ಅಂಬೇಡ್ಕರ್ ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದರು : ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಡಿಸೆಂಬರ್ -06: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ ಡಾ ll ಬಿ ಆರ್ ಅಂಬೇಡ್ಕರ್ ರವರ 69 ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿ. ಅವರು ದೇಶಕ್ಕೆ ಎಂಥ ಸಂವಿಧಾನದ ಅಗತ್ಯವಿದೆ ಎಂದು ಚಿಂತಿಸಿ , ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ ದೇಶಕ್ಕೆ ಅಗತ್ಯವಿರುವ ಸಂವಿಧಾನವನ್ನು ಕೊಟ್ಟಿದ್ದಾರೆ. ನಮ್ಮ ಸಾಮಾಜಿಕ ವ್ಯವಸ್ಥೆಯ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ನಮ್ಮ ಸರ್ಕಾರ ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ಸಂವಿಧಾನ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ. ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದರು.
ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿದ್ದರು
ಪರಿನಿರ್ವಾಣ ದಿನದಂದು ನಾವು ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದು ಹೇಳಿದ್ದರು ಎಂದರು. ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದರು ಎಂದರು.
ಹೆಚ್.ಡಿ.ಕುಮಾರಸ್ವಾಮಿ ಮನುವಾದಿಗಳಾಗಿದ್ದಾರೆ
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಭಗವದ್ಗೀತೆಯನ್ನು ಪಠ್ಯಕ್ಕೆ ಸೇರಿಸಬೇಕೆಂದು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಬಗ್ಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮನುವಾದಿಗಳಾಗಿದ್ದಾರೆ ಎಂದರು
ಒಂದು ವರ್ಷದಿಂದ ಮಂಡ್ಯ ಜಿಲ್ಲಾಧಿಕಾರಿ ಕೈಗಾರಿಕೆಗೆ ಜಾಗ ಹುಡುಕುತ್ತಿದ್ದಾರೆ!
ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ ಕೃಷಿ ಮೇಳದಲ್ಲಿ ಪಾಲ್ಗೊಂಡ ಕೇಂದ್ರ ಸಚಿವರು
ಮಂಡ್ಯ: ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ. ಕಳೆದ ಒಂದು ವರ್ಷದಿಂದ ಕೈಗಾರಿಕೆ ಸ್ಥಾಪನೆಗೆ ಜಾಗ ಹುಡುಕಲು ಜಿಲ್ಲಾಧಿಕಾರಿಗೆ ಹೇಳುತ್ತಿದ್ದೇನೆ. ಇನ್ನೂ ಜಾಗ ಸಿಕ್ಕಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಇಲ್ಲಿನ ವಿಸಿ ಫಾರಂನಲ್ಲಿ ನಡೆಯುತ್ತರಿರುವ ಕೃಷಿ ಮೇಳದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಕೇಂದ್ರ ಸಚಿವರು; ಕುಮಾರಣ್ಣ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಜಿಲ್ಲೆಗೆ ಏನಾದರೂ ಕೈಗಾರಿಕೆ ತರಬಹುದು ಎಂಬ ನಿರೀಕ್ಷೆ ಜನರಲ್ಲಿದೆ. ಕನಿಷ್ಠ ಒಂದು ಕಾರ್ಖಾನೆಯನ್ನಾದರು ಮಂಡ್ಯಕ್ಕೆ ತರಲು ಒಂದು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಇನ್ನೂ ಸರಕಾರ ನಮಗೆ ಜಾಗ ನೀಡಿಲ್ಲ ಎಂದರು.
ರಾಜ್ಯದಲ್ಲಿ ನನ್ನ ಇಲಾಖೆ ಯಿಂದ ಸಾಧ್ಯವಾಗುವ ಕೆಲಸಗಳನ್ನು ಮಾಡುತ್ತಿದ್ದೇನೆ. ಭದ್ರಾವತಿಯಲ್ಲರಿವ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ ಚಿಂತನೆ ನಡೆಸಲಾಗಿದೆ. ಇತ್ತೀಚೆಗೆ ನಾನು ಆ ಕಾರ್ಖಾನೆಗೆ ಎರಡನೇ ಸಲ ಭೇಟಿ ನೀಡಿದ್ದೆ ಎಂದು ಕೇಂದ್ರ ಸಚಿವರು ಹೇಳಿದರು.
ಕೃಷಿ ಮೇಳ ಅತ್ಯಂತ ಯಶಸ್ವಿಯಾಗಿದೆ. ಪ್ರತಿ ಗ್ರಾಮ ಗ್ರಾಮಕ್ಕೂ ಈ ಮೇಳದ ಉದ್ದೇಶ ತಲುಪಿದೆ. ಕೇಂದ್ರ ಸರ್ಕಾರವು ಕೃಷಿ ವಲಯಕ್ಕೆ 1.32 ಲಕ್ಷದ ಕೋಟಿ ಅನುದಾನ ಹಂಚಿಕೆ ಮಾಡಿದೆ. ಮೆಕ್ಕೆಜೋಳ ಖರೀದಿಸುವಂತೆ ರೈತರು ಪ್ರತಿಭಟನೆ ಮಾಡ್ತಿದ್ದಾರೆ.
ಖರೀದಿ ಕೇಂದ್ರ ತೆರೆದು MSP ದರದಲ್ಲಿ ರಾಜ್ಯ ಸರ್ಕಾರ ಖರೀದಿ ಮಾಡಬೇಕು. ಆದರೆ ಪಶು ಆಹಾರ ತಯಾರಕರ ಸಭೆ ನಡೆಸಿ, KMFಗೆ 50ಸಾವಿರ ಕೆಜಿ ಮೆಕ್ಕೆಜೋಳ ಖರೀದಿಸುವಂತೆ ಹೇಳಿ ಸರ್ಕಾರ ಕೈ ತೊಳೆದುಕೊಂಡಿದೆ. ನಾನು ಸಿಎಂ ಆಗಿದ್ದಾಗ 2 ಅವಧಿಯಲ್ಲೂ ರೈತರ ತಮ್ಮ ಬೆಳೆ ಮಾರಾಟ ಮಾಡಲಾಗದೆ ಪ್ರತಿಭಟಿಸಲಿಲ್ಲ. ಆಧುನಿಕ ಉಪಕರಣಗಳನ್ನು ರೈತರು ಬಳಸಿದರೆ 50% ಹಣ ಉಳಿತಾಯ ಮಾಡಬಹುದು. ಕೃಷಿ ವಿಜ್ಞಾನಿಗಳ ಸಂಶೋಧನೆ ರೈತನ ಮನೆ ಮುಟ್ಟಬೇಕು ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.
ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಗ್ಯಾರಂಟಿ ಸ್ಕೀಮ್‌ಗಳ ಬಗ್ಗೆ ಚರ್ಚೆ ಮಾಡ್ತಾರೆ. ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಗೋಡೌನ್, ಕೋಲ್ಡ್ ಸ್ಟೋರೇಜ್ ನಿರ್ಮಾಣವಾಗಬೇಕು. ರೈತ ಬೆಳೆದ ಬೆಳೆಗಳಿಗೆ 75% ಅಡ್ವಾನ್ಸ್ ಸರ್ಕಾರದಿಂದ ಕೊಡಬೇಕು. ಮಾರಾಟ ಮಾಡಿದ ಬಳಿಕ ರೈತ ಅಡ್ವಾನ್ಸ್ ಹಣ ಸರ್ಕಾರಕ್ಕೆ ಕಟ್ಟಬೇಕು. ಆಗ ಮಧ್ಯವರ್ತಿಗಳ ಹಾವಳಿ ತಪ್ಪುತ್ತದೆ. ಇದೆಲ್ಲಾ ನನ್ನ ಮುಂದಿರುವ ಕಾರ್ಯಕ್ರಮಗಳು. ಮುಂದಿನ ದಿನಗಳಲ್ಲಿ ನೀವೆಲ್ಲಾ ಬುದ್ದಿವಂತರಾದರೆ ನಾನು ಜಾರಿ ಮಾಡಬಹುದು. ಎಂತೆಂತಹ ಸರ್ಕಾರಗಳನ್ನು ನೋಡಿದ್ದೀರಾ.. ಮಂಡ್ಯದಂತಹ ಜಿಲ್ಲೆಗಳು ಸೇರಿ 36 ಸೀಟುಗಳನ್ನು ನೀಡಿದ್ದಿರಿ. ಯಾವತ್ತೂ ಪೂರ್ಣ ಪ್ರಮಾಣದ ಸರ್ಕಾರ ನಡೆಯಲು ಅವಕಾಶ ಸಿಕ್ಕಿಲ್ಲ ಎಂದು ಸಚಿವರು ಹೇಳಿದರು.
ನನ್ನ ಮೇಲೆ ಅನುಮಾನ ಬೇಡ, ನಾನೆಲ್ಲೇ ಇದ್ದರೂ ನನ್ನ ಹೃದಯದಲ್ಲಿ ಮಂಡ್ಯಕ್ಕೆ ಮೊದಲ ಸ್ಥಾನ. ಪ್ರತಿಭಟನಾನಿರತ ಅಂಗನವಾಡಿ ಕಾರ್ಯಕರ್ತೆಯರನ್ನ ನವದೆಹಲಿಗೆ ಕರೆಸಿ ಸಂಬಂಧಿಸಿದ ಸಚಿವರನ್ನ ಭೇಟಿ ಮಾಡಿಸಿದೆ. ಅವರ ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ಕನಿಷ್ಠ ಪರಿಹಾರವಾದರೂ ಸಿಗಲಿದೆ ಎಂದು






