ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ

Hosakote:

Font size:

ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ ಸ್ಥಳೀಯ ಉತ್ಪಾದನೆಗೆ ಸರಕಾರದ ಒತ್ತು: ಎಂ ಬಿ ಪಾಟೀಲ ಆಗಸ್ಟ್ ಹೊತ್ತಿಗೆ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ ಸಚಿವರಾದ ಎಂ.ಬಿ.ಪಾಟೀಲ ಮತ್ತು ಡಾ.ಎಂ.ಸಿ.ಸುಧಾಕರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಕ್ಯಾಂಪಸ್; 4 ವಿಷಯಗಳಲ್ಲಿ ಪದವಿ, 1 ವಿಷಯದಲ್ಲಿ ಸ್ನಾತಕೋತ್ತರ ಪದವಿ ಬೆಂಗಳೂರು: ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿವಿ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ತನ್ನ ಕ್ಯಾಂಪಸ್ ಆರಂಭಿಸಲಿದೆ. ಈ ಸಂಬಂಧದ ಒಪ್ಪಂದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಸಹಿ‌‌ ಮಾಡಲಾಯಿತು. ವಿಧಾನಸೌಧದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಟಿಲಾ ಬ್ರಂಗ್ಸ್ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಒಪ್ಪಂದ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ಈ ವಿಶ್ವವಿದ್ಯಾಲಯವು ಸದ್ಯಕ್ಕೆ ವಾಣಿಜ್ಯ, ಮಾಧ್ಯಮ, ಕಂಪ್ಯೂಟರ್ ಮತ್ತು ಡೇಟಾ ವಿಜ್ಞಾನ ಕೋರ್ಸುಗಳಲ್ಲಿ ಪದವಿ ಹಾಗೂ ಸೈಬರ್ ಸೆಕ್ಯುರಿಟಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಿದೆ ಎಂದು ಸಚಿವರಾದ ಎಂ ಬಿ ಪಾಟೀಲ ಮತ್ತು ಸುಧಾಕರ ಅವರು ತಿಳಿಸಿದ್ದಾರೆ. ನಿಯೋಗದೊಂದಿಗೆ ವಿಚಾರ ವಿನಿಮಯ ನಡೆಸಿದ ನಂತರ ಮಾತನಾಡಿದ ಪಾಟೀಲ ಅವರು, ನ್ಯೂಸೌತ್ ವೇಲ್ಸ್ ವಿ.ವಿ.ದ ಶೈಕ್ಷಣಿಕ ಮಂಡಲಿಯೇ ಬೆಂಗಳೂರು ಕ್ಯಾಂಪಸ್ಸಿನಲ್ಲಿ ಓದುವ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲಿದೆ. ಅಲ್ಲಿ ತಾನು ಹೊಂದಿರುವ ಪಠ್ಯಕ್ರಮವನ್ನೇ ಇಲ್ಲೂ ಬೋಧಿಸಲಿದೆ. ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಹಲವು ಅಗ್ರಮಾನ್ಯ ಕಂಪನಿಗಳೂ ಇರುವುದರಿಂದ ವಿದ್ಯಾರ್ಥಿಗಳ ಕಲಿಕೆ, ಕೌಶಲ್ಯಾಭ್ಯಾಸಕ್ಕೆ ನೆರವು ಸುಗಮವಾಗಿ ಸಿಗಲಿದೆ. ಮುಂಬರುವ ದಿನಗಳಲ್ಲಿ ಕ್ವಿನ್ ಸಿಟಿಯಲ್ಲಿ ಇವರ ಕ್ಯಾಂಪಸ್ ಅಸ್ತಿತ್ವಕ್ಕೆ ಬರಲಿದೆ ಎಂದಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2025-30ರ ಅವಧಿಯ ಶೈಕ್ಷಣಿಕ, ಸಂಶೋಧನಾತ್ಮಕ ಸಹಭಾಗಿತ್ವ ಕಾರ್ಯಕ್ರಮ ಈಗ ಚಾಲ್ತಿಯಲ್ಲಿದೆ. ನ್ಯೂಸೌತ್ ವೇಲ್ಸ್ ವಿ.ವಿ. ಬೆಂಗಳೂರಿನಲ್ಲಿರುವ ಐಐಎಂ, ಭಾರತೀಯ ವಿಜ್ಞಾನ ಮಂದಿರ, ರಾಷ್ಟ್ರೀಯ ಕಾನೂನು ವಿವಿ, ಕೇಂದ್ರ ಸರಕಾರದ ಹೆದ್ದಾರಿ ಮತ್ತು ಉಕ್ಕು ಸಚಿವಾಲಯ, ಹಾಗೂ ರಾಜ್ಯದ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ಅವರು ವಿವರಿಸಿದ್ದಾರೆ. ಸಚಿವ ಸುಧಾಕರ ಮಾತನಾಡಿ, ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯವು ಏಷ್ಯಾ-ಪೆಸಿಫಿಕ್ ವಲಯದಲ್ಲೇ ಅತ್ಯುತ್ತಮ ಉದ್ಯೋಗಾವಕಾಶನ್ನು ಸೃಷ್ಟಿಸುತ್ತಿರುವ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿದೆ. ಇಲ್ಲಿಂದ ಪದವಿ/ ಸ್ನಾತಕೋತ್ತರ ಪದವಿ ಪಡೆದು ಹೊರಬರುವವರನ್ನು ಉದ್ಯೋಗದಾತರು ತಮ್ಮ ಕಂಪನಿಗಳಿಗೆ ಅರಸುತ್ತಿರುತ್ತಾರೆ. ಇಂತಹ ವಿ.ವಿ.ಯು ಬೆಂಗಳೂರಿನಲ್ಲಿ ಕ್ಯಾಂಪಸ್ ತೆರೆಯುತ್ತಿರುವುದರಿಂದ ಇಲ್ಲಿನ ನಾವೀನ್ಯತಾ ಕಾರ್ಯ ಪರಿಸರಕ್ಕೆ ಮತ್ತಷ್ಟು ಶಕ್ತಿ ಬರಲಿದೆ. ಜೊತೆಗೆ ಇಂತಹ ಇನ್ನಷ್ಟು ವಿದೇಶಿ ವಿ.ವಿ.ಗಳು ನಮ್ಮಲ್ಲಿಗೆ ಬರಲು ಉತ್ತೇಜನ ನೀಡಲಿದೆ ಎಂದು ಎಂದಿದ್ದಾರೆ.

ಹೊಸಕೋಟೆ: ಸ್ಥಳೀಯವಾಗಿ ಉತ್ಪಾದನೆಯನ್ನು ಸಾಧ್ಯವಾಗಿಸುವ ಕೈಗಾರಿಕಾ ಸಹಭಾಗಿತ್ವದ ಅಡಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಾಹಾ ಕಂಪನಿಗೆ ಇಲ್ಲಿ‌ನ‌ ತಯಾರಿಕಾ ಘಟಕದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, 'ನಗರ ಸಂಚಾರವನ್ನು ಪರಿಸರಸ್ನೇಹಿ, ಸುಗಮ ಮತ್ತು ಸುಸ್ಥಿರಗೊಳಿಸುವಂತಹ ಇಂತಹ ದ್ವಿಚಕ್ರ ವಾಹನ ತಯಾರಿಕೆ ಸ್ಥಳೀಯವಾಗಿಯೇ ಆಗತೊಡಗಿರುವುದು ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಒಂದು ಉಜ್ಜ್ವಲ ಅಧ್ಯಾಯವಾಗಿದೆ. ಇದು ರಾಜ್ಯವು ಭವಿಷ್ಯದ ಸಂಚಾರ ವ್ಯವಸ್ಥೆಯ ನಿರ್ಮಾಣದ ಸರಿಯಾದ ಪಥದಲ್ಲಿ ಸಾಗುತ್ತಿರುವುದಕ್ಕೆ ಅತ್ಯುತ್ತಮ‌ ನಿದರ್ಶನವಾಗಿದೆ' ಎಂದು ಬಣ್ಣಿಸಿದ್ದಾರೆ. ಇದೇ ವೇಳೆಯಲ್ಲಿ ಅವರು ಕಂಪನಿಯ ತಯಾರಿಕಾ ವ್ಯವಸ್ಥೆ ಮತ್ತಿತರ ಸೌಲಭ್ಯಗಳನ್ನು ವೀಕ್ಷಿಸಿದರು.

ಈ ಘಟಕದಲ್ಲಿ ವರ್ಷಕ್ಕೆ ಇಂತಹ ಉತ್ಕೃಷ್ಟ ಗುಣಮಟ್ಟದ 2 ಸಾವಿರ ಇ.ವಿ. ಬೈಕ್ ತಯಾರಿಸಲಾಗುವುದು. ಇವಕ್ಕೆ ಇಲ್ಲೇ ತಯಾರಿಸುವ ಬ್ಯಾಟರಿ ಅಳವಡಿಸಲಾಗುವುದು. ಇದು 1 ಲಕ್ಷ ಕಿ.ಮೀ. ವರೆಗೂ ವಾಹನ ಓಡಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕೆ 10 ವರ್ಷಗಳ ವಾರಂಟಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಉತ್ಪಾದನೆಯಿಂದ ವ್ಯಾಪಕ ಆರ್ಥಿಕ ಮೌಲ್ಯವೂ ಸೃಷ್ಟಿಯಾಗಲಿದೆ. ಇದು ಕೌಶಲ್ಯಪೂರ್ಣ ಉದ್ಯೋಗಗಳ ಸೃಷ್ಟಿ, ಸ್ಥಳೀಯ ಪೂರೈಕೆ ಸರಪಳಿ ಬಲವರ್ಧನೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾಲಿಗೆ ಸದವಕಾಶ ಇವೆಲ್ಲವನ್ನೂ ಸಾಧ್ಯವಾಗಿಸಲಿದೆ ಎಂದು ಅವರು ವಿವರಿಸಿದ್ದಾರೆ.

ವಾಹನ ಮಾರುಕಟ್ಟೆ ಈಗ ವಿದ್ಯುತ್ ಚಾಲಿತ ವಾಹನಗಳತ್ತ ಹೋಗುತ್ತಿದೆ. ರಾಜ್ಯದಲ್ಲಿ ಕೂಡ ಇದನ್ನು ಗಮನಿಸಿ, ಈಗಾಗಲೇ ಸಾವಿರಾರು ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಇವುಗಳ ಸಂಖ್ಯೆಯನ್ನು ಇನ್ನೂ ಹೆಚ್ಚಿಸಲಾಗುವುದು. ಇದು ಇ.ವಿ. ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಸರಕಾರವು ಹೊಂದಿರುವ ಬದ್ಧತೆಯನ್ನು ಸೂಚಿಸುತ್ತದೆ ಎಂದು ಪಾಟೀಲ ಹೇಳಿದ್ದಾರೆ.

ಸಚಿವರು ಇಡೀ ಕಾರ್ಖಾನೆಯಲ್ಲಿ ಓಡಾಡಿ, ಬೈಕ್ ತಯಾರಿಕೆಯನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮತ್ತು ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಯಮಾಹಾ ಇಂಡಿಯಾ ಅಧ್ಯಕ್ಷ ಜಿಮ್ ಅಯೋಟಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ರಿವರ್ ಸಿಇಒ ಅರವಿಂದ ಮಣಿ, ಸಹ ಸಂಸ್ಥಾಪಕ ವಿಪಿನ್ ಜಾರ್ಜ್ ಮುಂತಾದವರು ಉಪಸ್ಥಿತರಿದ್ದರು.

0000
ಆಗಸ್ಟ್ ಹೊತ್ತಿಗೆ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ

ಸಚಿವರಾದ ಎಂ.ಬಿ.ಪಾಟೀಲ ಮತ್ತು ಡಾ.ಎಂ.ಸಿ.ಸುಧಾಕರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ

ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಕ್ಯಾಂಪಸ್; 4 ವಿಷಯಗಳಲ್ಲಿ ಪದವಿ, 1 ವಿಷಯದಲ್ಲಿ ಸ್ನಾತಕೋತ್ತರ ಪದವಿ

ಬೆಂಗಳೂರು: ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿವಿ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ತನ್ನ ಕ್ಯಾಂಪಸ್ ಆರಂಭಿಸಲಿದೆ. ಈ ಸಂಬಂಧದ ಒಪ್ಪಂದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಸಹಿ‌‌ ಮಾಡಲಾಯಿತು.

ವಿಧಾನಸೌಧದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಟಿಲಾ ಬ್ರಂಗ್ಸ್ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಒಪ್ಪಂದ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ಈ ವಿಶ್ವವಿದ್ಯಾಲಯವು ಸದ್ಯಕ್ಕೆ ವಾಣಿಜ್ಯ, ಮಾಧ್ಯಮ, ಕಂಪ್ಯೂಟರ್ ಮತ್ತು ಡೇಟಾ ವಿಜ್ಞಾನ ಕೋರ್ಸುಗಳಲ್ಲಿ ಪದವಿ ಹಾಗೂ ಸೈಬರ್ ಸೆಕ್ಯುರಿಟಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಿದೆ ಎಂದು ಸಚಿವರಾದ ಎಂ ಬಿ ಪಾಟೀಲ ಮತ್ತು ಸುಧಾಕರ ಅವರು ತಿಳಿಸಿದ್ದಾರೆ.

ನಿಯೋಗದೊಂದಿಗೆ ವಿಚಾರ ವಿನಿಮಯ ನಡೆಸಿದ ನಂತರ ಮಾತನಾಡಿದ ಪಾಟೀಲ ಅವರು, ನ್ಯೂಸೌತ್ ವೇಲ್ಸ್ ವಿ.ವಿ.ದ ಶೈಕ್ಷಣಿಕ ಮಂಡಲಿಯೇ ಬೆಂಗಳೂರು ಕ್ಯಾಂಪಸ್ಸಿನಲ್ಲಿ ಓದುವ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲಿದೆ. ಅಲ್ಲಿ ತಾನು ಹೊಂದಿರುವ ಪಠ್ಯಕ್ರಮವನ್ನೇ ಇಲ್ಲೂ ಬೋಧಿಸಲಿದೆ. ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಹಲವು ಅಗ್ರಮಾನ್ಯ ಕಂಪನಿಗಳೂ ಇರುವುದರಿಂದ ವಿದ್ಯಾರ್ಥಿಗಳ ಕಲಿಕೆ, ಕೌಶಲ್ಯಾಭ್ಯಾಸಕ್ಕೆ ನೆರವು ಸುಗಮವಾಗಿ ಸಿಗಲಿದೆ. ಮುಂಬರುವ ದಿನಗಳಲ್ಲಿ ಕ್ವಿನ್ ಸಿಟಿಯಲ್ಲಿ ಇವರ ಕ್ಯಾಂಪಸ್ ಅಸ್ತಿತ್ವಕ್ಕೆ ಬರಲಿದೆ ಎಂದಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2025-30ರ ಅವಧಿಯ ಶೈಕ್ಷಣಿಕ, ಸಂಶೋಧನಾತ್ಮಕ ಸಹಭಾಗಿತ್ವ ಕಾರ್ಯಕ್ರಮ ಈಗ ಚಾಲ್ತಿಯಲ್ಲಿದೆ. ನ್ಯೂಸೌತ್ ವೇಲ್ಸ್ ವಿ.ವಿ. ಬೆಂಗಳೂರಿನಲ್ಲಿರುವ ಐಐಎಂ, ಭಾರತೀಯ ವಿಜ್ಞಾನ ಮಂದಿರ, ರಾಷ್ಟ್ರೀಯ ಕಾನೂನು ವಿವಿ, ಕೇಂದ್ರ ಸರಕಾರದ ಹೆದ್ದಾರಿ ಮತ್ತು ಉಕ್ಕು ಸಚಿವಾಲಯ, ಹಾಗೂ ರಾಜ್ಯದ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ಅವರು ವಿವರಿಸಿದ್ದಾರೆ.

ಸಚಿವ ಸುಧಾಕರ ಮಾತನಾಡಿ, ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯವು ಏಷ್ಯಾ-ಪೆಸಿಫಿಕ್ ವಲಯದಲ್ಲೇ ಅತ್ಯುತ್ತಮ ಉದ್ಯೋಗಾವಕಾಶನ್ನು ಸೃಷ್ಟಿಸುತ್ತಿರುವ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿದೆ. ಇಲ್ಲಿಂದ ಪದವಿ/ ಸ್ನಾತಕೋತ್ತರ ಪದವಿ ಪಡೆದು ಹೊರಬರುವವರನ್ನು ಉದ್ಯೋಗದಾತರು ತಮ್ಮ ಕಂಪನಿಗಳಿಗೆ ಅರಸುತ್ತಿರುತ್ತಾರೆ. ಇಂತಹ ವಿ.ವಿ.ಯು ಬೆಂಗಳೂರಿನಲ್ಲಿ ಕ್ಯಾಂಪಸ್ ತೆರೆಯುತ್ತಿರುವುದರಿಂದ ಇಲ್ಲಿನ ನಾವೀನ್ಯತಾ ಕಾರ್ಯ ಪರಿಸರಕ್ಕೆ ಮತ್ತಷ್ಟು ಶಕ್ತಿ ಬರಲಿದೆ. ಜೊತೆಗೆ ಇಂತಹ ಇನ್ನಷ್ಟು ವಿದೇಶಿ ವಿ.ವಿ.ಗಳು ನಮ್ಮಲ್ಲಿಗೆ ಬರಲು ಉತ್ತೇಜನ ನೀಡಲಿದೆ ಎಂದು ಎಂದಿದ್ದಾರೆ.

Prev Post ಪೂಪಾಡಿಕಲ್ಲು ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭ/ಚರುಮುರಿ ಸ್ಟಾಲ್ ಬಳಿ ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿದ ಪ್ರಕರಣ/ರಸ್ತೆಗೆ ದನ ಬಿಟ್ಟವರ ಮೇಲೆ ಕೇಸು
Next Post ರೇರ್‌ ಅರ್ಥ್‌ ಮ್ಯಾಗ್ನೆಟ್ಸ್:‌ ಉದ್ಯಮ ಪಾಲುದಾರರ ಜತೆ ಮಹತ್ವದ ಚರ್ಚೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ