ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ಜತೆಗೆ ಸಾಹಸ ಹಾಗೂ ಜಲ ಕ್ರೀಡೆ: ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ

Mandya:

Font size:

ಮಕ್ಕಳಿಗೆ ಕ್ರೀಡೆಗಳಿಗೆ ಅವಕಾಶ ಕುಟುಂಬ ಸಮೇತರಾಗಿ ಕಳೆಯಲು ಕೆಆರ್‌ಎಸ್ ಸೂಕ್ತ ಸ್ಥಳ

ಮಂಡ್ಯ, ಸೆ.28: ಈ ಬಾರಿಯ ದಸರಾದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಕಾವೇರಿ ಆರತಿ ಕಾರ್ಯಕ್ರಮ, ಈಗ ಸಾಹಸ ಹಾಗೂ ಜಲ ಕ್ರೀಡೆಗಳನ್ನು ಒಳಗೊಂಡು ಪ್ರವಾಸೋದ್ಯಮಕ್ಕೆ ಹೊಸ ಹೊನಲು ತಂದಿದೆ.

ಗಂಗಾರತಿ ಮಾದರಿಯಲ್ಲಿ ತಾಯಿ ಕಾವೇರಿಗೆ ಸಲ್ಲಿಸುವ ಧಾರ್ಮಿಕ ಆರತಿ ಸಮಾರಂಭದ ಜೊತೆಗೆ, ರಾಫ್ಟಿಂಗ್ ಸೇರಿದಂತೆ ಹಲವಾರು ಜಲ ಕ್ರೀಡೆಗಳು ಪ್ರವಾಸಿಗರಿಂದ ಅಪಾರ ಪ್ರತಿಕ್ರಿಯೆ ಪಡೆಯುತ್ತಿವೆ. ಸಾಹಸ ಕ್ರೀಡೆಗಳು ಯುವಕರಿಗೆ ಹೊಸ ಉತ್ಸಾಹ ನೀಡುತ್ತಿದರೆ, ಜಲಕ್ರೀಡೆಗಳು ಕುಟುಂಬ ಸಮೇತರಾಗಿ ಬರುವವರಿಗೆ ವಿಶೇಷ ಅನುಭವ ನೀಡುತ್ತಿವೆ.

ಈ ಕುರಿತು ಕಾವೇರಿ ಸಮಿತಿ ಅಧ್ಯಕ್ಷರು ಹಾಗೂ BWSSB ಅಧ್ಯಕ್ಷರಾದ ಡಾ. ರಾಮ ಪ್ರಸಾತ್ ಮನೋಹರ್ ಅವರು ಹೇಳಿದ್ದಾರೆ – “ಕೆಆರ್‌ಎಸ್‌ನಲ್ಲಿ ನಡೆಯುತ್ತಿರುವ ಜಲಕ್ರೀಡೆಗಳಿಗೆ ಪ್ರವಾಸಿಗರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಸಾಹಸ, ಮನರಂಜನೆ ಮತ್ತು ಸಂಸ್ಕೃತಿಯ ಸಂಯೋಜನೆಯಿಂದ ಕೆಆರ್‌ಎಸ್ ಪ್ರವಾಸೋದ್ಯಮದ ಹೊಸ ಅಧ್ಯಾಯವನ್ನು ಬರೆಯುತ್ತಿದೆ” ಎಂದರು.

ಮಕ್ಕಳಿಗಾಗಿ ಸುಮಾರು 80 ಆಟಗಳನ್ನು ಪರಿಚಯಿಸಲಾಗಿದ್ದು, ಎಲ್ಲ ವಯಸ್ಸಿನ ಪ್ರವಾಸಿಗರು ತಮ್ಮ ರುಚಿಗೆ ತಕ್ಕ ಅನುಭವ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.

ಹೀಗಾಗಿ ಪ್ರವಾಸಿಗರು ಹಾಗೂ ರಾಜ್ಯದ ಜನ ಈ ವಾರಾಂತ್ಯದಲ್ಲಿ ಕೆಆರ್‌ಎಸ್‌ಗೆ ಆಗಮಿಸಿ ನೂತನ ರೀತಿಯ ಈ ಆಕರ್ಷಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಬೇಕು ಅವರು ಕರೆ ನೀಡಿದ್ದಾರೆ.

Prev Post ಡಿಸಿಎಂ ಹೇಳಿದಂತೆ ತಾಳ ಹಾಕುತ್ತಿರುವ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ಕೊಟ್ಟ ಕೇಂದ್ರ ಸಚಿವರು
Next Post ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ.