ಗದಗ ನಗರದ ನಡೆದ ಕಾರ್ಯಕ್ರಮಗಳಲ್ಲಿ ಸಂಸದೀಯ ವ್ಯವಹಾರಗಳ , ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲೆಯ ಉಸ್ತುವಾರಿ ಸಚಿವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಗದಗ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಚೇತನ್ ಕರಾಟೆ ವಿವಿಧೋದ್ದೇಶಗಳ ಸಂಘ (ರಿ) ಗದಗ ಇವರ ವತಿಯಿಂದ ಆಯೋಜಿಸಲಾದ ನಾಲ್ಕನೇ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ ಟೂರ್ನಮೆಂಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು
ಗದಗ ಜಿಲ್ಲೆಯ ಮುಳುಗುಂದ ಗ್ರಾಮದಲ್ಲಿ ನಡೆದ ಕೃಷಿ ಇಲಾಖೆಯ ರಿವಾರ್ಡ್ ಯೋಜನೆಯ ಕಾಮಗಾರಿಗಳ ಲೋಕಾರ್ಪಣೆ ಮತ್ತು ಸ್ವಸಹಾಯ ಗುಂಪುಗಳಿಗೆ ಸುತ್ತು ನಿಧಿ ವಿತರಣೆ, ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ವಾಣಿಜ್ಯ ಮೇಳ ಮತ್ತು ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ವಿಕೇಂದ್ರೀಕರಣ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಡಿ.ಆರ್ ಪಾಟೀಲ, ಗದಗ ಜಿಲ್ಲಾಧಿಕಾರಿಗಳಾದ ಶ್ರೀ ಸಿ.ಎನ್ ಶ್ರೀಧರ್ , ರೈತ ಮುಖಂಡರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು
ಗದಗ ಜಿಲ್ಲೆಯ ಮುಳುಗುಂದ ಗ್ರಾಮದಲ್ಲಿ ನಡೆದ ಕೃಷಿ ಇಲಾಖೆಯ ರಿವಾರ್ಡ್ ಯೋಜನೆಯ ಕಾಮಗಾರಿಗಳ ಲೋಕಾರ್ಪಣೆ ಮತ್ತು ಸ್ವಸಹಾಯ ಗುಂಪುಗಳಿಗೆ ಸುತ್ತು ನಿಧಿ ವಿತರಣೆ, ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ವಾಣಿಜ್ಯ ಮೇಳ ಮತ್ತು ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ವಿಕೇಂದ್ರೀಕರಣ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಡಿ.ಆರ್ ಪಾಟೀಲ, ಗದಗ ಜಿಲ್ಲಾಧಿಕಾರಿಗಳಾದ ಶ್ರೀ ಸಿ.ಎನ್ ಶ್ರೀಧರ್ , ರೈತ ಮುಖಂಡರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ಗದಗದ ಮುಳಗುಂದದಲ್ಲಿರುವ ಸಿಕಂದರ್ ಜಾನಖಾನ್ನವರ ತೋಟದಲ್ಲಿ ವಿಶ್ವಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯ ಅಡಿಯಲ್ಲಿ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಹಾಗೂ ರೈತ ಮುಖಂಡರು, ಜಿಲ್ಲಾಧಿಕಾರಿಗಳಾದ ಶ್ರೀ ಸಿ.ಎನ್ ಶ್ರೀಧರ್, ಕೃಷಿ ಇಲಾಖೆ ಅಧಿಕಾರಿಗಳು , ಸ್ಥಳೀಯರು ಉಪಸ್ಥಿತರಿದ್ದರು.
ಗದಗ ನಗರದ ಗಂಗಿಮಡಿಯಲ್ಲಿ ಅಬುಹುರೈರಾ ಮಸ್ಜಿದ್ ವತಿಯಿಂದ ನಡೆದ ಸಿರತುನ್ನಬಿ ಎಕ್ಸಿಬಿಷನ್ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಮುಸ್ಲಿಂ ಸಮುದಾಯದ ಪ್ರಮುಖರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.






