ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ಬುಧವಾರ ಮಧ್ಯಾಹ್ನ ವಿಧಿವಶ

BANGALORE:

Font size:

ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ಬುಧವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ, ಕಳೆದೊಂದು ವರ್ಷದಿಂದ ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದರು.

ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ಬುಧವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ.

ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ, ಕಳೆದೊಂದು ವರ್ಷದಿಂದ ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದರು.

ಎಸ್.ಎಲ್. ಭೈರಪ್ಪ

ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಜೀವನ

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ೨೬-೦೭-೧೯೩೪[೧] ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಬೇಜವಾಬ್ದಾರಿ ತಂದೆ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಅವರ ಸಣ್ಣ ವಯಸ್ಸಿನಲ್ಲೇ ಅವರ ತಾಯಿಯ ಧೀಮಂತಿಕೆಯನ್ನು ಮೈಗೂಡಿಸಿ ಕೊಂಡರು. ಶಾಲಾ ದಾಖಲೆಗಳ ಪ್ರಕಾರ ಅವರ ಜನ್ಮದಿನ ೨೦-೦೮-೧೯೩೧ ಎಂದು ಅವರು ತಮ್ಮ ಆತ್ಮಕಥೆ ಭಿತ್ತಿಯಲ್ಲಿ ಹೇಳಿಕೊಂಡಿದ್ದಾರೆ.
ಅವರ ೫ನೇ ವಯಸ್ಸಿನಲ್ಲಿ ಅವರ ತಾಯಿ ಬಡತನ - ಪ್ಲೇಗ್ ಗಳಿಗೆ ಜೀವವನ್ನು ತೆತ್ತಾಗ ಬದುಕಿನ ವಿಶ್ವ ವಿಶಾಲತೆಯ ರಂಗದಲ್ಲಿ ಸಾಹಸಮಯವಾದ ಬದುಕನ್ನು ತಾವೇ ನಿರ್ಮಿಸಿ ಕೊಳ್ಳ ತೊಡಗಿ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರು. ಗಾಂಧೀಜಿಯವರ ಮೌಲ್ಯಗಳಿಗೆ ಬೆಲೆ ಕೊಟ್ಟು ಸ್ವಾತಂತ್ರ ಚಳುವಳಿಗೆ ತೊಡಗಿಸಿಕೊಂಡಾಗ ಅವರಿಗೆ ಕೇವಲ 13 ವರ್ಷ!

ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ "ಸತ್ಯ ಮತ್ತು ಸೌಂದರ್ಯ", ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದರು.

ಹುಬ್ಬಳ್ಳಿ, ಗುಜರಾತಿನ ಸರದಾರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಶಾಸ್ತ್ರಿಯ ಶಿಸ್ತಿನ ಓದಿನ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದ್ದಾರೆ. ೧೯೬೧ ರಲ್ಲಿ `ಧರ್ಮಶ್ರೀ' ಕಾದಂಬರಿ ಪ್ರಕಟಿಸಿ ಇದುವರೆವಿಗೆ ನಾಲ್ಕು ದಶಕಗಳಲ್ಲಿ ೨೧ ಕಾದಂಬರಿಗಳನ್ನು ಬರೆದಿದ್ದಾರೆ.

ಆಯಾ ಕಾಲದಲ್ಲಿ ಬಂದ ಅವರ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದ ಗೊಂಡಿವೆ. ಗೃಹಭಂಗ,ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ.

ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ ೧೯೬೬ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೭೫ ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.
`ಪರ್ವ' ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ. ಲೈಂಗಿಕತೆ ಮತ್ತು ಸಾವುಗಳ ನೆಲೆಯಲ್ಲಿ ದ್ರೌಪದಿ, ಕುಂತಿ, ಮಾದ್ರಿ, ಗಾಂಧಾರಿ ಪಾತ್ರಗಳನ್ನು ವಿಶಿಷ್ಟವಾಗಿ ಮೂಡಿಸಿದ್ದಾರೆ.

ಕಾದಂಬರಿಗಳಲ್ಲದೆ ಸಾಹಿತ್ಯ ಮೀಮಾಂಸೆಗೆ ಸಂಬಂಧಿಸಿದ `ಸಾಹಿತ್ಯ ಮತ್ತು ಪ್ರತೀಕ', `ಕಥೆ ಮತ್ತು ಕಥಾವಸ್ತು', `ನಾನೇಕೆ ಬರೆಯುತ್ತೇನೆ' ಎಂಬ ಕೃತಿಗಳನ್ನೂ ಭೈರಪ್ಪ ರಚಿಸಿದ್ದಾರೆ. ಪ್ರಸ್ತುತ ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿದ್ದಾರೆ. 1999ರಲ್ಲಿ ಕನಕಪುರಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಭೈರಪ್ಪ ಆಯ್ಕೆಯಾಗಿದ್ದರು.

ಕೃತಿಗಳು

ಕಾದಂಬರಿಗಳು
ಭೀಮಕಾಯ
ಬೆಳಕು ಮೂಡಿತು
ಧರ್ಮಶ್ರೀ - 1961
ದೂರ ಸರಿದರು- 1962
ಮತದಾನ - 1965
ವಂಶವೃಕ್ಷ- 1965
ಜಲಪಾತ (ಕಾದಂಬರಿ)- 1967
ನಾಯಿ ನೆರಳು- 1968
ತಬ್ಬಲಿಯು ನೀನಾದೆ ಮಗನೆ-1968
ಗೃಹಭಂಗ-1970
ನಿರಾಕರಣ-1971
ಗ್ರಹಣ-1972
ದಾಟು -1973
ಅನ್ವೇಷಣ-1976
ಪರ್ವ-1976
ನೆಲೆ -1983
ಸಾಕ್ಷಿ -1986
ಅಂಚು-1990
ತಂತು 1993
ಸಾರ್ಥ-1998
ಮಂದ್ರ-2001
ಆವರಣ-2007
ಕವಲು - 2010
ಯಾನ - 2014
ಉತ್ತರಕಾಂಡ-2017
ಆತ್ಮ ಚರಿತ್ರೆ
ಭಿತ್ತಿ
ತತ್ತ್ವಶಾಸ್ತ್ರ
ಸತ್ಯ ಮತ್ತು ಸೌಂದರ್ಯ 1966 - ಪಿ.ಎಚ್.ಡಿ ಪ್ರಬಂಧ
ಸಾಹಿತ್ಯ ಮತ್ತು ಪ್ರತೀಕ 1967
ಕಥೆ ಮತ್ತು ಕಥಾವಸ್ತು 1969
ಸಂದರ್ಭ:ಸಂವಾದ 2011
ಇತರೆ
ನಾನೇಕೆ ಬರೆಯುತ್ತೇನೆ -1980
ಇತರ ಭಾಷೆಗಳಿಗೆ ಅನುವಾದವಾಗಿರುವ ಕಾದಂಬರಿಗಳು
ಧರ್ಮಶ್ರೀ - ಸಂಸ್ಕೃತ, ಮರಾಠಿ
ವಂಶವೃಕ್ಷ - ತೆಲುಗು, ಮರಾಠಿ, ಹಿಂದಿ, ಉರ್ದು, ಇಂಗ್ಲೀಷ್
ನಾಯಿ ನೆರಳು - ಗುಜರಾತಿ, ಹಿಂದಿ
ತಬ್ಬಲಿಯು ನೀನಾದೆ ಮಗನೆ - ಹಿಂದಿ
ಗೃಹಭಂಗ - ಭಾರತದ ಹದಿನಾಲ್ಕು ಭಾಷೆಗಳಿಗೆ ಅನುವಾದವಾಗಿದೆ
ನಿರಾಕರಣ -ಹಿಂದಿ
ದಾಟು - ಇಂಗ್ಲೀಷ್, ಭಾರತದ ಹದಿನಾಲ್ಕು ಭಾಷೆಗಳಿಗೆ ಅನುವಾದವಾಗಿದೆ
ಅನ್ವೇಷಣ -ಹಿಂದಿ,ಮರಾಠಿ
ಪರ್ವ -ಹಿಂದಿ, ಮರಾಠಿ, ಇಂಗ್ಲೀಷ್, ತೆಲುಗು, ಬೆಂಗಾಲಿ, ತಮಿಳು
ನೆಲೆ -ಹಿಂದಿ
ಸಾಕ್ಷಿ - ಹಿಂದಿ, ಇಂಗ್ಲೀಷ್
ಅಂಚು -ಹಿಂದಿ, ಮರಾಠಿ
ತಂತು -ಹಿಂದಿ, ಮರಾಠಿ
ಸಾರ್ಥ -ಹಿಂದಿ, ಮರಾಠಿ, ಇಂಗ್ಲೀಷ್, ಸಂಸ್ಕೃತ
ನಾನೇಕೆ ಬರೆಯುತ್ತೇನೆ -ಮರಾಠಿ
ಸತ್ಯ ಮತ್ತು ಸೌಂದರ್ಯ -ಇಂಗ್ಲೀಷ್
ಭಿತ್ತಿ -ಹಿಂದಿ, ಮರಾಠಿ
ಚಲನಚಿತ್ರವಾಗಿರುವ ಕಾದಂಬರಿಗಳು
ವಂಶವೃಕ್ಷ - 1972
ತಬ್ಬಲಿಯು ನೀನಾದೆ ಮಗನೆ - 1977
ಮತದಾನ - 2001
ನಾಯಿ ನೆರಳು - 2006
ಟಿ.ವಿ. ಧಾರಾವಾಹಿಯಾಗಿರುವ ಕಾದಂಬರಿಗಳು
ಗೃಹಭಂಗ
ದಾಟು (ಹಿಂದಿ)
ಪ್ರಶಸ್ತಿ/ಗೌರವಗಳು
2023 ರಲ್ಲಿ ಪದ್ಮಭೂಷಣ ಪ್ರಶಸ್ತಿ.
ಡಾ.ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ - 2014
ನಾಡೋಜ ಪ್ರಶಸ್ತಿ - 2011
ಸರಸ್ವತಿ ಸಮ್ಮಾನ್ ಪ್ರಶಸ್ತಿ (ಮಂದ್ರ ಕಾದಂಬರಿಗೆ)- 2010
ಪಂಪ ಪ್ರಶಸ್ತಿ - 2005
ಎನ್ ಟಿ ಆರ್‍ ರಾಷ್ಟ್ರೀಯ ಪ್ರಶಸ್ತಿ- 2007
ಗುಲಬರ್ಗಾ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟು- 2007
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ದಾಟು ಕಾದಂಬರಿಗೆ)- 1975
‌ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ವಂಶವೃಕ್ಷ ಕಾದಂಬರಿಗೆ) -1966
ವಾಗ್ವಿಲಾಸಿನಿ ಪುರಸ್ಕಾರ್ (ದೀನನಾಥ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ)- 2012 (ಗಾನಕೋಗಿಲೆ ಭಾರತರತ್ನ ಲತಾ ಮಂಗೇಶ್ಕರ್ ಅವರು ತಮ್ಮ ತಂದೆ ದೀನನಾಥ ಮಂಗೇಶ್ಕರ್ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಸ್ಮೃತಿ ಪ್ರತಿಷ್ಠಾನ ಈ ಪುರಸ್ಕಾರ ನೀಡುತ್ತಿತ್ತು. ಇದುವರೆಗೂ 20 ಲೇಖಕರಿಗೆ ಈ ಪುರಸ್ಕಾರ ನೀಡಲಾಗಿದ್ದು ಅವರಲ್ಲಿ 18 ಮರಾಠಿ ಲೇಖಕರು ಹಾಗೂ ಇಬ್ಬರು ಸಿನಿಮಾ ಸಾಹಿತ್ಯ ಕ್ಷೇತ್ರದ ಜಾವೆದ್ ಅಖ್ತರ್ ಮತ್ತು ಮಜರೂರ ಸುಲ್ತಾನಪುರಿ ಸೇರಿದ್ದಾರೆ. ಮಹಾರಾಷ್ಟ್ರದಾಚೆಗಿನ ಲೇಖಕರೊಬ್ಬರಿಗೆ ನೀಡುತ್ತಿರುವ ಮೊದಲ ಸಂದರ್ಭ ಇದಾಗಿದೆ)
ರಾಷ್ಟ್ರೀಯ ಪ್ರಾಧ್ಯಾಪಕ (ನ್ಯಾಷನಲ್ ಪ್ರೊಫೆಸರ್)
ಭೈರಪ್ಪಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ,

Prev Post ಬೆಂಗಳೂರು ನಗರ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ನಗರದ ವಿವಿಧ ವಿಧಾನ ಸಭಾ ಕ್ಷೇತ್ರಗಳಿಲ್ಲಿ ಪ್ರತಿಭಟನೆ ನಡೆಸಿದರು