ಕೂಡಲೇ ಬೆಳೆಹಾನಿ ಸಮೀಕ್ಷೆ, ಪರಿಹಾರ: ಆರ್.ಅಶೋಕ್ ಆಗ್ರಹ

Vijayapura:

Font size:

ಕೂಡಲೇ ಬೆಳೆಹಾನಿ ಸಮೀಕ್ಷೆ, ಪರಿಹಾರ: ಆರ್.ಅಶೋಕ್ ಆಗ್ರಹ

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮದಲ್ಲಿ ಭೀಮಾ ನದಿಯ ಪ್ರವಾಹದಿಂದ ಉಂಟಾದ ತೊಗರಿ ಮತ್ತು ಕಬ್ಬು ಬೆಳೆÀ ಹಾನಿ ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಇಂದು ಭೇಟಿ ನೀಡಿ ವೀಕ್ಷಣೆ ಮಾಡಿದರು.
ಸರ್ಕಾರ ಕೂಡಲೇ ಬೆಳೆ ಹಾನಿಯ ಬಗ್ಗೆ ಸಮೀಕ್ಷೆ ನಡೆಸಬೇಕು. ಬೆಳೆ ಹಾನಿಯಾದ ರೈತ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದರು.
ಸಂಸದರಾದ ರಮೇಶ್ ಜಿಗಜಿಣಗಿ ಮತ್ತು ಪಿ.ಸಿ. ಗದ್ದಿಗೌಡರ್, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ, ಮಾಜಿ ಸಚಿವ ಅಪ್ಪ ಸಾಹೇಬ್ ಪಟ್ಟಣಶೆಟ್ಟಿ, ಮಾಜಿ ಶಾಸಕರಾದ ರಮೇಶ್ ಬೂಸನೂರ್, ಸೋಮನಗೌಡ ಪಾಟೀಲ್ ಸಾಸನೂರ್, ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ, ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ, ವಿಜಯಪುರ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಕಾಸುಗೌಡ ಬೀರಾದರ್, ವಿಜುಗೌಡ ಪಾಟೀಲ್, ಚಂದ್ರಶೇಖರ್ ಕೌಟಗಿ, ಸಂಜಯ್ ಐಹೊಳೆ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Prev Post ಗಣತಿ ವಿಷಯದಲ್ಲಿ ಗೊಂದಲ ಹೆಚ್ಚಳ: ವಿಜಯೇಂದ್ರ
Next Post ಯಾರು ಎಷ್ಟೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ; ಎಲ್ಲರೂ ಸಹಕರಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್