ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕ್ ನಿಂದ ಗ್ರಾಹಕರಿಗೆ ವಿಸ್ತರಿತ ಡಿಜಿಟಲ್ ಸೇವೆ: ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಘೋಷಣೆ.

Mangalore:

Font size:

ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕ್ ನಿಂದ ಗ್ರಾಹಕರಿಗೆ ವಿಸ್ತರಿತ ಡಿಜಿಟಲ್ ಸೇವೆ: ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಘೋಷಣೆ

From Jayaram Udupi

ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕ್ ನಿಂದ ಗ್ರಾಹಕರಿಗೆ ವಿಸ್ತರಿತ ಡಿಜಿಟಲ್ ಸೇವೆ: ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಘೋಷಣೆ.

ಮಂಗಳೂರು:
ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ತನ್ನ ಗ್ರಾಹಕರಿಗೆ ವಿಸ್ತರಿತ ಡಿಜಿಟಲ್ ಬ್ಯಾಂಕಿಂಗ್ ಸವಲತ್ತನ್ನು‌ ಒದಗಿಸಲಿದೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಗ್ರಾಹಕರ ಅವಶ್ಯಕತೆಗಳಿಗೆ ಅನುಸಾರವಾಗಿ ಬ್ಯಾಂಕ್ ಡಿಜಿಟಲ್ ಬ್ಯಾಂಕಿಂಗ್‌ಅನ್ನು ಅಳವಡಿಸಿಕೊಂಡಿದೆ ಇದರ ಅಧಿಕೃತ ಚಾಲನೆ ಕಾರ್ಯಕ್ರಮ ಫೆ.೧೭ರಂದು ಮಧ್ಯಾಹ್ನ ೧೨ಕ್ಕೆ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ ಎಂದರು.

ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್‌ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್‌ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ ಎಂದವರು ಬ್ಯಾಂಕ್ ಈಗಾಗಲೇ ಒದಗಿಸಿರುವ ಸೌಲಭ್ಯಗಳನ್ನು ವಿವರಿಸಿದರು.


ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಇನ್ನಷ್ಟು ವಿಸ್ತರಿಸುವ ಉದ್ದೇಶದಿಂದ ಹೊಸ ಡಿಜಿಟಲ್ ಸೇವೆಗಳನ್ನು ಆರಂಭಿಸಲಾಗುತ್ತಿದೆ. ಈ ಸೇವೆಯ ಮೂಲಕ ನಮ್ಮ ಬ್ಯಾಂಕಿನ ಮೊಬೈಲ್ ಅಪ್ಲಿಕೇಶನ್ ಬಳಸಿ ಗ್ರಾಹಕರು ಕ್ಷಣಾರ್ಧದಲ್ಲಿ ಹಣ ವರ್ಗಾವಣೆ ಮಾಡುವ ಸೌಲಭ್ಯವನ್ನು ಪಡೆಯುತ್ತಾರೆ .ಐಎಂಪಿಎಸ್‌.
ಎಂಬುದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ ಅಭಿವೃದ್ಧಿ ಪಡಿಸಿದ ತ್ವರಿತ ಹಣ ವರ್ಗಾವಣೆ ವ್ಯವಸ್ಥೆಯಾಗಿದ್ದು, ಇದು೨೪x೭, ವಾರಾಂತ್ಯ ಮತ್ತು ಸಾರ್ವಜನಿಕರಜೆ ದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ ಎಂದವರು ತಿಳಿಸಿದರು.

ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್. ಕೋಟ್ಯಾನ್ , ಶಶಿಕುಮಾರ್ ರೈ ಬಾಲ್ಯೊಟ್ಟು , ಎಸ್.ಬಿ.ಜಯರಾಮ್ ರೈ , ಸದಾಶಿವ ಉಳ್ಳಾಲ್, ಜೈರಾಜ್ ಬಿ.ರೈ , ಮೋನಪ್ಪ ಶೆಟ್ಟಿ ಎಕ್ಕಾರು, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್ ಎಚ್.ಎನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

Prev Post ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
Next Post ಜಮ್ಕೊ: ಬೆಂಗಳೂರಿನಲ್ಲಿ ಉತ್ಪನ್ನ ಎಂಜಿನಿಯರಿಂಗ್‌ ಕೇಂದ್ರ