್ಲ. ಆದರೆ ಸರ್ಕಾರಕ್ಕೆ ಎಷ್ಟು ಬಾರಿ ಹೇಳಿದರು ಕೂಡ ಬಿಜೆಪಿಯವರು ಏನಾದರು ಹೇಳಲಿ ನಾವು ಕೇರ್ ಮಾಡುವುದಿಲ್ಲ ಎಂದು ಹೇಳುತ್ತಾರೆ. ಅಂದರೆ ಬಿಜೆಪಿ ಇರುವುದೇಕೆ?; ಬಿಜೆಪಿ ವಿರೋಧ ಪಕ್ಷವಾಗಿ ಕೆಲಸ ಮಾಡಬಾರದೇ ಎಂದು ಪ್ರಶ್ನಿಸಿದರು.
ಇಂದು ಬೆಂಗಳೂರಿನ ಎಲ್ಲ ಉದ್ಯಮಿಗಳು ರಸ್ತೆ ಗುಂಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ಈ ಪರಿಸ್ಥಿತಿಯಿಂದ ಬೆಂಗಳೂರು ಬಿಟ್ಟು ಹೋಗಬೇಕಾಗುತ್ತದೆ ಎಂದು ಟ್ವೀಟ್ ಮಾಡುತ್ತಿದ್ದಾರೆ; ಅಂತಹ ಪರಿಸ್ಥಿತಿ ಸರ್ಕಾರಕ್ಕೆ ಇದ್ದರೆ, ಸರ್ಕಾರವು ರಸ್ತೆಗಳನ್ನು ಸರಿಪಡಿಸಿ ಅನುಕೂಲ ಮಾಡಿಕೊಡುತ್ತೇವೆ ಎಂದು ಹೇಳುವುದನ್ನು ಬಿಟ್ಟು, ಯಾರು ಬೇಕಾದರು ಹೋಗುವವರ ಹೋಗಬಹುದು ಎಂದು ಉದ್ಧಟತನದ ಹೇಳಿಕೆಯನ್ನು ನೀಡಿದ್ದಾರೆ ಎಂದು ಆಕ್ಷೇಪಿಸಿದರು.
ಬೆಂಗಳೂರು ನಗರದ ಮಂತ್ರಿಗಳು ಪ್ರಧಾನಮಂತ್ರಿಗಳ ಮನೆಯ ಮುಂದೆ ಗುಂಡಿ ಇದೆ ಎಂದು ಹೇಳಿಕೆ ನೀಡಿದ್ದಾರೆ. ಗುಂಡಿ ಇರುವ ಬಗ್ಗೆ ಇವರೇನಾದರು ಹೋಗಿ ನೋಡಿದ್ದಾರೆಯೇ? ಎಂದು ಕೇಳಿದರು. ಸರ್ಕಾರದ ಈ ಉದ್ಧಟತನ ಮತ್ತು ಬೆಂಗಳೂರು ನಗರದ ಅಭಿವೃದ್ಧಿ ಮಂತ್ರಿಗಳ ಹೇಳಿಕೆಯನ್ನು ವಿರೋಧಿಸಿ ರಸ್ತೆ ಗುಂಡಿ ಮುಚ್ಚುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು.