ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ‌

BANGALORE:

Font size:

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ‌ ನೀಡಿದೆ.

From Jayaram Udupi

ಮಂಗಳೂರು , ಸೆ.30-ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ‌ ನೀಡಿದೆ.

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರಿಗೆ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಇದರೊಂದಿಗೆ ಸದ್ಯ ಗಡಿಪಾರು ಆದೇಶದಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ರಿಲೀಫ್ ಸಿಕ್ಕಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ರಜಾಕಾಲದ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ತಿಮರೋಡಿ ಅವರ ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರ ವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.

Prev Post ಖರ್ಗೆ ಕುಟುಂಬಕ್ಕೆ ಮೊದಲು ಪರಿಹಾರ ಕೊಡಿ; ರೈತರ ಸಂಕಷ್ಟಕ್ಕೂ ಸ್ಪಂದಿಸಿ- ವಿಜಯೇಂದ್ರ
Next Post ಕುಮಾರಸ್ವಾಮಿ ಜೊತೆ ಬಹಿರಂಗ ಚರ್ಚೆಗೆ ನಾನು ಸಿದ್ಧ, ಮಾಧ್ಯಮಗಳೇ ವೇದಿಕೆ ಕಲ್ಪಿಸಲಿ: ಡಿ.ಕೆ. ಶಿವಕುಮಾರ್ ಸವಾಲು