ಉಡುಪಿ ಪರ್ಯಾಯ ಹಿನ್ನೆಲೆ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ

Belaguam:

Font size:

ಉಡುಪಿ ಪರ್ಯಾಯ ಹಿನ್ನೆಲೆ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ

ಬೆಳಗಾವಿ : ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಡಿಯೋ ಸಂವಾದದಲ್ಲಿ ಶಾಸಕರಾದ ಸುನಿಲಕುಮಾರ್, ಕಿರಣಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳಿ, ಗುರ್ಮೆ ಸುರೇಶ್ ಶೆಟ್ಟಿ,
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Prev Post ಪೂರ್ಣಾವಧಿ ಪೂರೈಸೋ ಸಿಎಂ ವಿಶ್ವಾಸ; ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್
Next Post ಸಹಸ್ರ ದಿನ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಹಸ್ರ ಕಾಳುಗಳನ್ನು ಒಳಗೊಂಡ ಭಾವಚಿತ್ರವನ್ನು ನೀಡುವ ಮೂಲಕ ಅಭಿನಂದಿಸಿದರು