ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ.

BANGALORE:

Font size:

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ. ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಹೇಳಿಕೆ

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಹೇಳಿಕೆ

ನಮ್ಮ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬತ್ತಲಾಗುತ್ತಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ”,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ.

ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು. ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು. ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿಯ ನಾಯಕರ ಅಂತರಂಗದಲ್ಲಿರುವುದು ಇದೇ ಮನುವಾದಿ ಮನಸ್ಥಿತಿ.

ನಮ್ಮ ಸರ್ಕಾರ ನಡೆಸುವ ಸಮೀಕ್ಷೆಯಿಂದ ಕೇವಲ ದಲಿತ, ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿ-ಗತಿ ಮಾತ್ರವಲ್ಲ, ಮುಂದುವರಿದ ಜಾತಿಗಳೊಳಗಿನ ಬಡವರು ಮತ್ತು ಅವಕಾಶ ವಂಚಿತರ ಸ್ಥಿತಿಗತಿಯೂ ಗೊತ್ತಾಗಲಿದೆ. ಈ ವಾಸ್ತವಸ್ಥಿತಿ ಅರಿವಾಗುವುದು ಬಿಜೆಪಿಯವರಿಗೆ ಬೇಡವಾಗಿದೆ. ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಪ್ರತಿಯೊಂದು ಜಾತಿ ಮತ್ತು ಧರ್ಮದೊಳಗಿನ ಉಳ್ಳವರ ಕೈಯಲ್ಲಿಯೇ ಇರಬೇಕು ಎನ್ನುವುದೇ ಅವರ ವಿರೋದಧ ಹಿಂದಿನ ದುರುದ್ದೇಶ.

ಬಿಹಾರದಲ್ಲಿ ಇವರದ್ದೇ ಮೈತ್ರಿ ಸರ್ಕಾರ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ. ಅಲ್ಲಿಯೂ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ ಈಗ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಜಾತಿ ಗಣತಿ ಮಾಡಲು ಹೊರಟಿದೆ.
ಕರ್ನಾಟಕದಲ್ಲಿ ಜಾತಿಗಳನ್ನು ಪರಿಗಣಿಸಿ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರೇ, ನೀವು ಕೇಂದ್ರ ಸರ್ಕಾರದ ಜಾತಿ ಗಣತಿಯನ್ನೂ ವಿರೋಧಿಸುತ್ತೀರಾ? ಹಾಗೆ ವಿರೋಧಿಸುವುದಾದರೆ ಅದನ್ನು ಗಟ್ಟಿ ದನಿಯಲ್ಲಿ ಈಗಲೇ ಹೇಳಿಬಿಡಿ. ಪ್ರಧಾನಿಯ ಎದುರು ತಲೆ ಎತ್ತಿ ಮಾತನಾಡುವ ದಮ್ಮು-ತಾಕತ್ತು ಇಲ್ಲದ ನಿಮಗೆ ಇದನ್ನು ವಿರೋಧಿಸುವ ಧೈರ್ಯ ಇದೆಯೇ? ಯಾಕೆ ತಮ್ಮ ಮೂರ್ಖತನದ ಹೇಳಿಕೆಗಳ ಮೂಲಕ ರಾಜ್ಯದ ಪ್ರಜ್ಞಾವಂತ ಜನರ ಎದುರು ನಗೆಪಾಲಿಗೀಡಾಗುತ್ತಿದ್ದೀರಿ?

ಬಿಜೆಪಿ ನಾಯಕರ ಈ ಆತ್ಮವಂಚಕ ನಡವಳಿಕೆಯನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕು. ಅವರ ರಾಜಕೀಯ ಪ್ರೇರಿತ ಠಕ್ಕುತನದ ಹೇಳಿಕೆಗಳನ್ನು ಮನೆಯ ಕಸದ ಬುಟ್ಟಿಗೆ ಎಸೆದು ಎಲ್ಲರೂ ಈಗ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡಬೇಕು. ಈ ಮೂಲಕ ನಾವೆಲ್ಲರೂ ಸೇರಿ ಸಮ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನು ಮಾಡೋಣ ಎಂದು ವಿನಯಪೂರ್ವಕವಾಗಿ ಅರಿಕೆ ಮಾಡಿಕೊಳ‍್ಳುತ್ತಿದ್ದೇನೆ.

ಸಿದ್ದರಾಮಯ್ಯ
ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ

sk

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಈ ಬಾರಿ 88 ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಆಯ್ಕೆ ಮಾಡಲು ಸ್ಥಳಗಳ ಪರಿಶೀಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ನಡೆಸಿದರು.

ಈಗಾಗಲೇ ಡಿಸೆಂಬರ್‌ನಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು ಘೋಷಣೆಯಾದಂತೆ ಪೂರ್ವ ತಯಾರಿ ನಡೆಯುತ್ತಿದೆ. ಈ ಹಿನ್ನಲೆ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮ್ಮದ್ ಖಾನ್ ಅವರು ಬಳ್ಳಾರಿ ವಿ ಎಸ್ ಕೆ ವಿವಿಯ ದಾರದ ಮಿಲ್ ಸ್ಥಳ, ಸಂಗನಕಲ್ಲು ಬಳಿಯ ಬಯಲು ಪ್ರದೇಶ ಸೇರಿ ಮೂರು ಕಡೆ ಭೇಟಿ ನೀಡಿ ನಿಯೋಜಿಸಿರುವ ಸ್ಥಳದ ಪರಿಶೀಲನೆ ನಡೆಸಿದರು.

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಬೇಕಾದ ಎಲ್ಲ ಸಹಕಾರ ನೀಡಲಾಗುವುದು. ಸಮ್ಮೇಳವನ್ನು ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳಿ ಎಂದು ಇದೆ ವೇಳೆ ಹೇಳಿದರು.

ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್: ಇನ್ನು ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 5 ಸಾಹಿತ್ಯ ಸಮ್ಮೇಳನಗಳು ನಡೆದಿವೆ.

67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ: ಈ ಹಿಂದೆ 1920 ರಲ್ಲಿ ಮೊದಲ ಬಾರಿಗೆ ಹೊಸಪೇಟೆಯಲ್ಲಿ 6ನೇ ಸಮ್ಮೇಳನ. ಎರಡನೇ ಬಾರಿಗೆ ಬಾರಿಗೆ 1926ರಲ್ಲಿ 12 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿ ನಗರದಲ್ಲಿ ನಡೆದಿತ್ತು. 12 ವರ್ಷಗಳ ನಂತರ ಮೂರನೇ ಬಾರಿಗೆ 1938ರಲ್ಲಿ 23 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು. ನಾಲ್ಕನೇ ಬಾರಿಗೆ ಹರಪನಹಳ್ಳಿಯಲ್ಲಿ 1947ರಲ್ಲಿ ನಡೆಯಿತು. 11 ವರ್ಷಗಳ ಬಳಿಕ 1958 ರಲ್ಲಿ ಬಳ್ಳಾರಿಯಲ್ಲಿ 5 ನೇ ಬಾರಿಗೆ ಸಮ್ಮೇಳನ ನಡೆಯಿತು. ಈಗ 67 ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರೆತಿದ್ದು. 2025 ರ ಡಿಸೆಂಬ‌ರ್‌ನಲ್ಲಿ ಆಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

pls

ಬೆಂಗಳೂರು: ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹತ್ಯೆಯ ಪಿತೂರಿ ಹಾಗೂ ಹತ್ಯೆಯ ಸಂಭ್ರಮದಿಂದ ಹಿಡಿದು ಭಾರತದ ಸಂವಿಧಾನಕ್ಕೆ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಹಾಗೂ ಸೌಹಾರ್ದತಯ ಪರಂಪರೆಗೆ ಸಂಘ ಪರಿವಾರ ಮಾಡಿರುವ ಪ್ರಮಾದಗಳನ್ನು ಮರೆ ಮಾಚಿ ಪ್ರಧಾನಿ @narendramodi ಸಂಘದ ಮಾಧ್ಯಮ ವಕ್ತಾರಿಕೆ ಮಾಡುವುದು ಲಜ್ಜೆಗೇಡಿತನದ ಪರಮಾವಧಿ ಎಂದು ಕಾಂಗ್ರೆಸ್‌ ಮುಖಂಡ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ ಎಸ್‌ ಎಸ್‌ ಅನ್ನು ಹೊಗಳಿರುವುದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಮನ್ ಕೀ ಬಾತ್ ನಲ್ಲಿ ಆರ್.ಎಸ್.ಎಸ್ ಸಂಘಟನೆಯ ನೂರು ವರ್ಷದ ಕಾರ್ಯಕ್ರಮದ ವಕ್ತಾರಿಕೆ ಮಾಡುವ ಬದಲು ಪ್ರಧಾನಿ ನರೇಂದ್ರ ಮೋದಿ ಸಂಘದ ಅಧಿಕೃತ ಪತ್ರಿಕೆ ಆರ್ಗನೈಸರ್ ಗೆ ಲೇಖನ ಬರೆದು ಬಿಡಲಿ. ಬರೆಯುವ ಮುನ್ನ ಪತ್ರಿಕೆಯಲ್ಲಿ ಈ ಹಿಂದೆ ದೇಶಕ್ಕೆ ಗಂಡಾಂತರ ತಂದಿರುವ ಸಂಘದ ಅಪಾಯಕಾರಿ ನಿಲುವುಗಳ ಬಗ್ಗೆಯೂ ಮನ್ ಕೀ ಬಾತ್ ಅಲ್ಲೇ ಮಾತಾಡಲಿ ಎMದು ಸವಾಲು ಹಾಕಿದ್ದಾರೆ.

ಸ್ವತಂತ್ರ ಚಳುವಳಿಯಲ್ಲಿ ಭಾಗವಹಿಸದೇ, ಬ್ರಿಟಿಷರ ಗುಲಾಮಗಿರಿಯ ಸಹಾಯಧನ ಪಡೆದವರು ದೇಶದ ಸೇವೆ ಮಾಡಿದ್ದೇವೆ ಎಂದು ಹೇಳುವುದು ಸ್ವತಂತ್ರ ಹೋರಾಟಗಾರರನ್ನೇ ಅವಮಾನಿಸಿದಂತೆ. ದೇಶದ ಶಾಂತಿ, ಸುವ್ಯವಸ್ಥೆ ಹಾಗೂ ಭದ್ರತೆಗೆ ಸಂಘ ಮಾಡಿರುವ ಗಂಡಾಂತರಗಳ ಇತಿಹಾಸವೇ ಇದೆ.

ಗಾಂಧಿಯ ಹತ್ಯೆಯ ನಂತರ ಸರ್ಧಾರ್ ಪಟೇಲ್ ಅವರು ಸಂಘವನ್ನೇ ಬ್ಯಾನ್ ಮಾಡುವಾಗ ಹೇಳಿದ ಮಾತುಗಳನ್ನಾದರೂ ಮನ್ ಕೀ ಬಾತ್ ಅಲ್ಲಿ ಮಾತಾಡುವ ಎದೆಗಾರಿಕೆ ಇದೆಯಾ? ದೇಶದ ಸೌಹಾರ್ದತೆಯ ಸೌಂದರ್ಯವನ್ನು ಹಾಳು ಮಾಡಿ, ಪ್ರಕೃತಿ ವಿಕೋಪದ ಸೇವೆಯನ್ನೇ ಪ್ರಧಾನಿಗಳು ಪ್ರದರ್ಶನ ಮಾಡುವುದು ಹಾಸ್ಯಾಸ್ಪದ.

ಸ್ವಯಂ ಘೋಷಿತ ನಿಸ್ವಾರ್ಥ ಸೇವೆಯ ಹೆಸರಿನಲ್ಲಿ ದೇಶಕ್ಕೆ ಅಪಾಯವಾಗಿರುವ ಸಂಘಟನೆಯನ್ನು ಹೊಗಳಲು ಪ್ರಧಾನಿ ಸ್ಥಾನವನ್ನು ಬಳಸಿಕೊಂಡಿರುವುದು ಅಕ್ಷಮ್ಯ ಮಾತ್ರವಲ್ಲ ಅಪರಾಧ ಕೂಡ ಎಂದು ಹರಿಪ್ರಸಾದ್‌ ಟೀಕಿಸಿದ್ದಾರೆ.

Prev Post ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ಜತೆಗೆ ಸಾಹಸ ಹಾಗೂ ಜಲ ಕ್ರೀಡೆ: ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ
Next Post ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ವದಂತಿಗಳಿಗೆ ಕಿವಿ ಕೊಡಬೇಡಿ - ಡಿಸಿ ಜಿ ಜಗದೀಶ