ಕರಾವಳಿ ಭಾಗದಲ್ಲಿ ಕೇರಳ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ : ಡಿಸಿಎಂ ಡಿ.ಕೆ.ಶಿವಕುಮಾರ್

Mangalore:

Font size:

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ. ಮಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರಕಾರದಿಂದ ಮೂಲಸೌಕರ್ಯ, ಖಾಸಗಿಯವರಿಂದ ಹೂಡಿಕೆ. ಸ್ಥಳೀಯರಿಗೆ ಅವರದೇ ನೆಲದಲ್ಲಿ ಉದ್ಯೋಗ ನೀಡುವ ಚಿಂತನೆ.

From ; Jayaram Udupi

ಮಂಗಳೂರು:
ಕರಾವಳಿ ಭಾಗದಲ್ಲಿ ಕೇರಳ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬೇಕು ಎಂಬ ಕನಸು ತಮ್ಮದು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಎರಡು ದಿನಗಳ ಅಧಿಕೃತ ಪ್ರವಾಸಕ್ಕಾಗಿ ಶನಿವಾರ ಮಂಗಳೂರಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ಪ್ರವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಮತ್ತು ಹಿಂದಿನ ಬಿಜೆಪಿ ಸರ್ಕಾರ ವಿಫಲಗೊಂಡಿದೆ ಎಂಬುದನ್ನು ಪ್ರಾಂಜಲ ಮನಸ್ಸಿನಿಂದ ಒಪ್ಪಿಕೊಂಡ ಅವರು ಇಲ್ಲಿಯ ಯುವ ಸಂಪನ್ಮೂಲ ಹೊರದೇಶ, ರಾಜ್ಯಗಳಿಗೆ ಹೋಗಿ ದುಡಿಮೆ ಮಾಡುತ್ತಿದೆ. ಹೊರಗಿನ ದೇಶಗಳಲ್ಲಿ ಇರುವ ಅನೇಕ ಅನಿವಾಸಿ ಭಾರತೀಯರು, ಕರಾವಳಿಗರು ಇಲ್ಲಿ ಹೂಡಿಕೆ ಮಾಡುವ ಆಸಕ್ತಿ ಹೊಂದಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ಅಡ್ಡಿ ಆತಂಕಗಳನ್ನು ನಿವಾರಿಸುವುದು ತಮ್ಮ ಆದ್ಯತೆ ಎಂದೂ ಹೇಳಿದರು.

ಸರಕಾರ ಮೂಲ ಸೌಕರ್ಯಗಳನ್ನು ಒದಗಿಸುತ್ತದೆ. ಪ್ರವಾಸೋದ್ಯಮವನ್ನು ಕೇರಳ, ಗೋವಾ ಮಾದರಿಯಲ್ಲಿ ಹೇಗೆ ಅಭಿವೃದ್ಧಿ ಮಾಡಬಹುದು ಎಂಬುದಕ್ಕೆ ಕರಾವಳಿಯಲ್ಲಿ ಹಿಂದೆ ಜಿಲ್ಲಾಧಿಕಾರಿಗಳಾಗಿ, ಮತ್ತು ಇತರ ಇಲಾಖೆಗಳಲ್ಲಿ ದುಡಿದು ನಿವೃತ್ತಿ ಹೊಂದಿದ ಅಧಿಕಾರಿಗಳು, ರಕ್ಷಣಾ ಇಲಾಖೆ, ಕೋಸ್ಟ್ ಗಾರ್ಡ್ ಅಧಿಕಾರಿಗಳನ್ನು ಸಭೆಗೆ ಕರೆದಿದ್ದೇನೆ, ಅಲ್ಲಿ ಚರ್ಚೆಯಾದ ಅಂಶಗಳನ್ನು ಕ್ರೋಢೀಕರಿಸಿ ಪಬ್ಲಿಕ್ ಡೊಮೇನ್ ನಲ್ಲಿ ಸಾರ್ವಜನಿಕರ ಅವಗಾಹನೆಗೆ ಒದಗಿಸಲಾಗುತ್ತದೆ. ಸಲಹೆ ಸೂಚನೆಗಳನ್ನು ಸ್ವೀಕರಿಸಲಾಗುತ್ತದೆ. ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬೇಕು ಎನ್ನುವುದು ತಮ್ಮ ಇರಾದೆಯಾಗಿದೆ ಎಂದೂ ಉಪಮುಖ್ಯಮಂತ್ರಿ ಹೇಳಿದರು.

ರಾಜ್ಯಪಾಲರು ಎರಡು ಮಸೂದೆಗಳನ್ನು ಸರಕಾರಕ್ಕೆ ಹಿಂದಿರುಗಿಸಿರುವ ಕುರಿತ ಪ್ರಶ್ನೆಗೆ ನೇರವಾಗಿ ಉತ್ತರಿಸಲು ನಿರಾಕರಿಸಿದ ಅವರು, ಸಂಜೆ ಮುಖ್ಯಮಂತ್ರಿ ಬರುತ್ತಾರೆ, ಆಗ ಮಾತನಾಡೋಣ ಎಂದರು

Prev Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಜಯಪುರ ಬಸ್ ನಿಲ್ದಾಣದ ಮುಂಬಾಗದ ವೃತ್ತದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರ ಮೂರ್ತಿಯನ್ನು ಅನಾವರಣಗೊಳಿಸಿದರು.
Next Post ಕೇಂದ್ರ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಕಾಂಗ್ರೆಸ್ ಪಕ್ಷ ಅಪಪ್ರಚಾರ ನಡೆಸುತ್ತಿದೆ ಎಂದು ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ