6 ರಂದು ಕ್ಯಾನ್ಸರ್ ಉಚಿತ ಚಿಕಿತ್ಸಾ ಶಿಬಿರ: ಎನ್.ರವಿಕುಮಾರ್
ಬೆಂಗಳೂರು: ಇದೇ ಡಿಸೆಂಬರ್ 6 ರಂದು ಕ್ಯಾನ್ಸರ್ ಚಿಕಿತ್ಸಾ ಶಿಬಿರವನ್ನು ನಡೆಸಲಾಗುತ್ತದೆ. ಬೆಂಗಳೂರಿನ ಗೋಸೇವಾ ಗತಿವಿಧಿ, ಕರ್ನಾಟಕ, ಬೆಂಗಳೂರಿನ ಪರಕಾಲ ಸ್ವಾಮಿ ಮಠ, ಸಂಪ್ರದಾ ಆಸ್ಪತ್ರೆ, ಸಿದ್ಧಗಿರಿ ನ್ಯಾಚುರಲ್ ಇವರ ಸಹಯೋಗದಲ್ಲಿ ಮತ್ತು ಬಿಜೆಪಿಯ ವೈದ್ಯಕೀಯ ಪ್ರಕೋಷ್ಠದ ಸಹಕಾರದೊಂದಿಗೆ ಈ ಒಂದು ದಿನದ ಶಿಬಿರ ನಡೆಯಲಿದೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪೆÇೀಸ್ಟರ್ ಬಿಡುಗಡೆಯ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಗವ್ಯದಿಂದ ಎಲ್ಲಾ ವಿಧದ ಕ್ಯಾನ್ಸರ್ (ಅಂಕೊಲಜಿ) ರೋಗಿಗಳಿಗೆ ಚಿಕಿತ್ಸಾ ಶಿಬಿರವನ್ನು, 25 ವರ್ಷಗಳ ಸುದೀರ್ಘ ಅನುಭವವುಳ್ಳ ಡಾ. ಡಿ.ಪಿ. ರಮೇಶ್ ಮತ್ತು ಸಂಪ್ರದಾ ಹಾಸ್ಪಿಟಲ್ ವೈದ್ಯರ ತಂಡದವರಿಂದ ಉಚಿತವಾಗಿ ಆಯೋಜಿಸಲಾಗಿದೆ ಎಂದು ವಿವರಿಸಿದರು.
ಕ್ಯಾನ್ಸರ್ ಬಗ್ಗೆ ಸಮಾಜದಲ್ಲಿ ಭಯವಿದೆ. ಅದನ್ನು ಗುಣಪಡಿಸಬಹುದು ಎಂಬುದನ್ನು ತಿಳಿಸುವ ಮತ್ತು ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ದೃಷ್ಟಿಯಿಂದ ಡಿಸೆಂಬರ್ 6 ರಂದು ಚಿಕಿತ್ಸಾ ಶಿಬಿರವನ್ನು ಬೆಂಗಳೂರು ಸುಭಾμï ನಗರ (ಮೆಜೆಸ್ಟಿಕ್ ಬಸ್ ಸ್ಟ್ಯಾಂಡ್ ಎದುರುಗಡೆ), ಧನ್ವಂತರಿ ರಸ್ತೆಯ ಆಯುರ್ವೇದ ಸರಕಾರಿ ಮೆಡಿಕಲ್ ಕಾಲೇಜ್ ಪಕ್ಕದ ಶ್ರೀ ಲಕ್ಷ್ಮೀ ಹಯಗ್ರೀವ ದೇವಸ್ಥಾನ, ನಂ.8, ಪರಕಾಲ ಸ್ವಾಮಿ ಮಠದ ಆವರಣದಲ್ಲಿ ನಡೆಸಲಾಗುತ್ತದೆ. ಇದನ್ನು ಆರೆಸ್ಸೆಸ್‍ನ ದಕ್ಷಿಣ ಪ್ರಾಂತದ ಪ್ರಧಾನ ಕಾರ್ಯದರ್ಶಿ ಡಾ.ಜಯಪ್ರಕಾಶ್ ಅವರು ಉದ್ಘಾಟಿಸುವರು. ಸವಿತಾ ಮಠದ ಶ್ರೀ ಸವಿತಾನಂದನಾಥ ಸ್ವಾಮೀಜಿ, ಡಾ.ರಾಧೇಶಾಮ್ ನಾಯಕ್, ಲೋಕಸೇವಾ ಆಯೋಗದ ಪ್ರಭುದೇವ್, ರಾಜ್ಯದ ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಮುಖ್ಯ ಅತಿಥಿಗಳಾಗಿರುವರು ಎಂದರು. ಇದರ ಪ್ರಯೋಜನ ಪಡೆಯಲು ಮನವಿ ಮಾಡಿದರು.
ಪಂಚಗವ್ಯ ಚಿಕಿತ್ಸಾ ತಜ್ಞ ಡಾ. ಡಿ.ಪಿ. ರಮೇಶ್ ಅವರು ಮಾತನಾಡಿ, ಕ್ಯಾನ್ಸರ್ ಚಿಕಿತ್ಸೆಗೆ ಪಂಚಗವ್ಯ ಬಳಕೆ ಸಾಧ್ಯವಿದೆ. ಅಡ್ಡ ಪರಿಣಾಮವಿಲ್ಲದೇ, ಆರ್ಥಿಕ ಹೊರೆ ಇಲ್ಲದೇ ಚಿಕಿತ್ಸೆ ನೀಡಬಹುದು. ಪರ್ಯಾಯ ಚಿಕಿತ್ಸೆ ಕುರಿತಂತೆ ಜನಜಾಗೃತಿ ಆಗಬೇಕಿದೆ ಎಂದು ತಿಳಿಸಿದರು.
ಪಂಚಗವ್ಯ ಚಿಕಿತ್ಸಾ ತಜ್ಞ ಡಾ. ಡಿ.ಪಿ. ರಮೇಶ್, ವೈದ್ಯಕೀಯ ಪ್ರಕೋಷ್ಠದ ಡಾ. ಚನ್ನಮಲ್ಲಸ್ವಾಮಿ, ಲಕ್ಷ್ಮಣ್, ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಲಿಂಗಸುಗೂರು, ಅವರು ಹಾಜರಿದ್ದರು.
ಬೆಂಗಳೂರು, ಡಿಸೆಂಬರ್ 2
ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನುಮ ಜಯಂತಿಯ ದಿನದಂದು ಎಲ್ಲೆಡೆ ಸಂಭ್ರಮದ ಆಚರಣೆ ನಡೆಯುತ್ತಿದ್ದರೆ, ಸದಾಶಿವನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಟಿಕೋಳಿಯ ಸಾರು ಸವಿದಿದ್ದಾರೆ. ಈ ಹಿಂದೆ ಅವರು ಮಾಂಸ ಸೇವಿಸಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಕೆಲವು ದಿನದ ಹಿಂದೆ ಸಿದ್ದರಾಮಯ್ಯ ಮನೆಯಲ್ಲಿ ಉಪಾಹಾರ ನಡೆದಿದ್ದರೆ, ಈಗ ಡಿ.ಕೆ.ಶಿವಕುಮಾರ್ ಮನೆಯಲ್ಲಿ ನಡೆದಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ವೇಣುಗೋಪಾಲ್ ಈ ಪ್ರಹಸನವನ್ನು ನಿರ್ದೇಶನ ಮಾಡಿದ್ದಾರೆ. ಸಿದ್ದರಾಮಯ್ಯನವರ ಈ ನಡೆಯಿಂದ ಎಲ್ಲ ಹನುಮ ಭಕ್ತರ ಮನಸ್ಸಿಗೆ ನೋವಾಗಿದೆ ಎಂದರು.
ನಾನು ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆಂದು ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ ಈಗ ಅವರು ಉಪಾಹಾರ ಸವಿದಿದ್ದಾರೆ. ಈ ನಡುವೆ ಡಾ.ಜಿ.ಪರಮೇಶ್ವರ್ ಬಹಳ ನೋವಿನಿಂದ ಮಾತಾಡಿದ್ದಾರೆ. ರಾಜ್ಯದಲ್ಲಿ ಕಳೆದ 10 ತಿಂಗಳಲ್ಲಿ 580 ಕ್ಕೂ ಅಧಿಕ ಜನರು ರಸ್ತೆಗುಂಡಿಯಿಂದ ಸತ್ತಿದ್ದಾರೆ. ತಿಂಡಿ ತಿನ್ನುವ ಸಮಯವನ್ನು ರಸ್ತೆಗುಂಡಿ ಮುಚ್ಚಿಸಲು ವಿನಿಯೋಗಿಸಿದ್ದರೆ ಅಮಾಯಕ ಜೀವಗಳು ಉಳಿಯುತ್ತಿತ್ತು. ರೈತರ ಕಬ್ಬಿನ ದರದ ಸಮಸ್ಯೆ ಬಗೆಹರಿದಿಲ್ಲ. ಮೆಕ್ಕೆಜೋಳ ಖರೀದಿ ಕೇಂದ್ರದ ಸಮಸ್ಯೆ ಬಗೆಹರಿದಿಲ್ಲ. ಈ ಬಗ್ಗೆ ಯಾವುದೇ ಉಪಾಹಾರ ಸಭೆ ನಡೆಸಿಲ್ಲ. ಇವರಿಬ್ಬರ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ನಡೆಸಬೇಕಿತ್ತೇ? ಅಂಗನವಾಡಿ ಕಾರ್ಯಕರ್ತರು, ರೈತರು, ಉದ್ಯಮಿಗಳು, ದಲಿತರ ವಿಶ್ವಾಸವನ್ನು ಸರ್ಕಾರ ಕಳೆದುಕೊಂಡಿದೆ ಎಂದರು.
ಬಿಗ್‌ಬಾಸ್‌ನಲ್ಲಿ ವೈಲ್ಡ್ ಕಾರ್ಡ್‌ನಂತೆ ಸತೀಶ್ ಜಾರಕಿಹೊಳಿ ಹಾಗೂ ಡಾ.ಜಿ.ಪರಮೇಶ್ವರ್ ದಲಿತ ಬ್ರ್ಯಾಂಡ್‌ನಡಿ ಸಿಎಂ ಆಗಲು ಕಾಯುತ್ತಿದ್ದಾರೆ. ಇಡೀ ಸರ್ಕಾರ ರಿಯಾಲಿಟಿ ಶೋನಂತೆ ಆಗಿದೆ. ಈ ರೀತಿ ಸಭೆ ನಡೆಸುವ ಬದಲು, ತುಂಗಭದ್ರಾ ಜಲಾಶಯದ ಗೇಟ್‌ಗಳನ್ನು ದುರಸ್ತಿ ಮಾಡಿಸಲು 12 ಕೋಟಿ ರೂ. ಬಿಲ್ ಪಾವತಿಸಿದ್ದರೆ ರೈತರಿಗೆ ನೀರಾವರಿ ಲಭ್ಯವಾಗುತ್ತಿತ್ತು. ಈ ಬಗ್ಗೆ ರೈತರ ಪರವಾಗಿ ಅಧಿವೇಶನದ ಸಮಯದಲ್ಲಿ ಹೋರಾಟ ಮಾಡಲಾಗುವುದು ಎಂದರು.
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಾತ್ರ ಅಲ್ಲ, ಯಾವುದೇ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಸಿಎಂ ಸಿದ್ದರಾಮಯ್ಯ ಕಳೆದ ಬೆಳಗಾವಿ ಅಧಿವೇಶನದಲ್ಲಿ ಕೊಟ್ಟ ಮಾತನ್ನು ಈಡೇರಿಸಲಾಗಿದೆಯೇ ಎಂದು ನಾವು ಪ್ರಶ್ನೆ ಮಾಡುತ್ತೇವೆ. ಧರ್ಮಸ್ಥಳದಲ್ಲಿ ಬುರುಡೆ ತಂದವನಿಗೆ ಬಿರಿಯಾನಿ ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರ. ಆದರೆ ಅದನ್ನು ಸಾಬೀತುಪಡಿಸಲು ಇಂದಿಗೂ ಸಾಧ್ಯವಾಗಿಲ್ಲ ಎಂದರು.
ಬೆಂಗಳೂರಿನ ಬಗ್ಗೆ ಟೀಕೆ ಮಾಡಿದ ಉತ್ತರ ಪ್ರದೇಶದ ಸಂಸದರು ಭದ್ರತೆ ಹೆಚ್ಚು ಮಾಡಿಕೊಳ್ಳಬೇಕು. ಇಲ್ಲವಾದರೆ ಡಿ.ಕೆ.ಶಿವಕುಮಾರ್ ಅವರಿಗೂ ಬೆದರಿಕೆ ಹಾಕುತ್ತಾರೆ. ಈಗಾಗಲೇ ಉದ್ಯಮಿಗಳಿಗೆ ಬೆದರಿಕೆ ಹಾಕಲಾಗಿದೆ ಎಂದರು.





