ಶಿಕ್ಷಣದ ಉದ್ದೇಶ ಸಮಾಜದ ಕಲ್ಯಾಣ - ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Banglore:

Font size:

ಶಿಕ್ಷಣದ ಉದ್ದೇಶ ಸಮಾಜದ ಕಲ್ಯಾಣ - ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ಅ. ,8-

ಶಿಕ್ಷಣದ ಉದ್ದೇಶ ಕೇವಲ ಜ್ಞಾನವನ್ನು ಗಳಿಸುವುದಲ್ಲ, ಅದನ್ನು ಸಮಾಜದ ಕಲ್ಯಾಣಕ್ಕಾಗಿ ಉಪಯೋಗಿಸುವುದಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಪಡೆಯುವ ಜ್ಞಾನವನ್ನು ಉತ್ತಮ ಸಮಾಜ ನಿರ್ಮಾಣ ಹಾಗೂ ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ಘಟಿ ಕೋತ್ಸವದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಈ ಘಟಿಕೋತ್ಸವವು ಶೈಕ್ಷಣಿಕ ಸಾಧನೆ, ಸಂಶೋಧನೆ ಮತ್ತು ಸಾಮಾಜಿಕ ಸೇವೆಯ ಆರು ದಶಕಗಳ ಪಯಣವನ್ನು ಸ್ಮರಿಸುತ್ತದೆ ಎಂದು ಹೇಳಿದರು.

ರಾಜ್ಯಪಾಲರು ವಿಶ್ವವಿದ್ಯಾಲಯದ ಶೈಕ್ಷಣಿಕ ಪರಂಪರೆಯನ್ನು ಶ್ಲಾಘಿಸಿ, “ಜ್ಞಾನಂ ವಿಜ್ಞಾನಸಹಿತಂ” ಎಂಬ ಧ್ಯೇಯವಾಕ್ಯದ ಅರ್ಥವನ್ನು ಬದುಕಿನಲ್ಲಿ ಅಳವಡಿಸಿಕೊಂಡು, ವಿಶ್ವವಿದ್ಯಾನಿಲಯವು ಶ್ರೇಷ್ಠತೆಯ ದಿಕ್ಕಿನಲ್ಲಿ ನಿರಂತರವಾಗಿ ಮುಂದುವರಿಯುತ್ತಿದೆ. ವಿಶ್ವವಿದ್ಯಾಲಯವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಹಕಾರದ ಮೂಲಕ ಉನ್ನತ ಶಿಕ್ಷಣದಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವುದು ಹೆಮ್ಮೆಯಾಗಿದೆ ಎಂದರು.

ರಾಜ್ಯಪಾಲರು ಗೌರವ ಪದವಿ ಪುರಸ್ಕøತರನ್ನು ಅಭಿನಂದಿಸಿ, “ನೀವು ಸಮಾಜ ಮತ್ತು ರಾಷ್ಟ್ರದ ಹಿತಕ್ಕಾಗಿ ಸೇವೆಯನ್ನು ಮುಂದುವರಿಸಬೇಕು. 60ನೇ ಘಟಿಕೋತ್ಸವದ ಸಂದರ್ಭದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಈಗ ನೀವು ಶಿಕ್ಷಣದಿಂದ ಅನುಭವ ಮತ್ತು ಕ್ರಿಯೆಯ ಹಾದಿಗೆ ಪ್ರವೇಶಿಸುತ್ತಿದ್ದೀರಿ. ಹೊಸ ಸವಾಲುಗಳು ಮತ್ತು ಅವಕಾಶಗಳನ್ನು ಎದುರಿಸಲು ನಿಮ್ಮಲ್ಲಿ ಆತ್ಮವಿಶ್ವಾಸ ಇರಲಿ, ಎಂದು ಪ್ರೇರೇಪಿಸಿದರು.

ಸ್ವಾಮಿ ವಿವೇಕಾನಂದರ “ಎದ್ದೇಳಿ, ಎಚ್ಚರಗೊಳ್ಳಿ, ಗುರಿ ತಲುಪುವವರೆಗೆ ನಿಲ್ಲಬೇಡಿ” ಎಂಬ ಮಾತುಗಳನ್ನು ಉಲ್ಲೇಖಿಸಿ, ರಾಜ್ಯಪಾಲರು ವಿದ್ಯಾರ್ಥಿಗಳಿಗೆ ದೇಶದ ಅಭಿವೃದ್ಧಿಗೆ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಬಳಸಿಕೊಳ್ಳಿ ಎಂದ ಅವರು, ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ‘ರಾಷ್ಟ್ರಗಳು ಶಿಕ್ಷಣ ಸಂಸ್ಥೆಗಳಲ್ಲಿ ನಿರ್ಮಾಣವಾಗುತ್ತವೆ’ ಎಂಬ ಚಿಂತನೆಯನ್ನು ಉಲ್ಲೇಖಿಸಿ, ರಾಜ್ಯಪಾಲರು ವಿಶ್ವವಿದ್ಯಾಲಯಗಳನ್ನು ಶ್ರೇಷ್ಠತೆಯ ಕೇಂದ್ರಗಳನ್ನಾಗಿ ಮಾಡುವ ಅಗತ್ಯವಿದೆ ಎಂದು ಹೇಳಿದರು.

ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್‍ಅಪ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ, ವೆಂಚರ್ ಕ್ಯಾಪಿಟಲ್ ಫಂಡ್ ಯೋಜನೆಗಳ ಅವಕಾಶಗಳನ್ನು ಬಳಸಿಕೊಂಡು ನವ ಭಾರತ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಮುನ್ನಡೆಸಬೇಕು ಎಂದು ಕರೆ ನೀಡಿದರು.

ರಾಜ್ಯಪಾಲರು ಶಿಕ್ಷಕರು ಮತ್ತು ಪೆÇೀಷಕರ ಸೇವೆಯನ್ನು ಪ್ರಶಂಸಿಸಿ, “ವಿದ್ಯಾರ್ಥಿಗಳ ಯಶಸ್ಸು ಅವರ ಮಾರ್ಗದರ್ಶನದ ಪ್ರತಿಫಲ,” ಎಂದು ಹೇಳಿದರು.

ವಿಶ್ವವಿದ್ಯಾನಿಲಯಗಳು ಸಂಶೋಧನೆ, ನಾವೀನ್ಯತೆ, ಸ್ಥಳೀಯ ಭಾμÉಗಳ ಮೂಲಕ ಉನ್ನತ ಶಿಕ್ಷಣ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತಾ ಅಭಿಯಾನಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಜ್ಞಾನ, ಸೇವೆ, ಸತ್ಯ ಮತ್ತು ದೇಶಭಕ್ತಿಯ ಮೌಲ್ಯಗಳಿಂದ ನಿಮ್ಮ ಜೀವನ ಅರ್ಥಪೂರ್ಣವಾಗಲಿ, ಎಂದು ಹಾರೈಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾದ ಡಾ. ಪ್ರಹ್ಲಾದ್ ರಾಮರಾವ್, ಕುಲಪತಿಗಳಾದ ಡಾ. ಜಯಕರ್ ಶೆಟ್ಟಿ ಮುಂತಾದ ಗಣ್ಯರು ಹಾಜರಿದ್ದರು.

Prev Post ಸಮೀಕ್ಷೆಗಾಗಿ ಶಾಲೆ ರಜೆ ವಿಸ್ತರಣೆ; ಸರ್ಕಾರದ ನಿಲುವನ್ನ ಖಂಡಿಸಿದ ನಿಖಿಲ್ ಕುಮಾರಸ್ವಾಮಿ
Next Post ದಿನಾಂಕ: 9-10-2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಮುಖ್ಯ ನಿರ್ಣಯಗಳು: