ಸಿದ್ದರಾಮಯ್ಯರ ಅಂತರಂಗದಲ್ಲಿ ಏನಿದೆ?: ವಿಜಯೇಂದ್ರ

BANGALORE:

Font size:

ಎಲ್ಲ ಸಮಾಜ, ಧರ್ಮಗಳನ್ನು ರಕ್ಷಿಸುವ ಆದ್ಯ ಕರ್ತವ್ಯ ಮುಖ್ಯಮಂತ್ರಿಗಳಿಗೆ ಇರಬೇಕಾಗುತ್ತದೆ. ಬಸವೇಶ್ವರರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವುದನ್ನು ಸ್ವಾಗತಿಸುತ್ತೇವೆ. ಆದರೆ, ಸಿದ್ದರಾಮಯ್ಯನವರ ಅಂತರಂಗದಲ್ಲಿ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ

ಬೆಂಗಳೂರು: ಎಲ್ಲ ಸಮಾಜ, ಧರ್ಮಗಳನ್ನು ರಕ್ಷಿಸುವ ಆದ್ಯ ಕರ್ತವ್ಯ ಮುಖ್ಯಮಂತ್ರಿಗಳಿಗೆ ಇರಬೇಕಾಗುತ್ತದೆ. ಬಸವೇಶ್ವರರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವುದನ್ನು ಸ್ವಾಗತಿಸುತ್ತೇವೆ. ಆದರೆ, ಸಿದ್ದರಾಮಯ್ಯನವರ ಅಂತರಂಗದಲ್ಲಿ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.
ಬಿ.ಎಲ್.ಎ-1 ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನೆಯು ಇಂದು “ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನ”ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಹಿರಂಗವಾಗಿ ಹೇಳುವುದು ಬೇರೆ; ಮುಖ್ಯಮಂತ್ರಿಗಳ ಅಂತರಂಗದ ಅಪೇಕ್ಷೆ ಏನೆಂಬುದನ್ನು ಅವರು ಬಹಿರಂಗಪಡಿಸಬೇಕಿದೆ ಎಂದು ಹೇಳಿದರು.
ಪ್ರತ್ಯೇಕ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಇದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ವೀರಶೈವ ಲಿಂಗಾಯತ ಅಥವಾ ಲಿಂಗಾಯತ ಧರ್ಮದ ಕೂಗು ಇವತ್ತು ಮುನ್ನೆಲೆಗೆ ಬಂದಿದ್ದು, ಅದರ ಹಿನ್ನೆಲೆಯಲ್ಲಿ ಇದ್ದು ಮಾತನಾಡುವವರು ಯಾರೆಂಬ ಅರಿವು ಸಮಾಜಕ್ಕೆ ಇದೆ ಎಂದು ತಿಳಿಸಿದರು.
ನಾವಿಂದು ಹಿಂದೂ ಧರ್ಮವನ್ನು ರಕ್ಷಿಸಬೇಕಿದೆ. ಧರ್ಮ ಒಡೆಯುವ ದುಸ್ಸಾಹಸವನ್ನೂ ಗಮನಿಸಬೇಕಿದೆ. ಇದರ ಮಧ್ಯೆ ಸಮಾಜ ಒಗ್ಗೂಡಿಸುವ ಕೆಲಸ ಆಗಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಸಮಾಜ, ಒಕ್ಕಲಿಗ, ವೀರಶೈವ ಲಿಂಗಾಯತ ಸಮಾಜ, ಸೇರಿ ಎಲ್ಲ ಸಮಾಜಗಳಲ್ಲಿ ಆರ್ಥಿಕ- ಸಾಮಾಜಿಕ- ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಎಲ್ಲ ಸಮಾಜಕ್ಕೆ ನ್ಯಾಯ ಕೊಡುವ ಕೆಲಸ ಆಗಬೇಕಾಗಿದೆ. ಸಿದ್ದರಾಮಯ್ಯನವರಿಗೆ ಆತುರವೇಕೆ? ಎಂದು ಕೇಳಿದರು.
ಜಾತಿ ಜನಗಣತಿಯಲ್ಲಿ ಕೆಲವೆಡೆ ವಿಕಲಚೇತನರನ್ನೂ ಬಳಸಿಕೊಳ್ಳುತ್ತಿದ್ದಾರೆ. ಸಮರ್ಪಕ ಸಿದ್ಧತೆಯೂ ಇಲ್ಲ; ಆತುರಾತುರವಾಗಿ ಮುಖ್ಯಮಂತ್ರಿಗಳೇ 15 ದಿನದಲ್ಲಿ ಮುಗಿಸಬೇಕೆನ್ನುತ್ತಾರೆ. ಈ ಆತುರ ಯಾಕೆ ಎಂಬುದು ಯಕ್ಷಪ್ರಶ್ನೆ ಎಂದು ನುಡಿದರು. ಕೆಲವು ಶಕ್ತಿಗಳು ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿವೆ. ಹಿಂದೂ ಧರ್ಮವನ್ನು ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಹಿಂದೆಯೂ ಇಂಥ ಷಡ್ಯಂತ್ರ, ಪ್ರಯತ್ನ ನಡೆದಿತ್ತು ಎಂದು ಟೀಕಿಸಿದರು. ಅದರಲ್ಲಿ ಯಶಸ್ಸು ಸಿಕ್ಕಿರಲಿಲ್ಲ. ಮುಂದೆಯೂ ಸಿಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಬೆಂಗಳೂರು: ವಿದೇಶೀಯರು ಒಳನುಸುಳಿ ಭಾರತೀಯರ ರೀತಿಯಲ್ಲಿ ಮತದಾನ ಮಾಡುವುದಕ್ಕೆ ಅವಕಾಶವಾದರೆ ಅದರಿಂದ ದೇಶದ ಏಕತೆ ಹಾಗೂ ಸಮಗ್ರತೆಗೆ ಧಕ್ಕೆ ಬರುತ್ತದೆ ಎಂದು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯ ಅಧ್ಯಕ್ಷ ಓಂ ಪಾಠಕ್ ಅವರು ತಿಳಿಸಿದ್ದಾರೆ.
ಬಿ.ಎಲ್.ಎ-1 ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನೆಯು ಇಂದು “ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನ”ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶಾದ್ಯಂತ ಮತದಾರರ ಪಟ್ಟಿಯ ವಿಶೇóಷ ಸಮಗ್ರ ಪರಿಶೀಲನೆ (ಎಸ್‍ಐಆರ್) ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಬಿಹಾರದಲ್ಲಿ ಪರಿಶೀಲನೆ ಮುಗಿದಿದೆ. ಬಂಗಾಳ, ಅಸ್ಸಾಂ, ಕರ್ನಾಟಕದಲ್ಲಿ ಇದರ ಘೋಷಣೆ ಆಗಲಿದೆ ಎಂದು ವಿವರಿಸಿದರು.
ಮತದಾರರಾಗಲು ನಾಗರಿಕತ್ವ ಅನಿವಾರ್ಯ. 2004ರವರೆಗೆ ನಿರಂತರವಾಗಿ ಎಸ್‍ಐಆರ್ ನಡೆಯುತ್ತಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ಬಂದ ಬಳಿಕ ಅದನ್ನು ರದ್ದು ಮಾಡಿದ್ದಾರೆ ಎಂದು ಟೀಕಿಸಿದರು. ಇದೊಂದು ಧನಾತ್ಮಕ ಮತ್ತು ಸಾರ್ಥಕ ಕ್ರಮ ಎಂದು ಶ್ಲಾಘಿಸಿದರು.
ಕಾರ್ಯಕ್ರಮ, ನೀತಿ, ಜನರ ಜೊತೆಗಿನ ಸಂವಾದದ ಆಧಾರದಲ್ಲಿ ಪಕ್ಷಗಳು ಗೆಲುವು ಸಾಧಿಸುತ್ತವೆ. ಇದಕ್ಕಾಗಿ ಮತದಾರರ ಪಟ್ಟಿಯ ಶುದ್ಧೀಕರಣ ಅತ್ಯಗತ್ಯ ಎಂದು ಪ್ರತಿಪಾದಿಸಿದರು. ತಮ್ಮ ಬೆಂಗಳೂರಿನ ಜೊತೆಗಿನ ಬಾಂಧವ್ಯವನ್ನು ಅವರು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡರು.
ಬಿಹಾರದಲ್ಲಿ ಹೊಸ ಮತದಾರರ ಪಟ್ಟಿ ಹೊರಬಿದ್ದಿದೆ. ಮೃತರು, ಸ್ಥಳದಲ್ಲಿ ಇಲ್ಲದವರನ್ನು ಕೈಬಿಡಲಾಗಿದೆ. ಇನ್ನು ಮುಂದಿನ ದಿನಗಳಲ್ಲಿ ನಕಲಿ ಮತದಾರರಿಗೆ ಅವಕಾಶ ಇರುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ತಿಳಿಸಿದರು.

Prev Post ಸಮ ಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ
Next Post ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ- ಮುಖ್ಯಮಂತ್ರಿ ಸಿದ್ದರಾಮಯ್ಯ