ಮಧುಗಿರಿ;ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ನೂತನ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನ ಪರೀಕ್ಷ ಪಥ ಹಾಗೂ ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿಯ ನೂತನ ಕಟ್ಟಡ ಶಂಕು ಸ್ಥಾಪನೆ
ಮಧುಗಿರಿ;ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ನೂತನ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನ ಪರೀಕ್ಷ ಪಥ ಹಾಗೂ ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿಯ ನೂತನ ಕಟ್ಟಡ ಶಂಕು ಸ್ಥಾಪನೆ
ಮಧುಗಿರಿ ಪಟ್ಟಣದ ಹೊರ ವಲಯದ ಪಾಳ್ಯದಹಳ್ಳಿಯಲ್ಲಿ ಸಾರಿಗೆ ಇಲಾಖೆ ಮತ್ತು ರೇಷ್ಮೆ ಇಲಾಖೆಯ ಸಹಯೋಗದೊಂದಿಗೆ ಸುಮಾರು ₹11.50 ಕೋಟಿ ರೂ ವೆಚ್ಚದಲ್ಲಿ "ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ನೂತನ ಕಟ್ಟಡ ಹಾಗೂ ಸ್ವಯಂ ಚಾಲಿತ ವಾಹನ ಚಾಲನ ಪರೀಕ್ಷ ಪಥ ಹಾಗೂ ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿಯ ನೂತನ ಕಟ್ಟಡ" ಶಂಕುಸ್ಥಾಪನಾ ಸಮಾರಂಭದಲ್ಲಿ ಸಾರಿಗೆ ಸಚಿವರಾದ ಶ್ರೀ ರಾಮಲಿಂಗರೆಡ್ಡಿಯವರ ಜೊತೆ ಮಾಜಿ ಸಿಚ ಕೆ ಎನ್ ರಾಜಣ್ಣ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಮಧುಗಿರಿಯಿಂದ ಬೆಂಗಳೂರಿಗೆ ನೂತನ ರಾಜಹಂಸ ಬಸ್ ಗಳಿಗೆ ಚಾಲನೆ ನೀಡಿ ಸಭೆಯನ್ನು ಕುರಿತು ಇದೇ ಸಂದರ್ಭದಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷರವರು, ಅಪರ ಸಾರಿಗೆ ಆಯುಕ್ತರಾದ ಎಂ.ಪಿ.ಓಂಕಾರೇಶ್ವರಿಯವರು, ರೇಷ್ಮೆ ನಿರ್ದೇಶನಾಲಯ ರೇಷ್ಮೆ ಅಪರ ನಿರ್ದೇಶಕರಾದ ವೈ.ಟಿ.ತಿಮ್ಮಯ್ಯನವರು, ಜಂಟಿ ಸಾರಿಗೆ ಆಯುಕ್ತರಾದ ಎನ್.ಜಿ.ಗಾಯಿತ್ರಿದೇವಿಯವರು, ತುಮಕೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಕಾರ್ಯದರ್ಶಿಯಾದ ಎ.ವಿ.ಪ್ರಸಾದ್ ಅವರು, ತುಮಕೂರು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ವೀರಣ್ಣನವರು, ಮಧುಗಿರಿ ರೇಷ್ಮೆ ಸಹಾಯಕ ನಿರ್ದೇಶಕರಾದ ಮೋಹನ್ ಡಿ. ಅವರು, ಇ.ಓ ಲಕ್ಷಣ್ ಅವರು, ಡಿ.ವೈ.ಎಸ್.ಪಿ.ಮಂಜುನಾಥ್ ಅವರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಅನೇಕ ಮುಖಂಡರುಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.






