ಆಯವ್ಯಯ ಪಕ್ಷಿನೋಟ · ಆಯವ್ಯಯ ಗಾತ್ರ 4,48,004 ಕೋಟಿ ರೂ.ಗಳು. · ಒಟ್ಟು ಸ್ವೀಕೃತಿಗಳು 4,47,240 ಕೋಟಿ ರೂ.; ರಾಜಸ್ವ ಸ್ವೀಕೃತಿಗಳು 3,15,050 ಕೋಟಿ ರೂ.; ಬಂಡವಾಳ ಸ್ವೀಕೃತಿಗಳು 190 ಕೋಟಿ ರೂ. ಇದರಲ್ಲಿ ಸಾರ್ವಜನಿಕ ಸಾಲ 1,32,000 ಕೋಟಿ ರೂ. ಸೇರಿದೆ. · ಒಟ್ಟು ವೆಚ್ಚ 4,48,004 ಕೋಟಿ ರೂ.; ರಾಜಸ್ವ ವೆಚ್ಚ 3,38,007 ಕೋಟಿ ರೂ.; ನಿವ್ವಳ ಬಂಡವಾಳ ವೆಚ್ಚ 74,682 ಕೋಟಿ ರೂ.; ಒಟ್ಟು ಬಂಡವಾಳ ವೆಚ್ಚ (Gross) 84,567 ಕೋಟಿ ರೂ. ಮತ್ತು ಸಾಲ ಮರುಪಾವತಿ 35,316 ಕೋಟಿ ರೂ.ಗಳು. · ಆಯವ್ಯಯದಲ್ಲಿ ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಅನುದಾನ ಹಂಚಿಕೆ 44,632 ಕೋಟಿ ರೂ.; ಎಸ್.ಸಿ.ಎಸ್.ಪಿ.ಗೆ 31,804 ಕೋಟಿ ರೂ. ಹಾಗೂ ಟಿ.ಎಸ್.ಪಿ.ಗೆ 12,828 ಕೋಟಿ ರೂ.ಗಳು.
2026-27ರ ಆಯವ್ಯಯ ಮಂಡಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ
ಮುಖ್ಯಾಂಶಗಳು
ಆಯವ್ಯಯ ಪಕ್ಷಿನೋಟ
· ಆಯವ್ಯಯ ಗಾತ್ರ 4,48,004 ಕೋಟಿ ರೂ.ಗಳು.
· ಒಟ್ಟು ಸ್ವೀಕೃತಿಗಳು 4,47,240 ಕೋಟಿ ರೂ.; ರಾಜಸ್ವ ಸ್ವೀಕೃತಿಗಳು 3,15,050 ಕೋಟಿ ರೂ.; ಬಂಡವಾಳ ಸ್ವೀಕೃತಿಗಳು 190 ಕೋಟಿ ರೂ. ಇದರಲ್ಲಿ ಸಾರ್ವಜನಿಕ ಸಾಲ 1,32,000 ಕೋಟಿ ರೂ. ಸೇರಿದೆ.
· ಒಟ್ಟು ವೆಚ್ಚ 4,48,004 ಕೋಟಿ ರೂ.; ರಾಜಸ್ವ ವೆಚ್ಚ 3,38,007 ಕೋಟಿ ರೂ.; ನಿವ್ವಳ ಬಂಡವಾಳ ವೆಚ್ಚ 74,682 ಕೋಟಿ ರೂ.; ಒಟ್ಟು ಬಂಡವಾಳ ವೆಚ್ಚ (Gross) 84,567 ಕೋಟಿ ರೂ. ಮತ್ತು ಸಾಲ ಮರುಪಾವತಿ 35,316 ಕೋಟಿ ರೂ.ಗಳು.
· ಆಯವ್ಯಯದಲ್ಲಿ ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಅನುದಾನ ಹಂಚಿಕೆ 44,632 ಕೋಟಿ ರೂ.; ಎಸ್.ಸಿ.ಎಸ್.ಪಿ.ಗೆ 31,804 ಕೋಟಿ ರೂ. ಹಾಗೂ ಟಿ.ಎಸ್.ಪಿ.ಗೆ 12,828 ಕೋಟಿ ರೂ.ಗಳು.
· ಮಹಿಳಾ ಆಯವ್ಯಯದ ಹಂಚಿಕೆ 94,663 ಕೋಟಿ ರೂ.ಗಳು.
· ಮಕ್ಕಳ ಆಯವ್ಯಯದ ಹಂಚಿಕೆ 63,135 ಕೋಟಿ ರೂ.ಗಳು.
· ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ೫೬,೪೩೨ ಹುದ್ದೆಗಳ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ.
· ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ
೪,೦೦೦ ಕೋಟಿ ರೂ. ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಎರಡನೇ ಹಂತದ ಕಾರ್ಯಕ್ರಮ.
ಕೃಷಿ
· ರೈತರ ನೆರವಿನ ನಾಲ್ಕು ಆಧಾರ ಸ್ತಂಭಗಳು ಅಂದರೆ ವೈಜ್ಞಾನಿಕ ಕೃಷಿ ಮಾರ್ಗದರ್ಶನ, ಹಣಕಾಸು ನೆರವು, ಉತ್ತಮ ಗುಣಮಟ್ಟದ ಕೃಷಿ ಪರಿಕರಗಳು ಮತ್ತು ಬೆಳೆ ನಿರ್ವಹಣೆ ಹಾಗೂ ಕೊಯ್ಲೋತ್ತರ ಸಂಗ್ರಹಣಾ ವಿಸ್ತರಣೆ.
· ಕೃಷಿ ಬೆಳೆಗಳ ಮೌಲ್ಯವರ್ಧನೆ ಹಾಗೂ ಕೃಷಿ ತ್ಯಾಜ್ಯ ಮರುಬಳಕೆ ಉತ್ತೇಜಿಸಲು ಮುಂದಿನ ಮೂರು ವರ್ಷಗಳಲ್ಲಿ ʻಮುಖ್ಯಮಂತ್ರಿ ಕೃಷಿ ವಿಸ್ತಾರʼ ಯೋಜನೆ ಜಾರಿಗೆ 100 ಕೋಟಿ ರೂ.
· ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು ಉತ್ತೇಜಿಸಲು
ʻಮಿಲೆಟ್ಹಬ್ʼ ಏಕಗವಾಕ್ಷಿ ವ್ಯವಸ್ಥೆ.
· ಇಲಾಖೆಯ ಎಲ್ಲಾ ಪ್ರಯೋಗಾಲಯಗಳಿಗೆ NABL ಮಾನ್ಯತೆ.
· ನೂತನ ದ್ವಿದಳಧಾನ್ಯ ತಳಿಗಳ ಬಿತ್ತನೆ ಬೀಜಗಳ ಸಹಾಯಧನದಲ್ಲಿ ಹೆಚ್ಚಳ.
· ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ʻವಸುಧಾಮೃತʼ ಕಾರ್ಯಕ್ರಮ.
· ಬೆಳೆಗಳಲ್ಲಿ ಕೀಟ ಹಾಗೂ ರೋಗಗಳ ನಿಯಂತ್ರಣಕ್ಕೆ ʻಸಸ್ಯ ಸಂಜೀವಿನಿʼ ಯೋಜನೆ.
· ರೈತ ಕರೆ ಕೇಂದ್ರವನ್ನು AI ತಂತ್ರಜ್ಞಾನದಿಂದ ಉನ್ನತೀಕರಣ.
· ಕೃಷಿಯಲ್ಲಿ ಉತ್ಪಾದನಾ ವೆಚ್ಚ ಕಡಿತಕ್ಕೆ ʻಹೈಟೆಕ್ ಹಾರ್ವೆಸ್ಟರ್ ಹಬ್ʼ ಯೋಜನೆಯಡಿ ಬಿತ್ತನೆ ಮತ್ತು ನಾಟಿ ಯಂತ್ರಗಳ ಸೇರ್ಪಡೆ.
· ಚಿತ್ರದುರ್ಗದ ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʻಕೃಷಿ ಉದ್ದಿಮೆ ಕೇಂದ್ರʼವನ್ನಾಗಿ ಉನ್ನತೀಕರಣ
· ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕನ್ನು ಸಂಪೂರ್ಣ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ ಜಾರಿ
· ಭತ್ತದ ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆಗೆ ಪರ್ಯಾಯ
ತೇವ–ಒಣಗಿಸುವ ವಿಧಾನಗಳಿಗೆ ಉತ್ತೇಜನ.
· ಕೋಲಾರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ MSIL ವತಿಯಿಂದ
ರೈತ ಮಾಲ್ಗಳ ಸ್ಥಾಪನೆ.
ತೋಟಗಾರಿಕೆ
· ತೋಟಗಾರಿಕಾ ಇಲಾಖೆಯ ಕ್ಷೇತ್ರಗಳಲ್ಲಿ ಮತ್ತು ನರ್ಸರಿಗಳಲ್ಲಿ PPP ಮಾದರಿಯಲ್ಲಿ ತೋಟಗಾರಿಕೆ ಆಧಾರಿತ ಕೈಗಾರಿಕೆಗಳ ಸ್ಥಾಪನೆ.
· ಅಡಿಕೆ ಮತ್ತು ತೆಂಗು ಬೆಳೆಗಳಲ್ಲಿ ಸಮುದಾಯ ಆಧಾರಿತ
ರೋಗ–ಕೀಟ ನಿಯಂತ್ರಣ ಕ್ರಮಗಳಿಗಾಗಿ 10 ಕೋಟಿ ರೂ.
· ತೋಟಗಾರಿಕೆ ಉತ್ಪನ್ನಗಳಿಗಾಗಿ 64 ಕೋಟಿ ರೂ.ಗಳಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ನಿರ್ಮಾಣ.
· ಮೈಸೂರಿನ ಲಿಂಗಾಂಬುಧಿ ಸಸ್ಯತೋಟದ ಸಮಗ್ರ ಅಭಿವೃದ್ಧಿ.
· ನೀರಿನ ಸಂರಕ್ಷಣೆ ಮತ್ತು ರೋಗಗಳನ್ನು ತಡೆಗಟ್ಟಲು ಮಣ್ಣಿಲ್ಲದ ಕೃಷಿಗೆ ಪ್ರೋತ್ಸಾಹ.
ರೇಷ್ಮೆ
· ಉತ್ತರ ಕರ್ನಾಟಕದಲ್ಲಿ ಬೆಳೆಯುವ ರೇಷ್ಮೆಗೂಡುಗಳನ್ನು ಎಲ್ಲಾ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿನ ಸಾಗಾಣಿಕಾ ವೆಚ್ಚ 20 ರೂ. ಗೆ ಹೆಚ್ಚಳ.
· ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ ಹಾಗೂ ಕಲಬುರಗಿಯಲ್ಲಿ ಸಿಲ್ಕ್ಪಾರ್ಕ್ಗಳ ಸ್ಥಾಪನೆ.
ಪಶುಸಂಗೋಪನೆ
· ನಬಾರ್ಡ್ಸಹಯೋಗದೊಂದಿಗೆ 100 ಪಶುವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳ ನಿರ್ಮಾಣ.
· ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ/ಮೇಕೆ ಮತ್ತು ಹಸು/ಎಮ್ಮೆ ಖರೀದಿಗೆ ತಲಾ 10,000 ಫಲಾನುಭವಿಗಳಿಗೆ
ಶೇ.25 ರಷ್ಟು ಸಹಾಯಧನ.
· 15 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ.
· ಬೋಯರ್ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪನೆ ಹಾಗೂ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರದ ಸಮಗ್ರ ಅಭಿವೃದ್ಧಿ.
· ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಯನ್ನು ನಿವಾರಿಸಲು
1,000 ಗ್ರಾಮ ಪಂಚಾಯಿತಿಗಳಲ್ಲಿ “ಫಲಧಾರೆ” ಶಿಬಿರಗಳು.
· ಬೆಂಗಳೂರು ಹಾಗೂ ಬೀದರ್ನ ಪಶು ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ಕೇಂದ್ರ ಸ್ಥಾಪನೆ.
· ಬೆಂಗಳೂರು ಹಾಗೂ ಬೀದರ್ನಲ್ಲಿ “ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ” ಸ್ಥಾಪನೆ.
ಮೀನುಗಾರಿಕೆ
· ಮೀನುಗಾರರಿಗೆ ಉಚಿತವಾಗಿ ಸರಬರಾಜು ಮಾಡುವ ಸಲಕರಣೆ ಕಿಟ್ಘಟಕ ವೆಚ್ಚ 20,000 ರೂ.ಗಳಿಗೆ ಹೆಚ್ಚಳ.
· ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯದಲ್ಲಿ
“Centre of Excellence” ಸ್ಥಾಪನೆ.
· ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ.
· ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಬಾಗಲಕೋಟೆಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆಗಳ ನಿರ್ಮಾಣ.
· ಮೀನುಗಾರಿಕಾ ಕೊಂಡಿ ರಸ್ತೆ ನಿರ್ವಹಣಾ ಕಾಮಗಾರಿಗೆ
20 ಕೋಟಿ ರೂ.
ಸಹಕಾರ
· 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30,000 ಕೋಟಿ ರೂ.ಗಳ ಕೃಷಿ ಸಾಲ ವಿತರಣೆಯ ಗುರಿ.
· 1,628 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಗಣಕೀಕರಣ.
· ವಿವಿಧ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ಒದಗಿಸಲು ದತ್ತಾಂಶದ ಆನ್ಲೈನ್ನಿರ್ವಹಣೆ.
· ಕರ್ನಾಟಕ ರಾಜ್ಯ ಉಗ್ರಾಣ ನಿಗಮವನ್ನು ಆರ್ಥಿಕವಾಗಿ ಸದೃಢಗೊಳಿಸಲು ನಿಗಮದ ಅನುಪಯುಕ್ತ ಆಸ್ತಿಗಳ ನಗದೀಕರಣ.
· ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸ್ಥಾಪನೆಗಾಗಿ
RBI ಗೆ ಪ್ರಸ್ತಾವನೆ.
ಜಲಸಂಪನ್ಮೂಲ
· ಕೇಂದ್ರ ಪರಿಸರ ಸಚಿವಾಲಯದಿಂದ ಅರಣ್ಯ ತೀರುವಳಿ ಪಡೆದು ಮೇಕೆದಾಟು ಯೋಜನೆ ಅನುಷ್ಠಾನ.
· ಹೆಚ್ಚುವರಿ ನೀರು ಸಂಗ್ರಹಣೆಗಾಗಿ ಎತ್ತಿನಹೊಳೆ ಯೋಜನೆಯಡಿ ಕೊರಟಗೆರೆ ತಾಲ್ಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ. ಸಾಮರ್ಥ್ಯದ ಸಮತೋಲನ ಜಲಾಶಯ ನಿರ್ಮಾಣ. ಯೋಜನೆಯ ಎರಡನೆಯ ಹಂತವನ್ನು ಶೀಘ್ರವಾಗಿ ಪೂರ್ಣಗೊಳಿಸುವುದು.
· ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಫೀಡರ್ಕಾಮಗಾರಿಗಳನ್ನು ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲು ಕ್ರಮ.
· UKP-III ರಡಿ ಮುಳುಗಡೆಯಾಗುವ ಖುಷ್ಕಿ ಜಮೀನಿಗೆ ಎಕರೆಗೆ
30 ಲಕ್ಷ, ತರಿ ಜಮೀನಿಗೆ ಎಕರೆಗೆ 40 ಲಕ್ಷ ನಿಗದಿ; ಒಪ್ಪಂದದಡಿ ಭೂಸ್ವಾಧೀನ ಪ್ರಕ್ರಿಯೆಗೆ ಚಾಲ್ತಿ.
· ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ ಗೇಟುಗಳನ್ನು
ಬದಲಾಯಿಸಿ 33 ಹೊಸ ಗೇಟುಗಳ ಅಳವಡಿಕೆಯನ್ನು ಮುಂಗಾರು ಪೂರ್ವದಲ್ಲಿ ಪೂರ್ಣಗೊಳಿಸಲಾಗುವುದು.
· ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣ ಸೇರಿದಂತೆ ಇತರೆ ಪರ್ಯಾಯ ಮಾರ್ಗೋಪಾಯಗಳ ಸಮಾಲೋಚನೆ.
· ಕಳಸಾ-ಬಂಡೂರಾ ನಾಲಾ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅರಣ್ಯ ತೀರುವಳಿ ದೊರೆತ ಕೂಡಲೇ ಕಾಮಗಾರಿಗಳ ಪ್ರಾರಂಭ.
· ವಿಜಯಪುರದ ಬಾಬಾನಗರದಲ್ಲಿ ಸಂಗ್ರಹಣಾ ಜಲಾಶಯವನ್ನು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ.
· ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿ 12,000 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸುವ ಉಡುತೊರೆಹಳ್ಳ ಯೋಜನೆಗೆ
490 ಕೋಟಿ ರೂ.
· ಹತ್ತಿಕುಣಿ ಹಾಗೂ ತುಂಗಭದ್ರಾ ಎಡದಂಡೆ ಶಾಖಾ ಕಾಲುವೆ ಯೋಜನೆಯಡಿ Pressurised Piped Network ನೀರಾವರಿ ಪದ್ದತಿ ಅಳವಡಿಕೆ.
ಸಣ್ಣ ನೀರಾವರಿ
· 237 ಕೋಟಿ ರೂ. ಮೊತ್ತದಲ್ಲಿ ಹೆಬ್ಬಾಳ ನಾಗವಾರ ಕಣವೆಯ
3ನೇ ಹಂತದ ಯೋಜನೆಯ ಅನುಷ್ಠಾನ.
· 140 ಕೋಟಿ ರೂ. ಮೊತ್ತದಲ್ಲಿ ಹೊಸಕೋಟೆ ತಾಲ್ಲೂಕಿನಲ್ಲಿ
ಕೆರೆ ತುಂಬಿಸುವ ಯೋಜನೆ ಅನುಷ್ಠಾನ.
· 650 ಕೋಟಿ ರೂ. ಮೊತ್ತದಲ್ಲಿ ವೃಷಭಾವತಿ ವ್ಯಾಲಿಯಡಿ
ದ್ವಿತೀಯ ಹಂತದ ಕೆರೆ ತುಂಬಿಸುವ ಯೋಜನೆ ಅನುಷ್ಠಾನ.
· ಕೆರೆಗಳನ್ನು ಸಂರಕ್ಷಿಸಲು ಕೆರೆ ಬಳಕೆದಾರರ ಸಂಘಗಳ ಬಲವರ್ಧನೆ.
· ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಜಿಡಗಾದಲ್ಲಿ ಅಂತರ್ಜಲ ಹೆಚ್ಚಿಸುವ ಕಾಮಗಾರಿಗಳ ಅನುಷ್ಠಾನ.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ
· 3,900 ಕೋಟಿ ರೂ.ಗಳ ವೆಚ್ಚದಲ್ಲಿ ADB, KKRDB ಮತ್ತು KMERC ನೆರವಿನೊಂದಿಗೆ 800 ಹೊಸ ಕರ್ನಾಟಕ ಪಬ್ಲಿಕ್ಶಾಲೆಗಳ ಪ್ರಾರಂಭ.
· KPS ಶಾಲೆಗಳಲ್ಲಿನ ಬೋಧನಾ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ.
· ಉಚಿತ ಪಠ್ಯಪುಸ್ತಕಗಳ ವಿತರಣೆ ಪೂರ್ವ ಪ್ರಾಥಮಿಕದಿಂದ
ಪದವಿ ಪೂರ್ವ ಹಂತಗಳಿಗೆ ವಿಸ್ತರಣೆ.
· ಶಾಲಾ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 640 ಕೋಟಿ ರೂ. ಹಾಗೂ ಪೀಠೋಪಕರಣಗಳ ಖರೀದಿಗೆ 25 ಕೋಟಿ ರೂ. ಅನುದಾನ.
· ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗೆ 125 ಕೋಟಿ ರೂ. ಅನುದಾನ
· 24 ಕೋಟಿ ರೂ.ಗಳ ವೆಚ್ಚದಲ್ಲಿ ದ್ವಿಭಾಷಾ ಪ್ರಾಥಮಿಕ ಶಾಲೆಗಳಲ್ಲಿನ ಶಿಕ್ಷಕರಿಗೆ ಇಂಗ್ಲೀಷ್ ಭಾಷಾ ತರಬೇತಿ
· ಐಐಟಿ ಧಾರವಾಡದ ಸಹಯೋಗದೊಂದಿಗೆ AI ತಂತ್ರಜ್ಞಾನ ಅಳವಡಿಸಿಕೊಂಡು 12.28 ಲಕ್ಷ ವಿದ್ಯಾರ್ಥಿಗಳಿಗೆ ವೈಯಕ್ತಿಕ
ಸ್ವಯಂ ಕಲಿಕಾ ಡಿಜಿಟಲ್ಟ್ಯೂಟರ್ಸೌಲಭ್ಯ.
· ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳ ಭರ್ತಿ.
· ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ ನಿವಾರಿಸಲು 204
BRC ಕೇಂದ್ರಗಳಿಗೆ ಒಬ್ಬರಂತೆ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕ.
· ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ಗಳ
ಪುನರ್ ನಿರ್ಮಾಣಕ್ಕಾಗಿ 10 ಕೋಟಿ ರೂ.
· 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ.
· ಶಾಲಾ-ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ.
ಉನ್ನತ ಶಿಕ್ಷಣ
· ADB ನೆರವಿನಡಿ 40 ಪದವಿ ಕಾಲೇಜು ಹಾಗೂ 11 ಪಾಲಿಟೆಕ್ನಿಕ್ಗಳ ಅಭಿವೃದ್ಧಿ ಹಾಗೂ 9 ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ.
· ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳ ಭರ್ತಿ.
· 31 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಯರು ಹೆಚ್ಚಿರುವ ಕಾಲೇಜುಗಳಿಗೆ ಅಗತ್ಯ ಸೌಲಭ್ಯ.
· 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವ ಪದವಿ ಕಾಲೇಜುಗಳ ಉನ್ನತೀಕರಣ.
· ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪದವಿ ಕಾಲೇಜು, 23 ಪಾಲಿಟೆಕ್ನಿಕ್ಹಾಗೂ 5 ಇಂಜಿನಿಯರಿಂಗ್ಕಾಲೇಜುಗಳಿಗೆ ಮೂಲಭೂತ ಸೌಕರ್ಯ.
· ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ನರಸಿಂಹರಾಜ ಕ್ಷೇತ್ರದಲ್ಲಿ ಹಾಗೂ ಮಸ್ಕಿಯಲ್ಲಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ.
· ನಿಂಬರಗಾ, ಕಕ್ಕೇರಾ, ಅಂಬಾಮಠ ಮತ್ತು ಬೇವೂರಿನಲ್ಲಿ
ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ತಲಾ
18 ಕೋಟಿ ರೂ.
· ಸರ್ಕಾರಿ ಪಾಲಿಟೆಕ್ನಿಕ್ಹಾಗೂ ಇಂಜಿನಿಯರಿಂಗ್ಕಾಲೇಜುಗಳಲ್ಲಿ ಹೆಚ್ಚಿನ ಬೇಡಿಕೆಯಿರುವ ೧೫ ಹೊಸ ಕೋರ್ಸ್ಗಳ ಪ್ರಾರಂಭ.
· 13.50 ಕೋಟಿ ರೂ. ವೆಚ್ಚದಲ್ಲಿ ಅನಿತಾ ಬಿ.ಆರ್ಗ್ಸಹಾಯದೊಂದಿಗೆ STEM ಪದವೀಧರರಿಗೆ ಕೌಶಲ್ಯಾಭಿವೃದ್ಧಿ ತರಬೇತಿ.
· 500 ಕೋಟಿ ರೂ. ವೆಚ್ಚದಲ್ಲಿ IIT ಮಾದರಿಯಲ್ಲಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ವಿಶ್ವವಿದ್ಯಾಲಯದ ಅಭಿವೃದ್ಧಿ.
· ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ಮಾಡಿ ಉನ್ನತ ಶಿಕ್ಷಣ ಮುಂದುವರೆಸುತ್ತಿರುವ ವಿದ್ಯಾರ್ಥಿನಿಯರಿಗೆ 30,000 ರೂ.ಗಳ ವಿದ್ಯಾರ್ಥಿ ವೇತನ.
· ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ಹಾಗೂ ಇಂಜಿನಿಯರಿಂಗ್ಕಾಲೇಜುಗಳಲ್ಲಿನ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ.
· ಹೆಸರಘಟ್ಟದಲ್ಲಿನ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಗೆ ಆಧುನಿಕ ಉಪಕರಣಗಳನ್ನು ಒದಗಿಸುವುದು.
· ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ ತಡೆಗೆ ರೋಹಿತ್ವೇಮುಲ ಕಾಯ್ದೆಯ ಜಾರಿ.
· ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ.
· ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಧಾರವಾಡ ಮತ್ತು ಬೆಂಗಳೂರಿನಲ್ಲಿ ಡಿಜಿಟಲ್ಲೈಬ್ರರಿ ಹಾಗೂ ಅಧ್ಯಯನ ಕೇಂದ್ರ ಸ್ಥಾಪನೆ.
· NCC ಕೆಡೆಟ್ಕಾರ್ಯಬಲ ಹೆಚ್ಚಳ.
· ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ
25 ಎಕರೆ ಜಮೀನು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ
· ಆರೋಗ್ಯ ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ
೯೦೦ ಕೋಟಿ ರೂ.
· ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ (AB-ArK) ಯೋಜನೆಯಡಿ HBP–2022 ಚಿಕಿತ್ಸಾ ಪ್ಯಾಕೇಜ್ ದರಗಳ ಜಾರಿಗೆ ಹೆಚ್ಚುವರಿ 400 ಕೋಟಿ ರೂ.
· ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳ ತುರ್ತು ಚಿಕಿತ್ಸಾ ವಿಭಾಗಗಳ ಮೇಲ್ದರ್ಜೆಗಾಗಿ 45 ಕೋಟಿ ರೂ.
· ತೀವ್ರ ಅಪೌಷ್ಟಿಕತೆಯ ಮಕ್ಕಳಿಗಾಗಿ 63 ತಾಲ್ಲೂಕುಗಳಲ್ಲಿ ಪೌಷ್ಟಿಕ ಪುನಶ್ಚೇತನ ಕೇಂದ್ರಗಳ (NRC) ವಿಸ್ತರಣೆಗೆ 6 ಕೋಟಿ ರೂ.
· ಕಡಿಮೆ ಜನನ ತೂಕದ ಹಾಗೂ ಅನಾರೋಗ್ಯ ಪೀಡಿತ ಶಿಶುಗಳ ಸಮಗ್ರ ಆರೈಕೆಗೆ 10 ಕೋಟಿ ರೂ.
· 18 ವರ್ಷದವರೆಗಿನ Type-1 Diabetes ಮಕ್ಕಳ ಆರೋಗ್ಯ ಸುಧಾರಣೆಗೆ ಉಚಿತ ಇನ್ಸುಲಿನ್ ಪೆನ್ಗಳ ವಿತರಣೆ.
· KKRDB Micro ಯೋಜನೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ಮೇಲೆ ಅನುದಾನ.
· ಕೆ.ಎಂ.ಇ.ಆರ್.ಸಿ ಅನುದಾನದಡಿ ಗಣಿ ಬಾಧಿತ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳ ವಿಸ್ತರಣೆ.
· ಗಂಭೀರ ರೋಗಗಳಿಗೆ ಕೇರಳ ಮಾದರಿಯಲ್ಲಿ Pallium India ಸಹಯೋಗದಲ್ಲಿ ಗೃಹಾಧಾರಿತ ಉಪಶಮನ ಸೇವೆ
(palliative care).
· 50 ಡಯಾಲಿಸಿಸ್ಕೇಂದ್ರಗಳ ಹಾಸಿಗೆ ಸಾಮರ್ಥ್ಯ ಹೆಚ್ಚಳ;
ವಾರ್ಷಿಕ 1.35 ಲಕ್ಷ ಹೆಚ್ಚುವರಿ ಡಯಾಲಿಸಿಸ್ಸೇವೆಗಾಗಿ
20 ಕೋಟಿ ರೂ.
· ಡಿಜಿಟಲ್ ಆರೋಗ್ಯ ಕಾರ್ಯಕ್ರಮದಡಿ ವಹಿಗಳ ಡಿಜಿಟಲೀಕರಣ ರೋಗಿಗಳ ಸಂಪೂರ್ಣ ಗಣಕೀಕೃತ ನೋಂದಣಿ, ಆರೋಗ್ಯ ದಾಖಲೆಗಳ ಡಿಜಿಟಲೀಕರಣ; UPI ಆಧಾರಿತ ಶುಲ್ಕ ಪಾವತಿ ವ್ಯವಸ್ಥೆ.
· ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ.
ವೈದ್ಯಕೀಯ ಶಿಕ್ಷಣ
· ವೈದ್ಯಕೀಯ ಕಾಲೇಜುಗಳು, ಸೂಪರ್ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಆಸ್ಪತ್ರೆಗಳ ನಿರ್ಮಾಣಕ್ಕೆ 620 ಕೋಟಿ ರೂ. ಮತ್ತು ಉಪಕರಣಗಳ ಖರೀದಿಗೆ 220 ಕೋಟಿ ರೂ.
· 400 ಹಾಸಿಗೆ ಸಾಮರ್ಥ್ಯದ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು 180 ಕೋಟಿ ರೂ.
· ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜಿಗೆ ಆಸ್ಪತ್ರೆ ನಿರ್ಮಾಣ ಮತ್ತು ಬಾಗಲಕೋಟೆಯಲ್ಲಿ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳ ಕಾರ್ಯಾಚರಣೆಗಾಗಿ
ಸೂಕ್ತ ಕ್ರಮ.
· ವಿಜಯಪುರ ಮತ್ತು ಕೋಲಾರದಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿ.
· ಕಾರವಾರ ಮತ್ತು ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆಗೆ ತಲಾ 100 ಕೋಟಿ ರೂ.
· ಮುನಿರಾಬಾದ್–ಟಿ.ಬಿ. ಡ್ಯಾಂನಲ್ಲಿ ಕ್ಯಾನ್ಸರ್ ಆಸ್ಪತ್ರೆಯ ಸ್ಥಾಪನೆ.
· ಬೆಂಗಳೂರಿನ ಗೋವಿಂದರಾಜನಗರ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರದ ಸ್ಥಾಪನೆ.
· ಬೆಂಗಳೂರು ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ IVF ಕೇಂದ್ರಗಳ ಸ್ಥಾಪನೆಗೆ
ತಲಾ ಒಂದು ಕೋಟಿ ರೂ.
· ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ ಹಾಗೂ ಬೆಂಗಳೂರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ಮತ್ತು ಬಿಡಿಎಸ್ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕೆ 10 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
· ರಾಜ್ಯದ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರ ವಿತರಣೆ.
· ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣ,
ಸ್ವಯಂ ಉದ್ಯೋಗ, ವೈಯಕ್ತಿಕ ಆದಾಯೋತ್ಪನ್ನ ಚಟುವಟಿಕೆ ಕಾರ್ಯಕ್ರಮಕ್ಕೆ ಐದು ಕೋಟಿ ರೂ.
· ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳ ಪ್ರೋತ್ಸಾಹಧನ 45,000 ರೂ.ಗಳಿಗೆ ಹೆಚ್ಚಳ.
· ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ “ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ” ಪ್ರಾರಂಭ.
· ಕಲ್ಯಾಣ ಕರ್ನಾಟಕ ಭಾಗದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣ.
· ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿಯಾಗಿ 20 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ.
· ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿಯೇ ಮಧ್ಯಾಹ್ನದ ಬಿಸಿಯೂಟ.
· ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿ ರಚನೆ.
ಸಮಾಜ ಕಲ್ಯಾಣ
· ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಮೆಟ್ರಿಕ್ಪೂರ್ವ ಮತ್ತು ಮೆಟ್ರಿಕ್ನಂತರ ವಿದ್ಯಾರ್ಥಿನಿಲಯಗಳ ನಿರ್ವಹಣಾ ವೆಚ್ಚದ ದರಗಳ ಪರಿಷ್ಕರಣೆಗೆ ಹೆಚ್ಚುವರಿ 56 ಕೋಟಿ ರೂ.
· ಪ್ರತಿ ಜಿಲ್ಲೆಗೆ 150 ಸಂಖ್ಯಾಬಲದ ಒಂದು ಬಾಲಕಿಯರ ಮತ್ತು
ಒಂದು ಬಾಲಕರ ಒಟ್ಟು 62 ಹೊಸ ಮೆಟ್ರಿಕ್ನಂತರದ ವಿದ್ಯಾರ್ಥಿನಿಲಯಗಳ ಪ್ರಾರಂಭ.
· Right to Education Act ರಡಿ SC ST ವಿದ್ಯಾರ್ಥಿಗಳಿಗೆ
9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ.
· ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪದವಿ ಪೂರ್ವ ಶಿಕ್ಷಣಕ್ಕಾಗಿ ಒಟ್ಟು 31 ವಸತಿ ಶಾಲೆಗಳ ಉನ್ನತೀಕರಣ.
· ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ
ಒಟ್ಟು 40 ಹೊಸ ವಸತಿ ಶಾಲೆಗಳ ಪ್ರಾರಂಭ.
· ಕ್ರೈಸ್ವಸತಿ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಲು50 ಕೋಟಿ ರೂ.ಅನುದಾನ.
· ನಿವೇಶನ ಲಭ್ಯವಿರುವ ಒಟ್ಟು 30 ಕ್ರೈಸ್ವಸತಿ ಶಾಲೆಗಳಿಗೆ
660 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳ ನಿರ್ಮಾಣ.
· ನಾಲ್ಕು ಕ್ರೈಸ್ವಸತಿ ಶಾಲೆಗಳನ್ನು K-CET/JEE/NEET ಪರೀಕ್ಷೆಗಳಿಗೆ Centre of Excellence ಗಳನ್ನಾಗಿ ಉನ್ನತೀಕರಣ.
· ವಿದ್ಯಾರ್ಥಿ ನಿಲಯಗಳ ಆಹಾರ ವ್ಯವಸ್ಥೆಯನ್ನು ಉತ್ತಮಪಡಿಸಲು ಪ್ರಾಯೋಗಿಕವಾಗಿ 50 ಮೆಟ್ರಿಕ್ನಂತರದ ವಿದ್ಯಾರ್ಥಿನಿಲಯಗಳಲ್ಲಿ ʻಮೆಸ್ಸಮಿತಿʼಗಳ ರಚನೆ.
· ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ
10 ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳ ಪ್ರಾರಂಭ.
· ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿ ಕಂದಾಯ ವಿಭಾಗಕ್ಕೆ ಒಂದರಂತೆ ನಾಲ್ಕು ವಿಶೇಷ ವಸತಿ ಶಾಲೆಗಳ ಪ್ರಾರಂಭ.
· ಡಾ|| ಬಿ.ಆರ್.ಅಂಬೇಡ್ಕರ್ರವರು ಭೇಟಿ ನೀಡಿದ ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ CBSE ಪಠ್ಯಕ್ರಮದ ನಾಲ್ಕು ಕ್ರೈಸ್ವಸತಿ ಶಾಲೆಗಳ ಪ್ರಾರಂಭ.
· ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ.
· ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದೀಕರಣಕ್ಕಾಗಿ ಪಾವತಿಸುವ ವೆಚ್ಚ 1.5 ಲಕ್ಷ ರೂ.ಗಳಿಗೆ ಹೆಚ್ಚಳ.
· ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ನಿಗಮಗಳಿಗೆ 1,500 ಕೋಟಿ ರೂ. ಅನುದಾನ.
· ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಗಳಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ.
ಪರಿಶಿಷ್ಟ ವರ್ಗಗಳ ಕಲ್ಯಾಣ
· ಬೆಂಗಳೂರಿನ ಸುಮನಹಳ್ಳಿಯಲ್ಲಿ 50 ಕೋಟಿ ರೂ.ಗಳ ವೆಚ್ಚದಲ್ಲಿ
“ಶ್ರೀ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ” ಸಂಕೀರ್ಣ ನಿರ್ಮಾಣ.
· 150 ಸಂಖ್ಯಾಬಲದ ಹೊಸ 50 ಮೆಟ್ರಿಕ್ನಂತರದ ವಿದ್ಯಾರ್ಥಿನಿಲಯ ಪ್ರಾರಂಭ.
· ಆಶ್ರಮ ಶಾಲೆಗಳಿಗೆ 119 ಮಹಿಳಾ ಕೇರ್ಟೇಕರ್ಹುದ್ದೆಗಳ ಮಂಜೂರು.
· ʻಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮʼ ಸ್ಥಾಪನೆ.
· ಪರಿಶಿಷ್ಟ ಪಂಗಡಗಳ ಆಯೋಗ ಸ್ಥಾಪನೆ.
ಹಿಂದುಳಿದ ವರ್ಗಗಳ ಕಲ್ಯಾಣ
· ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ
150 ಸಂಖ್ಯಾಬಲದ 50 ಮೆಟ್ರಿಕ್ನಂತರದ ವಿದ್ಯಾರ್ಥಿನಿಲಯಗಳ ಪ್ರಾರಂಭ.
· ಐದು ಕೋಟಿ ರೂ. ಘಟಕ ವೆಚ್ಚದಲ್ಲಿ 50 ಮೆಟ್ರಿಕ್ನಂತರದ ವಿದ್ಯಾರ್ಥಿ ನಿಲಯಗಳ ಸ್ವಂತ ಕಟ್ಟಡಗಳ ನಿರ್ಮಾಣ.
· ಬೆಂಗಳೂರು ಮತ್ತು ಮೈಸೂರು ನಗರದ ದೋಬಿಘಾಟ್ಗಳಲ್ಲಿ ಮಡಿವಾಳ ಸಮಾಜದವರಿಗೆ ತಲಾ 75 ಲಕ್ಷ ರೂ. ಘಟಕ ವೆಚ್ಚದಲ್ಲಿ ಆಧುನಿಕ Laundry ಗಳ ಸ್ಥಾಪನೆ.
· 250 ಇಂಜಿನಿಯರಿಂಗ್ಪದವೀಧರರಿಗೆ ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ NIT/IIT/IIM ಗಳಲ್ಲಿ AI ತರಬೇತಿ ಪಡೆಯಲು ತಲಾ ಎರಡು ಲಕ್ಷ ರೂ.ಗಳ ಸಾಲ.
· 31.03.2021ರ ಅಂತ್ಯದವರೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ನಿಗಮಗಳಿಂದ ಪಡೆದ ಸಾಲದ ಅಸಲನ್ನು ಪಾವತಿ ಮಾಡುವವರಿಗೆ ಸಾಲದ ಮೇಲಿನ
ಬಡ್ಡಿ ಮನ್ನಾ ಮಾಡುವ ಒಂದಾವರ್ತಿ ತೀರುವಳಿ ಯೋಜನೆ ಜಾರಿ.
· ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ, ಬ್ಯಾಕ್ಲಾಗ್ಹುದ್ದೆಗಳ ಭರ್ತಿ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಒಂದು ಉನ್ನತ ಮಟ್ಟದ ಸಮಿತಿ ರಚನೆ.
· ವಿಶ್ವವಿದ್ಯಾನಿಲಯಗಳಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ನೀಡುವ ಸೌಲಭ್ಯಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ-1ರಡಿ ಬರುವ 46 ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ವಿದ್ಯಾರ್ಥಿಗಳಿಗೆ ವಿಸ್ತರಣೆ.
ಅಲ್ಪಸಂಖ್ಯಾತರ ಕಲ್ಯಾಣ
· 25 ಹೊಸ ಮೆಟ್ರಿಕ್ನಂತರದ ವಿದ್ಯಾರ್ಥಿನಿಲಯಗಳ ಪ್ರಾರಂಭ.
· CBSE ಪಠ್ಯಕ್ರಮದಡಿ 10 ಕೋಟಿ ರೂ. ಅನುದಾನದಲ್ಲಿ
10 ಹೊಸ ಸಂತ ಶಿಶುನಾಳ ಶರೀಫ ವಸತಿ ಶಾಲೆಗಳ ಪ್ರಾರಂಭ.
· 25 ಹೊಸ ಸಂತ ಶಿಶುನಾಳ ಶರೀಫರ ವಸತಿ ಶಾಲೆಗಳ ಪ್ರಾರಂಭ.
· 100 ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ
ಉರ್ದು ಶಾಲೆಗಳನ್ನು 400 ಕೋಟಿ ರೂ.ಗಳ ವೆಚ್ಚದಲ್ಲಿ ಕೆ.ಪಿ.ಎಸ್.ಮಾದರಿಯಲ್ಲಿ ಉನ್ನತೀಕರಣ.
· 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪಿ.ಯು.ಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಪ್ರಾರಂಭ. 18 ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗ ಪ್ರಾರಂಭ.
· ಅಲ್ಪಸಂಖ್ಯಾತರ ನಾಲ್ಕು ವಸತಿ ಶಾಲೆಗಳನ್ನು K-CET/JEE/NEET ಪರೀಕ್ಷೆಗಳಿಗೆ Center for Excellenceನ್ನಾಗಿ ಸ್ಥಾಪನೆ.
20 ವಸತಿ ಶಾಲೆಗಳ ಮಕ್ಕಳಿಗೆ K-CET/JEE/NEET ಪರೀಕ್ಷೆಗಳಿಗೆ ವಿಶೇಷ ತರಬೇತಿ.
· ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಆಯ್ದ ವಕ್ಫ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರೀಕ ಸೇವಾ ಕೇಂದ್ರಗಳ ಪ್ರಾರಂಭ.
· ಬೆಂಗಳೂರಿನಲ್ಲಿ 100 ಸಂಖ್ಯಾಬಲದ ನಾಲ್ಕು ಉದ್ಯೋಗಸ್ಥ ಮಹಿಳೆಯರ ವಸತಿನಿಲಯಗಳ ಪ್ರಾರಂಭ.
· ಜೈನ್, ಬೌದ್ಧ ಮತ್ತು ಸಿಖ್ಸಮುದಾಯಗಳ ಸಮಗ್ರ ಅಭಿವೃದ್ಧಿಗೆ
100 ಕೋಟಿ ರೂ. ಅನುದಾನ.
· ಅಲ್ಪಸಂಖ್ಯಾತರ 5,000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಖರೀದಿಗೆ ತಲಾ 50,000 ರೂ.
· ಕ್ರೈಸ್ತ ಸಂಸ್ಥೆಗಳು ನಡೆಸುವ 10 ವೃದ್ಧಾಶ್ರಮಗಳಲ್ಲಿ
ತಲಾ 50 ಲಕ್ಷ ರೂ.ಗಳ ನೆರವಿನೊಂದಿಗೆ ಸಮಗ್ರ ಜೆರಿಯಾಟ್ರಿಕ್ ಪ್ಯಾಲಿಯೇಟಿವ್ ಕೇರ್ ಘಟಕಗಳ ಸ್ಥಾಪನೆ.
· ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಇತರೆ ಸಮಾಜ ಸುಧಾರಕರ ಕೃತಿಗಳು ಮತ್ತು ಪುಸ್ತಕಗಳನ್ನು
ಉರ್ದು ಭಾಷೆಗೆ ಅನುವಾದ.
· ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ಭವನಗಳ ನಿರ್ಮಾಣ.
· 31 ಮಹಿಳಾ ಪಿ.ಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಣ. ಸವಣೂರಿನಲ್ಲಿ ಒಂದು ಹೊಸ ಮಹಿಳಾ ಪಿ.ಯು. ಕಾಲೇಜು ಪ್ರಾರಂಭ.
· ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ ವಕ್ಫ್ಆಸ್ತಿಗಳ ಸಮಗ್ರ ಅಭಿವೃದ್ಧಿ.
· ಬೀದರ್ನ ಶ್ರೀ ನಾನಕ್ಝೀರಾ ಸಾಹೇಬ್ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪನೆ
ವಸತಿ
· ರಾಜ್ಯದ ವಸತಿ ಯೋಜನೆಗಳಡಿ ಬಿಎಲ್ಸಿ ಆಧಾರಿತ ಒಂದು ಲಕ್ಷ ಮನೆಗಳ ಹೊಸ ಗುರಿ. ಹೊಸ ಗುರಿಯಡಿ ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳ ಸಹಾಯಧನ 2 ಲಕ್ಷ ರೂ.ಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಸಹಾಯಧನ 3 ಲಕ್ಷ ರೂ.ಗಳಿಗೆ ಪರಿಷ್ಕರಣೆ.
· ರಾಜ್ಯ ವಸತಿ ಯೋಜನೆಗಳಡಿ ಆನ್ಲೈನ್ಲಾಟರಿ ಮೂಲಕ
ಗ್ರಾಮ ಸಭೆಗಳಲ್ಲಿ ಫಲಾನುಭವಿಗಳ ಆಯ್ಕೆ.
· ʻಕೆ.ಹೆಚ್.ಬಿ. ಸೂರ್ಯ ಕ್ರೀಡಾ ಗ್ರಾಮʼ ಎಂಬ ಹೆಸರಿನಲ್ಲಿ
ಕರ್ನಾಟಕ ಗೃಹ ಮಂಡಳಿ ವತಿಯಿಂದ ಆನೇಕಲ್ತಾಲ್ಲೂಕಿನಲ್ಲಿ 80,000 ಆಸನವುಳ್ಳ ಕ್ರಿಕೆಟ್ಕ್ರೀಡಾಂಗಣ ಮತ್ತು ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ.
· ʻನಮ್ಮ ಮನೆʼ ಯೋಜನೆಯಡಿ ರಿಯಾಯಿತಿ ದರದಲ್ಲಿ
50 ಸಾವಿರ ನಿವೇಶನಗಳ ವಿತರಣೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು
· ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ.
· ಲಾಭಾಂಶ ಪಾವತಿಯಲ್ಲಿ ವಿಳಂಬ ನಿವಾರಿಸಲು FIST Application ಮೂಲಕ ನೇರಪಾವತಿ.
· ಇಲಾಖೆಯ ಸಹಾಯವಾಣಿ 1967 ವ್ಯವಸ್ಥೆಯನ್ನು AI ಆಧಾರಿತ ʻSmart Annavani’ ಯನ್ನಾಗಿ ಪರಿವರ್ತನೆ.
· ದಾಸೋಹ ಯೋಜನೆಯಡಿ 34 ಹೊಸ ಕಲ್ಯಾಣ ಸಂಸ್ಥೆಗಳ ಸೇರ್ಪಡೆ.
ಕಾರ್ಮಿಕ
· ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ತಲಾ 60 ಕೋಟಿ ರೂ.ಗಳ ವೆಚ್ಚದಲ್ಲಿ 10 GTTC ಕೇಂದ್ರಗಳ ಸ್ಥಾಪನೆ.
· 2025-26ರಲ್ಲಿ ಅನುಮೋದನೆಗೊಂಡಿರುವ 42 ಹಾಗೂ
2026-27ರಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಹೆಚ್ಚುವರಿ 62 ಒಟ್ಟಾರೆ 104 ಶ್ರಮಿಕ ವಸತಿ ಶಾಲೆಗಳ ಪ್ರಾರಂಭ.
· ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ 200 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ.
· ಅಸಂಘಟಿತ ಕಾರ್ಮಿಕರಿಗೆ ಆನ್ಲೈನ್ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆಗೆ ʻಕಾಯಕ ಭಾಗ್ಯʼ ಯೋಜನೆ.
· ಕಾರ್ಮಿಕ ವಿಮಾ ಸೊಸೈಟಿಯ ಮುಖಾಂತರ ವಿಮಾದಾರರಿಗೆ ಪರಿಣಾಮಕಾರಿಯಾಗಿ ವೈದ್ಯಕೀಯ ಸೇವೆಗಳನ್ನು ಒದಗಿಸಲು Cervical Cancer ಲಸಿಕಾ ಕಾರ್ಯಕ್ರಮ, ESI ಚಿಕಿತ್ಸಾಲಯಗಳ ಉನ್ನತೀಕರಣ.
ಕೌಶಲ್ಯಾಭಿವೃದ್ಧಿ
· ಮೂರು ವರ್ಷದಲ್ಲಿ ಯುವನಿಧಿ ಯೋಜನೆಯಡಿ ಒಟ್ಟು 3,08,267 ಅರ್ಹ ಫಲಾನುಭವಿಗಳಿಗೆ 913 ಕೋಟಿ ರೂ. ಮೊತ್ತದ ನಿರುದ್ಯೋಗ ಭತ್ಯೆ ಪಾವತಿ.
· ADB ಸಹಭಾಗಿತ್ವದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿಟಿಟಿಐಗಳು, ಕೆಎಸ್ಡಿಎ ಮತ್ತು ಜೆಟಿಎಸ್ಗಳ ಉನ್ನತೀಕರಣಕ್ಕೆ 1,386 ಕೋಟಿ ರೂ.ಗಳ K-QUEST ಯೋಜನೆ.
· ಕೇಂದ್ರ ಸರ್ಕಾರದ PM- SETU ಯೋಜನೆಯಡಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು 241 ಕೋಟಿ ರೂ. ಘಟಕ ವೆಚ್ಚದಲ್ಲಿ ಹಬ್ಅಂಡ್ಸ್ಪೋಕ್ಮಾದರಿಯಲ್ಲಿ ಎರಡು ಕ್ಲಸ್ಟರ್ಗಳ ಉನ್ನತೀಕರಣ.
· 16 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಮತ್ತು ಕಲಬುರಗಿಯಲ್ಲಿ ಎರಡು ಷ್ನೈಡರ್ ಎಲೆಕ್ಟಿಕ್ ಯೂತ್ ಇಂಪ್ಯಾಕ್ಟ್ ಕೇಂದ್ರಗಳ ಸ್ಥಾಪನೆ.
· ಐಟಿಐ ಮಹಿಳಾ ತರಬೇತಿದಾರರಿಗೆ 1,200 ರೂ.ಗಳ
ವಾರ್ಷಿಕ ಬೋಧನಾ ಶುಲ್ಕ ವಿನಾಯಿತಿ.
· ಐಟಿಐ ವಿದ್ಯಾರ್ಥಿಗಳಿಗೆ ಎರಡು ಹೆಚ್ಚುವರಿ ವಿಷಯಗಳ ಬೋಧನೆ ಮೂಲಕ ಪದವಿ ಪೂರ್ವ ಪ್ರಮಾಣ ಪತ್ರ ನೀಡಿಕೆ.
· 20 ಕೋಟಿ ರೂ.ಗಳ ವೆಚ್ಚದಲ್ಲಿ ಕೊಪ್ಪಳದ
ಜಿಟಿಟಿಸಿ–ಎಂಎಸ್ಡಿಸಿಯಲ್ಲಿ Precision Tool Engineering ನಲ್ಲಿ ತಂತ್ರಜ್ಞಾನ ಕೇಂದ್ರದ ಸ್ಥಾಪನೆ.
· ಬೇಡಿಕೆ ಆಧಾರಿತ ಕೌಶಲ್ಯ ಅಭಿವೃದ್ಧಿಯನ್ನು ಬೆಂಬಲಿಸಲು
ಒಂದು ಕೋಟಿ ರೂ. ವೆಚ್ಚದಲ್ಲಿ ಚಾಲೆಂಜ್ಫಂಡ್ಸ್ಥಾಪನೆ.
· ಕರ್ನಾಟಕ ಕೌಶಲ್ಯ ಬುದ್ಧಿಮತ್ತೆ ಮತ್ತು ಕಾರ್ಯತಂತ್ರ ಘಟಕ (KSISU) ಸ್ಥಾಪನೆ.
· ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಏಕೀಕೃತ ಕೌಶಲ್ಯ ಅಭಿವೃದ್ಧಿ ಪೋರ್ಟಲ್ ಅಭಿವೃದ್ಧಿ.
· ಅಂತಾರಾಷ್ಟ್ರೀಯ ರೈತ ಮಹಿಳಾ ವರ್ಷ 2026ರ ಅಂಗವಾಗಿ
5,000 ರೈತ ಮಹಿಳೆಯರಿಗೆ ಆಧುನಿಕ ಕೃಷಿ ಕೌಶಲ್ಯಾಭಿವೃದ್ಧಿ ತರಬೇತಿ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
· ಐದನೇ ರಾಜ್ಯ ಹಣಕಾಸು ಆಯೋಗದ ವರದಿ ಆಧಾರದಲ್ಲಿ ಸ್ಥಳೀಯ ಸಂಸ್ಥೆಗಳ ಹಂಚಿಕೆ NLNORR ನ ಶೇ.48 ರಿಂದ ಶೇ.50 ಕ್ಕೆ ಹೆಚ್ಚಳ. ಇದರಲ್ಲಿ ಶೇ.35 ಪಂಚಾಯತ್ರಾಜ್ಸಂಸ್ಥೆಗಳಿಗೆ,
ಶೇ.15 ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ.
· ಜಲ ಜೀವನ್ಮಿಷನ್ಯೋಜನೆಯಡಿ 69,488 ಕೋಟಿ ರೂ. ಕಾಮಗಾರಿ ಅನುಮೋದನೆ. ಕೇಂದ್ರದ ಪಾಲು ೩೦,೮೮೮ ಕೋಟಿ ರೂ. ರಾಜ್ಯದ ಪಾಲು ೩೮,೬೦೦ ಕೋಟಿ ರೂ. ಕೇಂದ್ರದಿಂದ ಇದುವರೆಗೆ ಬಿಡುಗಡೆ 11,786 ಕೋಟಿ ರೂ. ಮತ್ತು 19,102 ಕೋಟಿ ರೂ. ಬಾಕಿ. ರಾಜ್ಯದಿಂದ ಬಿಡುಗಡೆ 27,098 ಕೋಟಿ ರೂ. ರಾಜ್ಯದಿಂದ
15,500 ಕೋಟಿ ರೂ. ಹೆಚ್ಚುವರಿ ಬಿಡುಗಡೆ. ಪ್ರಸಕ್ತ ಸಾಲಿಗೆ
ಜಲ ಜೀವನ್ಮಿಷನ್ಗೆ 10,433 ಕೋಟಿ ರೂ.
· VB G RAM G ಯೋಜನೆ ಜಾರಿಯಿಂದ ನರೇಗಾ ಯೋಜನೆಯ ಹಕ್ಕು ಆಧಾರಿತ ದೃಷ್ಟಿಕೋನ ದುರ್ಬಲ, ಮಹಾತ್ಮಾ ಗಾಂಧಿಯವರ ಗ್ರಾಮ ಸ್ವರಾಜ್ಪರಿಕಲ್ಪನೆಗೆ ವಿರುದ್ಧ.
· ನರೇಗಾ ಯೋಜನೆಯನ್ನು ಪುನ:ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹ. ಅಗತ್ಯವಿದ್ದಲ್ಲಿ ಕಾನೂನು ಹೋರಾಟ.
· ADB ನೆರವಿನೊಂದಿಗೆ 5,190 ಕೋಟಿ ರೂ.ಗಳ ವೆಚ್ಚದಲ್ಲಿ
7,110 ಕಿ.ಮೀ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೊಳಿಸುವ ʻಪ್ರಗತಿ ಪಥʼ ಯೋಜನೆ. 500 ಕೋಟಿ ರೂ.ಗಳ ಆಯವ್ಯಯ ಅನುದಾನ.
· ಕುಡಿಯುವ ನೀರಿನ 1,000 ಮೇಲ್ಮಟ್ಟ ಜಲಾಗಾರಗಳ (OHT) ಕಾರ್ಯಾಚರಣೆ ಮತ್ತು ನಿರ್ವಹಣೆ ಸುಧಾರಣೆ ಮತ್ತು ಪುನಃಶ್ಚೇತನ ಕಾರ್ಯಕ್ಕಾಗಿ 30 ಕೋಟಿ ರೂ.ಗಳು.
· ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಹಾಗೂ 23 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಯೋಜನೆಗೆ 125 ಕೋಟಿ ರೂ.ಗಳು.
· ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ʻಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿʼ ಎಂದು ನಾಮಕರಣ.
· ಗ್ರಾಮ ಪಂಚಾಯಿತಿಗಳಲ್ಲಿ ಆದಾಯೋತ್ಪನ್ನ ಘಟಕಗಳನ್ನು ಸ್ಥಾಪಿಸಿ ನಿರ್ವಹಿಸಲು ಸ್ಥಳೀಯ ಆರ್ಥಿಕ ಬಲವರ್ಧನೆ ಕಾರ್ಯಕ್ರಮಕ್ಕೆ (LEAP) 25 ಕೋಟಿ ರೂ.
· ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ Solar Micro Grid ಸ್ಥಾಪಿಸುವ ʻಅನಂತʼ ಯೋಜನೆ ಅನುಷ್ಠಾನ.
ಯೋಜನೆ
· ಪ್ರೊ. ಎಂ. ಗೋವಿಂದರಾವ್ರವರ ಸಮಿತಿಯಿಂದ ಅಭಿವೃದ್ಧಿ ಮತ್ತು ಪ್ರಾದೇಶಿಕ ಅಸಮತೋಲನೆ ಬಗ್ಗೆ ವರದಿ ಸಲ್ಲಿಕೆ.
· ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ 4,291 ಕೋಟಿ ರೂ.ಗಳ ಮೀಸಲು.
· ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 5,000 ಕೋಟಿ ರೂ.ಗಳ ಕ್ರಿಯಾ ಯೋಜನೆ. ಮಂಡಳಿಯ ವಿವೇಚನಾ ಮತ್ತು
ಮ್ಯಾಕ್ರೋ ಅನುದಾನಗಳಲ್ಲಿ ಶೇ.40ರಷ್ಟು ಆರೋಗ್ಯ ಶಿಕ್ಷಣ ಮತ್ತು ಅಪೌಷ್ಠಿಕತೆ ನಿವಾರಣೆ ಕಾರ್ಯಕ್ರಮಗಳಿಗೆ ಮೀಸಲು.
· ರಾಜ್ಯದ GSDP ಗೆ ಕಲ್ಯಾಣ ಕರ್ನಾಟಕದ ಕೊಡುಗೆಯನ್ನು ಹೆಚ್ಚಿಸುವ ಗುರಿ. ಪ್ರತ್ಯೇಕ ಯೋಜನೆ, ನೀತಿ ಮತ್ತು ದತ್ತಾಂಶ ವಿಶ್ಲೇಷಣಾ ವಿಭಾಗ ಸ್ಥಾಪನೆ.
· 2015ಕ್ಕಿಂತ ಮೊದಲಿನ ದಾಖಲೆಗಳನ್ನು ಡಿಜಿಟಲ್ ರೂಪಕ್ಕೆ ಪರಿವರ್ತಿಸಿ ʻಇ-ಜನ್ಮʼ ಮೂಲಕ ಡಿಜಿಟಲ್ ಪ್ರಮಾಣ ಪತ್ರ ನೀಡಲು 10 ಕೋಟಿ ರೂ.
· ʻ5ನೇ ಆವೃತ್ತಿಯ ಕರ್ನಾಟಕ ರಾಜ್ಯ ಮಾನವ ಅಭಿವೃದ್ಧಿ
ವರದಿ–2026ʼ ಹಾಗೂ ʻರಾಜ್ಯ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031ʼ ಗಳನ್ನು ಸಿದ್ಧಪಡಿಸುವುದು.
· 26 ಜಿಲ್ಲಾ ಯೋಜನಾ ಸಮಿತಿಗಳ ರಚನೆ, ʻಜನರ ಯೋಜನೆʼ ರೂಪಿಸುವುದು.
· ಜೇವರ್ಗಿಯಲ್ಲಿ ಕೆ.ಕೆ.ಆರ್.ಡಿ.ಬಿ. ಅನುದಾನದಡಿ Knowledge Park ಸ್ಥಾಪನೆ.
ನಗರಾಭಿವೃದ್ಧಿ
· ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿಗೆ 7,000 ಕೋಟಿ ರೂ. ಅನುದಾನ
· ಬೆಂಗಳೂರಿಗೆ ಹೊಸ ಪರಿಷ್ಕೃತ ಮಾಸ್ಟರ್ಪ್ಲಾನ್2041 ಮತ್ತು ಸಮಗ್ರ ಮೊಬಿಲಿಟಿ ಯೋಜನೆ.
· 3,000 ಕೋಟಿ ರೂ. ಮೊತ್ತದಲ್ಲಿ ಬೆಂಗಳೂರಿನಲ್ಲಿ 450 ಕಿ.ಮೀ ರಸ್ತೆಗೆ ವೈಟ್ಟ್ಯಾಪಿಂಗ್.
· 175 ಜಂಕ್ಷನ್ಗಳ ಸೌಂದರ್ಯೀಕರಣ, 500 ಕಿ.ಮೀ ಉದ್ದದ ಪಾದಚಾರಿ ಮಾರ್ಗಗಳ ಮೇಲ್ದರ್ಜೆ ಮತ್ತು 100 Sky Walk ನಿರ್ಮಾಣ.
· ಪ್ರಸಕ್ತ ಸಾಲಿಗೆ ಹೆಚ್ಚುವರಿ ಮಾಡಲಾಗುವ 41 ಕಿ.ಮೀ.
ಮೆಟ್ರೋ ಮಾರ್ಗದಿಂದ ದಿನಕ್ಕೆ 15 ಲಕ್ಷ ಪ್ರಯಾಣಿಕರಿಗೆ ಅನುಕೂಲ.
· 160 ಕೋಟಿ ರೂ.ಗಳ ವೆಚ್ಚದಲ್ಲಿ ಹೊರ ವರ್ತುಲ ರಸ್ತೆಯ
ಮೆಟ್ರೋ ವಯಾಡಕ್ಟ್ಉದ್ದಕ್ಕೂ 9 ಕಿ.ಮೀ ಪಾದಚಾರಿ ನಡಿಗೆ ಮಾರ್ಗ ನಿರ್ಮಾಣ.
· JICA ನೆರವಿನೊಂದಿಗೆ 6,939 ಕೋಟಿ ರೂ.ಗಳ ಮೊತ್ತದಲ್ಲಿ
ಕಾವೇರಿ 6ನೇ ಹಂತದ ಯೋಜನೆ ಅನುಷ್ಠಾನ.
· 40 ಕಿ.ಮೀ ಉದ್ದದ ಸುರಂಗ ಮಾರ್ಗದ ಕಾಮಗಾರಿಯನ್ನು
BOOT ಮಾದರಿಯಲ್ಲಿ 40,000 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಿರ್ಮಾಣ.
· 2,250 ಕೋಟಿ ರೂ. ವೆಚ್ಚದಲ್ಲಿ ಹೆಬ್ಬಾಳ ಜಂಕ್ಷನ್ನಿಂದ ಮೇಕ್ರಿ ಸರ್ಕಲ್ವರೆಗೆ ಸುರಂಗ ಮಾರ್ಗ ಮತ್ತು ಮೇಲು ಸೇತುವೆ ನಿರ್ಮಾಣ.
· ಅಣ್ಣಿಗೇರಿ, ಗುಂಡ್ಲುಪೇಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಭದ್ರಾವತಿ, ದೇವನಹಳ್ಳಿ ಮತ್ತು ಮೈಸೂರು ಹಾಗೂ
ಕೆಕೆಆರ್ಡಿಬಿ (ಮೈಕ್ರೋ) ಹಾಗೂ ರಾಜ್ಯ ಸರ್ಕಾರದ ನೆರವಿನೊಂದಿಗೆ ಆಳಂದ, ಅಫಜಲ್ ಪುರ, ಚಿತ್ತಾಪುರ, ಯಾದಗಿರಿ, ಹರಪನಹಳ್ಳಿ, ಜೇವರ್ಗಿ ಮತ್ತು ಸುರಪುರ ಪಟ್ಟಣಗಳಲ್ಲಿ ಒಳಚರಂಡಿ ವ್ಯವಸ್ಥೆ ಕಾಮಗಾರಿ ಅನುಷ್ಠಾನ.
· ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿಗಳ ನಿರ್ವಹಣೆ ಪ್ರಕ್ರಿಯೆಯನ್ನು ಸುಲಭಗೊಳಿಸಲು “The Estate Management Rules, 2026” ಅನ್ನು ಜಾರಿಗೊಳಿಸಲಾಗುವುದು.
· ನಗರ ಪ್ರದೇಶಗಳ ಆಯ್ದ ಜಾಗಗಳಲ್ಲಿ 100 Miyawaki ಪಾರ್ಕ್ಗಳ ನಿರ್ಮಾಣ.
· ರಾಯಚೂರು, ಬೀದರ್ಮತ್ತು ಹಾಸನ ಮಹಾನಗರ ಪಾಲಿಕೆಗಳಿಗೆ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ರಡಿ
ತಲಾ 200 ಕೋಟಿ ರೂ.
· ಧಾರವಾಡದಲ್ಲಿ ನಾಲ್ಕು ಮತ್ತು ಬೆಂಗಳೂರಿನಲ್ಲಿ ಎರಡು ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ಗಳ ಪ್ರಾರಂಭ.
· ಕಲಬುರಗಿ ನಗರಕ್ಕೆ 24X7 ಗುಣಮಟ್ಟದ ನೀರನ್ನು ಒದಗಿಸುವ ಕಾಮಗಾರಿಗಳಿಗೆ ವಿಸ್ತೃತ ಯೋಜನಾ ವರದಿ.
· ನೆಲಮಂಗಲ-ತಾವರೆಕೆರೆ-ಬಿಡದಿ ಮಧ್ಯಂತರ ವರ್ತುಲ ರಸ್ತೆ ನಿರ್ಮಾಣ
· ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ವಿವಿಧ ಭಾಗಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ
100 ಕೋಟಿ ರೂ.
ಇಂಧನ
· ನೀರಾವರಿ ಪಂಪ್ಸೆಟ್ವಿದ್ಯುತ್ಸಹಾಯಧನದಡಿ 36 ಲಕ್ಷ
ಪಂಪ್ಸೆಟ್ಗಳಿಗೆ 19,290 ಕೋಟಿ ರೂ.
· ಗೃಹಜ್ಯೋತಿ ಯೋಜನೆಗೆ 10,578 ಕೋಟಿ ರೂ.
· KUSUM-C ಯೋಜನೆಯಡಿ 2,777 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಉತ್ಪಾದನೆ.
· ಮುಖ್ಯಮಂತ್ರಿ ಸೌರ ಕೃಷಿ ಯೋಜನೆ ಎಂಬ ಹೊಸ ಯೋಜನೆಯಡಿ RESCO ಮಾದರಿಯಲ್ಲಿ 10,500 ಕೋಟಿ ರೂ. ವೆಚ್ಚದಲ್ಲಿ
3000 MW ವಿದ್ಯುತ್ಸ್ಥಾವರಗಳ ಪ್ರಾರಂಭ.
· KPTCL ವತಿಯಿಂದ ಪ್ರಸರಣ ಜಾಲವನ್ನು ವೃದ್ಧಿಸಲು 100 ಹೊಸ ಉಪ ಕೇಂದ್ರಗಳ ಸ್ಥಾಪನೆ.
· 3,400 ಕೋಟಿ ರೂ. ವೆಚ್ಚದಲ್ಲಿ ಹುಲಿಯೂರು, ಪಾವಗಡ ಮತ್ತು ಕುಷ್ಟಗಿಯ ಸಬ್ ಸ್ಟೇಷನ್ಗಳಲ್ಲಿ 2,000 MWh ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆಯ ಅಳವಡಿಕೆ.
· ಎಲೆಕ್ಟ್ರಿಕ್ವಾಹನದ ಬಳಕೆಗಾಗಿ 777 ಕೋಟಿ ರೂ.ಗಳ
ವೆಚ್ಚದಲ್ಲಿ 1,250 ವಾಹನ ಚಾರ್ಜಿಂಗ್ ಕೇಂದ್ರಗಳನ್ನು
ಪಿ.ಎಮ್.ಇ-ಡ್ರೈವ್ಯೋಜನೆಯಡಿ ಸ್ಥಾಪನೆ.
· 20 ಕೋಟಿ ರೂ. ವೆಚ್ಚದಲ್ಲಿ IIM, IISc, University of New South Wales, ಆಸ್ಟ್ರೇಲಿಯಾ ಸಹಯೋಗದಲ್ಲಿ ಸ್ಟಾರ್ಟ್ಅಪ್ಗಳಿಗೆ Incubation Centre ಸ್ಥಾಪನೆ.
ಲೋಕೋಪಯೋಗಿ
· ಮುಂದಿನ ಎರಡು ವರ್ಷಗಳಲ್ಲಿ 2,000 ಕೋಟಿ ರೂ. ಮೊತ್ತದಲ್ಲಿ ಸೇತುವೆಗಳ ನಿರ್ಮಾಣ.
· ಮಲೆನಾಡು ಮತ್ತು ಕರಾವಳಿ ಪ್ರದೇಶದ ಜನವಸತಿಗಳಿಗೆ ಸಂಪರ್ಕ ಕಲ್ಪಿಸುವ 300 ಫುಟ್ಬ್ರಿಡ್ಜ್ಗಳ ನಿರ್ಮಾಣ.
· ಇಲಾಖೆಯ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸುವುದರೊಂದಿಗೆ ಸಂರಕ್ಷಿಸಲು ರೆಕಾರ್ಡ್ರೂಮ್ ನಿರ್ಮಾಣ.
· ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ-5 ಘಟ್ಟ-2ರಡಿ 5,000 ಕೋಟಿ ರೂ. ಮೊತ್ತದಲ್ಲಿ 1846 ಕಿ,ಮೀ ರಸ್ತೆಯ ಅಭಿವೃದ್ಧಿ.
· ಮುಂದುವರೆದ ಯೋಜನೆಗಳಡಿ 2,200 ಕಿ.ಮೀ ರಾಜ್ಯ ಹೆದ್ದಾರಿ 3,500 ಕಿ.ಮೀ ಜಿಲ್ಲಾ ರಸ್ತೆಗಳನ್ನು 5,776 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ.
· ADB ನೆರವಿನ KSHIP-IV ಅಡಿಯಲ್ಲಿ 5,736 ಕೋಟಿ ರೂ.ಗಳ ವೆಚ್ಚದಲ್ಲಿ 875 ಕಿ.ಮೀ ಉದ್ದದ ರಸ್ತೆ ನಿರ್ಮಾಣದ ಯೋಜನಾ ವರದಿ.
· ಇಲಾಖೆಗಳಡಿ ಕಟ್ಟಡಗಳ ವಿನ್ಯಾಸ ಮತ್ತು ಅಂದಾಜುಗಳಲ್ಲಿ ಏಕರೂಪತೆ ತರಲು ತಜ್ಞರ ಸಮಿತಿ ರಚನೆ.
ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ
· ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು AAI ತಾಂತ್ರಿಕ ಅಭಿಪ್ರಾಯ ಪಡೆದು ಕಾರ್ಯಸಾಧ್ಯತಾ ವರದಿ ತಯಾರಿಕೆ.
· ರಾಜ್ಯದಲ್ಲಿನ ಏಳು ದೇಶೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ 200 ಕೋಟಿ ರೂ. ಅನುದಾನ ಮೀಸಲು.
· ವಿಜಯಪುರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಗಳ ಆವರಣದಲ್ಲಿ, ಕ್ರಮವಾಗಿ Flight Training School ಹಾಗೂ Manufacturing/ Assembly of Aircraft ಸ್ಥಾಪನೆ.
· ರಾಜ್ಯದಲ್ಲಿ ರೈಲ್ವೆ ಮಾರ್ಗಗಳ ಅಭಿವೃದ್ಧಿಗೆ 600 ಕೋಟಿ ರೂ.
· BSRP ಯೋಜನೆಯಡಿ 2 ಮತ್ತು 4 ಕಾರಿಡಾರ್ ಗಳನ್ನು ಪೂರ್ಣಗೊಳಿಸಲು 500 ಕೋಟಿ ರೂ.
· ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ದ್ವಿಪಥೀಕರಣ ಕಾಮಗಾರಿಗೆ 100 ಕೋಟಿ ರೂ.
· ಸಮಗ್ರ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ನೀತಿ ರಚನೆ.
· Karnataka State Offshore Resources Development and Utilisation Policy ರಚನೆ.
ವಾಣಿಜ್ಯ ಮತ್ತು ಕೈಗಾರಿಕೆ
· KIADB ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯ ಘಟಕದ ಸ್ಥಾಪನೆ.
· 500 ಕೋಟಿ ರೂ.ಗಳ ವೆಚ್ಚದಲ್ಲಿ ಮಂಡ್ಯದಲ್ಲಿ ‘ನಿರ್ಮಾಣ ಮತ್ತು ಮೂಲಸೌಕರ್ಯ ಸಲಕರಣೆಗಳ ಪರೀಕ್ಷಾ ಘಟಕʼ ಸ್ಥಾಪನೆಗೆ
100 ಎಕರೆ ಜಮೀನು.
· KIADB ಏರೋಸ್ಪೇಸ್ ಪಾರ್ಕ್ನಲ್ಲಿ ಏರೋಸ್ಪೇಸ್ ಕಾಮನ್ ಫೆಸಿಲಿಟಿ ಸೆಂಟರ್ ಸ್ಥಾಪನೆಗೆ 30 ಕೋಟಿ ರೂ.
· ಸಮ್ಮೇಳನ/ಶೃಂಗಸಭೆಗಳ (MICE) ಆಯೋಜನೆಗಾಗಿ ಮೈಸೂರು ಲ್ಯಾಂಪ್ ವರ್ಕ್ಸ್ ಲಿಮಿಟೆಡ್ಆವರಣದಲ್ಲಿ PPP ಮಾದರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶ ಕೇಂದ್ರ ಸಂಕೀರ್ಣ ನಿರ್ಮಾಣ.
· ಬೆಳಗಾವಿ ಜಿಲ್ಲೆಯಲ್ಲಿ 1,000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ಅಭಿವೃದ್ಧಿ.
· ಮೈಸೂರು ವಿಮಾನ ನಿಲ್ದಾಣದ ಸನಿಹ ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿ.
· NGEF ಆವರಣದಲ್ಲಿ ಟ್ರೀ ಪಾರ್ಕ್ ಯೋಜನೆಯ ಮೊದಲನೆಯ ಹಂತದ ಲೋಕಾರ್ಪಣೆ ಹಾಗೂ ಎರಡನೇ ಹಂತದಡಿ
ಪಿ.ಪಿ.ಪಿ ಮಾದರಿಯಲ್ಲಿ ಅಭಿವೃದ್ಧಿ.
· ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ಯೋಜನೆಗೆ
600 ಕೋಟಿ ರೂ.
· MSE-CDP ಯೋಜನೆಯಡಿ ೧೫ ಕೋಟಿ ರೂ. ವೆಚ್ಚದಲ್ಲಿ
10 ಕ್ಲಸ್ಟರ್ಗಳ ಸ್ಥಾಪನೆ.
· ನೇಕಾರರ ಆರ್ಥಿಕ ಸ್ವಾವಲಂಬನೆಗೆ ಒಟ್ಟಾರೆಯಾಗಿ 225 ಕೋಟಿ ರೂ.
· ಸಹಕಾರಿ ನೂಲಿನ ಗಿರಣಿಗಳನ್ನು ಪ್ರೋತ್ಸಾಹಿಸಲು ಪ್ರತಿ ಯೂನಿಟ್ಗೆ 3 ರೂ.ರಂತೆ ವಿದ್ಯುತ್ಸಹಾಯಧನ.
· ಕಲಬುರಗಿಯಲ್ಲಿ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್ಗೆ
75 ಕೋಟಿ ರೂ. ಅನುದಾನ.
· 2025-26 ಸಾಲಿನ ಸಕ್ಕರೆ ಹಂಗಾಮಿನಲ್ಲಿ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ 50 ರೂ.ಗಳ ಸಹಾಯಧನ. ಒಟ್ಟಾರೆಯಾಗಿ 300 ಕೋಟಿ ರೂ. ಒದಗಿಸಲಾಗಿದೆ.
· ರಾಜ್ಯಕ್ಕೆ ನಿಗದಿಪಡಿಸಲಾದ ಎಥನಾಲ್ ಖರೀದಿ ಕೋಟಾ,
ಉತ್ಪಾದನಾ ಸಾಮರ್ಥ್ಯಕ್ಕೆ ಹೋಲಿಸಿದರೆ ಕಡಿಮೆಯಾಗಿರುವುದರಿಂದ ಕೋಟಾವನ್ನು ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ
· LEAP ಯೋಜನೆಯಡಿ “Super 100 Industry-Academia Adoption Program”, ಕೆ–ಕಾಂಬಿನೇಟರ್ ವೇಗವರ್ಧಕ ಕಾರ್ಯಕ್ರಮ, ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ ಮತ್ತು ಮೈಸೂರಿನಲ್ಲಿ ಪ್ಲಗ್-ಅಂಡ್-ಪ್ಲೇ ಸೌಲಭ್ಯದ ʻಲೀಪ್ಲ್ಯಾಬ್ಸ್ʼ ಗಳ ಸ್ಥಾಪನೆ.
· ಇ.ಎಸ್.ಡಿ.ಎಂ ಮತ್ತು ಸೆಮಿಕಂಡಕ್ಟರ್ ವಲಯದಲ್ಲಿ ಬೃಹತ್ಕಂಪನಿಗಳಿಂದ 45 ಸಾವಿರ ಕೋಟಿ ರೂ.ಗಳ ಹೂಡಿಕೆ ಅಂದಾಜಿಸಿದೆ.
· AI ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ISRO ಮತ್ತು ಕಿಯೋನಿಕ್ಸ್ ಸಹಯೋಗದಲ್ಲಿ ʻಬೆಂಗಳೂರು ರೋಬೋಟಿಕ್ಸ್ ಮತ್ತು
AI ಇನೋವೇಶನ್ ಝೋನ್ʼ ಸ್ಥಾಪನೆ, IIIT ರಾಯಚೂರಿನಲ್ಲಿ
AI ಶ್ರೇಷ್ಠತಾ ಕೇಂದ್ರ ಸ್ಥಾಪನೆ.
· ಕಿಯೋನಿಕ್ಸ್ಮೂಲಕ ಮಂಗಳೂರಿನಲ್ಲಿ IT Park ಅನ್ನು ಅಭಿವೃದ್ಧಿಗೊಳಿಸಿ GCC ಅನ್ನು ಪ್ರೋತ್ಸಾಹಿಸಲಾಗುವುದು.
· ಮೈಸೂರು ನಗರವನ್ನು ರಾಜ್ಯದ ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿ.
· ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡ್ರೋನ್ ಪರೀಕ್ಷಾ ಸೌಲಭ್ಯ ಕೇಂದ್ರ.
· ಮಾನವ ತಳಿಶಾಸ್ತ್ರ ಕೇಂದ್ರದಲ್ಲಿ ಒಟ್ಟು 20 ಕೋಟಿ ರೂ.ಗಳ
ವೆಚ್ಚದಲ್ಲಿ ಮೂಲಸೌಲಭ್ಯಗಳ ಅಭಿವೃದ್ಧಿ.
· ಬೆಂಗಳೂರಿನಲ್ಲಿ IBAB, C-CAMP ಹಾಗೂ NASSCOM ಸಂಸ್ಥೆಗಳ ಸಹಭಾಗಿತ್ವದಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಎರಡು
AI ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ.
· ಕರ್ನಾಟಕ ಕ್ವಾಂಟಮ್ರೋಡ್ಮ್ಯಾಪ್ನ ಅನುಷ್ಠಾನಕ್ಕೆ
10 ಕೋಟಿ ರೂ.
· ಆರು ಹೊಸ ತಾರಾಲಯಗಳನ್ನು ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಯಾದಗಿರಿ, ಕೊಪ್ಪಳ ಹಾಗೂ ಬೀದರ್ಜಿಲ್ಲೆಗಳಲ್ಲಿ ಒಟ್ಟು
24 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಕನ್ನಡ ಮತ್ತು ಸಂಸ್ಕೃತಿ
· ʻಬೆಂಗಳೂರು ಹಬ್ಬʼ ಸಹಯೋಗದೊಂದಿಗೆ ರಾಜ್ಯದ ವಿವಿಧ ಕಲಾ ಪ್ರಕಾರಗಳನ್ನು ಒಂದೆಡೆ ಸೇರಿಸಿ ಕಾರ್ಯಕ್ರಮಗಳ ಆಯೋಜನೆಗೆ
ಐದು ಕೋಟಿ ರೂ.
· ಎರಡು ಕೋಟಿ ರೂ. ವೆಚ್ಚದಲ್ಲಿ ʻಜಾನಪದ ಸಂಗಮʼ ಸಮಾವೇಶದ ಆಯೋಜನೆ.
· ರಾಷ್ಟ್ರಕವಿ ಡಾ|| ಜಿ.ಎಸ್. ಶಿವರುದ್ರಪ್ಪರವರ ಜನ್ಮಶತಮಾನೋತ್ಸವ ಕಾರ್ಯಕ್ರಮಗಳಿಗೆ ಎರಡು ಕೋಟಿ ರೂ.
· ಸಂತ ಶಿಶುನಾಳ ಶರೀಫಹಾಗೂ ವೀರರಾಣಿ ಬೆಳವಡಿ ಮಲ್ಲಮ್ಮ ಇವರ ಹೆಸರಿನಲ್ಲಿ ಪ್ರತ್ಯೇಕ ಪ್ರತಿಷ್ಠಾನ.
· ಡಾ|| ಯು.ಆರ್. ಅನಂತಮೂರ್ತಿಯವರ ಹೆಸರಿನಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ.
· ಮಕ್ಕಳಿಗಾಗಿ ಪ್ರಸಿದ್ಧ ಕವಿ ಮತ್ತು ಸಾಹಿತಿಗಳ ಕೃತಿಗಳ ಬಣ್ಣದ ಚಿತ್ರಗಳು ಮತ್ತು ಸಣ್ಣ ವಾಕ್ಯಗಳ ಪುಸ್ತಕಗಳ ಮುದ್ರಣ.
· ಗೋರ್ಬಂಜಾರ ಸಮುದಾಯದ ವಿಶ್ವಕೋಶದ ಪ್ರಕಟಣೆ.
· ʻಅರ್ಧಶತಮಾನದ ದಲಿತ ಸಾಹಿತ್ಯʼ ಪುಸ್ತಕ ಪ್ರಕಟಣೆಗೆ
ಒಂದು ಕೋಟಿ ರೂ.
· ದಲಿತ ಕವಿ ಸಿದ್ದಲಿಂಗಯ್ಯ ಮತ್ತು ಡಾ. ಡಿ.ಆರ್. ನಾಗರಾಜ ರವರ ಹೆಸರಿನಲ್ಲಿ ಟ್ರಸ್ಟ್ರಚನೆ.
· ನಾ.ಡಿಸೋಜ ವಿರಚಿತ ʻಕೊಳಗʼ ಕಾದಂಬರಿ ಆಧರಿತ
ನಾಟಕ ಪ್ರದರ್ಶನ.
· ಖ್ವಾಜಾ ಬಂದೇ ನವಾಜ್ರ ಕುರಿತು ಅಹೋರಾತ್ರಿ ನಾಟಕ ಪ್ರದರ್ಶನ.
· ಚಾಮರಾಜೇಂದ್ರ ದೃಶ್ಯ ಕಲಾ ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿಗೆ ಎರಡು ಕೋಟಿ ರೂ.
· ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ.
· ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ, ಅಂಡಮಾನ್ನಲ್ಲಿ ಕರಾಳ ಶಿಕ್ಷೆಗೊಳಗಾದ ಕನ್ನಡಿಗರ ವೀರಗಾಥೆಯ ಕುರಿತು ʻಅನಾಮಿಕ ಸ್ವಾತಂತ್ರ್ಯ ಹೋರಾಟಗಾರರುʼ ಕೃತಿಗಳ ಪ್ರಕಟಣೆ.
· ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚಟುವಟಿಕೆಗಳಿಗೆ
ಎರಡು ಕೋಟಿ ರೂ.
· ಕೋಲಾರದ ‘ಆದಿಮ’, ಮೈಸೂರಿನ ʻರಂಗನಿರಂತರʼ, ಬೆಂಗಳೂರಿನ ʻಸಮುದಾಯʼಗಳಿಗೆ ಅನುದಾನ.
· ಕರಗ ಉತ್ಸವಕ್ಕೆ ಎರಡು ಕೋಟಿ ರೂ.
· ಐದು ಕೋಟಿ ರೂ. ವೆಚ್ಚದಲ್ಲಿ ತುಮಕೂರಿನ ಗುಬ್ಬಿ ವೀರಣ್ಣ ರಂಗಮಂದಿರದ ಉನ್ನತೀಕರಣ.
ಯುವಸಬಲೀಕರಣ ಮತ್ತು ಕ್ರೀಡೆ
· ಬೆಂಗಳೂರಿನ ಹೆಸರಘಟ್ಟ ಕೆರೆಯಲ್ಲಿ ಪಿಪಿಪಿ ಮಾದರಿಯಲ್ಲಿ Kayaking, Canoeing Centre of Excellence ಸ್ಥಾಪನೆ.
· ʻಸಶಕ್ತ ಕರ್ನಾಟಕʼದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ ಮತ್ತು ಹಂಪಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಾಥಾನ್ಹಾಗೂ 10 ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಮ್ಯಾರಾಥಾನ್ಗಳ ಆಯೋಜನೆ.
· ಮೈಸೂರಿನ ದಟ್ಟಗಳ್ಳಿಯಲ್ಲಿ ಆಧುನಿಕ ಸೈಕ್ಲಿಂಗ್ವೆಲೋಡ್ರೋಮ್.
· ಬಂಗಾರಪೇಟೆ, ಮುದ್ದೇಬಿಹಾಳ, ಗುಳೇದಗುಡ್ಡ, ಕನಕಪುರ, ಕುಕನೂರು ಮತ್ತು ಮಸ್ಕಿಯಲ್ಲಿ ತಾಲ್ಲೂಕು ಕ್ರೀಡಾಂಗಣಗಳ ನಿರ್ಮಾಣ.
· ಕಲಬುರಗಿಯಲ್ಲಿ PPP ಮಾದರಿಯಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಕೇಂದ್ರ ಆರಂಭ.
· ವಿರಾಜಪೇಟೆಯಲ್ಲಿ ಕ್ರೀಡಾ ವಸತಿ ನಿಲಯ ನಿರ್ಮಾಣ.
· ಬೆಳಗಾವಿಯ ಬೆಳಗುಂದಿಯಲ್ಲಿ ಕುಸ್ತಿ ಅಖಾಡ ನಿರ್ಮಾಣ.
ಪ್ರವಾಸೋದ್ಯಮ
· ʻಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆʼ
ರೂಪಿಸಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ.
· ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ.
· ಆಯ್ದ ವಿಶ್ವವಿದ್ಯಾಲಯಗಳಲ್ಲಿ ಪ್ರವಾಸ ಮಾರ್ಗದರ್ಶಕರಿಗೆ
ಡಿಪ್ಲೋಮಾ ಕೋರ್ಸ್ಪ್ರಾರಂಭ.
· ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ಅಭಿವೃದ್ಧಿ.
· ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ - ಸೀತಾಳಯ್ಯನಗಿರಿಯಿಂದ ಕೈಮರದವರೆಗೆ PPP ಮಾದರಿಯಲ್ಲಿ ರೋಪ್-ವೇ.
· ಮೈಸೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮೂಲಸೌಕರ್ಯಗಳ ಅಭಿವೃದ್ಧಿ.
· 1,000 ಸ್ಮಾರಕ ಮಿತ್ರರನ್ನು ಗುರುತಿಸಿ, ತರಬೇತಿ ನೀಡಿ ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರ್ಪಡೆ.
· ಭಾರತ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ತೀರುವಳಿ ಹಾಗೂ UNESCO ಸಹಮತಿ ಪಡೆದು ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ
· ಮಾನವ-ವನ್ಯ ಪ್ರಾಣಿ ಸಂಘರ್ಷ ನಿವಾರಣಾ ಕಾರ್ಯತಂತ್ರ ಯೋಜನೆಗೆ ಮುಂದಿನ ಐದು ವರ್ಷಗಳಲ್ಲಿ 1,500 ಕೋಟಿ ರೂ.ಗಳ ವೆಚ್ಚದಲ್ಲಿ ಕ್ರಮಗಳು.
· ಬೆಂಗಳೂರಿನ ಹೆಸರಘಟ್ಟ ಹುಲ್ಲುಗಾವಲಿನ ʻಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲುʼ ಪ್ರದೇಶದ ಸಂರಕ್ಷಣೆ ಮತ್ತು ಅಭಿವೃದ್ಧಿ.
· ಐದು ಕೋಟಿ ರೂ. ವೆಚ್ಚದಲ್ಲಿ ಬನ್ನೇರುಘಟ್ಟದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ.
· ಅರಣ್ಯ ಇಲಾಖೆಯಲ್ಲಿನ ವಿವಿಧ ವೃಂದಗಳಲ್ಲಿನ 2,000 ಹುದ್ದೆಗಳ ಭರ್ತಿ.
· ಮೈಸೂರು ಮೃಗಾಲಯ ಹಾಗೂ ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಕೃತಿ ನಿರೂಪಣಾ ಕೇಂದ್ರ ಸ್ಥಾಪನೆ.
· ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಮಾರು 75,000 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯೀಕರಣ ಕಾರ್ಯ.
· ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ʻಸಾಂಸ್ಕೃತಿಕ ನಾಯಕ ಬಸವಣ್ಣ ಜೈವಿಕ ವೈವಿಧ್ಯ ಉದ್ಯಾನ' ನಿರ್ಮಾಣ.
· ವಾಯು ಗುಣಮಟ್ಟ ಮಾಪನ ವ್ಯವಸ್ಥೆಯನ್ನು ಬಲಪಡಿಸಲು
15 ನಿರಂತರ ಪರಿವೇಷ್ಠಿಕ ವಾಯು ಗುಣಮಟ್ಟ ಮಾಪನ ಕೇಂದ್ರಗಳ ಸ್ಥಾಪನೆ.
· ವೃಕ್ಷಮಾತೆ ʻಸಾಲುಮರದ ತಿಮ್ಮಕ್ಕʼ ರವರ ಸ್ಮಾರಕ ನಿರ್ಮಾಣ.
ಕಂದಾಯ
· ಕರ್ನಾಟಕ ಲ್ಯಾಂಡ್ಸ್ಟಾಕ್ಯೋಜನೆಯಡಿ ಭೂಮಿ, ಮೋಜಿಣಿ, ಕಾವೇರಿ, ಇ-ಸ್ವತ್ತು ಇ-ಆಸ್ತಿಯಲ್ಲಿರುವ ಜಮೀನು/ಆಸ್ತಿಗಳ
ಜಿ.ಐ.ಎಸ್. ಆಧಾರಿತ ಡಿಜಿಟಲೀಕರಣ.
· 50 ಕೋಟಿ ರೂ. ವೆಚ್ಚದಲ್ಲಿ ಭೂಮಿ 8.0 ಸಾಫ್ಟ್ವೇರ್ಅಭಿವೃದ್ಧಿ.
· ಕಂದಾಯ ಇಲಾಖೆಯ 43 ಸೇವೆಗಳನ್ನು ʻಕುಟುಂಬ', ʻಫ್ರೂಟ್ಸ್' ಮತ್ತು ʻಭೂಮಿ' ದತ್ತಾಂಶಗಳನ್ನು ಸಂಯೋಜಿಸಿ, ನಿರ್ಣಯನೆರವು ವ್ಯವಸ್ಥೆ (Decision Support System) ಸೌಲಭ್ಯ.
· ಭೂ-ವ್ಯಾಜ್ಯಗಳ ಇತ್ಯರ್ಥಕ್ಕಾಗಿ KAT ಮತ್ತು ಕರ್ನಾಟಕ
ಭೂ-ಕಬಳಿಕೆ ವಿಶೇಷ ನ್ಯಾಯಾಲಯಗಳ ಕಲಾಪಗಳನ್ನು live streaming ಮತ್ತು ವಿಡಿಯೋ ಕಾನ್ಫರೆನ್ಸ್ಸೌಲಭ್ಯ.
· ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗಳಲ್ಲಿ
72 ಕೋಟಿ ರೂ. ವೆಚ್ಚದಲ್ಲಿ ನವೀಕೃತ ಅಭಿಲೇಖಾಲಯಗಳ ಸ್ಥಾಪನೆ.
· ಟಿಪ್ಪಣಿಗಳು, ಎಫ್.ಎಂ.ಬಿ.ಗಳು ಮತ್ತು ಅಟ್ಲಾಸ್ ಗಳನ್ನು AutoCAD ಮತ್ತು ಸರ್ವರ್ಗಳನ್ನು ಖರೀದಿಸಿ GIS ತಂತ್ರಾಂಶದ ಮೂಲಕ ಗಣಕೀಕರಣ.
· ಡಿಜಿಟಲ್ ಇ-ಸ್ಟ್ಯಾಂಪಿಂಗ್ ಮತ್ತು ಸಂಪೂರ್ಣ ಕಾಗದರಹಿತ ನೋಂದಣಿಗಾಗಿ (End to End Paperless Registration)
ನವೀನ ಫ್ಲಾಟ್ಫಾರ್ಮ್ಅಭಿವೃದ್ಧಿ.
· 207 ಉಪ-ನೋಂದಣಿ ಕಛೇರಿಗಳ ಲೆಗಸಿ ದಾಖಲೆಗಳ ಡಿಜಿಟಲೀಕರಣ.
· 65 ಕೋಟಿ ರೂ.ಗಳ ವೆಚ್ಚದಲ್ಲಿ ಕಾವೇರಿ 3.0 ತಂತ್ರಾಂಶದ ಅಭಿವೃದ್ಧಿ ಮೂಲಕ ಕಾಗದರಹಿತ ನೋಂದಣಿ ಪ್ರಕ್ರಿಯೆಗೆ ಚಾಲನೆ.
· ಜಿಲ್ಲೆಗೆ ಒಂದು ಉಪ ನೋಂದಣಿ ಕಛೇರಿ “ನೋಂದಣಿ ಖಾತರಿ ಕೇಂದ್ರವಾಗಿ” ನವೀಕರಣ. ಪಾಸ್ಪೋರ್ಟ್ಸೇವಾ ಕೇಂದ್ರಗಳ ಮಾದರಿಯಲ್ಲಿ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಐದು
ವಿಶ್ವದರ್ಜೆಯ ಬೃಹತ್ಉಪ ನೋಂದಣಿ ಕೇಂದ್ರಗಳ ಪ್ರಾರಂಭ.
· ವಿಶ್ವಬ್ಯಾಂಕ್ನೆರವಿನಿಂದ ಒಟ್ಟು 5,000 ಕೋಟಿ ರೂ. ವೆಚ್ಚದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಮತ್ತು ವಿಪತ್ತು ನಿರ್ವಹಣೆ ಕಾಮಗಾರಿ.
· ವಿಪತ್ತು ಪರಿಹಾರ ಅನುದಾನಗಳಲ್ಲಿ ರಾಜ್ಯದ ಪಾಲು 16ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.4.12ಕ್ಕೆ ಹೆಚ್ಚಳ. ಪ್ರಸ್ತುತ ಸಾಲಿನಲ್ಲಿ ವಿಪತ್ತು ಪರಿಹಾರ ಕಾರ್ಯಗಳಿಗೆ 1,162 ಕೋಟಿ ರೂ.
· ಬೈಲಹೊಂಗಲ ಮತ್ತು ಸಿರಗುಪ್ಪದಲ್ಲಿ ಪ್ರಜಾಸೌಧ ನಿರ್ಮಾಣ.
ಮುಜರಾಯಿ
· ಶ್ರೀ ಮಾತಾ ವೈಷ್ಣೋದೇವಿ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನ.
· ಇಲಾಖೆಯ ದೇವಾಲಯಗಳಿಗೆ ಒಳಪಟ್ಟಿರುವ 259 ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸಲು ‘ಜಲ ನಿಧಿ ಕಲ್ಯಾಣಿಗಳ ಪುನಃಶ್ಚೇತನ ಯೋಜನೆ’.
· ʻಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯʼ ಮತ್ತು ʻಕೊಲ್ಲೂರು
ಶ್ರೀ ಮೂಕಾಂಬಿಕಾ ದೇವಾಲಯʼಗಳಿಗೆ ಅಭಿವೃದ್ಧಿ ಪ್ರಾಧಿಕಾರಗಳ ರಚನೆ.
· ವಾರಣಾಸಿಯಲ್ಲಿ ಹೊಸ ಛತ್ರ ನಿರ್ಮಾಣ, ಶ್ರೀಶೈಲಂನಲ್ಲಿ ಹೊಸ ಯಾತ್ರಿನಿವಾಸ ನಿರ್ಮಾಣ, ತುಳಜಾಪುರದಲ್ಲಿ ಹೊಸ ಛತ್ರ ನಿರ್ಮಾಣ ಮತ್ತು ಮಂತ್ರಾಲಯದ ಶಿಥಿಲಗೊಂಡ ಛತ್ರದ ನವೀಕರಣ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ
· ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಶಿಫಾರಸ್ಸುಗಳ ಅನುಷ್ಠಾನಕ್ಕೆ ಕ್ರಮ.
· ಎಲ್ಲಾ ಅಂಗನವಾಡಿಗಳು, ಶಾಲಾ-ಕಾಲೇಜುಗಳು ಹಾಗೂ
ವಸತಿ ನಿಲಯಗಳಲ್ಲಿ AI ಆಧಾರಿತ Facial Recognition ಹಾಜರಾತಿ ವ್ಯವಸ್ಥೆಯ ಜಾರಿ.
ಇ-ಆಡಳಿತ
· ಸರ್ಕಾರದ ಯೋಜನೆಗಳ ನಿರ್ವಹಣೆಗಾಗಿ ದತ್ತಾಂಶ ವಿಶ್ಲೇಷಣಾ ಕೋಶದ ಸ್ಥಾಪನೆ.
· 10 ಕೋಟಿ ರೂ.ಗಳ ವೆಚ್ಚದಲ್ಲಿ 50 ಸರ್ಕಾರಿ ಕಾಲೇಜುಗಳಲ್ಲಿ ಆಧುನಿಕ AI ಪ್ರಯೋಗಾಲಯಗಳ ಪ್ರಾರಂಭ.
ಖಜಾನೆ ಇಲಾಖೆ
· 50 ಕ್ಕೂ ಹೆಚ್ಚು ಸಾರ್ವಜನಿಕ ಉದ್ದಿಮೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಹಣಕಾಸು ಮೇಲ್ವಿಚಾರಣೆಯನ್ನು ನಿರ್ವಹಿಸಲು
ರಾಜ್ಯ PFMS ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ.
· ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರ ವೇತನ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಬಗೆಹರಿಸಲಾಗುವುದು.
· ಪಿಂಚಣಿ ದಾಖಲೆಗಳ ಡಿಜಿಟಲ್ ಸಲ್ಲಿಕೆ ಮತ್ತು ಟ್ರ್ಯಾಕಿಂಗ್
ಸೌಲಭ್ಯ ಒದಗಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
· ಚಿತ್ರೀಕರಣಗಳಿಗೆ ಅಗತ್ಯವಿರುವ ಅನುಮತಿಗಳನ್ನು ನೀಡಲು
ʻಸಿನಿ ಮಿತ್ರ’ ಎಂಬ ಡಿಜಿಟಲ್ ಏಕಗವಾಕ್ಷಿ ವ್ಯವಸ್ಥೆ.
· ಚಿತ್ರೀಕರಣ ಸ್ಥಳಗಳ ಮಾಹಿತಿಗಾಗಿ ʻಕರ್ನಾಟಕ ಫಿಲ್ಮ್ಲೊಕೇಷನ್ಡಿಜಿಟಲ್ಮ್ಯಾಪ್ʼ ಅಭಿವೃದ್ಧಿ.
· ಗುಣಾತ್ಮಕ ಚಲನಚಿತ್ರಗಳಿಗೆ ಸಹಾಯಧನ ನೀಡಲು 20 ಕೋಟಿ ರೂ.
· ಗಾಂಧಿ ಭವನಗಳ ಪುನಶ್ಚೇತನಕ್ಕೆ ʻಮಹಾತ್ಮಾ ಗಾಂಧಿ ಜನ ಶಿಕ್ಷಣ ಕೇಂದ್ರʼ ಯೋಜನೆ.
· ಇಲಾಖೆಯಲ್ಲಿನ ಛಾಯಾಚಿತ್ರಗಳು ಹಾಗೂ ವಿಡಿಯೋ ಡಾಕ್ಯುಮೆಂಟರಿಗಳನ್ನು ಡಿಜಿಟಲ್ಮಾದರಿಗೆ ಪರಿವರ್ತಿಸಲು
ʻಡಿಜಿಟಲ್ದೃಶ್ಯ ಕರ್ನಾಟಕ ವೇದಿಕೆʼ ಪ್ರಾರಂಭ.
· ಮೈಸೂರಿನ ಫಿಲ್ಮ್ಸಿಟಿಯಲ್ಲಿ ಪ್ರವಾಸಿಗರ ಅನುಕೂಲಕ್ಕೆ ಥೀಮ್ಪಾರ್ಕ್, ಸ್ಟಾರ್ಹೊಟೇಲ್ಮತ್ತು ರೆಸ್ಟೋರೆಂಟ್ಗಳನ್ನು
PPP ಮಾದರಿಯಲ್ಲಿ ನಿರ್ಮಿಸಲು ವ್ಯಾವಹಾರಿಕ ಸಲಹೆಗಾರರ ನೇಮಕ.
· ದಿವಂಗತ ಪುಟ್ಟಣ್ಣ ಕಣಗಾಲ್ರವರ ನಿವಾಸವನ್ನು
ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು.
· ಮಹಾತ್ಮ ಗಾಂಧೀಜಿರವರು ಭೇಟಿ ಕೊಟ್ಟ ಸ್ಥಳಗಳಲ್ಲಿ ಗಾಂಧಿ ಸ್ಮಾರಕ ಸ್ತಂಭಗಳ ನಿರ್ಮಾಣ.
ಒಳಾಡಳಿತ
· ಗೃಹ ಇಲಾಖೆಯಲ್ಲಿ ಖಾಲಿ ಇರುವ 8,000 ಹುದ್ದೆಗಳ
ನೇರ ನೇಮಕಾತಿ.
· ಗೃಹ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿಗೆ ಪೊಲೀಸ್ಮತ್ತು ಪೊಲೀಸ್ ಸಹಾಯಕ ಸೇವೆಗಳ ನೇಮಕಾತಿ ಮಂಡಳಿ ಸ್ಥಾಪನೆ.
· ಪೊಲೀಸ್ ಗೃಹ 2025 ಯೋಜನೆಯಡಿ 250 ಕೋಟಿ ರೂ.ಗಳ ವೆಚ್ಚದಲ್ಲಿ ವಸತಿಗೃಹಗಳ ನಿರ್ಮಾಣ.
· ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನದ ಬಂದೋಬಸ್ತ್ಗೆ ಆಗಮಿಸುವ 1,000 ಸಿಬ್ಬಂದಿಗೆ ಶಾಶ್ವತ ಬ್ಯಾರಕ್ನಿರ್ಮಾಣಕ್ಕೆ
20 ಕೋಟಿ ರೂ.
· 12 ನೂತನ ಪೊಲೀಸ್ಠಾಣೆಗಳ ಸ್ಥಾಪನೆ. 10 ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ 30 ಕೋಟಿ ರೂ.
· ಗೃಹ ಇಲಾಖೆಯಲ್ಲಿ ಚಲನಶೀಲತೆ ಹೆಚ್ಚಿಸಲು ಹೊಸ ವಾಹನಗಳಿಗೆ 75 ಕೋಟಿ ರೂ.
· ಕೇಂದ್ರ ಪುರಸ್ಕೃತ ಪೊಲೀಸ್ ಆಧುನೀಕರಣ ಯೋಜನೆಯಡಿ
354 ಕೋಟಿ ರೂ.ಗಳ ಕ್ರಿಯಾಯೋಜನೆ. ರಾಜ್ಯದ ಪಾಲು
142 ಕೋಟಿ ರೂ.
· ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಘಟಕ ಬಲವರ್ಧನೆಗೆ 10 ಕೋಟಿ ರೂ.
· ವಿವಿಧ ಸಂಚಾರ ನಿರ್ವಹಣೆ ಸಂಸ್ಥೆಗಳ ದತ್ತಾಂಶ ಸಂಗ್ರಹಣೆ, ವಿಶ್ಲೇಷಣೆಗೆ ಸಂಯೋಜಿತ ಡಿಜಿಟಲ್ ವೇದಿಕೆ ರೂಪಿಸಲು
25 ಕೋಟಿ ರೂ.
· ಬೆಂಗಳೂರಿನಲ್ಲಿ ನಗರ ಪೊಲೀಸಿಂಗ್ ನಾವೀನ್ಯತೆ ಸಂಸ್ಥೆ ಸ್ಥಾಪನೆ.
· ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನೀಡಲಾಗುವ ಕ್ಲಿಯರೆನ್ಸ್ನವೀಕರಣ ಪ್ರಮಾಣ ಪತ್ರ ಮತ್ತು ಸಮಾಪನ ಪತ್ರದ ನವೀಕರಣ ಅವಧಿ 2 ರಿಂದ 5 ವರ್ಷಗಳಿಗೆ ಹೆಚ್ಚಳ.
· K-SAFE-2 ಯೋಜನೆಯಡಿ ನಿರ್ಮಾಣ ಕಾಮಗಾರಿಗಳು, ವಾಹನಗಳು, ಅತ್ಯಾಧುನಿಕ ಅಗ್ನಿಶಮನ ಮತ್ತು ರಕ್ಷಣಾ ಉಪಕರಣಗಳಿಗೆ 50 ಕೋಟಿ ರೂ.
· ಅಗ್ನಿಶಾಮಕ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯವರ
ಆಹಾರ ಭತ್ಯೆ 150 ರೂ.ಗಳಿಂದ 300 ರೂ.ಗಳಿಗೆ ಹೆಚ್ಚಳ.
· ಮಂಗಳೂರು ಕೇಂದ್ರ ಕಾರಾಗೃಹದ ಎರಡನೇ ಹಂತದ ಕಾಮಗಾರಿ, ರಾಯಚೂರು ಜಿಲ್ಲಾ ಕೇಂದ್ರ ಕಾರಾಗೃಹಗಳ ನಿರ್ಮಾಣ.
· ʻಆಪರೇಷನ್ಪರಿಶುದ್ಧೀಕರಣʼ ದಡಿಯಲ್ಲಿ ಕಾರಾಗೃಹಗಳಲ್ಲಿ ಮೊಬೈಲ್, ಗಾಂಜಾ ಹಾಗೂ ಇನ್ನಿತರ ನಿಷೇಧಿತ ವಸ್ತುಗಳ ಬಳಕೆ, ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು 20 ಕೋಟಿ ರೂ.
· ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ʻಮಾದಕ ದ್ರವ್ಯ
ವ್ಯಸನಮುಕ್ತ ಕೇಂದ್ರʼ.
ಸಾರಿಗೆ
· ಶಕ್ತಿ ಯೋಜನೆಯಡಿ ಇದುವರೆಗೆ 684 ಕೋಟಿ ಟ್ರಿಪ್ಗಳಲ್ಲಿ ಮಹಿಳಾ ಫಲಾನುಭವಿಗಳ ಪ್ರಯಾಣ. ಈ ಯೋಜನೆಯ ಅನುಷ್ಠಾನಕ್ಕಾಗಿ 5,300 ಕೋಟಿ ರೂ.
· ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನ ಬಾಕಿ ಪಾವತಿಗಾಗಿ 1,271 ಕೋಟಿ ರೂ.
· ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ 1,000 ಡೀಸೆಲ್ ಬಸ್ಸುಗಳನ್ನು ಒದಗಿಸುವುದು.
· ವಿಶ್ವಬ್ಯಾಂಕ್ನೆರವಿನ 2,000 ಕೋಟಿ ರೂ.ಗಳ Karnataka Electric Bus Program (KEBP) ಯೋಜನೆ ಅನುಷ್ಠಾನ.
BMTC ಸಂಸ್ಥೆಯ 32, ಇತರೆ ಸಂಸ್ಥೆಗಳ 62 ಎಲೆಕ್ಟ್ರಿಕ್ಬಸ್ಡಿಪೋಗಳ ಅಭಿವೃದ್ಧಿ. 4,000 ವಿದ್ಯುತ್ಚಾಲಿತ ಬಸ್ಸುಗಳ ಪೂರೈಕೆ.
· ಅಪಘಾತ ಸ್ಥಳಗಳನ್ನು ಗುರುತಿಸಲು ಮತ್ತು ನಿರ್ವಹಿಸಲು
ಐ.ಐ.ಟಿ. ಮದ್ರಾಸ್ಮತ್ತು ಎನ್.ಐ.ಸಿ.ರವರಿಂದ ಡ್ಯಾಶ್ಬೋರ್ಡ್ಒಳಗೊಂಡ ಆಧುನಿಕ ತಂತ್ರಾಂಶ ಅಭಿವೃದ್ಧಿಗೆ ಐದು ಕೋಟಿ ರೂ.
· 25 ಆರ್.ಟಿ.ಒ. ಕಛೇರಿ, ಡ್ರೈವಿಂಗ್ಟ್ರ್ಯಾಕ್ಹಾಗೂ ಆಟೋಮೇಟೆಡ್ಟೆಸ್ಟಿಂಗ್ಸ್ಟೇಷನ್ಕಟ್ಟಡಗಳ ಮೇಲ್ಛಾವಣಿಯಲ್ಲಿ Roof Top Solar ಅಳವಡಿಕೆಗೆ 10 ಕೋಟಿ ರೂ.
· ತುಮಕೂರಿನಲ್ಲಿ ಸೀಜಿಂಗ್ ಯಾರ್ಡ್ನಿರ್ಮಾಣಕ್ಕೆ 5 ಕೋಟಿ ರೂ.
· ಚಿಕ್ಕಮಗಳೂರು ಹಾಗೂ ತುಮಕೂರಿನಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಾಣಕ್ಕೆ 12 ಕೋಟಿ ರೂ.
· ರಾಮದುರ್ಗ, ಹೊನ್ನಾಳಿ ಮತ್ತು ಗದಗದಲ್ಲಿ ನೂತನ ಬಸ್ನಿಲ್ದಾಣ ಹಾಗೂ ತರೀಕೆರೆಯಲ್ಲಿ ಬಸ್ಡಿಪೋ ನಿರ್ಮಾಣ.
ಕಾನೂನು
· ಕೋರ್ಟ್ಕಟ್ಟಡ ಮತ್ತು ನ್ಯಾಯಾಧೀಶರ ವಸತಿ ಗೃಹ ನಿರ್ಮಾಣಕ್ಕೆ 175 ಕೋಟಿ ರೂ.
· ರಾಮನಗರದಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣ.
· 10 ಕೋಟಿ ರೂ.ಗಳ ವೆಚ್ಚದಲ್ಲಿ ಬೆಂಗಳೂರು, ಧಾರವಾಡ, ಕಲಬುರಗಿ ಮತ್ತು ಮೈಸೂರು ನಗರಗಳಲ್ಲಿ ಇ-ಕೋರ್ಟ್ಪ್ರಾರಂಭ.
· 5 ಕೋಟಿ ರೂ.ಗಳ ವೆಚ್ಚದಲ್ಲಿ ಅಡ್ವೋಕೇಟ್ಜನರಲ್ರವರ ಕಛೇರಿಯ ಮೂಲಸೌಕರ್ಯದ ಉನ್ನತೀಕರಣ.
· ಕನ್ನಡದಲ್ಲಿಯೇ ಎಲ್ಲಾ ಕಾನೂನುಗಳ ರಚನೆ ಮತ್ತು ಕೇಂದ್ರದ ಎಲ್ಲಾ ಕಾನೂನುಗಳ ಕನ್ನಡ ಭಾಷಾಂತರ.
ತೆರಿಗೆ ಪ್ರಸ್ತಾವನೆಗಳು
ವಾಣಿಜ್ಯ ತೆರಿಗೆ
· ದ್ರವೀಕೃತ ನೈಸರ್ಗಿಕ ಅನಿಲ (LNG) ಮೇಲಿನ ಕರ್ನಾಟಕ ಮಾರಾಟ ತೆರಿಗೆಯನ್ನು 14.34% ರಿಂದ 5%ಕ್ಕೆ ಇಳಿಕೆ.
· 2026-27ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಗೆ
1,25,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿ ನಿಗದಿ.
ಅಬಕಾರಿ
· ಅಬಕಾರಿ ಉಪ ಅಧೀಕ್ಷಕರು ಮತ್ತು ಅಬಕಾರಿ ಅಧೀಕ್ಷಕರುಗಳ ವರ್ಗಾವಣೆಯನ್ನು ಡಿಜಿಟಲ್ ಕೌನ್ಸಿಲಿಂಗ್ ಮಾಡಲು ಕ್ರಮ.
· ವಿವಿಧ ಸನ್ನದುಗಳ ಮಾನ್ಯತೆ ಒಂದು ವರ್ಷದಿಂದ
ಐದು ವರ್ಷಗಳಿಗೆ ವಿಸ್ತರಣೆ.
· ಪಾನೀಯಗಳಲ್ಲಿ ಇರುವ ಮದ್ಯದ ಅಂಶವನ್ನು
(Alcohol-in-Beverage – AIB) ಆಧಾರಿಸಿ ಅಬಕಾರಿ ಸುಂಕ ವ್ಯವಸ್ಥೆ ಏಪ್ರಿಲ್ 2026ರಿಂದ ಜಾರಿ.
· ಅಬಕಾರಿ ಸುಂಕವು ಏಕರೂಪವಾಗಿರಲಿದ್ದು, ಹೆಚ್ಚುವರಿ ಅಬಕಾರಿ ಸುಂಕವನ್ನು ex-factory ದರ ಪಟ್ಟಿಗಳ ಆಧಾರದ ಮೇಲೆ ವಿಧಿಸಲಾಗುವುದು.
· ಸರ್ಕಾರದಿಂದ ಮದ್ಯದ ಬೆಲೆ ನಿರ್ಧರವಾಗುವುದನ್ನು ಮುಕ್ತಗೊಳಿಸಲಾಗುವುದು.
· ದರ ನಿಗದಿ ಸ್ಲ್ಯಾಬ್ಗಳನ್ನು 16 ರಿಂದ 8 ಸ್ಲ್ಯಾಬ್ಗಳಿಗೆ ಇಳಿಕೆ.
· ತೆರಿಗೆ ಸೋರಿಕೆಯನ್ನು ತಡೆಯಲು ಬ್ಲಾಕ್ಚೈನ್ ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆ ಜಾರಿ.
· 2026-27ನೇ ಸಾಲಿಗೆ ಅಬಕಾರಿ ಇಲಾಖೆಗೆ 45,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿ ನಿಗದಿ.
ನೋಂದಣಿ ಮತ್ತು ಮುದ್ರಾಂಕ
· 2026-27ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಶುಲ್ಕದಿಂದ 29,000 ಕೋಟಿ ರೂ.ಗಳ ರಾಜಸ್ವ ಗುರಿ ಸಂಗ್ರಹಣೆ ನಿಗದಿ.
ಸಾರಿಗೆ
· 2026-27ನೇ ಸಾಲಿಗೆ ಮೋಟಾರು ವಾಹನ ತೆರಿಗೆಯಿಂದ
15,500 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿ ನಿಗದಿ.
ಗಣಿ ಮತ್ತು ಭೂವಿಜ್ಞಾನ
· 2026-27ನೇ ಸಾಲಿಗೆ ಖನಿಜ ಗಣಿಗಾರಿಕೆ ಮೇಲೆ ವಿಧಿಸುವ ತೆರಿಗೆಯಿಂದ 3,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ
ಗುರಿ ನಿಗದಿ.
· 2026-27ನೇ ಸಾಲಿಗೆ ಗಣಿಗಾರಿಕೆಯಿಂದ ಸ್ವೀಕೃತವಾಗುವ ಸ್ವಾಮ್ಯ ಶುಲ್ಕದಿಂದ 11,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿ ನಿಗದಿ.
ಬಜೆಟ್ ಪೂರ್ಣ ಪಾಠ
ಸನ್ಮಾನ್ಯ ಸಭಾಧ್ಯಕ್ಷರೇ,
1. 2026-27ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸಲು ನನಗೆ ಸಂತೋಷವಾಗುತ್ತಿದೆ.
2. ಪ್ರಗತಿಶೀಲ ರಾಜ್ಯದ ಜನರ ತೆರಿಗೆ ಹಣಕ್ಕೆ ಪ್ರಮುಖ ಟ್ರಸ್ಟಿಯಾದ ನಾನು ಸರ್ವರ ಏಳಿಗೆಯನ್ನು ಬಯಸಿ 17ನೇ ಆಯವ್ಯಯವನ್ನು ಮಂಡಿಸುತ್ತಿದ್ದೇನೆ. ನಾಡಿನ ಏಳು ಕೋಟಿ ಕನ್ನಡಿಗರ ನಿರೀಕ್ಷೆಗಳನ್ನು ನಾವು ಅರಿತಿದ್ದೇವೆ, ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ. ಈ ಆಯವ್ಯಯವು ನಾಡಿನ ರೈತರ, ದಮನಿತರ, ಕಾರ್ಮಿಕರ, ಮಹಿಳೆಯರ, ಅಶಕ್ತರ, ಅಲ್ಪಸಂಖ್ಯಾತರ, ವಿದ್ಯಾರ್ಥಿ-ಯುವಜನರ, ವ್ಯಾಪಾರ ಮತ್ತು ಕೈಗಾರಿಕೋದ್ಯಮಗಳಲ್ಲಿ ತೊಡಗಿಕೊಂಡವರ ಕನಸುಗಳು ಮತ್ತು ಆತ್ಮವಿಶ್ವಾಸವನ್ನು ಪ್ರತಿಧ್ವನಿಸುವ ಜೀವಂತ ದಾಖಲೆಯಾಗಿದೆ.
ಧನಶೀಲ ಮನಶೀಲ ತನುಶೀಲ
ಸರ್ವಮಯ ದೃಕ್ಕಿಂಗೆ ಕಾಂಬುದೆಲ್ಲವು ಶೀಲ
ಇಂತೀ ವ್ರತಸಂಪದವೆಲ್ಲವೂ
ಅದಾರ ಕುರಿತು ಮಾಡುವ ನೇಮ
ಎಂಬುದ ತಾನರಿಯಬೇಕು
-ವಚನಕಾರ್ತಿ ಅಕ್ಕಮ್ಮ
3. ನಾವು ರೂಪಿಸುವ ಯೋಜನೆಗಳು, ವಿನಿಯೋಗಿಸುವ ಅನುದಾನಗಳು ಯಾರ ಏಳಿಗೆಯನ್ನು ಬಯಸುತ್ತವೆ, ಅವುಗಳು ಸದುದ್ದೇಶದಿಂದ ರೂಪುಗೊಂಡಿವೆಯೆ ಎಂಬುದನ್ನು ಅರಿತು ಮುನ್ನಡೆಯಬೇಕಾಗಿದೆ. ಜನಕೇಂದ್ರಿತ ಆರ್ಥಿಕ ತತ್ವಗಳ ಮೂಲಬಿಂದು ಇದೇ ಆಗಿದೆ. ಈ ವಿಚಾರದಲ್ಲಿ ನಾವು ಸ್ಪಷ್ಟವಾಗಿದ್ದೇವೆ. ʻಸರ್ವೋದಯವಾಗಲಿ ಸರ್ವರಲಿʼ ಎಂಬ ಕವಿವಾಣಿಯು ನಮ್ಮ ಸಮಗ್ರ ಅಭಿವೃದ್ಧಿಯ ದೀಕ್ಷೆಯೂ ಆಗಿದೆ.
4. ಕರ್ನಾಟಕವು ರಾಷ್ಟ್ರೀಯ, ಅಂತಾರಾಷ್ಟ್ರೀಯ ವಾಣಿಜ್ಯ ರಂಗದಲ್ಲಿ ಅದ್ವಿತೀಯ ಪಾತ್ರ ವಹಿಸುತ್ತಿದೆ. ಕೃತಕ ಬುದ್ಧಿಮತ್ತೆಯ (AI) ಕ್ರಾಂತಿಕಾರಕ ಬೆಳವಣಿಗೆಗಳಿಂದ ಜಾಗತಿಕ ಉತ್ಪಾದನಾ ವಿಧಾನಗಳು ದಿನ ದಿನಕ್ಕೂ ಬದಲಾಗುತ್ತಿವೆ. ವಿಜ್ಞಾನ-ತಂತ್ರಜ್ಞಾನಗಳಲ್ಲಿನ ಹೊಸತನಗಳು ರಾಜ್ಯದ ಸ್ಥಿತಿ-ಗತಿಗಳನ್ನು ನಿರ್ಧರಿಸುವ ನಿರ್ಣಾಯಕ ಸಂಗತಿಗಳಾಗಿವೆ. ಈ ಸಂದರ್ಭದಲ್ಲಿ ನಾವು ಬೆಂಕಿಯನ್ನು ಬೆಳಕಾಗಿಸಿಕೊಳ್ಳುವ ಸಂಕಲ್ಪ ಹೊತ್ತು ಮುನ್ನಡೆಯಬೇಕಾಗಿದೆ ಎಂಬ ಎಚ್ಚರದಿಂದಲೆ ಈ ಆಯವ್ಯಯವನ್ನು ಮಂಡಿಸುತ್ತಿದ್ದೇನೆ.
5. ರಾಷ್ಟ್ರದ ಅಭಿವೃದ್ಧಿಯ ಸರ್ವಕ್ಷೇತ್ರಗಳಲ್ಲೂ ನಮ್ಮ ರಾಜ್ಯವು ಮುಂಚೂಣಿಯಲ್ಲಿದೆ. ಅತಿ ಹೆಚ್ಚು ತೆರಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಿ ಕೊಡುವ ಪ್ರಮುಖ ರಾಜ್ಯವಾಗಿದೆ. ಹೆಚ್ಚು ಹಾಲು ಕೊಡುವ ಹಸು/ಎಮ್ಮೆಗಳಿಗೆ ಹೆಚ್ಚಿನ ಆರೈಕೆಯ ಅಗತ್ಯವೂ ಇರುತ್ತದೆ. ಅವು ಬಡವಾದರೆ ಗೋವಳಿಗನೂ ಸಂಕಷ್ಟಕ್ಕೆ ಸಿಲುಕುತ್ತಾನೆ ಎಂಬುದು ಭೀಷ್ಮನ ತತ್ವ. ಇದನ್ನು ಅರಿತು ಒಕ್ಕೂಟ ಸರ್ಕಾರವು ರಾಜ್ಯದ ಬೇಡಿಕೆಗಳ ಬಗ್ಗೆ ಸಂವೇದನಾಶೀಲತೆಯಿಂದ ವರ್ತಿಸಬೇಕೆಂದು ಆಗ್ರಹಿಸುತ್ತೇವೆ. ಭಾರತದಂಥ ವೈವಿಧ್ಯಮಯ ಸಂಸ್ಕೃತಿಗಳ ರಾಷ್ಟ್ರವು ಸಹಕಾರಿ ಒಕ್ಕೂಟ ವ್ಯವಸ್ಥೆಯಿಂದ ಮಾತ್ರವೇ ಅಭಿವೃದ್ಧಿ ಸಾಧಿಸಬಹುದಾಗಿದೆ.
6. 2023ರಲ್ಲಿ ನಾವು ಅಧಿಕಾರಕ್ಕೆ ಬಂದ ಕೂಡಲೆ ʻಸಾರ್ವತ್ರಿಕ ಮೂಲ ಆದಾಯʼ ಪರಿಕಲ್ಪನೆಗಳಾದ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ಸುಭದ್ರತೆ ಮತ್ತು ಸಾಮಾಜಿಕ ಸುಸ್ಥಿರತೆ ಒದಗಿಸುವುದಕ್ಕೆ ಆದ್ಯತೆ ನೀಡಿದೆವು. ಈ ಯೋಜನೆಗಳು ಇಂದು ಕೋಟ್ಯಾಂತರ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಸುಧಾರಿಸಿ, ಜನರ ಕೊಂಡುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿವೆ ಎಂದು ದೇಶ ವಿದೇಶಗಳ ಪ್ರಮುಖ ಅಧ್ಯಯನಗಳು ತೋರಿಸಿಕೊಡುತ್ತಿವೆ.
7. ಕಲ್ಯಾಣ ಯೋಜನೆಗಳ ಜೊತೆಗೆ ಹೆಚ್ಚಿನ ಬಂಡವಾಳ ಹೂಡಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ದೀರ್ಘಕಾಲೀನ ಆರ್ಥಿಕ ಪರಿವರ್ತನೆಗಳತ್ತಲೂ ಗಮನ ಹರಿಸಿದ್ದೇವೆ. ʻಮಾನವ ಅಭಿವೃದ್ಧಿಯಲ್ಲಿನ ಹೂಡಿಕೆಯನ್ನು ನಿರ್ಲಕ್ಷಿಸಿದ ಆರ್ಥಿಕ ಅಭಿವೃದ್ಧಿಯು ಅಸ್ಥಿರ ಮಾತ್ರವಲ್ಲ ಅನೈತಿಕವಾದುದು’ ಎಂಬ ಅಮರ್ತ್ಯ ಸೇನ್ ಅವರ ಪ್ರಮೇಯವನ್ನು ಅರಿತು ಜನಕಲ್ಯಾಣದ ಯೋಜನೆಗಳಿಗಾಗಿ ಹೂಡಿಕೆ ಮಾಡುತ್ತಿದ್ದೇವೆ.
8. ನಾವು ಕರ್ನಾಟಕದ್ದೇ ಆದ ಸಶಕ್ತ ಹಾಗೂ ಸುಸ್ಥಿರ ಅಭಿವೃದ್ಧಿ ಮಾದರಿಗಳನ್ನು ರೂಪಿಸುತ್ತಿದ್ದೇವೆ. ಅವುಗಳನ್ನು 11ಜಿ ಮಾದರಿ ಆರ್ಥಿಕತೆಗಳೆಂದು ವ್ಯಾಖ್ಯಾನಿಸಲಾಗುತ್ತಿದೆ.
i. ಗ್ಯಾರಂಟಿ ಎಕಾನಮಿ-ಕಲ್ಯಾಣ ಹಾಗೂ ಲಿಂಗ ಸಮಾನತೆಯ ಹಾದಿಯತ್ತ ಕರ್ನಾಟಕ
ii. ಗುಡ್ ಪಬ್ಲಿಕ್ ಎಜುಕೇಶನ್ಸರ್ವರ ಏಳಿಗೆ ಬಯಸುವ ಸಮರ್ಥ ಸಾರ್ವಜನಿಕ ಶಿಕ್ಷಣ
iii. ಗುಡ್ ಹೆಲ್ತ್ ಟು ಆಲ್ಸಮಗ್ರ ಆರೋಗ್ಯ - ಸದೃಢ ಕರ್ನಾಟಕ
iv. ಗ್ರಾಸ್ ರೂಟ್ ಎಕಾನಮಿ- ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಕಲ್ಯಾಣ ಕಾರ್ಯಕ್ರಮಗಳು
v. ಗುಡ್ ಗವರ್ನೆನ್ಸ್- ಜನಸ್ನೇಹಿ ಆಡಳಿತ
vi. ಗಿಗ್ ಎಕಾನಮಿ – ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳು
vii. ಜಿಯೋಗ್ರಾಫಿಕಲ್ ಈಕ್ವಾಲಿಟಿ- ಪ್ರಾದೇಶಿಕ ಅಸಮಾನತೆಯ ನಿವಾರಣೆ
viii. ಗ್ಲೋಬಲ್ ಟ್ರೇಡ್ ಎಕಾನಮಿ ಅಥವಾ ವ್ಯಾಪಾರ ಮತ್ತು ಕೈಗಾರಿಕಾಭಿವೃದ್ಧಿ
ix. ಗ್ಲೋಬ್ ಟ್ರೋಟಿಂಗ್ ಎಕಾನಮಿ- ಪ್ರವಾಸೋದ್ಯಮ ಆರ್ಥಿಕತೆ
x. ಗ್ರೀನ್ ಎಕಾನಮಿ- ನವೀಕರಿಸಬಹುದಾದ ಇಂಧನ ಸೇರಿದಂತೆ ಪರಿಸರ ಪೂರಕ ಆರ್ಥಿಕ ಚಟುವಟಿಕೆಗಳು
xi. ಗ್ರೋಯಿಂಗ್ ಅರ್ಬನ್ ಎಕಾನಮಿ- ನಗರ ಕೇಂದ್ರಿತ ಸುಸ್ಥಿರ ಆರ್ಥಿಕತೆ
9. ಈ ಆರ್ಥಿಕ ಪ್ರಮೇಯಗಳನ್ನು ಆಧಾರವಾಗಿಟ್ಟುಕೊಂಡು ನಾವು ನಾಡಿನ ಅಭಿವೃದ್ಧಿ ರಥವನ್ನು ಮುನ್ನಡೆಸುತ್ತಿದ್ದೇವೆ. ಈ ಪ್ರಮೇಯಗಳು ಹೇಗೆ ಕರ್ನಾಟಕದ್ದೇ ಆದ ಅಭಿವೃದ್ಧಿ ಮಾದರಿಯನ್ನು ವ್ಯಾಖ್ಯಾನಿಸುತ್ತವೆ ಎಂಬುದನ್ನು ಆಯವ್ಯಯದ ಇಲಾಖಾವಾರು ಖಂಡಿಕೆಗಳಲ್ಲಿ ಗಮನಿಸಬಹುದಾಗಿದೆ. ಕರ್ನಾಟಕದ 45ಕ್ಕೂ ಹೆಚ್ಚಿನ ಉತ್ಪನ್ನಗಳಿಗೆ ಜಿಐ ಮಾನ್ಯತೆಗಳು ದೊರೆತಿವೆ. ಈ ಮಾನ್ಯತೆಗಳು ನಮ್ಮ ಜನರ ಪಾರಂಪರಿಕ ಕ್ರಿಯಾಶೀಲತೆಗೆ ಸಾಕ್ಷಿಯಾಗಿದ್ದು ಹೊಸ ಉದ್ಯೋಗಗಳ ಸೃಜನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ.
10. ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಆದ್ಯತೆ ನೀಡಿದ್ದೇವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ. ಉದ್ಯೋಗ ನೇಮಕಾತಿಗಳಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಪರಿಗಣಿಸಿ ವಯೋಮಿತಿಯಲ್ಲಿ ಒಂದು ಬಾರಿಗೆ ಐದು ವರ್ಷಗಳ ಸಡಿಲಿಕೆ ನೀಡಿದ್ದೇವೆ.
11. ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಯಲ್ಲಿ ರಾಜ್ಯದ ರಸ್ತೆ, ಸೇತುವೆ, ಕಟ್ಟಡಗಳ ನಿರ್ಮಾಣಕ್ಕೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. ಇಲಾಖಾವಾರು ನೀಡುವ ಅನುದಾನಗಳನ್ನು ಹೊರತುಪಡಿಸಿ ಕಳೆದ ವರ್ಷ ರಸ್ತೆ ಮತ್ತು ಮೂಲಸೌಕರ್ಯಗಳ
ಅಭಿವೃದ್ಧಿಗಾಗಿ “ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ”ವನ್ನು ಜಾರಿಗೊಳಿಸಿ 8,600 ಕೋಟಿ ರೂ. ಗಳ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಇದರ 2ನೇ ಹಂತವಾಗಿ 2026-27ನೇ ಸಾಲಿನಲ್ಲಿ 4,000 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
12. ವಸತಿರಹಿತರಿಗೆ ಮನೆಗಳು, ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗಗಳನ್ನು ಕಲ್ಪಿಸಿಕೊಡಲು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇವೆ. ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ತಲ್ಲಣಗಳನ್ನು ನಿಭಾಯಿಸಲು ಸೂಕ್ತ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದೇವೆ.
13. ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಮತ್ತಷ್ಟು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಪ್ರೊ.ಎಂ.ಗೋವಿಂದರಾವ್ ಸಮಿತಿಯ ಶಿಫಾರಸ್ಸುಗಳಿಗೆ ತಾತ್ವಿಕ ಅನುಮೋದನೆ ನೀಡಲಾಗಿದೆ. ರಾಜ್ಯ ನೀತಿ ಮತ್ತು ಯೋಜನಾ ಆಯೋಗ, ಐದನೇ ಹಣಕಾಸು ಆಯೋಗ, ಆಡಳಿತ ಸುಧಾರಣಾ ಆಯೋಗಗಳ ಶಿಫಾರಸ್ಸುಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸಲು ಬದ್ಧರಾಗಿದ್ದೇವೆ.
14. ಕರ್ನಾಟಕದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಸ್ಟಾರ್ಟ್ಅಪ್, ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್ ಕ್ಷೇತ್ರಗಳಲ್ಲಿನ ಸಾಧನೆಗಳು ಜಾಗತಿಕ ಹೂಡಿಕೆ ಮತ್ತು ಪ್ರತಿಭೆಗಳನ್ನು ಸೆಳೆಯುತ್ತಿವೆ. ಬಿಯಾಂಡ್ ಬೆಂಗಳೂರು ಪರಿಕಲ್ಪನೆಯು ಹೆಚ್ಚಿನ ಬಂಡವಾಳವನ್ನು ಆಕರ್ಷಿಸುತ್ತಿದೆ. ರಾಜ್ಯವು ರೂಪಿಸಿರುವ ಹೊಸ ಕೈಗಾರಿಕಾ ನೀತಿಯಿಂದ ಹಂತ-2 ಮತ್ತು ಹಂತ-3 ನಗರಗಳಲ್ಲಿಯೂ ಅಭಿವೃದ್ಧಿ ಸಾಧ್ಯವಾಗಲಿದೆ.
15. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರವು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದರೂ, ಕೇಂದ್ರ ಸರ್ಕಾರವು ಒಕ್ಕೂಟ ತತ್ವದ ಸಾಂವಿಧಾನಿಕ ನಿಯಮಗಳನ್ನೂ ಪಾಲಿಸದೆ ರಾಜ್ಯಕ್ಕೆ ನಿರಂತರ ಅನ್ಯಾಯವೆಸಗುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ತನ್ನ ಪಾಲಿನ ಕಡಿತ, ಕೇಂದ್ರದ ಯೋಜನೆಗಳಲ್ಲಿ ತಾರತಮ್ಯ,
15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ, ಅದೇ ಆಯೋಗವು ಮಾಡಿದ್ದ ವಿಶೇಷ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಅನುಷ್ಠಾನ ಮಾಡದ ಕಾರಣ ಉಂಟಾದ ಆರ್ಥಿಕ ನಷ್ಟ ಮತ್ತು ಜಿಎಸ್ಟಿ ದರಗಳನ್ನು ತರ್ಕಬದ್ಧಗೊಳಿಸುವ ಅಕಾಲಿಕ ನಿರ್ಧಾರದಿಂದ ರಾಜ್ಯದ ಬೊಕ್ಕಸದ ಮೇಲೆ ಬಿದ್ದ ಹೆಚ್ಚುವರಿ ಹೊರೆ ಹಾಗೂ ಒತ್ತಡಗಳನ್ನು ನಿಭಾಯಿಸುವುದು ಸವಾಲಿನ ಕೆಲಸವಾಗಿದೆ.
16. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರವು ವ್ಯವಸ್ಥಿತವಾಗಿ ದುರ್ಬಲಗೊಳಿಸಿರುವುದರಿಂದ ಜನರ ಉದ್ಯೋಗದ ಹಕ್ಕುಗಳು ಮೊಟಕಾಗಲಿವೆ ಮತ್ತು ರಾಜ್ಯಗಳ ಆರ್ಥಿಕ ಹೊರೆ ಇನ್ನಷ್ಟು ಹೆಚ್ಚಲಿದೆ. ಈ ಕಾರಣಗಳಿಂದ ರಾಜ್ಯದ ಹಿತಾಸಕ್ತಿಗಾಗಿ ಪಕ್ಷಾತೀತವಾಗಿ ಎಲ್ಲರೂ ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲೇಬೇಕಾಗಿದೆ.
17. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸುವ ನಮ್ಮ ಸಂಕಲ್ಪವನ್ನು ಈ ಆಯವ್ಯಯ ದೃಢಪಡಿಸುತ್ತದೆ. ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ಆರ್ಥಿಕ ಬೆಳವಣಿಗೆಯೊಂದಿಗೆ ವಿತ್ತೀಯ ಶಿಸ್ತು ಪಾಲಿಸಲು ಸಾಧ್ಯವಾಗಿರುವುದು ನಮ್ಮ ಆಡಳಿತ ವಿಧಾನದ ಮಾದರಿಯಾಗಿದೆ.
18. ಈ ಆಯವ್ಯಯವು ನಾಡಿನ ಉಜ್ವಲ ಭವಿಷ್ಯವನ್ನು ಕಟ್ಟುವ ದೃಷ್ಟಿಯಿಂದ ರೂಪಿತವಾಗಿದೆ. ನಾಡಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸುವುದು ನಮ್ಮೆಲ್ಲರ ಹೊಣೆಯಾಗಿದೆ.
ʻʻನ್ಯಾಯವು ನಮ್ಮ ಪರವಾಗಿರುವಾಗ, ಈ ಹೋರಾಟದಲ್ಲಿ ನಾವು ಸೋಲಲು ಸಾಧ್ಯವೇ ಇಲ್ಲ. ಈ ಹೋರಾಟವು ನನಗೆ ಹರ್ಷದಾಯಕ ಸಂಗತಿಯಾಗಿದೆ. ಇದು ಪರಿಪೂರ್ಣ ಅರ್ಥದಲ್ಲಿ ಆಧ್ಯಾತ್ಮಿಕವಾದ ಹೋರಾಟವಾಗಿದೆ.ʼʼ
-ಡಾ|| ಬಿ.ಆರ್. ಅಂಬೇಡ್ಕರ್
ರಾಜ್ಯದ ಆರ್ಥಿಕತೆ
19. ರಾಜ್ಯದ ಜಿ.ಎಸ್.ಡಿ.ಪಿಯು, 2025–26ನೇ ಸಾಲಿನಲ್ಲಿ ಶೇ.8.1 ರಷ್ಟು ನೈಜ ಬೆಳವಣಿಗೆಯನ್ನು ದಾಖಲಿಸಿದ್ದು, ದೇಶದ ಜಿ.ಡಿ.ಪಿ ಬೆಳವಣಿಗೆ ಶೇ.7.4 ಕ್ಕಿಂತ ಹೆಚ್ಚಿಗೆ ಇರುತ್ತದೆ. ಆರ್ಥಿಕತೆಯಲ್ಲಿನ ಈ ಸದೃಢ ಬೆಳವಣಿಗೆಯು ರಾಜ್ಯದ ಎಲ್ಲಾ ವಲಯಗಳ ಸಮಗ್ರ ಬೆಳವಣಿಗೆಯಿಂದ ಸಾಧ್ಯವಾಗಿದೆ.
20. 2025–26ನೇ ಸಾಲಿನಲ್ಲಿ, ರಾಜ್ಯದ ಆರ್ಥಿಕತೆಯ ವಿವಿಧ ವಲಯಗಳಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ. ಉತ್ತಮ ಮುಂಗಾರಿನಿಂದಾಗಿ ಕೃಷಿ ಕ್ಷೇತ್ರದಲ್ಲಿ ಶೇ.9.1 ರಷ್ಟು, ಕೈಗಾರಿಕಾ ವಲಯದಲ್ಲಿ ಶೇ.6.7 ರಷ್ಟು ಹಾಗೂ ಸೇವಾ ವಲಯದಲ್ಲಿ
ಶೇ.8.1 ರಷ್ಟು ಬೆಳವಣಿಗೆ ದಾಖಲಿಸಿದೆ.
21. ಸರ್ಕಾರವು ಹೆಚ್ಚಿಸಿದ ಬಂಡವಾಳ ಹೂಡಿಕೆಯ ಜೊತೆಗೆ, ಖಾಸಗಿ ಹೂಡಿಕೆಯಲ್ಲಿನ ಹೆಚ್ಚಳವು ರಾಜ್ಯದ ಒಟ್ಟಾರೆ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಿದೆ. 2025–26ರ ಮೊದಲಾರ್ಧದಲ್ಲಿ, ರಾಜ್ಯಕ್ಕೆ
9.4 ಬಿಲಿಯನ್ ಅಮೇರಿಕನ್ ಡಾಲರ್ಗಳಷ್ಟು ವಿದೇಶಿ ಹೂಡಿಕೆಯಾಗಿರುತ್ತದೆ. ಇದು ದೇಶದ ಒಟ್ಟು ವಿದೇಶಿ ಒಳಹರಿವಿನ ಶೇ.26.7 ರಷ್ಟಿರುತ್ತದೆ ಹಾಗೂ ಕಳೆದ ವರ್ಷಕ್ಕಿಂತ 2.6 ಪಟ್ಟು ಹೆಚ್ಚಳವನ್ನು ದಾಖಲಿಸಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ, 2025–26ರ ಮೊದಲಾರ್ಧದಲ್ಲಿ ಮಹಾರಾಷ್ಟ್ರ, ಗುಜರಾತ್ ಮತ್ತು ದೆಹಲಿಯಂತಹ ಪ್ರಮುಖ ರಾಜ್ಯಗಳಲ್ಲಿ ವಿದೇಶಿ ಒಳಹರಿವು ಕಡಿಮೆಯಾದರೂ ನಮ್ಮ ರಾಜ್ಯಕ್ಕೆ ಹೆಚ್ಚಿನ ವಿದೇಶಿ ಹೂಡಿಕೆಯಾಗಿದೆ. ಕೈಗಾರಿಕಾ ನೀತಿ 2025–30 ಅನ್ನು ಜಾರಿಗೊಳಿಸುವುದರಿಂದ ಇನ್ನೂ ಹೆಚ್ಚು ಹೂಡಿಕೆಯನ್ನು ನಿರೀಕ್ಷಿಸಲಾಗಿದೆ.
22. ಭಾರತದಲ್ಲಿ ಜಾಗತಿಕವಾಗಿ ಸಮೀಕೃತವಾಗಿರುವ ರಾಜ್ಯ ಆರ್ಥಿಕತೆಗಳಲ್ಲಿ ಕರ್ನಾಟಕವು ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಐಟಿ ಸಂಬಂಧಿತ ಸೇವೆಗಳು, ಜೈವಿಕ ತಂತ್ರಜ್ಞಾನ, ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದ ಉತ್ಪಾದನೆ, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ವಿನ್ಯಾಸ, ಸ್ಟಾರ್ಟ್-ಅಪ್ ಮತ್ತು ಮುಂದುವರಿದ ಉತ್ಪಾದನೆಯಲ್ಲಿ ನಮ್ಮ ರಾಜ್ಯದ ನಾಯಕತ್ವವು ಭಾರತದ ರಫ್ತು ಕ್ಷೇತ್ರ ಮತ್ತು ವಿದೇಶಿ ನೇರ ಹೂಡಿಕೆಯ ಒಳಹರಿವುಗಳಿಗೆ ಪ್ರಮುಖ ಕೊಡುಗೆದಾರರನ್ನಾಗಿ ಮಾಡಿದೆ. ಆದರೆ, ವಿದೇಶಿ ವಿನಿಮಯಗಳಲ್ಲಿ ಇತ್ತೀಚಿಗೆ ಪ್ರಸ್ತಾಪಿಸಲಾಗಿರುವ ಸುಂಕ ಕ್ರಮಗಳು ಮತ್ತು ಅಮೇರಿಕ ಸೇರಿದಂತೆ ಇತರ ಪ್ರಮುಖ ದೇಶಗಳೊಂದಿಗೆ ವಾಣಿಜ್ಯ ಒಪ್ಪಂದವು ನಮ್ಮ ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀರಲಿದೆ.
23. ಕರ್ನಾಟಕದಂತಹ ಜಾಗತಿಕವಾಗಿ ಸಮೀಕೃತ ರಾಜ್ಯಗಳ ಹಿತಾಸಕ್ತಿಗಳನ್ನು ವ್ಯಾಪಾರ ನೀತಿ ರೂಪಿಸುವಲ್ಲಿ ಪರಿಗಣಿಸುವುದು ಅಷ್ಟೇ ಮುಖ್ಯವಾಗುತ್ತದೆ. ಸಹಕಾರಿ ಒಕ್ಕೂಟದ ನಿಜಾರ್ಥದಲ್ಲಿ, ಕೇಂದ್ರ ಮತ್ತು ರಾಜ್ಯಗಳ ನಡುವಿನ ಒಡನಾಟವು, ದೇಶದ ವಿದೇಶಿ ವ್ಯವಹಾರಗಳನ್ನು ಬಲಪಡಿಸುವುದರ ಜೊತೆಗೆ ಪ್ರಾದೇಶಿಕ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ದೇಶದ ಆರ್ಥಿಕ ಅಭಿವೃದ್ಧಿಗೆ ರಾಜ್ಯವು ಸದಾ ಸಕ್ರಿಯವಾಗಿ ಕೊಡುಗೆ ನೀಡುತ್ತಿದ್ದು, ಕೇಂದ್ರ ಸರ್ಕಾರದೊಂದಿಗೆ ಈ ಸಹಕಾರವನ್ನು ಮುಂದುವರೆಸಲಾಗುವುದು.
ರಾಜ್ಯದ ಹಣಕಾಸು ಪರಿಸ್ಥಿತಿ
24. ಕರ್ನಾಟಕವು ತನ್ನ ಸದೃಢ ವಿತ್ತೀಯ ನಿರ್ವಹಣೆ ಮತ್ತು ಸಂಪನ್ಮೂಲ ಕ್ರೋಢೀಕರಣ ಸಾಮರ್ಥ್ಯದೊಂದಿಗೆ ಮುಂದೆ ಸಾಗುತ್ತಿದೆ. ಆದಾಗ್ಯೂ, ಕೇಂದ್ರ ಸರ್ಕಾರವು ಜಾರಿಗೆ ತಂದ ತೆರಿಗೆ ನೀತಿ ಬದಲಾವಣೆಗಳಿಂದ ರಾಜ್ಯದ ರಾಜಸ್ವ ಸಂಗ್ರಹಣೆಗೆ ಸವಾಲುಗಳು ಎದುರಾಗಿವೆ. ಈ ಸವಾಲುಗಳ ನಡುವೆಯೂ, ನಮ್ಮ ಸರ್ಕಾರವು ಕೈಗೊಂಡ ಪರಿಣಾಮಕಾರಿ ಸಂಪನ್ಮೂಲ ಕ್ರೋಢೀಕರಣ ಕ್ರಮಗಳ ಫಲವಾಗಿ ರಾಜ್ಯದ ಸ್ವಂತ ರಾಜಸ್ವ ಸಂಗ್ರಹಣೆಯಲ್ಲಿ ಸ್ಥಿರತೆ ಸಾಧಿಸಲಾಗಿದೆ. 2024–25ರ ರಾಜಸ್ವ ಸಂಗ್ರಹಣೆಗೆ ಹೋಲಿಸಿದರೆ 2025–26ರ ಪರಿಷ್ಕೃತ ಅಂದಾಜುಗಳಲ್ಲಿ ರಾಜ್ಯದ ಸ್ವಂತ ರಾಜಸ್ವವು ಶೇ.8.3ರಷ್ಟು ಬೆಳವಣಿಗೆ ದಾಖಲಿಸಿದೆ.
25. ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ರಾಜ್ಯದ ತೆರಿಗೆ ಆದಾಯದ ಪ್ರಮುಖ ರಾಜಸ್ವವಾಗಿದೆ. ರಾಜ್ಯದ ಸ್ವಂತ ತೆರಿಗೆ ರಾಜಸ್ವದಲ್ಲಿ ಜಿ.ಎಸ್.ಟಿ ರಾಜಸ್ವವು ಶೇ.43 ರಷ್ಟು ಪಾಲು ಹೊಂದಿದೆ. ಜಿ.ಎಸ್.ಟಿ ರಾಜಸ್ವ ಸಂಗ್ರಹಣೆಯಲ್ಲಿ ಕರ್ನಾಟಕವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ.
26. ಕೇಂದ್ರ ಸರ್ಕಾರವು ಆರ್ಥಿಕ ವರ್ಷದ ಮಧ್ಯದಲ್ಲಿ ಅನಿರೀಕ್ಷಿತವಾಗಿ ಜಿ.ಎಸ್.ಟಿ ದರ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯದ ರಾಜಸ್ವ ಸಂಗ್ರಹಣೆಯು ಮತ್ತಷ್ಟು ಇಳಿಕೆಯಾಗಿದೆ. 2025-26ನೇ ಸಾಲಿನಲ್ಲಿ ಜಿ.ಎಸ್.ಟಿ ತರ್ಕಬದ್ಧಗೊಳಿಸುವಿಕೆಗೂ ಮುನ್ನ, ರಾಜ್ಯದ ಸರಾಸರಿ ಮಾಸಿಕ ಜಿ.ಎಸ್.ಟಿ ರಾಜಸ್ವ (ನಿವ್ವಳ ಮರುಪಾವತಿ) ಸಂಗ್ರಹಣೆಯು ಶೇ.10 ರಷ್ಟು ಬೆಳವಣಿಗೆಯನ್ನು ದಾಖಲಿಸಿತ್ತು. ಆದರೆ ದರ ತರ್ಕಬದ್ಧಗೊಳಿಸುವಿಕೆಯ ನಂತರ, ಜಿ.ಎಸ್.ಟಿ ಸಂಗ್ರಹಣೆಯ ಮಾಸಿಕ ಬೆಳವಣಿಗೆಯು ಶೇ.4 ಕ್ಕೆ ಕಡಿಮೆಯಾಗಿದೆ. ಪ್ರಸ್ತಾವಿತ ದರ ಪರಿಷ್ಕರಣೆಯಿಂದ ಪ್ರಸಕ್ತ ಸಾಲಿಗೆ ರಾಜ್ಯದ ಜಿ.ಎಸ್.ಟಿ ಸಂಗ್ರಹಣೆಯು ಅಂದಾಜು 10,000 ಕೋಟಿ ರೂ.ಗಳ ಕೊರತೆ ಉಂಟಾಗಿದೆ. ಮುಂದಿನ ವರ್ಷದಲ್ಲಿ 15,000 ಕೋಟಿ ರೂ.ಗಳ ರಾಜಸ್ವ ಕೊರತೆಯನ್ನು ಅಂದಾಜಿಸಲಾಗಿದೆ.
27. ರಾಷ್ಟ್ರೀಯ ಮಟ್ಟದಲ್ಲಿಯೂ ಸಹ, ಜಿ.ಎಸ್.ಟಿ ರಾಜಸ್ವ ಸಂಗ್ರಹಣೆಯು ನಿರಾಶಾದಾಯಕವಾಗಿದೆ. 2025–26ನೇ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಅಂದಾಜುಗಳಿಗೆ ಹೋಲಿಸಿದರೆ, ಪರಿಷ್ಕೃತ ಅಂದಾಜುಗಳಲ್ಲಿ ಜಿ.ಎಸ್.ಟಿ ಸಂಗ್ರಹಣೆಯು ಶೇ.11 ರಷ್ಟು ಇಳಿಕೆಯಾಗಿದೆ ಹಾಗೂ 2026–27ರ ಆಯವ್ಯಯ ಅಂದಾಜುಗಳಲ್ಲಿ ಶೇ.13.4 ರಷ್ಟು ಇಳಿಕೆಯಾಗಿದೆ. ಇದನ್ನು
2024-25ರ ವಾಸ್ತವ ಸಂಗ್ರಹಣೆಗಿಂತಲೂ ಕಡಿಮೆಯಾಗಿದೆ. ದೇಶದ ಜಿ.ಎಸ್.ಟಿ ಸಂಗ್ರಹಣೆಯು ಪ್ರಸಕ್ತ ಸಾಲಿನಲ್ಲಿ 1.3 ಲಕ್ಷ ಕೋಟಿ ರೂ.ಗಳು ಮತ್ತು ಮುಂದಿನ ವರ್ಷದಲ್ಲಿ 2 ಲಕ್ಷ ಕೋಟಿ ರೂ.ಗಳು ಕೊರತೆಯಾಗಲಿದೆ. ಇದರ ಪರಿಣಾಮವಾಗಿ ರಾಜ್ಯಗಳಿಗೆ ನೀಡುವ ತೆರಿಗೆ ಹಂಚಿಕೆಯೂ ಕಡಿಮೆಯಾಗಲಿದೆ.
28. ಜಿ.ಎಸ್.ಟಿ ಸಂಗ್ರಹಣೆಯಲ್ಲಿನ ಕುಸಿತದಿಂದ ರಾಜ್ಯಗಳಲ್ಲಿ ಹೆಚ್ಚಿನ ಹಣಕಾಸು ಒತ್ತಡ ಉಂಟಾಗಿದೆ. ತೆರಿಗೆ ರಚನೆಯಲ್ಲಿನ ಬದಲಾವಣೆ ಮತ್ತು ಜಿ.ಎಸ್.ಟಿ ದರ ತರ್ಕಬದ್ಧಗೊಳಿಸುವಿಕೆಯು ಕೇಂದ್ರ ಸರ್ಕಾರಕ್ಕಿಂತ ಹೆಚ್ಚಾಗಿ ರಾಜ್ಯಗಳ ರಾಜಸ್ವ ಸಂಗ್ರಹಣೆಯ ಮೇಲೆ ನೇರವಾಗಿ ಪ್ರಭಾವ ಬೀರಿದೆ. ರಾಜ್ಯಗಳು ರಾಜಸ್ವ ನಷ್ಟವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಮಾದಕ ವಸ್ತುಗಳು ಮತ್ತು ಐಶಾರಾಮಿ ವಸ್ತುಗಳ ಮೇಲೆ ಸೆಸ್ ಮತ್ತು ಇತರೆ ತೆರಿಗೆಗಳನ್ನು ವಿಧಿಸುವ ಮೂಲಕ ಕೇಂದ್ರ ಸರ್ಕಾರವು ರಾಜಸ್ವವನ್ನು ಸಂಗ್ರಹಿಸುತ್ತಿದ್ದು, ಈ ಆದಾಯದ ಸಂಪೂರ್ಣ ಮೊತ್ತವು ಕೇಂದ್ರ ಸರ್ಕಾರದ ಬೊಕ್ಕಸವನ್ನು ಸೇರಲಿದೆ.
29. ಜಿ.ಎಸ್.ಟಿ ದರ ತರ್ಕಬದ್ಧಗೊಳಿಸುವಿಕೆಯನ್ನು ರಾಜ್ಯ ಸರ್ಕಾರ ತಾತ್ವಿಕವಾಗಿ ಬೆಂಬಲಿಸುತ್ತದೆ. ಆದರೆ, ಇದರಿಂದ ರಾಜ್ಯಗಳಿಗೆ ಉಂಟಾಗುವ ರಾಜಸ್ವ ನಷ್ಟವನ್ನು ಪರಿಹರಿಸುವುದರ ಜೊತೆಗೆ ರಾಜ್ಯಗಳ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ, ಕರ್ನಾಟಕವು ಇತರೆ ಏಳು ರಾಜ್ಯಗಳೊಂದಿಗೆ ಸೇರಿ ಜಿ.ಎಸ್.ಟಿ ಮಂಡಳಿಗೆ ಜಂಟಿ ಜ್ಞಾಪಕ ಪತ್ರವನ್ನು ಸಲ್ಲಿಸಿತ್ತು. ಈ ದರ ಪರಿಷ್ಕರಣೆಯು ರಾಜ್ಯಗಳ ರಾಜಸ್ವಕ್ಕೆ ವ್ಯತಿರಿಕ್ತ ಪರಿಣಾಮ ಬೀರದೆ ರಾಜ್ಯದ ರಾಜಸ್ವ ಸಂಗ್ರಹಣೆಯನ್ನು ರಕ್ಷಿಸುವ ರೀತಿಯಲ್ಲಿ ರೂಪಿತವಾಗಬೇಕು. ಜಿ.ಎಸ್.ಟಿ ತರ್ಕಬದ್ಧಗೊಳಿಸುವಿಕೆಯಿಂದ, ಉಂಟಾಗಿರುವ ರಾಜಸ್ವ ನಷ್ಟವನ್ನು ಸರಿದೂಗಿಸಲು ರಾಜ್ಯಗಳಿಗೆ ಅಗತ್ಯ ಪರಿಹಾರವನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಮ್ಮ ಒತ್ತಾಯವು ಮುಂದುವರೆಯಲಿದೆ.
30. ರಾಜ್ಯಗಳ ಸ್ವಂತ ತೆರಿಗೆ ರಾಜಸ್ವದ ಮೇಲಿನ ಈ ನಿರ್ಬಂಧಗಳ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದಿಂದ ಸ್ವೀಕೃತವಾಗುವ ತೆರಿಗೆ ಹಂಚಿಕೆಯು ಇನ್ನಷ್ಟು ನಿರ್ಣಾಯಕವಾಗುತ್ತದೆ. 14ನೇ ಹಣಕಾಸು ಆಯೋಗವು ರಾಜ್ಯದ ತೆರಿಗೆ ಹಂಚಿಕೆಯ ಪಾಲನ್ನು
ಶೇ.4.713 ರಷ್ಟು ಶಿಫಾರಸ್ಸು ಮಾಡಿತ್ತು. ಆದರೆ, 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯದ ತೆರಿಗೆ ಪಾಲು ಶೇ.3.647 ಕ್ಕೆ ಇಳಿಕೆಯಾಗಿದ್ದು, ಇದು ಹಿಂದಿನ ಆಯೋಗದ ಶಿಫಾರಸ್ಸಿಗೆ ಹೋಲಿಸಿದರೆ ಶೇ.23 ರಷ್ಟು ಕಡಿಮೆಯಾಗಿದೆ. 15ನೇ ಹಣಕಾಸು ಆಯೋಗದ ಆರು ವರ್ಷಗಳ ಅವಧಿಯಲ್ಲಿ ಒಟ್ಟಾರೆ ಸುಮಾರು 65,000 ಕೋಟಿ ರೂ.ಗಳ ನಷ್ಟ ಉಂಟಾಗಿದೆ. ಇದಲ್ಲದೆ,
15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ
5,495 ಕೋಟಿ ರೂ.ಗಳ ವಿಶೇಷ ಅನುದಾನ ಮತ್ತು
6,000 ಕೋಟಿ ರೂ.ಗಳ ರಾಜ್ಯ ಕೇಂದ್ರಿತ ಅನುದಾನಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವುದಿಲ್ಲ. ರಾಜ್ಯಗಳಿಗೆ ನ್ಯಾಯಯುತ ತೆರಿಗೆ ಹಂಚಿಕೆ ಮಾಡಲು ಸಮಾನತೆ ಮತ್ತು ಬೆಳವಣಿಗೆ ಎರಡಕ್ಕೂ ಪ್ರಾಮುಖ್ಯತೆ ನೀಡುವ ಸೂತ್ರವನ್ನು ಶಿಫಾರಸ್ಸು ಮಾಡಬೇಕು ಎಂದು ರಾಜ್ಯವು 16ನೇ ಹಣಕಾಸು ಆಯೋಗಕ್ಕೆ ಮನವಿ ಮಾಡಿತ್ತು. ಆದಾಯ ಅಂತರಕ್ಕೆ ನಿಗದಿಪಡಿಸಲಾದ ಹೆಚ್ಚಿನ ತೂಕವನ್ನು ಕಡಿಮೆ ಮಾಡಿ, ವಿತ್ತೀಯ ನಿರ್ವಹಣೆ ಮತ್ತು ದೇಶದ ಆರ್ಥಿಕತೆಗೆ ರಾಜ್ಯದ ಕೊಡುಗೆಯ ಮಾನದಂಡವನ್ನು ತೆರಿಗೆ ಹಂಚಿಕೆ ಸೂತ್ರ ನಿರ್ಧರಿಸಲು ಪರಿಗಣಿಸಬೇಕು ಎಂದು ನಾವು ಒತ್ತಾಯಿಸಿದ್ದೇವೆ.
31. 16ನೇ ಹಣಕಾಸು ಆಯೋಗವು 2026–31ರ ಅವಧಿಗೆ ತನ್ನ ವರದಿಯನ್ನು ಸಲ್ಲಿಸಿದೆ ಮತ್ತು ಕರ್ನಾಟಕಕ್ಕೆ ಶೇ.4.131 ರಷ್ಟು ತೆರಿಗೆ ಪಾಲನ್ನು ಶಿಫಾರಸ್ಸು ಮಾಡಿದೆ, ಇದು 15ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ ಪಾಲಿಗಿಂತ ಶೇ.13 ರಷ್ಟು ಹೆಚ್ಚಳವಾಗಿರುತ್ತದೆ. 14ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ ಶೇ.4.713 ರಷ್ಟು ತೆರಿಗೆ ಪಾಲನ್ನು ರಾಜ್ಯವು ನಿರೀಕ್ಷಿಸಿದ್ದರೂ, 16ನೇ ಹಣಕಾಸು ಆಯೋಗದ ಶಿಫಾರಸ್ಸು ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಆದ ಅನ್ಯಾಯವನ್ನು ಭಾಗಶಃ ಪರಿಹರಿಸಿದೆ.
32. ತೆರಿಗೆ ಹಂಚಿಕೆ ಸೂತ್ರವನ್ನು ನಿರ್ಧರಿಸುವ ಸಂದರ್ಭದಲ್ಲಿ
16ನೇ ಹಣಕಾಸು ಆಯೋಗವು, ರಾಜ್ಯಗಳ ಆರ್ಥಿಕ ಕಾರ್ಯಕ್ಷಮತೆ ಮತ್ತು ಬೆಳವಣಿಗೆಯ ಸಾಮರ್ಥ್ಯವನ್ನು ಗುರುತಿಸುವ ಉದ್ದೇಶದಿಂದ, ದೇಶದ ಜಿ.ಡಿ.ಪಿಗೆ ರಾಜ್ಯದ ಕೊಡುಗೆಯನ್ನು ಮಾನದಂಡವಾಗಿ ಪರಿಗಣಿಸಿರುವುದು ಆರ್ಥಿಕ ಆಯೋಗದ ತತ್ವಗಳಲ್ಲಿ ಒಂದು ಮಹತ್ವದ ಬೆಳೆವಣೆಗೆಯಾಗಿದ್ದು, ರಾಜ್ಯವು ಇದನ್ನು ಸ್ವಾಗತಿಸುತ್ತದೆ. ಮುಂದಿನ ಹಣಕಾಸು ಆಯೋಗವು ಸಹ ಆರ್ಥಿಕ ಕಾರ್ಯಕ್ಷಮತೆ ಮತ್ತು ಬೆಳವಣಿಗೆಯ ಸಾಮರ್ಥ್ಯವನ್ನು ಗುರುತಿಸುವ ಮೂಲಕ ಕರ್ನಾಟಕ ರಾಜ್ಯವು ಸೇರಿದಂತೆ ಆರ್ಥಿಕ ಬೆಳವಣಿಗೆ ಸಾಧಿಸುತ್ತಿರುವ ಇತರೆ ರಾಜ್ಯಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸಲು ಪ್ರೋತ್ಸಾಹಿಸಲಿದೆ ಎಂದು ನಾವು ಭಾವಿಸುತ್ತೇವೆ.
33. ರಾಜಸ್ವ ಸಂಗ್ರಹಣೆಗಿರುವ ಈ ನಿರ್ಬಂಧಗಳ ನಡುವೆಯೂ, ರಾಜ್ಯವು ಆರ್ಥಿಕ ಬೆಳವಣಿಗೆ, ಜನ ಕಲ್ಯಾಣ ಮತ್ತು ವಿತ್ತೀಯ ಶಿಸ್ತನ್ನು ಸಮತೋಲನದಲ್ಲಿ ಕಾಯ್ದುಕೊಳ್ಳಲು ವೆಚ್ಚ ನಿರ್ವಹಣೆಗೆ ಆದ್ಯತೆ ನೀಡಿದೆ. ರಾಜ್ಯವು ಸಮಾಜದ ಕಲ್ಯಾಣಕ್ಕೆ ನೀಡಿದ ಬದ್ಧತೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜಾರಿಯಾದಾಗಿನಿಂದ, ಫೆಬ್ರವರಿ 2026ರವರೆಗೆ ಒಟ್ಟು 1,21,598 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ನಮ್ಮ ಸರ್ಕಾರವು ವಿತ್ತೀಯ ಶಿಸ್ತನ್ನು ಪಾಲಿಸುವುದರೊಂದಿಗೆ ಜನ ಸಾಮಾನ್ಯರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿರುತ್ತದೆ.
34. ಜಿ.ಎಸ್.ಟಿ ದರಗಳ ತರ್ಕಬದ್ಧಗೊಳಿಸುವಿಕೆ ಹಾಗೂ ಕೇಂದ್ರದಿಂದ ಸ್ವೀಕೃತವಾಗುವ ತೆರಿಗೆ ಪಾಲಿನ ಕಡಿತದ ಪರಿಣಾಮವಾಗಿ ರಾಜಸ್ವ ಸಂಗ್ರಹಣೆ ಕಡಿಮೆಯಾಗಿದ್ದು, ಇಂತಹ ಆರ್ಥಿಕ ಸವಾಲಿನ ಪರಿಸ್ಥಿತಿಯಲ್ಲಿಯೂ, ನಮ್ಮ ಸರ್ಕಾರವು ಕಳೆದ ಮೂರು ವರ್ಷಗಳಿಂದ ವಿತ್ತೀಯ ಶಿಸ್ತನ್ನು ಜವಾಬ್ದಾರಿಯುತವಾಗಿ ಮತ್ತು ದೃಢವಾಗಿ ಪಾಲಿಸಿಕೊಂಡು ಬಂದಿದೆ. ನಾಲ್ಕನೇ ವರ್ಷದಲ್ಲಿಯೂ ಸಹ, ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ನಿಯಮಾನುಸಾರ, ರಾಜ್ಯದ ವಿತ್ತೀಯ ಕೊರತೆಯನ್ನು ಜಿ.ಎಸ್.ಡಿ.ಪಿಯ ಶೇ.3 ರೊಳಗೆ ಹಾಗೂ ಒಟ್ಟು ಸಾರ್ವಜನಿಕ ಹೊಣೆಗಾರಿಕೆಗಳನ್ನು ಜಿ.ಎಸ್.ಡಿ.ಪಿಯ ಶೇ.25 ರೊಳಗೆ ನಿರ್ವಹಿಸಲಾಗಿದೆ. ಈ ಮೂಲಕ ವಿತ್ತೀಯ ಶಿಸ್ತಿನ ಪಾಲನೆಯೊಂದಿಗೆ ದೀರ್ಘಾವಧಿಯ ಹಣಕಾಸಿನ ಸುಸ್ಥಿರತೆಗೆ ರಾಜ್ಯದ ಬದ್ಧತೆಯನ್ನು ಮತ್ತೊಮ್ಮೆ ಪುನರುಚ್ಚರಿಸುತ್ತೇವೆ.
ಕೃಷಿ
ʻʻಧರೆಯ ಕೃಷಿ ಶುದ್ಧವಾಗಿಯಲ್ಲದೆ, ಸಸಿ ಶುದ್ಧವಿಲ್ಲʼʼ
-ವಚನಕಾರ ಶಿವಲೆಂಕ ಮಂಚಣ್ಣ
35. ʻರೈತ ಸಮೃದ್ಧನಾದರೆ ಕರ್ನಾಟಕ ಸಮೃದ್ಧವಾಗುತ್ತದೆʼ ಎಂಬ ದೃಢ ನಂಬಿಕೆಯಿಂದ ಪ್ರೇರಿತವಾಗಿ ನಮ್ಮ ಸರ್ಕಾರವು ಬಿತ್ತನೆಯಿಂದ ಮಾರಾಟದವರೆಗೆ ರೈತರಿಗೆ ಸಮಗ್ರ ಬೆಂಬಲ ನೀಡುವ ನಾಲ್ಕು ಆಧಾರಸ್ತಂಭಗಳ ಮೇಲೆ ಕೃಷಿ ಅಭಿವೃದ್ಧಿ ತಂತ್ರವನ್ನು ರೂಪಿಸಿದೆ. ಮೊದಲನೆಯ ಆಧಾರಸ್ತಂಭ ರೈತರಿಗೆ ವೈಜ್ಞಾನಿಕ ಕೃಷಿ ಮಾರ್ಗದರ್ಶನ, ಎರಡನೆಯದು ರೈತರಿಗೆ ಹಣಕಾಸು ನೆರವು, ಮೂರನೆಯದು ಉತ್ತಮ ಗುಣಮಟ್ಟದ ಕೃಷಿಪರಿಕರಗಳನ್ನು ಒದಗಿಸುವುದು ಮತ್ತು ಬೆಳೆಗಳ ನಿರ್ವಹಣೆ ಹಾಗೂ ನಾಲ್ಕನೆಯದು ಕೊಯ್ಲೋತ್ತರ ಸಂಗ್ರಹಣೆ, ಸಂಸ್ಕರಣೆ ಮತ್ತು ಮಾರುಕಟ್ಟೆ ಸಂಪರ್ಕಗಳ ವಿಸ್ತರಣೆ. ಇದರಿಂದ ಪ್ರತಿಯೊಬ್ಬ ರೈತರ ಸಮೃದ್ಧಿ ಮತ್ತು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ಸರ್ಕಾರ ದೃಢಸಂಕಲ್ಪ ತೊಟ್ಟಿದೆ.
36. ಕಳೆದ ಮೂರು ವರ್ಷಗಳಲ್ಲಿ ನಮ್ಮ ಸರ್ಕಾರವು ರೈತರ ಅಭ್ಯುದಯಕ್ಕಾಗಿ ಈ ಕೆಳಕಂಡ ಕ್ರಮಗಳನ್ನು ಕೈಗೊಂಡಿದೆ.
· 40 ಲಕ್ಷ ರೈತರಿಗೆ 468 ಕೋಟಿ ರೂ. ಮೊತ್ತದಲ್ಲಿ ಬಿತ್ತನೆ ಬೀಜಗಳಿಗೆ ಸಹಾಯಧನ ವಿತರಣೆ.
· 2,825 ಕೋಟಿ ವೆಚ್ಚ ಭರಿಸಿ 7 ಲಕ್ಷ ರೈತರಿಗೆ ಹನಿ ನೀರಾವರಿ ಘಟಕ ಸ್ಥಾಪನೆ ಹಾಗೂ 3.41 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣಗಳ ವಿತರಣೆ.
· 363 ಕೋಟಿ ರೂ. ಮೊತ್ತದಲ್ಲಿ 32,138 ಕೃಷಿ ಹೊಂಡಗಳ ನಿರ್ಮಾಣ.
· 51 ಲಕ್ಷ ರೈತರಿಗೆ 6,213 ಕೋಟಿ ಬೆಳೆ ವಿಮೆ ಪರಿಹಾರ.
· 36 ಲಕ್ಷ ನೀರಾವರಿ ಪಂಪ್ಸೆಟ್ಗಳಿಗೆ 48,000 ಕೋಟಿ ರೂ. ಉಚಿತ ವಿದ್ಯುತ್ ಸಹಾಯಧನ.
· 83 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 70 ಸಾವಿರ ಕೋಟಿ ರೂ. ಕೃಷಿ ಸಾಲ ವಿತರಣೆ.
37. ಉತ್ಪಾದನೋತ್ತರ ಕೃಷಿ ಚಟುವಟಿಕೆಗಳಾದ ಸಂಸ್ಕರಣೆ, ಮೌಲ್ಯವರ್ಧನೆ, ಮೌಲ್ಯ ಸರಪಳಿ ಅಭಿವೃದ್ಧಿ, ಕೃಷಿ ತ್ಯಾಜ್ಯಗಳ ಮರುಬಳಕೆ ಹಾಗೂ ಮಾರುಕಟ್ಟೆ ಸಂಪರ್ಕಗಳನ್ನು ಸಮಗ್ರವಾಗಿ ಬಲಪಡಿಸುವ ಮೂಲಕ ಗ್ರಾಮೀಣ ರೈತರಿಗೆ ಸ್ಥಿರ ಮತ್ತು ಹೆಚ್ಚುವರಿ ಆದಾಯದ ಮೂಲಗಳನ್ನು ಸೃಜಿಸುವ ಉದ್ದೇಶದಿಂದ ʻಮುಖ್ಯಮಂತ್ರಿ ಕೃಷಿ ವಿಸ್ತಾರʼ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
38. ರಾಜ್ಯದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು ಉತ್ತೇಜಿಸಲು ನಿರ್ಮಿಸಲಾಗುತ್ತಿರುವ ʻಮಿಲೆಟ್ ಹಬ್ʼ ಅನ್ನು ರೈತರು, ಗ್ರಾಮೀಣ ಯುವಕರು ಮತ್ತು ನವ ಉದ್ಯಮಿಗಳಿಗೆ ತಾಂತ್ರಿಕ ಸಹಾಯ, ಸಂಸ್ಕರಣಾ ಸೌಲಭ್ಯ, ಗುಣಮಟ್ಟ ಪ್ರಮಾಣೀಕರಣ ಮತ್ತು ಮಾರುಕಟ್ಟೆ ಸಂಪರ್ಕಗಳನ್ನು ಒಂದೇ ಸೂರಿನಡಿ ಕಲ್ಪಿಸುವ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಸ್ವಾವಲಂಬಿ ಸಂಸ್ಥೆಯನ್ನಾಗಿಸಲಾಗುವುದು.
39. ರೈತರಿಗೆ ಮಣ್ಣು, ನೀರು, ಬೀಜ ಹಾಗೂ ರಸಗೊಬ್ಬರ ಪರೀಕ್ಷೆಗಳಲ್ಲಿ ನಿಖರ ಫಲಿತಾಂಶಗಳನ್ನು ಒದಗಿಸಿ ಕೃಷಿ ಉತ್ಪಾದಕತೆ ಹೆಚ್ಚಿಸಲು ಇಲಾಖೆಯ ಎಲ್ಲಾ ಪ್ರಯೋಗಾಲಯಗಳಿಗೆ NABL ಮಾನ್ಯತೆ ಪಡೆದು ವಿಶ್ವಾಸಾರ್ಹ ಹಾಗೂ ವೈಜ್ಞಾನಿಕ ಪರೀಕ್ಷಣಾ ಸೇವೆಗಳನ್ನು ಒದಗಿಸಲಾಗುವುದು.
40. ನೂತನ ದ್ವಿದಳಧಾನ್ಯ ತಳಿಗಳ ಬಿತ್ತನೆ ಬೀಜಗಳ ಬಳಕೆಯನ್ನು ರೈತರಲ್ಲಿ ಪ್ರೇರೇಪಿಸಲು ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲಾಗುವುದು.
41. ಮಣ್ಣಿನ ಸಾವಯವ ಇಂಗಾಲ ಹಾಗೂ ಅದರ ಭೌತಿಕ, ರಾಸಾಯನಿಕ ಮತ್ತು ಜೈವಿಕ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ʻವಸುಧಾಮೃತʼ ಕಾರ್ಯಕ್ರಮವನ್ನು ಮುಂದಿನ ಮೂರು ವರ್ಷಗಳಲ್ಲಿ ಜಾರಿಗೊಳಿಸಲಾಗುವುದು.
42. ಬೆಳೆಗಳಲ್ಲಿ ಕೀಟ ಹಾಗೂ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಇವುಗಳನ್ನು ನಿಯಂತ್ರಿಸಲು ಅಗತ್ಯವಿರುವ ಪರಿಸರ ಸ್ನೇಹಿ ಜೈವಿಕ ಪೀಡೆನಾಶಕ/ಜೈವಿಕ ಕೀಟನಾಶಕಗಳ ಜೊತೆ ಇತರೆ ಸುರಕ್ಷಿತ ನಿರ್ವಹಣಾ ಕ್ರಮಗಳ ಶಿಫಾರಸ್ಸುಗಳನ್ನು ರೈತರಿಗೆ ಸಕಾಲದಲ್ಲಿ ಒದಗಿಸಲು ʻಸಸ್ಯ ಸಂಜೀವಿನಿ’ ಯೋಜನೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಅನುಷ್ಠಾನಗೊಳಿಸಲಾಗುವುದು.
43. ರೈತರಿಗೆ ಒಂದೇ ಸೂರಿನಡಿ ಹವಾಮಾನ, ಮಾರುಕಟ್ಟೆ, ಕೃಷಿ ತಾಂತ್ರಿಕತೆ ಮತ್ತು ಇಲಾಖಾ ಮಾಹಿತಿಯನ್ನು ತ್ವರಿತವಾಗಿ ಒದಗಿಸಲು ಕೃಷಿ ಇಲಾಖೆಯ ʻರೈತ ಕರೆ ಕೇಂದ್ರʼವನ್ನು
AI ತಂತ್ರಜ್ಞಾನದಿಂದ ಉನ್ನತೀಕರಿಸಲಾಗುವುದು.
44. ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʻಕೃಷಿ ಉದ್ದಿಮೆ ತರಬೇತಿ ಕೇಂದ್ರʼ ವನ್ನಾಗಿ ಉನ್ನತೀಕರಿಸಲಾಗುವುದು.
45. ಕೃಷಿ ಚಟುವಟಿಕೆಯಲ್ಲಿ ರೈತರ ಸಮಯ ಹಾಗೂ ಶ್ರಮ ತಗ್ಗಿಸುವುದರೊಂದಿಗೆ ಉತ್ಪಾದನಾ ವೆಚ್ಚವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ನಿಖರ ಬಿತ್ತನೆ ಮತ್ತು ನಾಟಿ
ಯಂತ್ರಗಳನ್ನು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಸೇರ್ಪಡೆಗೊಳಿಸಲಾಗುವುದು.
46. ಕೃಷಿ ಸಂಬಂಧಿತ ಕಸುಬುಗಳನ್ನು ಮತ್ತು ಸ್ಥಳೀಯ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಹಾಗೂ ಸಣ್ಣ, ಅತೀ ಸಣ್ಣ ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲಾಗುವುದು.
47. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕನ್ನು ಸಂಪೂರ್ಣ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಲು ಅಧಿಕೃತ ಸಾವಯವ ಪ್ರಮಾಣೀಕರಣ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.
48. ಹವಾಮಾನ ಬದಲಾವಣೆಗೆ ಹೊಂದಾಣಿಕೆ ಹಾಗೂ ತಗ್ಗಿಸುವಿಕೆಯ ರಾಜ್ಯದ ಪ್ರಯತ್ನಗಳನ್ನು ಬಲಪಡಿಸಿ ಕೃಷಿಯನ್ನು ಸುಸ್ಥಿರ ಹಾಗೂ ಪರಿಸರ ಸ್ನೇಹಿಯಾಗಿಸಲು ಭತ್ತದ ಕೃಷಿಯಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಪರ್ಯಾಯ ತೇವ–ಒಣಗಿಸುವ (Alternate Wetting & Drying) ವಿಧಾನಗಳನ್ನು ಉತ್ತೇಜಿಸಲಾಗುವುದು.
49. ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಕೈಗೆಟುಕುವ ದರದಲ್ಲಿ ಲಭ್ಯವಾಗಿಸುವುದರ ಜೊತೆಗೆ ಮಾರುಕಟ್ಟೆಯ ಅನಿಶ್ಚಿತತೆಯನ್ನು ನಿವಾರಿಸುವ ಉದ್ದೇಶದಿಂದ ಬಿತ್ತನೆ ಬೀಜಗಳು, ಕೀಟನಾಶಕಗಳು, ರಸಗೊಬ್ಬರಗಳು ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿಯೊಂದು ತಾಲ್ಲೂಕಿನಲ್ಲಿ MSIL ವತಿಯಿಂದ ರೈತ ಮಾಲ್ಗಳನ್ನು ಸ್ಥಾಪಿಸಲಾಗುವುದು.
50. ರೈತರಿಗೆ ಕಳಪೆ, ಅಸುರಕ್ಷಿತ, ದೋಷಪೂರಿತ ಬೀಜಗಳು ಮತ್ತು ಕೀಟನಾಶಕಗಳನ್ನು ಪೂರೈಸುವುದನ್ನು ಹಾಗೂ ಕೃಷಿ ಪರಿಕರಗಳನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ಮಾಡಿ ಸೂಕ್ತ ಶಿಫಾರಸ್ಸುಗಳನ್ನು ಸಲ್ಲಿಸಲು ರಾಜ್ಯ ಮಟ್ಟದ ಸಲಹಾ ಸಮಿತಿಯನ್ನು ರಚಿಸಲಾಗುವುದು.
51. ತಜ್ಞರ ಕಾರ್ಯಸಾಧ್ಯತಾ ವರದಿಯ ಶಿಫಾರಸ್ಸಿನಂತೆ ಅಥಣಿಯಲ್ಲಿ ಕೃಷಿ ಕಾಲೇಜನ್ನು ಸ್ಥಾಪಿಸಲು ಅಗತ್ಯವಿರುವ ಪ್ರಥಮ ಹಂತದ ಮೂಲಸೌಕರ್ಯ ಒದಗಿಸಲಾಗುವುದು.
ತೋಟಗಾರಿಕೆ
52. ತೋಟಗಾರಿಕೆಯನ್ನು ರೈತರ ಆದಾಯ ವೃದ್ಧಿಯ ಪ್ರಮುಖ ಇಂಜಿನ್ ಆಗಿ ರೂಪಿಸುವ ಉದ್ದೇಶದಿಂದ ನಮ್ಮ ಸರ್ಕಾರವು ಉತ್ಕೃಷ್ಟ ಗುಣಮಟ್ಟ, ಅಧಿಕ ಮೌಲ್ಯದ, ಹವಾಮಾನ
ಸ್ಥಿತಿ-ಸ್ಥಾಪಕ ಮತ್ತು ಮಾರುಕಟ್ಟೆ ಆಧಾರಿತ ತೋಟಗಾರಿಕೆ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ತೋಟಗಾರಿಕೆ ಬೆಳೆಗಳ ಅಭಿವೃದ್ಧಿಗಾಗಿ ಈ ಕೆಳಕಂಡ ಕ್ರಮಗಳನ್ನು ಕೈಗೊಂಡಿದೆ:
· ಹೊಸದಾಗಿ 89,000 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೇಸಾಯ ಅಳವಡಿಕೆ;
· 2.23 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ ನೀರಾವರಿ ಅಳವಡಿಸಿ 2.36 ಲಕ್ಷ ರೈತರಿಗೆ ಅನುಕೂಲ;
· ಬೆಳೆ ವಿಮೆ ಯೋಜನೆಯಡಿ 11 ಲಕ್ಷ ರೈತರಿಗೆ 2,378 ಕೋಟಿ ರೂ.ಗಳ ಬೆಳೆ ವಿಮೆ ಪರಿಹಾರ;
· 21,360 ಫಲಾನುಭವಿಗಳಿಗೆ 9,800 ಕೊಯ್ಲೋತ್ತರ ಘಟಕಗಳ ನಿರ್ಮಾಣ.
53. ತೋಟಗಾರಿಕೆ ಇಲಾಖೆಯ ಕ್ಷೇತ್ರಗಳು ಮತ್ತು ನರ್ಸರಿಗಳಲ್ಲಿ ಲಭ್ಯವಿರುವ ಜಮೀನನ್ನು ಉಪಯೋಗಿಸಿ ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು PPP ಮಾದರಿಯಲ್ಲಿ ಸ್ಥಾಪಿಸಲಾಗುವುದು.
54. ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ವಿಶ್ವವಿದ್ಯಾಲಯಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದೊಂದಿಗೆ ಸಮುದಾಯ ಆಧಾರಿತ ರೋಗ–ಕೀಟ ನಿಯಂತ್ರಣ ಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
55. ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳನ್ನು 64 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಎಲ್ಲಾ ಕೃಷಿ ಮಾರುಕಟ್ಟೆಗಳಲ್ಲಿ ಶೀತಲಗೃಹಗಳನ್ನು ಹಂತ ಹಂತವಾಗಿ ನಿರ್ಮಿಸಲಾಗುವುದು.
56. ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
57. ನೀರಿನ ಸಂರಕ್ಷಣೆ ಮತ್ತು ಮಣ್ಣಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಹೈಡ್ರೋಪೊನಿಕ್ಸ್ (Hydroponics) ಹಾಗೂ ಕೋಕೋಪೀಟ್ (Coco peat) ಆಧಾರಿತ ಮಣ್ಣಿಲ್ಲದ ಕೃಷಿಯನ್ನು ಪ್ರೋತ್ಸಾಹಿಸಲಾಗುವುದು.
58. ತಜ್ಞರ ಕಾರ್ಯಸಾಧ್ಯತಾ ವರದಿಯ ಶಿಫಾರಸ್ಸಿನಂತೆ ಡಂಬಳದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲು ಅಗತ್ಯವಿರುವ
ಪ್ರಥಮ ಹಂತದ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ರೇಷ್ಮೆ
59. ಭಾರತದ ರೇಷ್ಮೆ ಉತ್ಪಾದನೆಯಲ್ಲಿ ಶೇ.46 ರಷ್ಟು ಪಾಲು ಹೊಂದಿರುವ ಕರ್ನಾಟಕವು ದೇಶದ ರೇಷ್ಮೆ ರಾಜಧಾನಿಯಾಗಿದೆ. ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ರೀಲಿಂಗ್ ಶೆಡ್ ನಿರ್ಮಾಣ, ಹನಿ ನೀರಾವರಿ ಘಟಕ ಮುಂತಾದ ಚಟುವಟಿಕೆಗಳಿಗೆ ಕಳೆದ ಮೂರು ವರ್ಷಗಳಲ್ಲಿ 531 ಕೋಟಿ ರೂ. ಮೊತ್ತದ ಸಹಾಯಧನವನ್ನು 2 ಲಕ್ಷ ಫಲಾನುಭವಿಗಳಿಗೆ ಒದಗಿಸಲಾಗಿದೆ
60. ಪ್ರಮುಖ 15 ರೇಷ್ಮೆಗೂಡು ಮಾರುಕಟ್ಟೆಗಳಲ್ಲಿ ಸಂಪೂರ್ಣ
ನಗದುರಹಿತ, ಡಿಜಿಟಲ್ ವಹಿವಾಟು, ಇ-ಹರಾಜು,
ಇ-ಪೇಮೆಂಟ್ ಮತ್ತು ಇ-ಪಾವತಿ ವ್ಯವಸ್ಥೆಯನ್ನು ಆರಂಭಿಸಿದ ದೇಶದ ಮೊದಲ ಮತ್ತು ಏಕೈಕ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಷಯವಾಗಿದೆ.
61. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ 10 ರೂ. ಸಾಗಾಣಿಕಾ ವೆಚ್ಚವನ್ನು 20 ರೂ. ಗೆ ಹೆಚ್ಚಿಸಲಾಗುವುದು.
62. ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ಗಳ ಸ್ಥಾಪನೆಗೆ ಕ್ರಮವಹಿಸಲಾಗುವುದು.
63. ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
ಪಶುಸಂಗೋಪನೆ
64. ನಮ್ಮ ಸರ್ಕಾರದ ಪ್ರಾರಂಭದ ಅವಧಿಯಲ್ಲಿ ಪ್ರತಿದಿನ 8.75 ಲಕ್ಷ ಹಾಲು ಉತ್ಪಾದಕರಿಂದ 81.78 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿತ್ತು. ಪ್ರಸ್ತುತ ಪ್ರತಿದಿನ 9.07 ಲಕ್ಷ ಹಾಲು ಉತ್ಪಾದಕರಿಂದ ಸರಾಸರಿ ಒಂದು ಕೋಟಿ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಹಾಲು ಪೂರೈಕೆದಾರರಿಗೆ ಬಾಕಿ ಇದ್ದ 609 ಕೋಟಿ ರೂ. ಪ್ರೋತ್ಸಾಹಧನವನ್ನು ಒಳಗೊಂಡಂತೆ, ಇದುವರೆಗೂ ಒಟ್ಟಾರೆ 4,523 ಕೋಟಿ ರೂ. ಪ್ರೋತ್ಸಾಹಧನವನ್ನು ನೀಡಲಾಗಿದೆ.
65. ಅನುಗ್ರಹ ಯೋಜನೆಯಡಿ ಕುರಿ/ಮೇಕೆಗಳ ಮತ್ತು ರಾಸುಗಳ ಆಕಸ್ಮಿಕ ಸಾವಿಗೆ ನೀಡುವ ಪರಿಹಾರ ಧನವನ್ನು ಹೆಚ್ಚಿಸಿ, ಇದುವರೆಗೂ 1.70 ಲಕ್ಷ ಫಲಾನುಭವಿಗಳಿಗೆ 101 ಕೋಟಿ ರೂ. ವಿತರಿಸಲಾಗಿದೆ.
66. ʻಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ಅಧಿನಿಯಮ, 2025ʼ ನ್ನು ಜಾರಿಗೆ ತರಲಾಗಿದೆ. ಇಲ್ಲಿಯವರೆಗೆ 6,702 ಕುರಿಗಾಹಿಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ.
67. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ 300 ಪಶುವೈದ್ಯ ಸಂಸ್ಥೆಗಳಿಗೆ ನೂತನ ಕಟ್ಟಡಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದೆ. 2026-27ನೇ ಸಾಲಿನಲ್ಲಿ ನಬಾರ್ಡ್ ಸಹಯೋಗದೊಂದಿಗೆ ಹೊಸದಾಗಿ 100 ಕಟ್ಟಡಗಳನ್ನು ನಿರ್ಮಿಸಲಾಗುವುದು.
68. ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25 ರಷ್ಟು ಸಹಾಯಧನದಲ್ಲಿ ಕುರಿ/ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆಯನ್ನು ರೂಪಿಸಲಾಗಿದೆ. ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25 ರಷ್ಟು ಸಹಾಯಧನದಲ್ಲಿ ಹಸು/ಎಮ್ಮೆ ಖರೀದಿಸಲು ಪ್ರೋತ್ಸಾಹಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗಳಿಗೆ ಒಟ್ಟು 40 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗುವುದು.
69. ಜಿಲ್ಲಾ ಹಂತದಲ್ಲಿರುವ ತಜ್ಞ ಪಶುವೈದ್ಯಕೀಯ ವಿಶೇಷ
ಸೇವೆ ವ್ಯವಸ್ಥೆಯನ್ನು ತಾಲ್ಲೂಕು ಹಂತಕ್ಕೆ ವಿಸ್ತರಿಸಲು
20 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 15 ತಾಲ್ಲೂಕು ಪಶು ಆಸ್ಪತ್ರೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಪಾಲಿಕ್ಲಿನಿಕ್ಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು.
70. ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರದ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು.
71. ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʻವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʻಫಲಧಾರೆʼ ಶಿಬಿರಗಳನ್ನು ಐದು ಕೋಟಿ ರೂ. ವೆಚ್ಚದಲ್ಲಿ ಏರ್ಪಡಿಸಲಾಗುವುದು.
72. ಪಶುಗಳಲ್ಲಿನ ರೋಗಗಳನ್ನು ನಿಖರವಾಗಿ ಪತ್ತೆ ಹಚ್ಚಲು ರಾಜ್ಯದಲ್ಲಿ ಪ್ರಪ್ರಥಮವಾಗಿ ಬೆಂಗಳೂರು ಹಾಗೂ ಬೀದರ್ನ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶು ಆಸ್ಪತ್ರೆಗಳಲ್ಲಿ ಜಾನುವಾರುಗಳ ಸಿ.ಟಿ. ಸ್ಕ್ಯಾನಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
73. ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರೋಪಾಯವಾಗಿ ಸಂತಾನಹರಣ ನಿಯಂತ್ರಣವನ್ನು ವೈಜ್ಞಾನಿಕ ಹಾಗೂ ಪರಿಣಾಮಕಾರಿ ರೀತಿಯಲ್ಲಿ ಜಾರಿಗೆ ತರುವ ಉದ್ದೇಶದಿಂದ ಪಶುವೈದ್ಯರು ಮತ್ತು ಪಶುವೈದ್ಯಕೀಯ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತಾಂತ್ರಿಕ ತರಬೇತಿಯನ್ನು ನೀಡಲು ಬೆಂಗಳೂರು ಹಾಗೂ ಬೀದರ್ ನಲ್ಲಿ ʻಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರʼವನ್ನು ಸ್ಥಾಪಿಸಲಾಗುವುದು.
ಮೀನುಗಾರಿಕೆ
74. ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯದ ದರವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಿ ಮೀನುಗಾರಿಕೆ ಚಟುವಟಿಕೆಗಳನ್ನು ಉತ್ತೇಜಿಸಲಾಗುವುದು.
75. ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು (Mariculture) ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ Centre of Excellence ಸ್ಥಾಪಿಸಲಾಗುವುದು.
76. ಮೀನು ಆಹಾರದ ಸೇವನೆಯನ್ನು ಉತ್ತೇಜಿಸುವ ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಮತ್ತು ಗುಣಮಟ್ಟದ ಮೀನು ಉತ್ಪನ್ನಗಳು ಲಭ್ಯವಾಗುವಂತೆ ಮಾಡಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು.
77. ಮೀನು ಮಾರಾಟ ಮಾಡಲು ಸುಸಜ್ಜಿತ ಮೀನು ಮಾರುಕಟ್ಟೆಗಳ ಅವಶ್ಯಕತೆ ಇರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.
78. ರಾಜ್ಯದಲ್ಲಿ ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗಾಗಿ
20 ಕೋಟಿ ರೂ.ಗಳನ್ನು ಒದಗಿಸಲಾಗುವುದು.
79. ಒಳನಾಡು ಮೀನುಗಾರಿಕೆಯು ಗ್ರಾಮೀಣ ಜೀವನೋಪಾಯ ಮತ್ತು ಆಹಾರ ಭದ್ರತೆಗೆ ಮಹತ್ವವಾಗಿದೆ. ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ತರಬೇತಿ ನೀಡಿ ಸ್ಥಿರ ಆದಾಯ ಗಳಿಕೆಗೆ ಅವಕಾಶ ಕಲ್ಪಿಸಲಾಗುವುದು.
ಸಹಕಾರ
80. 2025-26ನೇ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂ. ಸಾಲವನ್ನು ವಿತರಿಸುವ ಗುರಿ ಹೊಂದಲಾಗಿದ್ದು, ಫೆಬ್ರವರಿ 2026ರ ಅಂತ್ಯಕ್ಕೆ 25 ಲಕ್ಷ ರೈತರಿಗೆ 22,000 ಕೋಟಿ ರೂ. ಕೃಷಿ ಸಾಲವನ್ನು ವಿತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ.
81. ಯಶಸ್ವಿನಿ ಯೋಜನೆಯಡಿ ಇದುವರೆಗೆ ರಾಜ್ಯಾದ್ಯಂತ 870 ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ 86,253 ಫಲಾನುಭವಿಗಳು ಚಿಕಿತ್ಸೆ ಪಡೆದಿದ್ದು, ಇದಕ್ಕಾಗಿ 163 ಕೋಟಿ ರೂ.ಗಳನ್ನು ಭರಿಸಲಾಗಿದೆ.
82. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 3,863 PACS ಗಳು Go-Live ಆಗಿದ್ದು, Online ಸೇವೆಯನ್ನು ಒದಗಿಸುತ್ತಿವೆ. ಪ್ರಸಕ್ತ ಸಾಲಿನಲ್ಲಿ ಬಾಕಿ ಉಳಿದ 1,628 ಸಹಕಾರ ಸಂಘಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ.
83. ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿ ವಿವಿಧ
ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ಒದಗಿಸಲು ದತ್ತಾಂಶವನ್ನು ಆನ್ಲೈನ್ನಲ್ಲಿ ನಿರ್ವಹಿಸಲು ಕ್ರಮವಹಿಸಲಾಗುವುದು.
84. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆದ ಮೆಕ್ಕೆಜೋಳದ ಬೆಲೆ ಕುಸಿತದಿಂದ ಸಂಕಷ್ಟಕ್ಕೀಡಾದ ರೈತರ ಹಿತ ಕಾಪಾಡಲು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮೆಕ್ಕೆಜೋಳ ಖರೀದಿಸಲು ನಮ್ಮ ಸರ್ಕಾರ 100 ಕೋಟಿ ರೂ.ಗಳ ಆರ್ಥಿಕ ನೆರವು ನೀಡಿದೆ.
85. ಕರ್ನಾಟಕ ರಾಜ್ಯ ಉಗ್ರಾಣ ನಿಗಮವನ್ನು ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ನಿಗಮದ ಅನುಪಯುಕ್ತ ಆಸ್ತಿಗಳನ್ನು ನಗದೀಕರಣಗೊಳಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್) ಮತ್ತು ಹುಬ್ಬಳ್ಳಿ (ಕಾಟನ್ ಮಾರ್ಕೆಟ್) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು.
86. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯಚಟುವಟಿಕೆಗಳನ್ನು ಸಂಪೂರ್ಣ digitize ಮಾಡಲು 10 ಕೋಟಿ ರೂ. ವೆಚ್ಚದಲ್ಲಿ
ERP (Enterprise Resource Planning) ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
87. ನಬಾರ್ಡ್ ಸಂಸ್ಥೆಯ ಸಲಹೆಯಂತೆ ಪ್ರತಿ ಜಿಲ್ಲೆಯಲ್ಲಿ ʻಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ʼ ಸ್ಥಾಪಿಸಲು RBI ಗೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಜಲಸಂಪನ್ಮೂಲ
“ನದಿಗಳು ನಮ್ಮೆಲ್ಲ ಮಾನವ ಸಮಾಜ ಮತ್ತು ಸಂಸ್ಕೃತಿಗಳ ಜೀವವಾಹಿನಿ. ಅವು ಕೊಳಕಾದರೆ, ಅವು ಬತ್ತಿದರೆ
ನಮ್ಮ ಉಸಿರು ಉಡುಗುತ್ತಾ ಬಂದಂತೆ”
-ಕೆ.ಪಿ. ಪೂರ್ಣಚಂದ್ರ ತೇಜಸ್ವಿ
88. ಕರ್ನಾಟಕದ ಬಹು ನಿರೀಕ್ಷಿತ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ, ತಮಿಳುನಾಡು ರಾಜ್ಯವು ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ತಕರಾರು ಅರ್ಜಿಗಳು ವಜಾಗೊಂಡಿರುವುದು ಕರ್ನಾಟಕಕ್ಕೆ ಮಹತ್ವದ ಕಾನೂನು ಜಯವಾಗಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ, ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (DPR) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
89. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ನೀರಾವರಿ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗಿದೆ. 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲ್ಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು.
90. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರದ 2023-24ರ ಆಯವ್ಯಯ ಭಾಷಣದಲ್ಲಿ ಘೋಷಿಸಿದ್ದರೂ ಸಹ ಇಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ಆದರೂ, ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆಗೆ
11,343 ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಜ್ಜಂಪುರ ತಾಲ್ಲೂಕಿನ ಅಬ್ಬಿನಹೊಳಲು ಗ್ರಾಮದ ಭೂಸಮಸ್ಯೆಯನ್ನು ಬಗೆಹರಿಸಲಾಗಿದೆ. ಇದರಿಂದಾಗಿ 135 ಕಿ.ಮೀ ಉದ್ದದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಇದರಡಿ ಬರುವ ಫೀಡರ್ ಕಾಮಗಾರಿಗಳನ್ನು
2027ನೇ ಸಾಲಿನಲ್ಲಿ ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲಾಗುವುದು.
91. ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಯಾದ
UKP Stage-III ಯೋಜನೆಯಡಿ ಆಲಮಟ್ಟಿ ಅಣೆಕಟ್ಟನ್ನು 519.6 ಮೀ. ಯಿಂದ 524.256 ಮೀ. ಗೆ ಎತ್ತರಿಸುವ ಕಾಮಗಾರಿಯಿಂದ ಮುಳುಗಡೆಯಾಗುವ ಜಮೀನುಗಳು ಹಾಗೂ ನೀರಾವರಿ ಕಾಲುವೆ ಜಾಲಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರೈತರು ಮತ್ತು ಸಂತ್ರಸ್ತರ ದೀರ್ಘಕಾಲದ ಬೇಡಿಕೆಗೆ ನಮ್ಮ ಸರ್ಕಾರ ಸ್ಪಂದಿಸಿ ಪರಿಷ್ಕೃತ ಒಪ್ಪಂದದ ದರಗಳನ್ನು ಅನುಮೋದಿಸಿದೆ. ಮುಳುಗಡೆಗೊಳ್ಳುವ ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂ. ಹಾಗೂ ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂ. ನಿಗದಿಪಡಿಸಲಾಗಿದೆ. ಒಪ್ಪಂದದ ಐತೀರ್ಪುಗಳ ಮುಖಾಂತರ ಜಮೀನನ್ನು ಸ್ವಾಧೀನಪಡಿಸುವ ಪ್ರಕ್ರಿಯೆಯನ್ನು ಪ್ರಸಕ್ತ ವರ್ಷದಲ್ಲಿ ಪ್ರಾರಂಭಿಸಲಾಗುವುದು.
92. ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ 33 ಗೇಟುಗಳನ್ನು ಬದಲಾಯಿಸಿ ಹೊಸ ಗೇಟುಗಳ ಅಳವಡಿಕೆಯನ್ನು ಮುಂಗಾರು ಪೂರ್ವದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಶೇಖರಣೆಯಿಂದ ನೀರಿನ ಸಂಗ್ರಹಣಾ ಸಾಮರ್ಥ್ಯದ ಕೊರತೆಯನ್ನು ನೀಗಿಸಲು ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಸೇರಿದಂತೆ ಇತರೆ ಪರ್ಯಾಯ ಮಾರ್ಗೋಪಾಯಗಳ ಕುರಿತು ಈಗಾಗಲೇ ಚಿಂತಿಸಲಾಗಿದೆ. ಇವುಗಳಲ್ಲಿ ಸಮಯೋಚಿತ ಪರ್ಯಾಯ ಮಾರ್ಗದ ಕುರಿತು ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ ತುಂಗಭದ್ರಾ ಮಂಡಳಿಯ ಸಹಮತಿಯೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ತೀವ್ರತರವಾಗಿ ಪ್ರಯತ್ನಿಸಲಾಗುವುದು.
93. ಮಹದಾಯಿ ಕಣಿವೆಯ ಕಳಸಾ-ಬಂಡೂರಾ ನಾಲಾ ಯೋಜನೆಗಳಡಿ ಅರಣ್ಯ ತೀರುವಳಿ ಪಡೆಯಲು ರಾಜ್ಯ ಸರ್ಕಾರವು ಕೇಂದ್ರ ಪರಿಸರ ಸಚಿವಾಲಯ ಮತ್ತು ರಾಷ್ಟ್ರೀಯ ವನ್ಯಜೀವಿ ಮಂಡಳಿಯಲ್ಲಿ ಎರಡು ವರ್ಷಗಳಿಂದ ನಿರಂತರ ಪ್ರಯತ್ನಿಸಿದ್ದರೂ, ಈವರೆಗೆ ತೀರುವಳಿ ಲಭಿಸಿರುವುದಿಲ್ಲ. ಈ ಯೋಜನೆಗಳಿಗೆ ಈಗಾಗಲೇ ಗುತ್ತಿಗೆ ವಹಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಅರಣ್ಯ ತೀರುವಳಿ ದೊರೆತ ಕೂಡಲೇ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಈ ವಿಳಂಬದಿಂದ ರಾಜ್ಯ ಸರ್ಕಾರದ ಹೊರೆ ಹೆಚ್ಚಾಗುತ್ತಿದೆ.
94. ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ಉಡುತೊರೆಹಳ್ಳ ಯೋಜನೆಯನ್ನು 490 ಕೋಟಿ ರೂ. ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು.
95. ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿ.ಎಂ.ಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗುವುದು.
96. ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ನಾಲ್ಕು ನಿಗಮಗಳಡಿ ಪೂರ್ಣಗೊಳ್ಳುವ ಹಂತದಲ್ಲಿನ 12 ನೀರಾವರಿ ಯೋಜನೆಗಳು,
22 ಕೆರೆ ತುಂಬುವ ಯೋಜನೆಗಳು ಮತ್ತು ಮೂರು ಆಧುನೀಕರಣ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿ 1.16 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಯೋಜನೆಗಳ ಪಟ್ಟಿಯನ್ನು ಅನುಬಂಧ-೧ರಲ್ಲಿ ಲಗತ್ತಿಸಿದೆ.
97. ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ 8,045 ಕೋಟಿ ರೂ. ಮೊತ್ತದ 75
ನೀರಾವರಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು. ಯೋಜನೆಗಳ ಪಟ್ಟಿಯನ್ನು ಅನುಬಂಧ-೨ರಲ್ಲಿ ಲಗತ್ತಿಸಿದೆ.
98. ರಾಜ್ಯದ ಕಾಡಾ ಪ್ರಾಧಿಕಾರದಡಿ ಹತ್ತಿಕುಣಿ ಹಾಗೂ ತುಂಗಭದ್ರಾ ಎಡದಂಡೆ ಶಾಖಾ ಕಾಲುವೆಯಡಿ ಬರುವ 4,745 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ Pressurised Piped Network ಪದ್ಧತಿಯನ್ನು ಅಳವಡಿಸಿ ನೀರಾವರಿ ವ್ಯವಸ್ಥೆಯನ್ನು ಆಧುನೀಕರಿಸಲಾಗುವುದು.
ಸಣ್ಣ ನೀರಾವರಿ
99. ಹೆಬ್ಬಾಳ-ನಾಗವಾರ ಕಣಿವೆಯ ಮೂರನೇ ಹಂತದಲ್ಲಿ ಶಿಡ್ಲಘಟ್ಟದ ಅಮಾನಿ ಕೆರೆಯಿಂದ ಶಿಡ್ಲಘಟ್ಟ ತಾಲ್ಲೂಕಿನ 45 ಕೆರೆಗಳಿಗೆ ಮತ್ತು ಚಿಂತಾಮಣಿ ತಾಲ್ಲೂಕಿನ 119 ಕೆರೆಗಳೂ ಸೇರಿ ಒಟ್ಟಾರೆ
164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು 237 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು.
100. ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಹೆಚ್.ಎನ್ ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಯನ್ನು 140 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುವುದು.
101. ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರಿನಿಂದ
259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆಯ ಪೈಕಿ ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ೧೧೯ ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯನ್ನು 650 ಕೋಟಿ ರೂ.ಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು.
102. 2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏತ ನೀರಾವರಿ, ಚೆಕ್ ಡ್ಯಾಂ, ಕೆರೆಗಳ ಪುನಃಶ್ಚೇತನ ಅಭಿವೃದ್ಧಿ ಮುಂತಾದ 112 ಕಾಮಗಾರಿಗಳನ್ನು 1,793 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಅನುಮೋದಿಸಿದೆ. (ಅನುಬಂಧ-3)
103. ರಾಜ್ಯಾದ್ಯಂತ ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ಸಂರಕ್ಷಿಸಲು ಕೆರೆ ಬಳಕೆದಾರರ ಸಂಘಗಳನ್ನು ಬಲವರ್ಧನೆಗೊಳಿಸಲಾಗುವುದು.
104. ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಜಿಡಗಾದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅಂತರ್ಜಲ ಹೆಚ್ಚಿಸಲು ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕ್ಅಪ್ ಹಾಗೂ ಚೆಕ್ಡ್ಯಾಂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು.
ಶಾಲಾ ಶಿಕ್ಷಣ
105. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ
184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಲಾಗಿದೆ.
106. ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಹಾಗೂ
ನವೀಕರಿಸುವ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಅರ್ಜಿ
ಹಾಗೂ ದಾಖಲೆಗಳನ್ನು ಸಲ್ಲಿಸಲು ಅನುಮತಿಸಿ ಸರಳೀಕರಣಗೊಳಿಸಲಾಗಿದೆ.
107. 2025–26ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಸವಲತ್ತುಗಳನ್ನು ಮೊದಲ ಬಾರಿಗೆ ನೇರ ನಗದು ವರ್ಗಾವಣೆ (DBT) ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಗ್ರಾಮೀಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರಗಳನ್ನು ಆನ್-ಲೈನ್ ಮೂಲಕ ವಿತರಿಸಲಾಗಿದೆ.
108. ʻಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ADB ನೆರವಿನೊಂದಿಗೆ 500 ಶಾಲೆಗಳು, KKRDB ನಿಧಿಯಿಂದ
200 ಶಾಲೆಗಳು ಹಾಗೂ KMERC ನಿಧಿಯಿಂದ 100 ಶಾಲೆಗಳು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕಾಗಿ ಒಟ್ಟಾರೆ 3,900 ಕೋಟಿ ರೂ.ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ವೆಚ್ಚ ಮಾಡಲಾಗುವುದು.
109. ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿನ (KPS) ಶಿಕ್ಷಕರ ಹುದ್ದೆಗಳನ್ನು ಮಹತ್ವದ ಹುದ್ದೆಗಳೆಂದು ಪರಿಗಣಿಸಿ ಮೊದಲ ಆದ್ಯತೆಯಲ್ಲಿ ಭರ್ತಿ ಮಾಡಲಾಗುವುದು ಹಾಗೂ ಸದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶಿಕ್ಷಕರ ನೇಮಕಾತಿ ಮಾಡಲು ಆದ್ಯತೆ ನೀಡಲಾಗುವುದು.
110. ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ವಿಶೇಷವಾಗಿ ದಾಖಲಾತಿ ಪ್ರಮಾಣ ಮತ್ತು ಕಲಿಕೆಯ ಫಲಿತಾಂಶಗಳನ್ನು ಹೆಚ್ಚಿಸಲು
ನಮ್ಮ ಸರ್ಕಾರ ಬದ್ಧವಾಗಿದೆ. ಈಗಾಗಲೇ 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ
ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. 2026-27ನೇ ಸಾಲಿನಿಂದ ವಿದ್ಯಾವಿಕಾಸ ಯೋಜನೆಯಡಿ ಪೂರ್ವ
ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳನ್ನು,
1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು.
111. ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ.ಗಳು, ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ.ಗಳು ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
112. ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಸದರಿ ಅನುದಾನವನ್ನು ಶಾಲಾ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ನೇರವಾಗಿ ವರ್ಗಾಯಿಸಲಾಗುವುದು.
113. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಾಮರ್ಥ್ಯ ವೃದ್ಧಿಗಾಗಿ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು 24 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.
114. IIT ಧಾರವಾಡದ ಸಹಯೋಗದೊಂದಿಗೆ 8 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು
12.28 ಲಕ್ಷ ವಿದ್ಯಾರ್ಥಿಗಳಿಗೆ ಅಂದಾಜು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಪ್ರಕ್ರಿಯೆಯಲ್ಲಿ AI ತಂತ್ರಜ್ಞಾನವನ್ನು ಅಳವಡಿಸಿಕೊಂಡು ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್ ಸೌಲಭ್ಯವನ್ನು ಒದಗಿಸಲಾಗುವುದು.
115. 2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
116. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು.
117. ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.
118. ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು.
119. ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ
ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು.
ಉನ್ನತ ಶಿಕ್ಷಣ
120. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ADB ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ
ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ADB ನೆರವಿನೊಂದಿಗೆ
9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
121. ಹಿಂದಿನ ಸಾಲಿನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್ನಿಕ್ಗಳು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಒಟ್ಟಾರೆ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಲಾಗಿದೆ.
ಸದರಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲಾಗುವುದು.
122. ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ ಒಂದು ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು.
123. 1,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಒಟ್ಟು 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ ಪೀಠೋಪಕರಣಗಳು ಹಾಗೂ ಕಟ್ಟಡಗಳ ದುರಸ್ತಿ/ನವೀಕರಣ ಕಾಮಗಾರಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಕೈಗೊಳ್ಳಲಾಗುವುದು.
124. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಒದಗಿಸಲಾಗುವುದು.
125. ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ KKRDB macro ಅನುದಾನದಿಂದ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪಿಸಲಾಗುವುದು.
126. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕಲಬುರಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕಕ್ಕೇರಾ, ರಾಯಚೂರು ಜಿಲ್ಲೆಯ ಅಂಬಾಮಠ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
127. ಸರ್ಕಾರದ 11 ಪಾಲಿಟೆಕ್ನಿಕ್ಗಳಲ್ಲಿ ಹಾಗೂ ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆ ಹಾಗೂ ಉದ್ಯೋಗಾವಕಾಶವಿರುವ ಕೋರ್ಸ್ಗಳಾದ AI, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಮುಂತಾದ 15 ಹೊಸ ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು.
128. AnitaB.org India ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯೊಂದಿಗೆ ವೃತ್ತಿ ಜೀವನದ ಆರಂಭಿಕ ಹಂತದಲ್ಲಿರುವ ವಿಜ್ಞಾನ, ತಾಂತ್ರಿಕ, ಗಣಿತ ಮತ್ತು ಇಂಜಿನಿಯರಿಂಗ್ (STEM) ವಿಭಾಗಗಳಲ್ಲಿನ ಆಯ್ದ 3,000 ಮಹಿಳಾ ಪದವೀಧರರಿಗೆ ಕೌಶಲ್ಯಾಭಿವೃದ್ಧಿ/ವೃತ್ತಿನಿರತ ತರಬೇತಿಗಳನ್ನು ಒಟ್ಟು 13.50 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲಾಗುವುದು.
129. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು ಐಐಟಿ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದ ವತಿಯಿಂದ ಈಗಾಗಲೇ
100 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಪ್ರಸಕ್ತ ವರ್ಷದಲ್ಲಿಯೂ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.
130. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಹಾಗೂ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ʻದೀಪಿಕಾ ವಿದ್ಯಾರ್ಥಿ ವೇತನʼ ಯೋಜನೆಯಡಿ ನೀಡಲಾಗುತ್ತಿದೆ. ಇದನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಲಾಗುವುದು.
131. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು.
132. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ, ಹೆಸರಘಟ್ಟ ಇಲ್ಲಿ ನಡೆಸಲಾಗುತ್ತಿರುವ ಸೌಂಡ್ ರೆಕಾರ್ಡಿಂಗ್ ಮತ್ತು ಇಂಜಿನಿಯರಿಂಗ್ ಹಾಗೂ ಸಿನಿಮಾಟೋಗ್ರಫಿ ಕೋರ್ಸುಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು.
133. ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು.
134. ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ನಮ್ಮ ಸರ್ಕಾರವು ಉದ್ದೇಶಿಸಿದೆ.
135. ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು.
136. ಕರ್ನಾಟಕದಲ್ಲಿ NCC ಯನ್ನು ಉತ್ತೇಜಿಸುವ ಸಲುವಾಗಿ ಪ್ರಸ್ತುತ ಇರುವ 96,000 NCC ಕೆಡೆಟ್ಗಳ ಕಾರ್ಯಬಲವನ್ನು ಮುಂದಿನ ಎರಡು ವರ್ಷಗಳಲ್ಲಿ 10,000ಗಳಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
137. ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು 25 ಎಕರೆ ಜಮೀನನ್ನು ನೀಡಲಾಗುವುದು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ
138. ಕಳೆದ ವರ್ಷ ಪ್ರಾರಂಭಿಸಲಾದ, ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನದ ಪರಿಣಾಮವಾಗಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು ಶೇ.24ರಷ್ಟು ಇಳಿಕೆಯಾಗಿರುತ್ತದೆ. ಈ ಅಭಿಯಾನದಡಿ ಪ್ರತಿ ತಾಯಂದಿರ ಮರಣವನ್ನು ತಜ್ಞರ ಸಮಿತಿಯಿಂದ ವಿಶ್ಲೇಷಿಸಿ ಗುಣಾತ್ಮಕವಾದ ಗರ್ಭಿಣಿ ಮತ್ತು ಪ್ರಸವ ಸೇವೆಗಳನ್ನು ನೀಡಲಾಗುತ್ತಿದೆ. ಹೆರಿಗೆ ಆಸ್ಪತ್ರೆಗಳಿಗೆ ಮಾರ್ಗದರ್ಶನ, ಹೆಚ್ಚಿನ ಮಾನವ ಸಂಪನ್ಮೂಲ ಮತ್ತು ಆಧುನಿಕ ಉಪಕರಣಗಳನ್ನು ನೀಡಲಾಗುತ್ತಿದೆ.
139. ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಯಡಿ ಶಾಲಾ ಕಾಲೇಜುಗಳ 52 ಲಕ್ಷ ಮಕ್ಕಳಿಗೆ ರಕ್ತಹೀನತೆ ತಪಾಸಣೆ ನಡೆಸಲಾಗಿದೆ. ರಕ್ತಹೀನತೆ ಕಂಡುಬಂದಿರುವ 11.7 ಲಕ್ಷ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲಾಗಿದ್ದು, ಇದರಲ್ಲಿ 3.7 ಲಕ್ಷ ಮಕ್ಕಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಉಳಿದ ಮಕ್ಕಳಿಗೆ ಚಿಕಿತ್ಸೆ ಮತ್ತು ಅನುಸರಣೆ ಮುಂದುವರೆಸಲಾಗಿದೆ.
140. ಹೃದಯದ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ST-Elevated Myocardial Infarction (STEMI) ಕಾರ್ಯಕ್ರಮದಡಿ
ಒಟ್ಟು 9.4 ಲಕ್ಷ ECG ಗಳನ್ನು ಮಾಡಲಾಗಿದ್ದು, 13,933 ತೀವ್ರ ಹೃದಯಾಘಾತದ ರೋಗಿಗಳನ್ನು ಪತ್ತೆ ಹಚ್ಚಿ ಇವರಲ್ಲಿ
7,668 ರೋಗಿಗಳಿಗೆ ಚಿಕಿತ್ಸೆಯನ್ನು ನೀಡಲಾಗಿದೆ.
141. ಕಳೆದ ಮೂರು ವರ್ಷಗಳ ಅವಧಿಯಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲ್ಲೂಕು ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು. ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 900 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
142. ಆಯುಷ್ಮಾನ್ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಹಾಲಿ ಚಾಲ್ತಿಯಲ್ಲಿರುವ 2018ರ ಚಿಕಿತ್ಸಾ ಪ್ಯಾಕೇಜ್ದರಗಳನ್ನು ಪರಿಷ್ಕರಿಸಿ ಹೆಚ್.ಬಿ.ಪಿ.-2022 ಪ್ಯಾಕೇಜ್ದರಗಳನ್ನು ಜಾರಿಗೆ ತರಲು ತೀರ್ಮಾನಿಸಿದೆ. ಇದರಿಂದ ಬಡರೋಗಿಗಳಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೌಲಭ್ಯ ಸಿಗಲಿದೆ. ಇದಕ್ಕಾಗಿ 400 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು. ಸದರಿ ಯೋಜನೆಯನ್ನು ಯಶಸ್ವಿನಿ, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ
ರಾಜ್ಯ ವಿಮಾ ಯೋಜನೆ ಮತ್ತು ಅನ್ವಯಿಸುವ ಇತರ ಯೋಜನೆಗಳ ಅನುದಾನವನ್ನು ಒಗ್ಗೂಡಿಸುವ ಮೂಲಕ ಅನುಷ್ಠಾನಗೊಳಿಸಲಾಗುವುದು.
143. ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸಮಗ್ರ ಆಘಾತ ಆರೈಕೆ (Trauma Care) ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಸಾಧನಗಳನ್ನು ಹಂತ ಹಂತವಾಗಿ ಪೂರೈಸುವ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 45 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
144. ತೀವ್ರತರವಾದ ಅಪೌಷ್ಟಿಕತೆಯನ್ನು (Severe Acute Malnutrition) ಹೊಂದಿರುವ ಮಕ್ಕಳಿಗೆ ವೈದ್ಯಕೀಯ
ಮತ್ತು ಪೌಷ್ಟಿಕಾಂಶದ ಚಿಕಿತ್ಸೆ ನೀಡಲು ಈಗಾಗಲೇ
86 ತಾಲ್ಲೂಕುಗಳಲ್ಲಿ ಪೌಷ್ಟಿಕ ಪುನಃಶ್ಚೇತನ ಕೇಂದ್ರಗಳು (NRC) ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಉಳಿದ 63 ತಾಲ್ಲೂಕುಗಳಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ.ಗಳನ್ನು ಒದಗಿಸಲಾಗುವುದು.
145. ಕಡಿಮೆ ಜನನ ತೂಕದ ಹಾಗೂ ಅನಾರೋಗ್ಯ ಪೀಡಿತ ನವಜಾತ ಶಿಶುಗಳಿಗೆ ಅಗತ್ಯವಿರುವ ವಿಶೇಷ ಔಷಧೋಪಚಾರ, ಸಮಗ್ರ ನವಜಾತ ಶಿಶು ಆರೈಕೆ ಸೌಲಭ್ಯಗಳು ಹಾಗೂ ಪ್ರಸವಪೂರ್ವ ಸೇವೆಗಳನ್ನು ಮತ್ತಷ್ಟು ಬಲಪಡಿಸಲಾಗುವುದು. ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.
146. ಟೈಪ್-1 ಮಧುಮೇಹದಿಂದ (Type-1 Diabetes) ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್ಗಳನ್ನು ನೀಡಲಾಗುವುದು.
147. ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲವರ್ಧನೆಗೊಳಿಸಲು KKRDB ವಾರ್ಷಿಕ ಸ್ಥಳೀಯ ಯೋಜನೆಯಲ್ಲಿ (micro plan) ಆದ್ಯತೆ ಮೇರೆಗೆ ಅನುದಾನವನ್ನು ಮೀಸಲಿರಿಸಲಾಗುವುದು.
148. ಗಣಿಬಾಧಿತ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳನ್ನು KMERC ಅನುದಾನದಡಿಯಲ್ಲಿ ವಿಸ್ತರಿಸಲಾಗುವುದು.
149. ಗಂಭೀರ, ದೀರ್ಘಕಾಲೀನ ಹಾಗೂ ಮಾರಣಾಂತಿಕ ಕಾಯಿಲೆಗಳೊಂದಿಗೆ ಬದುಕುತ್ತಿರುವ ರೋಗಿಗಳಿಗೆ ಕೇರಳ ಮಾದರಿಯಲ್ಲಿ ಗೃಹಾಧಾರಿತ ಉಪಶಮನ ಆರೈಕೆಯನ್ನು Pallium India ಸಂಸ್ಥೆಯ ಸಹಯೋಗದೊಂದಿಗೆ ನೀಡಲಾಗುವುದು.
150. ರಾಜ್ಯದಲ್ಲಿ ಬೇಡಿಕೆ ಇರುವ 50 ಕೇಂದ್ರಗಳಲ್ಲಿ 150 ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಮೂಲಕ ವಾರ್ಷಿಕವಾಗಿ 1.35 ಲಕ್ಷ ಡಯಾಲಿಸಿಸ್ಸೇವೆಗಳನ್ನು ಒದಗಿಸಲಾಗುವುದು. ಇದಕ್ಕಾಗಿ
20 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ.
151. ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲಾಗುವುದು.
152. ಜಿಲ್ಲಾ ಆರೋಗ್ಯ ಅಧಿಕಾರಿ (DHO), ಜಿಲ್ಲಾ ಶಸ್ತ್ರಚಿಕಿತ್ಸಕರು (DS) ಇತ್ಯಾದಿ ಆಡಳಿತಾತ್ಮಕ ಹುದ್ದೆಗಳಿಗೆ ಅಧಿಕಾರಿಗಳ ನೇಮಕಾತಿಯಲ್ಲಿ ವಸ್ತುನಿಷ್ಠತೆಯನ್ನು ತರುವ ಮೂಲಕ ಸಾರ್ವಜನಿಕ ಆರೋಗ್ಯ ವೃಂದವನ್ನು (Public Health Cadre) ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು.
153. ಡಿಜಿಟಲ್ಆರೋಗ್ಯ ಕಾರ್ಯಕ್ರಮದಡಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು:
· ʻಸಮಸ್ತʼ ಮೊಬೈಲ್ಅಪ್ಲಿಕೇಶನ್ಮೂಲಕ ಆರೋಗ್ಯ ಇಲಾಖೆಯ ಎಲ್ಲಾ ಕ್ಷೇತ್ರ ಸಿಬ್ಬಂದಿ ನಿರ್ವಹಿಸುತ್ತಿರುವ ವಹಿಗಳ ಡಿಜಿಟಲೀಕರಣ;
· ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿಎಲ್ಲಾ ರೋಗಿಗಳಿಗೆ ಸಂಪೂರ್ಣ ಗಣಕೀಕೃತ ನೋಂದಣಿ, ಆರೋಗ್ಯ ದಾಖಲೆಗಳ ಡಿಜಿಟಲೀಕರಣ ಮತ್ತು ಯುಪಿಐ ಆಧಾರಿತ ಶುಲ್ಕ ಪಾವತಿ ವ್ಯವಸ್ಥೆ ಜಾರಿ;
· ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಟೆಲಿ-ರೇಡಿಯಾಲಜಿ (Scanning) ಮತ್ತು ಟೆಲಿ-ಲೇಬರ್ ರೂಮ್ಗಳ (Smart Labour Room) ಅಳವಡಿಕೆ.
154. ಇಸ್ಕಾನ್ ಮೂಲಕ ರೋಗಿಗಳಿಗೆ ಆಹಾರ ಪೂರೈಕೆಯ ಯಶಸ್ವಿ ಮಾದರಿಯನ್ನು ರಾಜ್ಯದ ಆಯ್ದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು.
155. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಆಯ್ದ ಆಯುಷ್ ಆಸ್ಪತ್ರೆಗಳಲ್ಲಿ ಪಂಚಕರ್ಮ ಘಟಕಗಳನ್ನು ಸ್ವಾವಲಂಬಿ (self-sustaining) ಮಾದರಿಯಲ್ಲಿ ಸ್ಥಾಪಿಸಲಾಗುವುದು.
156. ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.
ವೈದ್ಯಕೀಯ ಶಿಕ್ಷಣ
157. ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಸೌಕರ್ಯವನ್ನು ಇನ್ನಷ್ಟು ಸದೃಢಗೊಳಿಸಲು ಕೆಳಕಂಡ ಪ್ರಮುಖ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ:-
· ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ
10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ ೯೨ ಕೋಟಿ ರೂ. ವೆಚ್ಚದ
ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ.
· ೨೩೬ ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ
ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು.
· ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾಂಗ ಕಸಿ
ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ.
158. 2026-೨೭ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನವನ್ನು ಮತ್ತು ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ.
159. ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು.
160. ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾಗಿರುತ್ತದೆ. ಅಲ್ಲದೆ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಸದರಿ ಕಾಲೇಜುಗಳ ಕಾರ್ಯಾಚರಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
161. ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು.
162. ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.
163. ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಸ್ಥಾಪಿಸಲಾಗುವುದು.
164. ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು.
165. ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.
166. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು
ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು. ಬೆಂಗಳೂರು ವೈದ್ಯಕೀಯ ಕಾಲೇಜಿನ MBBS ಮತ್ತು BDS ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಗುಲಾಬಿಯೆಂದರೆ
ಅಮ್ಮನಿಗೆ ಇಷ್ಟ
ಗೊತ್ತು ಅವಳಿಗೆ
ಮುಳ್ಳಲ್ಲಿ ಅರಳುವ ಕಷ್ಟ
-ಬಿ.ಎಂ. ಬಶೀರ್
167. ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೂ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಟ್ಟು 62,345 ಕೋಟಿ ರೂ.ಗಳ
ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 28,608 ಕೋಟಿ ರೂ.ಗಳನ್ನು ಮೀಸಲಿರಿಸಿದೆ.
168. ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ʻಅಕ್ಕಪಡೆ ಯೋಜನೆʼಯನ್ನು ಗೃಹ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.
169. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರವನ್ನು ವಿತರಿಸಲಾಗುವುದು.
170. ಮಾಜಿ ದೇವದಾಸಿಯರ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು, ಪುನರ್ವಸತಿ ಕಲ್ಪಿಸಲು ಮತ್ತು ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಅವರ ನಿಖರ
ಮಾಹಿತಿ ಸಂಗ್ರಹಿಸುವುದಕ್ಕಾಗಿ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ.
ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವುದರ ಜೊತೆಗೆ ಹೆಣ್ಣುಮಕ್ಕಳಿಗೆ ಸ್ವಯಂ ಉದ್ಯೋಗ ಹಾಗೂ ವೈಯಕ್ತಿಕ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯ ಆರ್ಥಿಕ ಸಹಾಯ ನೀಡುವ ಕಾರ್ಯಕ್ರಮವನ್ನು ರೂಪಿಸಿ ಜಾರಿಗೆ ತರಲು ಐದು ಕೋಟಿ ರೂ.ಗಳನ್ನು ಮೀಸಲಿಡಲಾಗುವುದು.
171. ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ಪ್ರಸಕ್ತ ನೀಡಲಾಗುತ್ತಿರುವ 30,000 ರೂ.ಗಳ ಪ್ರೋತ್ಸಾಹಧನವನ್ನು 45,000 ರೂ.ಗಳಿಗೆ ಹೆಚ್ಚಿಸಲಾಗುವುದು.
172. ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡದ ಡಿಮ್ಹಾನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ʻಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರʼಗಳನ್ನು ಪ್ರಾರಂಭಿಸಲಾಗುವುದು.
173. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣವನ್ನು (ECCE) ಬಲಪಡಿಸಲು ಈ ಭಾಗದ ಜಿಲ್ಲೆಗಳಲ್ಲಿ ಲಭ್ಯವಿರುವ 1,668 ನಿವೇಶನಗಳಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ KKRDB ಅನುದಾನದಿಂದ ಕೈಗೊಳ್ಳಲಾಗುವುದು.
174. 2026–27ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿಯಾಗಿ
20 ಹೊಸ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು.
175. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯು ಅವರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗಿತ್ತು. ತದನಂತರದಲ್ಲಿ, ಮಧ್ಯಾಹ್ನದ ಬಿಸಿಯೂಟದ ಬದಲಾಗಿ
Take Home Ration ಗೆ ಒತ್ತು ನೀಡಲಾಗಿ, ಯೋಜನೆಯ ಮೂಲ ಉದ್ದೇಶ ಹಳಿತಪ್ಪಿದಂತಾಗಿರುತ್ತದೆ. ಇದನ್ನು ಮನಗಂಡು
ಎಲ್ಲಾ ಫಲಾನುಭವಿಗಳಿಗೂ ಹಿಂದಿನಂತೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪ್ರತಿದಿನ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ಮರುಸ್ಥಾಪಿಸಲಾಗುವುದು.
176. ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು.
177. 2026-27ನೇ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63,135 ಕೋಟಿ ರೂ. ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663 ಕೋಟಿ ರೂ. ಒದಗಿಸಲಾಗಿದೆ.
ಸಮಾಜ ಕಲ್ಯಾಣ
ಕುರಿಗಳ ಕಾಯುವ ಕುರುಬನ ಕೂಗು
ಜನರ ಮಾತು ಕವನ
ಸೋತ ರಟ್ಟೆಗಳ ಹೂತ ಕಾಲುಗಳ
ಬೆವರ ಹಸಿರು ಕವನ
- ಸಿದ್ದಲಿಂಗಯ್ಯ
178. ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಲ್ಲಿ ಈ ಕೆಳಕಂಡ ನಾಲ್ಕು ಪ್ರಮುಖ ದಿಕ್ಕುಗಳಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಕೈಗೊಂಡಿದೆ.
· ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ:
Ø 75 ಲಕ್ಷ ವಿದ್ಯಾರ್ಥಿಗಳಿಗೆ 2,676 ಕೋಟಿ ರೂ.ಗಳ ವಿದ್ಯಾರ್ಥಿವೇತನ, 2,231 ವಿದ್ಯಾರ್ಥಿಗಳಿಗೆ 389 ಕೋಟಿ ರೂ.ಗಳ ಶೈಕ್ಷಣಿಕ ಸಾಲ ಮತ್ತು 18 ಲಕ್ಷ ವಿದ್ಯಾರ್ಥಿಗಳಿಗೆ 1,273 ಕೋಟಿ ರೂ.ಗಳಷ್ಟು ಶುಲ್ಕ ಮರುಪಾವತಿ ಮಾಡಲಾಗಿದೆ.
Ø ರಾಜ್ಯದಲ್ಲಿ 5,306 ವಿದ್ಯಾರ್ಥಿನಿಲಯ ಮತ್ತು 1,258 ವಸತಿ ಶಾಲೆಗಳನ್ನು ಹಾಗೂ 300 ಮೌಲಾನಾ ಆಜಾದ್ ಶಾಲೆಗಳಲ್ಲಿ 13.30 ಲಕ್ಷ ಮಕ್ಕಳ ಶಿಕ್ಷಣಕ್ಕಾಗಿ 15,081 ಕೋಟಿ ರೂ. ಒದಗಿಸಲಾಗಿದೆ.
· ಕೌಶಲ್ಯ ಮತ್ತು ಜೀವನೋಪಾಯಕ್ಕೆ ನೆರವು: ಸಬ್ಸಿಡಿ ಆಧಾರಿತ ಸಣ್ಣ ಉದ್ಯಮಗಳಿಂದ ಸುಸ್ಥಿರ ಆದಾಯ ಮೂಲಗಳನ್ನು ಸೃಜಿಸುವ ಉದ್ಯಮಶೀಲತೆಗೆ ಉತ್ತೇಜನೆ ಮತ್ತು ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡುವುದು.
Ø ಸ್ವಾವಲಂಬಿ ಸಾರಥಿ ಯೋಜನೆಯಡಿ 8,195 ಫಲಾನುಭವಿಗಳಿಗೆ 249 ಕೋಟಿ ರೂ.ಗಳ ಸಾಲ, ಗಂಗಾಕಲ್ಯಾಣ ಯೋಜನೆಯಡಿ 21,556 ಫಲಾನುಭವಿಗಳಿಗೆ 637 ಕೋಟಿ ರೂ.ಗಳು ಮತ್ತು 2,928 ಫಲಾನುಭವಿಗಳಿಗೆ ಭೂಮಿ ಒದಗಿಸಲು 421 ಕೋಟಿ ರೂ.ಗಳನ್ನು ನೀಡಲಾಗಿದೆ.
· ಮೂಲಸೌಕರ್ಯ ಅಭಿವೃದ್ಧಿ: ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡುವುದರ ಮೂಲಕ ಬಡಜನರ ಜೀವನ ಮಟ್ಟವನ್ನು ಸುಧಾರಿಸುವ ಕಾರ್ಯಕ್ರಮಗಳು:
Ø ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 1,332 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
Ø ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ
11 ಸಮುದಾಯಗಳ ವಸತಿರಹಿತ 6,257 ಕುಟುಂಬಗಳಿಗೆ
4.50 ಲಕ್ಷ ರೂ.ಗಳ ಘಟಕ ವೆಚ್ಚದಲ್ಲಿ ಒಟ್ಟು 282 ಕೋಟಿ ರೂ.ಗಳಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ.
Ø ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು 1,635 ಕೋಟಿ ರೂ.ಗಳ ವೆಚ್ಚದಲ್ಲಿ 3,662 ಕಾಮಗಾರಿಗಳನ್ನು ಅನುಮೋದಿಸಲಾಗಿದೆ.
Ø ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಗಳಲ್ಲಿ 1,650 ಸಮುದಾಯ ಭವನ/ವಾಲ್ಮೀಕಿ ಭವನ/ಶಾದಿ ಮಹಲ್ ಗಳ ನಿರ್ಮಾಣಕ್ಕಾಗಿ 822 ಕೋಟಿ ರೂ.ಗಳನ್ನು ಮಂಜೂರು ಮಾಡಿ 732 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
· ನಾಯಕತ್ವ ಮತ್ತು ಪ್ರಾತಿನಿಧ್ಯ: ಸರ್ಕಾರದ ನೀತಿ ನಿರೂಪಣೆ ಹಾಗೂ ಅನುಷ್ಠಾನದಲ್ಲಿ ಹಿಂದುಳಿದವರಿಗೆ ಸೂಕ್ತ ಪ್ರಾತಿನಿಧ್ಯತೆಯನ್ನು ಕಲ್ಪಿಸುವುದು.
Ø ಒಟ್ಟು 26,821 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ/ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಕೌಶಲ್ಯಾಭಿವೃದ್ಧಿಗೆ ತರಬೇತಿಯನ್ನು ನೀಡಲು 841 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
179. ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2026-27ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಗೆ 31,804 ಕೋಟಿ ರೂ. ಹಾಗೂ ಬುಡಕಟ್ಟು ಉಪಯೋಜನೆಗೆ 12,828 ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 44,632 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.
180. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳ ಇತರೆ ನಿರ್ವಹಣಾ ವೆಚ್ಚದ ದರಗಳನ್ನು ಪರಿಷ್ಕರಿಸಲು 56 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು.
181. ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳಾದ
ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್, ಸೋಲಾರ್ ವಾಟರ್ ಹೀಟರ್ ಮತ್ತು ಡೈನಿಂಗ್ ಟೇಬಲ್ಗಳನ್ನು ಒದಗಿಸಲು 25 ಕೋಟಿ ರೂ.ಗಳನ್ನು ಮೀಸಲಿರಿಸಿದೆ.
182. ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಿದ್ಯಾರ್ಥಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪ್ರತಿ ಜಿಲ್ಲೆಗೆ 150 ಸಂಖ್ಯಾಬಲದ ಒಂದು ಬಾಲಕಿಯರ ಮತ್ತು ಒಂದು ಬಾಲಕರ ಒಟ್ಟು
62 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.
183. Right To Education Act ರಡಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರವೇಶ ಪಡೆದ ಶಾಲೆಗಳಲ್ಲಿಯೇ 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಲು 19 ಕೋಟಿ ರೂ.ಗಳನ್ನು ಒದಗಿಸಲಾಗುವುದು.
184. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣಕ್ಕೆ ಅನುವು ಮಾಡಿಕೊಡಲು ಒಟ್ಟು 31 ವಸತಿ ಶಾಲೆಗಳನ್ನು ಉನ್ನತೀಕರಿಸಲಾಗುವುದು.
185. ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಒಟ್ಟು 40 ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
186. ಕ್ರೈಸ್ವಸತಿ ಶಾಲೆಗಳಿಗೆ ಅಗತ್ಯವಿರುವ ಡೆಸ್ಕ್, ಬೆಂಚ್, ಪೀಠೋಪಕರಣಗಳು, ಗ್ರಂಥಾಲಯ, ಕಂಪ್ಯೂಟರ್ಲ್ಯಾಬ್ ಮತ್ತು ವಿಜ್ಞಾನ ಪ್ರಯೋಗಾಲಯ, ಹಾಸಿಗೆ-ಹೊದಿಕೆ, ಟೂ ಟಯರ್ಕಾಟ್, ಸೋಲಾರ್ವಾಟರ್ಹೀಟರ್, ಡೈನಿಂಗ್ ಟೇಬಲ್, ಸಿಸಿಟಿವಿ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ನೀಡಲು50 ಕೋಟಿ ರೂ.ಗಳನ್ನು ಒದಗಿಸಲಾಗುವುದು.
187. ಪರಿಶಿಷ್ಟ ಜಾತಿಯ 20, ಪರಿಶಿಷ್ಟ ಪಂಗಡದ 5 ಮತ್ತು ಹಿಂದುಳಿದ ವರ್ಗಗಳ 5 ವಸತಿ ಶಾಲೆಗಳು ಸೇರಿದಂತೆ ನಿವೇಶನ ಲಭ್ಯವಿರುವ ಒಟ್ಟು 30 ಕ್ರೈಸ್ವಸತಿ ಶಾಲೆಗಳಿಗೆ 22 ಕೋಟಿ ರೂ. ಘಟಕ ವೆಚ್ಚದಲ್ಲಿ ಒಟ್ಟಾರೆ 660 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.
188. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಎರಡು, ಪರಿಶಿಷ್ಟ ಪಂಗಡದ ಒಂದು ಮತ್ತು ಹಿಂದುಳಿದ ವರ್ಗಗಳ ಒಂದು ಸೇರಿದಂತೆ ಒಟ್ಟು ನಾಲ್ಕು ಕೈಸ್ ವಸತಿ ಶಾಲೆಗಳನ್ನು
K-CET/JEE/NEET ಪರೀಕ್ಷೆಗಳಿಗೆ ಗುಣಮಟ್ಟದ
ತರಬೇತಿ ನೀಡಲು Centre of Excellenceಗಳನ್ನಾಗಿ ಉನ್ನತೀಕರಿಸಲಾಗುವುದು. ಈ ಶಾಲೆಗಳಿಗೆ ಪ್ರತ್ಯೇಕವಾದ ಪ್ರವೇಶ ಪರೀಕ್ಷೆಯ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕಾಗಿ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.
189. ನಮ್ಮ ಸರ್ಕಾರವು ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಸಲು ಪ್ರಾಯೋಗಿಕವಾಗಿ 50 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ, ಅಲ್ಲಿನ ವಿದ್ಯಾರ್ಥಿಗಳ ಮುಂದಾಳತ್ವದಲ್ಲಿ ಮೆಸ್ ಸಮಿತಿಯೊಂದನ್ನು ರಚಿಸಿ
ಕಾಲಕಾಲಕ್ಕೆ ಅಗತ್ಯ ಅನುದಾನವನ್ನು ಮುಂಗಡವಾಗಿ ನೀಡಿ, ಪಾರದರ್ಶಕತೆ ಹಾಗೂ ಜವಾಬ್ದಾರಿಯುತ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಮುಂದುವರೆದು, ಈ ಪ್ರಯೋಗದ ಕಲಿಕೆಗಳನ್ನು ಅಳವಡಿಸಿಕೊಂಡು ಹಂತ ಹಂತವಾಗಿ ವಿಸ್ತರಿಸಲಾಗುವುದು.
190. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಿಂದ 6,562 ವಸತಿ ನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಪ್ರಸ್ತುತ 8.50 ಲಕ್ಷ ನಿಲಯಾರ್ಥಿಗಳಿದ್ದು, ಇವುಗಳ ನಿರ್ವಹಣೆಯಲ್ಲಿ ಸುಧಾರಣೆ ತರಲು ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು.
191. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸಂಖ್ಯಾಬಲದ 10 ವಸತಿ ನಿಲಯಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಪ್ರಾರಂಭಿಸಲಾಗುವುದು.
192. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಡಿ ಬರುವ ನಿಗಮಗಳಲ್ಲಿ ಮೈಕ್ರೊ ಕ್ರೆಡಿಟ್ಪ್ರೇರಣಾ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆದ ಮಹಿಳಾ ಸ್ವ-ಸಹಾಯ ಸಂಘಗಳು ಸಾಲವನ್ನು ಸಕಾಲದಲ್ಲಿ ಪೂರ್ಣವಾಗಿ ಮರುಪಾವತಿಸಿದ ಸಂಘಗಳಿಗೆ ಎರಡನೇ ಬಾರಿಗೆ ಸಾಲ ಮತ್ತು ಸಹಾಯಧನ ಮಂಜೂರು ಮಾಡಲಾಗುವುದು.
193. ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತಿ ಕಂದಾಯ ವಿಭಾಗಕ್ಕೆ ಒಂದರಂತೆ ನಾಲ್ಕು ವಿಶೇಷ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.
194. ಡಾ|| ಬಿ.ಆರ್. ಅಂಬೇಡ್ಕರ್ರವರು ಭೇಟಿ ನೀಡಿದ ಸ್ಥಳಗಳಾದ ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ CBSE ಪಠ್ಯಕ್ರಮದ ನಾಲ್ಕು ಕ್ರೈಸ್ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
195. ಸಮಾಜ ಕಲ್ಯಾಣ ಇಲಾಖೆಯಡಿ ಬೌದ್ಧ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು.
196. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಗಳ ಅಡಿಯಲ್ಲಿ ಬರುವ ನಿಗಮಗಳು ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಕೊಳವೆ ಬಾವಿಗಳ ವಿದ್ಯುದೀಕರಣಕ್ಕಾಗಿ ಪಾವತಿಸುವ ಮೊತ್ತವನ್ನು 75,000 ರೂ.ಗಳಿಂದ 1,50,000 ರೂ.ಗಳಿಗೆ ಹೆಚ್ಚಿಸಲಾಗುವುದು.
197. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ 2026-27ನೇ ಸಾಲಿನಲ್ಲಿ 1,500 ಕೋಟಿ ರೂ.ಗಳನ್ನು ಒದಗಿಸಲಾಗುವುದು.
198. ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.
ಪರಿಶಿಷ್ಟ ವರ್ಗಗಳ ಕಲ್ಯಾಣ
199. ಪರಿಶಿಷ್ಟ ಪಂಗಡಗಳ ಇಲಾಖೆ ಮತ್ತು ನಿರ್ದೇಶನಾಲಯದಡಿ ಬರುವ ನಿಗಮ ಮತ್ತು ಇತರೆ ಕಛೇರಿಗಳಿಗಾಗಿ ಬೆಂಗಳೂರಿನ ಸುಮನಹಳ್ಳಿಯಲ್ಲಿ “ಶ್ರೀ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ” ಸಂಕೀರ್ಣವನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.
200. 2026-27ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು.
201. ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ/ಯುವತಿಯರಿಗೆ ಫಾಸ್ಟ್ ಫುಡ್ಟ್ರಕ್ಟ್ರೈಲರ್/ಮೊಬೈಲ್ಕಿಚನ್ಫುಡ್ಕಿಯೋಸ್ಕ್ (Kiosk) ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ ನಾಲ್ಕು ಲಕ್ಷ ರೂ.ಗಳ ಸಹಾಯಧನ ನೀಡಲಾಗುವುದು.
202. ಪರಿಶಿಷ್ಟ ಪಂಗಡದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಆರೈಕೆಗಾಗಿ 119 ಮಹಿಳಾ ಕೇರ್ಟೇಕರ್ಹುದ್ದೆಗಳನ್ನು ಮಂಜೂರು ಮಾಡಲಾಗುವುದು. ಇದಕ್ಕಾಗಿ ಮೂರು ಕೋಟಿ ರೂ.ಗಳನ್ನು ಒದಗಿಸಲಾಗುವುದು.
203. ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ, ಸಿದ್ದಿ ಮತ್ತು ಇತರೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ
PVTG ಗಳಿಗೆ ʻಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮʼವನ್ನು ಸ್ಥಾಪಿಸಲಾಗುವುದು.
204. ಪರಿಶಿಷ್ಟ ಪಂಗಡದ ಸಮುದಾಯದವರ ಹಕ್ಕುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅವರ ದೂರು ಮತ್ತು ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾಗಿ ಪರಿಶಿಷ್ಟ ಪಂಗಡಗಳ ಆಯೋಗವನ್ನು ಸ್ಥಾಪಿಸಲಾಗುವುದು.
ಹಿಂದುಳಿದ ವರ್ಗಗಳ ಕಲ್ಯಾಣ
205. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಬೇಡಿಕೆಯಿರುವ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ದಾವಣಗೆರೆ, ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.
206. ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು 30 ಕೋಟಿ
ರೂ.ಗಳನ್ನು ಒದಗಿಸಲಾಗುವುದು. ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.
207. ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಐದು ಕೋಟಿ ರೂ. ಘಟಕ ವೆಚ್ಚದಲ್ಲಿ
50 ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.
208. ಬೆಂಗಳೂರು ಮತ್ತು ಮೈಸೂರು ನಗರದ ಧೋಬಿಘಾಟ್ಗಳಲ್ಲಿ ಮಡಿವಾಳ ಸಮಾಜದವರಿಗೆ ವಾಷಿಂಗ್ ಮೆಷಿನ್, ಡ್ರೈಯರ್ ಮತ್ತು ಐರನಿಂಗ್ ಮೆಷಿನ್ ಇತ್ಯಾದಿ ಸಾಮಗ್ರಿಗಳನ್ನು ಒಳಗೊಂಡಂತೆ ತಲಾ 75 ಲಕ್ಷ ರೂ. ಘಟಕ ವೆಚ್ಚದಲ್ಲಿ ಆಧುನಿಕ Laundry ಗಳನ್ನು ಸ್ಥಾಪಿಸಲಾಗುವುದು. ಇದಲ್ಲದೆ, ನಿರುದ್ಯೋಗಿ ಯುವಕ/ ಯುವತಿಯರು ಸ್ವಯಂ ಉದ್ಯೋಗಕ್ಕಾಗಿ ಆಧುನಿಕ Laundry ಗಳನ್ನು ಸ್ಥಾಪಿಸಲು 5 ಲಕ್ಷ ರೂ.ಗಳವರೆಗೆ ಶೇ.೪ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು.
209. ಸವಿತಾ ಸಮಾಜದವರು ಸಲೂನ್ಗಳನ್ನು ತೆರೆಯಲು ಶೇ.4 ರಷ್ಟು ಬಡ್ಡಿದರದಲ್ಲಿ 10 ಲಕ್ಷ ರೂ.ಗಳವರೆಗೆ ಸಾಲ ಮತ್ತು ಸಹಾಯಧನವನ್ನು ಮಂಜೂರು ಮಾಡಲಾಗುವುದು.
210. ಕುಂಬಾರ, ತಿಗಳ, ಗಾಣಿಗ, ಕೊಡವ, ಉಪ್ಪಾರ, ಈಡಿಗ ಮತ್ತು ಕಾಡುಗೊಲ್ಲ ಸಮುದಾಯದ ಜನರ ಆರ್ಥಿಕ ಏಳಿಗೆಗಾಗಿ
ನೆರವು ನೀಡಲು ಪ್ರತ್ಯೇಕ ನಿಗಮಗಳನ್ನು ಸ್ಥಾಪಿಸಲಾಗಿದೆ.
ಈ ನಿಗಮಗಳ ಮೂಲಕ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.
211. ಹಿಂದುಳಿದ ವರ್ಗಗಳ 250 ಇಂಜಿನಿಯರಿಂಗ್ ಪದವೀಧರರಿಗೆ ಅವರ ತಾಂತ್ರಿಕ ಕೌಶಲ್ಯವನ್ನು ಉತ್ಕೃಷ್ಟಗೊಳಿಸಲು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ NIT/IIT/IIM ಗಳಲ್ಲಿ
AI ತರಬೇತಿ ಪಡೆಯಲು ತಲಾ ಎರಡು ಲಕ್ಷ ರೂ. ಗಳಂತೆ ಸಾಲ ನೀಡಲಾಗುವುದು.
212. 31-03-2021ರ ಅಂತ್ಯದವರೆಗೆ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿಯ ನಿಗಮಗಳಿಂದ ಪಡೆದ ಸಾಲದ ಅಸಲನ್ನು ಪಾವತಿ ಮಾಡುವವರಿಗೆ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ಒಂದಾವರ್ತಿ ತೀರುವಳಿ ಯೋಜನೆಯನ್ನು
(One time settlement scheme) ಜಾರಿಗೆ ತರಲಾಗುವುದು.
213. ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನ, ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಮತ್ತು ಈ ವರ್ಗಗಳ ಅಭಿವೃದ್ಧಿ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು.
214. ಹಿಂದುಳಿದ ವರ್ಗಗಳ ಪ್ರವರ್ಗ-1ರಡಿ ಬರುವ 46 ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಲು ಉತ್ತೇಜಿಸುವ ಸಲುವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳಿಗೆ ನೀಡುವ ಸೌಲಭ್ಯಗಳನ್ನು ವಿಸ್ತರಿಸಲಾಗುವುದು.
ಅಲ್ಪಸಂಖ್ಯಾತರ ಕಲ್ಯಾಣ
ಮಾನವತೆಯ ಕಟ್ಟಡಕ್ಕೆ ಪ್ರೀತಿಯೊಂದೇ ಇಟ್ಟಿಗೆ,
ಇಟ್ಟಿಗೆಗಳ ಬೆಸೆಯಬೇಕು ಕರುಣೆ ಸ್ನೇಹದೊಟ್ಟಿಗೆ
-ಬಿ.ಆರ್. ಲಕ್ಷ್ಮಣರಾವ್
215. ಹೆಚ್ಚಿನ ಬೇಡಿಕೆ ಇರುವ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ
25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. ಹಾಲಿ ಕಾರ್ಯನಿರ್ವಹಿಸುತ್ತಿರುವ
25 ವಿದ್ಯಾರ್ಥಿನಿಲಯಗಳಲ್ಲಿ 50 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲಾಗುವುದು.
216. ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಸಂತ ಶಿಶುನಾಳ ಶರೀಫರವರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳನ್ನು CBSE ಪಠ್ಯಕ್ರಮದಡಿಯಲ್ಲಿ ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು.
217. 2026-27ನೇ ಸಾಲಿನಲ್ಲಿ 25 ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ ವಸತಿ ಶಾಲೆಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು.
218. 2025-26ನೇ ಸಾಲಿನಲ್ಲಿ 117 ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ 600 ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇನ್ನೂ
100 ಶಾಲೆಗಳನ್ನು 400 ಕೋಟಿ ರೂ.ಗಳ ವೆಚ್ಚದಲ್ಲಿ ಇದೇ ಮಾದರಿಯಲ್ಲಿ ಉನ್ನತೀಕರಿಸಲಾಗುವುದು.
219. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪೈಕಿ 25 ವಸತಿ ಶಾಲೆಗಳಲ್ಲಿ ಪಿ.ಯು.ಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ಪ್ರಾರಂಭಿಸಲಾಗುವುದು. 18 ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು.
220. ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ಪಿ.ಯು.ಸಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಿ, ಅವರಿಗೆ K-CET/JEE/NEET ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು Center of Excellenceಗಳನ್ನಾಗಿ ಸ್ಥಾಪಿಸಲಾಗುವುದು. ಅಲ್ಲದೇ 20 ವಸತಿ ಶಾಲೆಗಳಲ್ಲಿನ ಮಕ್ಕಳಿಗೆ CET/JEE/NEET ವಿಶೇಷ ತರಬೇತಿ ನೀಡಲಾಗುವುದು.
221. ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ನಿರಂತರ ಕಲಿಕಾ ಅವಕಾಶಗಳನ್ನು ಒದಗಿಸಲು ಮತ್ತು ಜ್ಞಾನವನ್ನು ವೃದ್ಧಿಸಲು ಆಯ್ದ ವಕ್ಫ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.
222. ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳಿಗೆ ಹೆಚ್ಚಿನ
ಬೇಡಿಕೆ ಇರುವ ಕಾರಣ ಬೆಂಗಳೂರಿನಲ್ಲಿ 100 ಸಂಖ್ಯಾಬಲದ ಉದ್ಯೋಗಸ್ಥ ಮಹಿಳೆಯರ ನಾಲ್ಕು ವಸತಿನಿಲಯಗಳನ್ನು ಪ್ರಾರಂಭಿಸಲಾಗುವುದು.
223. ಜೈನ, ಬೌದ್ಧ ಮತ್ತು ಸಿಖ್ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ.
224. ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ 6,000 ರೂ.ಗಳ ಮಾಸಿಕ ಗೌರವಧನವನ್ನು ನೀಡಲಾಗುವುದು.
225. ಅಲ್ಪಸಂಖ್ಯಾತ ಸಮುದಾಯದ ನಿರ್ಗತಿಕ ಜನರಿಗೆ
100 ಸಂಖ್ಯಾಬಲದ ಎರಡು ಮಹಿಳಾ ವೃದ್ಧಾಶ್ರಮಗಳನ್ನು ಪ್ರಾರಂಭಿಸುವುದಕ್ಕೆ ನೆರವು ನೀಡಲಾಗುವುದು.
226. ಅಲ್ಪಸಂಖ್ಯಾತರ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಹಾಗೂ ಉನ್ನತ ಮಟ್ಟದ ಡಿಜಿಟಲ್ ಶಿಕ್ಷಣವನ್ನು ಪ್ರೋತ್ಸಾಹಿಸಲು 5,000 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗಾಗಿ ತಲಾ
50,000 ರೂ.ಗಳನ್ನು ನೀಡಲಾಗುವುದು.
227. ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗಿ ಯುವಕ/ ಯುವತಿಯರಿಗೆ ಫಾಸ್ಟ್ ಫುಡ್ಟ್ರಕ್ಟ್ರೈಲರ್/ಮೊಬೈಲ್ಕಿಚನ್ಫುಡ್ಕಿಯೋಸ್ಕ್ (Kiosk) ಸೌಲಭ್ಯಗಳನ್ನು ನಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಠ ಮೂರು ಲಕ್ಷ ರೂ.ಗಳ ಸಹಾಯಧನ ನೀಡಲಾಗುವುದು.
228. ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಪ್ರೋತ್ಸಾಹ ನೀಡಲು ಅಲ್ಪಸಂಖ್ಯಾತರ ಮಹಿಳಾ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸಲಾಗುವುದು.
229. ಹಿರಿಯ ನಾಗರೀಕರಿಗೆ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರೈಸ್ತ ಸಂಸ್ಥೆಗಳು ನಡೆಸುವ
10 ವೃದ್ಧಾಶ್ರಮಗಳಲ್ಲಿ ಸಮಗ್ರ ಜೆರಿಯಾಟ್ರಿಕ್ ಪ್ಯಾಲಿಯೇಟಿವ್ ಕೇರ್ ಘಟಕಗಳನ್ನು ಸ್ಥಾಪಿಸಲು ತಲಾ 50 ಲಕ್ಷ ರೂ.ಗಳಂತೆ ಒಟ್ಟಾರೆ ಐದು ಕೋಟಿ ರೂ. ಒದಗಿಸಲಾಗುವುದು.
230. ಬೆಂಗಳೂರಿನ ಕೆಂಗೇರಿಯಲ್ಲಿ ಆಸಿರ್ವನಂ ಬೆನಿಡಿಕ್ಟಿನ್ಮೊನಾಸ್ಟರಿಯ ಎರಡು ಎಕರೆ ಜಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರ ಸ್ಥಾಪಿಸಲು ಮುಖ್ಯ ಸಂಸ್ಥಾತ್ಮಕ ಮೂಲಸೌಕರ್ಯದ ನಿರ್ಮಾಣಕ್ಕೆ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.
231. ಸಂವಿಧಾನ ಶಿಲ್ಪಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಇತರೆ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಯಲ್ಲಿ ಅನುವಾದಿಸಲಾಗುವುದು.
232. ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳನ್ನು ನಿರ್ಮಾಣ ಮಾಡಲಾಗುವುದು.
233. ವಕ್ಫ್ ಸಂಸ್ಥೆಗಳಲ್ಲಿನ 31 ಮಹಿಳಾ ಪಿ.ಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ಮುಂದುವರೆದು, ಸವಣೂರಿನಲ್ಲಿ ಒಂದು ಹೊಸ ಮಹಿಳಾ ಪಿ.ಯು. ಕಾಲೇಜನ್ನು ಪ್ರಾರಂಭಿಸಲಾಗುವುದು.
234. ವಾಣಿಜ್ಯ ಉದ್ದೇಶಕ್ಕೆ ಅತಿ ಹೆಚ್ಚು ಬೇಡಿಕೆಯಿರುವ ಪ್ರದೇಶಗಳಲ್ಲಿ ವಕ್ಫ್ ಆಸ್ತಿಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.
235. ಬೀದರ್ನ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು.
ವಸತಿ
236. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿವಿಧ ವಸತಿ ಯೋಜನೆಗಳಡಿಯಲ್ಲಿ 7,328 ಕೋಟಿ ರೂ.ಗಳ ಮೊತ್ತದಲ್ಲಿ ಒಟ್ಟಾರೆ 4,19,454 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಮೂರು ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಹಿಂದಿನ ಸರ್ಕಾರವು ಅನುದಾನ ನೀಡದೇ ಮಂಜೂರಾತಿ ನೀಡಿರುವ 4.90 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ನಮ್ಮ ಸರ್ಕಾರದ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತದೆ.
237. ಸರ್ವರಿಗೂ ಸೂರು ಕಲ್ಪಿಸುವ ಉದ್ದೇಶದಿಂದ ರಾಜ್ಯದ ವಿವಿಧ ವಸತಿ ಯೋಜನೆಗಳಡಿ BLC ಆಧಾರಿತ ಒಂದು ಲಕ್ಷ ಮನೆಗಳ ಹೊಸ ಗುರಿಯನ್ನು ಮಂಜೂರು ಮಾಡಲಾಗುವುದು. ಸದರಿ ಗುರಿಯಡಿ ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ನೀಡುವ ಸಹಾಯಧನವನ್ನು 1.20 ಲಕ್ಷ ರೂ. ಗಳಿಂದ 2 ಲಕ್ಷ ರೂ.ಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು
ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 2 ಲಕ್ಷ ರೂ.ಗಳಿಂದ
3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
238. ರಾಜ್ಯ ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು Manual ಲಾಟರಿ ಪ್ರಕ್ರಿಯೆಯ ಮುಖಾಂತರ ಆಯ್ಕೆಗೊಳಿಸಲಾಗುತ್ತಿದ್ದು, ಇನ್ನು ಮುಂದೆ ಆನ್ಲೈನ್ ಲಾಟರಿ ಮೂಲಕ ಗ್ರಾಮ ಸಭೆಗಳಲ್ಲಿ ಆಯ್ಕೆಗೊಳಿಸಲಾಗುವುದು.
239. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ಎ.ಹೆಚ್.ಪಿ) 1.29 ಲಕ್ಷ ಮನೆಗಳ ನಿರ್ಮಾಣ ಕಾರ್ಯವನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿದೆ. ರಾಜ್ಯ ಸರ್ಕಾರದಿಂದ 1,136 ಕೋಟಿ ರೂ.ಗಳ ಅನುದಾನವನ್ನು ಹೆಚ್ಚುವರಿಯಾಗಿ ಫಲಾನುಭವಿಗಳ ವಂತಿಕೆಗೆ ಎದುರಾಗಿ ಒದಗಿಸಿ 2025-26ನೇ ಸಾಲಿಗೆ ಒಟ್ಟಾರೆ 79,134 ಮನೆಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಿಂದ ಕೊಳಗೇರಿ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಿದಂತಾಗಿದೆ.
240. ʻಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮʼ ಎಂಬ ಹೆಸರಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ 80,000 ಆಸನ ಸಾಮರ್ಥ್ಯವುಳ್ಳ ಕ್ರಿಕೆಟ್ ಕ್ರೀಡಾಂಗಣ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳನ್ನು ನಡೆಸಲು ಅನುಕೂಲವಾಗುವಂತೆ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುವುದು.
241. ಕೆ.ಹೆಚ್.ಬಿ. ವತಿಯಿಂದ ನಮ್ಮ ಮನೆ ಯೋಜನೆಯಡಿಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ 50 ಸಾವಿರ ನಿವೇಶನಗಳನ್ನು ರಿಯಾಯತಿ ದರದಲ್ಲಿ ವಿತರಿಸಲು ಉದ್ದೇಶಿಸಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು
242. ನಮ್ಮ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ಮಾಹೆ ಐದು ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗಾಗಿ 17,167 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸ್ತುತ ನೀಡಲಾಗುತ್ತಿರುವ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿ ಮಾಹೆ ಪೌಷ್ಟಿಕಾಂಶವುಳ್ಳ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಒಳಗೊಂಡ ʻಇಂದಿರಾ ಆಹಾರ ಕಿಟ್ʼ ವಿತರಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ 2026-27ನೇ ಸಾಲಿನಲ್ಲಿ 6,200 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ.
243. ಆಹಾರ ಧಾನ್ಯಗಳ ವಿತರಣೆಗಾಗಿ ನೀಡಲಾಗುವ ಚಿಲ್ಲರೆ ಹಾಗೂ ಸಗಟು ಲಾಭಾಂಶದ ಪಾವತಿಯಲ್ಲಿ ವಿಳಂಬವನ್ನು ನಿವಾರಿಸಲು FIST Application ಮೂಲಕ ಲಾಭಾಂಶವನ್ನು ನೇರವಾಗಿ ಪಾವತಿಸಲಾಗುವುದು.
244. ಪ್ರಸ್ತುತ ಜಾರಿಯಲ್ಲಿರುವ ಇಲಾಖೆಯ ಸಹಾಯವಾಣಿ (1967) ವ್ಯವಸ್ಥೆಯನ್ನು ಸ್ವಯಂ ಚಾಲಿತ ದೂರು ಕೇಂದ್ರ, ಧ್ವನಿ ಚಾಟ್ಬಾಟ್ ಮತ್ತು ಲೈವ್ ಕರೆ ವರ್ಗಾವಣೆ ವ್ಯವಸ್ಥೆಗಳನ್ನು ಒಳಗೊಂಡ AI ಆಧಾರಿತ ʻSmart Annavaniʼ ಯನ್ನಾಗಿ ಪರಿವರ್ತಿಸಲಾಗುವುದು.
245. ದಾಸೋಹ ಯೋಜನೆಯಡಿ ಈಗಾಗಲೇ ರಾಜ್ಯದಾದ್ಯಂತ 274 ಕಲ್ಯಾಣ ಸಂಸ್ಥೆಗಳ 32,059 ಫಲಾನುಭವಿಗಳಿಗೆ 14 ಕೋಟಿ ರೂ. ವೆಚ್ಚದಲ್ಲಿ ಆಹಾರ ಭದ್ರತೆಯನ್ನು ಒದಗಿಸಲಾಗುತ್ತಿದ್ದು, ಪ್ರಸಕ್ತ ವರ್ಷದಲ್ಲಿ 34 ಹೊಸ ಕಲ್ಯಾಣ ಸಂಸ್ಥೆಗಳಲ್ಲಿ ಇರುವ
6,701 ಫಲಾನುಭವಿಗಳಿಗೂ ವಿಸ್ತರಿಸಲಾಗುವುದು.
ಕಾರ್ಮಿಕ
246. ರಾಜ್ಯದಲ್ಲಿನ ಸರ್ಕಾರಿ ನೌಕರರನ್ನೊಳಗೊಂಡಂತೆ ವಿವಿಧ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ವೇತನ ಸಹಿತ ರಜೆಯನ್ನು ಪಡೆಯಲು ಅವಕಾಶ ಮಾಡಿಕೊಡಲಾಗಿದೆ.
247. ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಅವಲಂಬಿತರಿಗೆ ವಿವಿಧ ಕಲ್ಯಾಣ ಕಾರ್ಯಕ್ರಮಗಳಡಿ ಒಟ್ಟು 43,936 ಅರ್ಹ ಫಲಾನುಭವಿಗಳಿಗೆ ಒಟ್ಟು 39 ಕೋಟಿ ರೂ.ಗಳ ಧನಸಹಾಯ ನೀಡಲಾಗಿದೆ.
248. ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಒಟ್ಟು 5,062 ಅಭ್ಯರ್ಥಿಗಳ ಪರವಾಗಿ
18 ಕೋಟಿ ರೂ.ಗಳನ್ನು ಅರ್ಹ ಉದ್ಯೋಗದಾತರಿಗೆ ಮರುಪಾವತಿಸಲಾಗಿದೆ.
249. ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ತಲಾ 60 ಕೋಟಿ ರೂ. ವೆಚ್ಚದಲ್ಲಿ 10 GTTC ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಒಟ್ಟಾರೆ
600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು.
250. 6 ರಿಂದ 12ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ
2025-26ನೇ ಸಾಲಿನಲ್ಲಿ 42 ಶ್ರಮಿಕ ವಸತಿ ಶಾಲೆಗಳನ್ನು ಅನುಮೋದಿಸಲಾಗಿದೆ. 2026-27ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 6೨ ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಎಲ್ಲಾ 10೪ ಶಾಲೆಗಳನ್ನು ಬಾಡಿಗೆ ಕಟ್ಟಡಗಳಲ್ಲಿ ಪ್ರಾರಂಭಿಸಲಾಗುವುದು. (ಅನುಬಂಧ-4 ಮತ್ತು 5)
251. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರು ಹಾಗೂ ಅವರ ಮಕ್ಕಳಿಗೆ ವೃತ್ತಿ ಬುನಾದಿ ಹಾಗೂ ಉನ್ನತಿ ಕೌಶಲ್ಯ ತರಬೇತಿಯನ್ನು ನೀಡಲು ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಅತ್ಯಾಧುನಿಕ ಮೂಲಸೌಕರ್ಯವನ್ನು ಒಳಗೊಂಡ ಕೌಶಲ್ಯ ತರಬೇತಿ ಅಕಾಡೆಮಿಯನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.
252. ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಕೌಶಲ್ಯಾಧಾರಿತ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಆನ್ಲೈನ್ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸುವ ʻಕಾಯಕ ಭಾಗ್ಯʼ ಎಂಬ ಯೋಜನೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಜಾರಿಗೆ ತರಲಾಗುವುದು.
253. ಕಾರ್ಮಿಕ ರಾಜ್ಯ ವಿಮಾ ಸೊಸೈಟಿಯ ರಚನೆಯಿಂದಾಗಿ ಪ್ರಸ್ತುತ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳನ್ನು 50 ಲಕ್ಷ ವಿಮಾದಾರರಿಗೆ ಹಾಗೂ 150 ಲಕ್ಷ ಅವಲಂಬಿತರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಒದಗಿಸಲಾಗುವುದು. ಈ ಸೊಸೈಟಿಯ ಮುಖಾಂತರ ಕೆಳಕಂಡ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು:
· ಹುಬ್ಬಳ್ಳಿ, ಇಂದಿರಾನಗರ, ಮೈಸೂರು ಮತ್ತು ದೊಡ್ಡಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಹಾಗೂ ಇಂದಿರಾನಗರದಲ್ಲಿ ಮೂರು ವರ್ಷದ PG (DNB) ಕೋರ್ಸ್ಗಳನ್ನು ಪ್ರಾರಂಭಿಸಲಾಗುವುದು;
· Breast and Cervical Cancer ತಪಾಸಣೆ ಮತ್ತು Cervical Cancer ತಡೆಗಟ್ಟುವ ಲಸಿಕಾ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗುವುದು;
· ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆ.ಜಿ.ಎಫ್ ಮತ್ತು ಚಿಕ್ಕಮಗಳೂರಿನಲ್ಲಿರುವ ಕಾರ್ಮಿಕ ರಾಜ್ಯ ವಿಮಾ (ESI) ಚಿಕಿತ್ಸಾಲಯಗಳನ್ನು ಉನ್ನತೀಕರಿಸಲಾಗುವುದು.
ಕೌಶಲ್ಯಾಭಿವೃದ್ಧಿ
254. ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ ಒಟ್ಟು 3,08,267 ಅರ್ಹ ಫಲಾನುಭವಿಗಳಿಗೆ 913 ಕೋಟಿ ರೂ. ಮೊತ್ತದ ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗಿದೆ.
255. ಇಲಾಖೆಯ ವಿವಿಧ ಯೋಜನೆ ಹಾಗೂ ಸಂಸ್ಥೆಗಳಡಿ
ಒಟ್ಟಾರೆ 80,086 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ. ಯುವಕ/ಯುವತಿಯರ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು
CMKKY 2.0 ಜಾರಿಗೊಳಿಸಲಾಗಿದೆ.
256. ನಮ್ಮ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದ 11 ಬೃಹತ್ ಉದ್ಯೋಗ ಮೇಳಗಳಲ್ಲಿ ಒಟ್ಟು 1.16 ಲಕ್ಷ ಅಭ್ಯರ್ಥಿಗಳು ಹಾಗೂ 1,946 ಉದ್ಯೋಗದಾತರು ಭಾಗವಹಿಸಿದ್ದು, 19,863 ಅಭ್ಯರ್ಥಿಗಳು ಆಯ್ಕೆಗೊಂಡಿರುತ್ತಾರೆ. 35,983 ಅಭ್ಯರ್ಥಿಗಳಿಗೆ ಉದ್ಯೋಗ ನಿಯೋಜಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.
257. ರಾಜ್ಯದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿಟಿಟಿಐಗಳು, ಕೆಎಸ್ಡಿಎ ಮತ್ತು ಜೆಟಿಎಸ್ಗಳ ಮೂಲಭೂತ ಸೌಕರ್ಯ ಮತ್ತು ತರಬೇತಿ ಗುಣಮಟ್ಟವನ್ನು ಹೆಚ್ಚಿಸಲು ADB ಸಹಭಾಗಿತ್ವದಲ್ಲಿ ಒಟ್ಟು 1,386 ಕೋಟಿ ರೂ.ಗಳ ಐದು ವರ್ಷಗಳ ಅವಧಿಯ "K-QUEST" (KARNATAKA – Quality Upgradation for Employment and Skills Transformation) ಯೋಜನೆಯನ್ನು ಜಾರಿಗೊಳಿಸಲಾಗುವುದು.
258. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡಿರುವ PM- SETU ಯೋಜನೆ ಅಡಿಯಲ್ಲಿ ಕೇಂದ್ರ, ರಾಜ್ಯ ಮತ್ತು ಉದ್ದಿಮೆಗಳ ಸಹಭಾಗಿತ್ವದಲ್ಲಿ Hub & Spoke ಮಾದರಿಯಲ್ಲಿ ಕ್ಲಸ್ಟರ್ಗಳನ್ನಾಗಿ ಉನ್ನತೀಕರಿಸಲಾಗುವುದು. 2026-27ನೇ ಸಾಲಿನಲ್ಲಿ ಎರಡು ಕ್ಲಸ್ಟರ್ ಗಳನ್ನು
241ಕೋಟಿ ರೂ. ಘಟಕ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ.
259. ಮೈಸೂರು ಮತ್ತು ಕಲಬುರಗಿಯಲ್ಲಿ ತಲಾ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ (Schneider Electric)
ಯೂತ್ ಇಂಪ್ಯಾಕ್ಟ್ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದರಿಂದ ಪ್ರತಿ ವರ್ಷ ಒಟ್ಟಾರೆ 2,000 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮತ್ತು ಉದ್ಯೋಗವಕಾಶ ಕಲ್ಪಿಸಲು ನೆರವಾಗಲಿದೆ.
260. ಐಟಿಐ ಕಲಿತ ವಿದ್ಯಾರ್ಥಿನಿಯರಿಗೆ ಉದ್ಯಮಗಳಲ್ಲಿ ವಿಪುಲವಾದ ಉದ್ಯೋಗಾವಕಾಶಗಳಿದ್ದು, ಹೆಣ್ಣುಮಕ್ಕಳ ಪ್ರವೇಶ ಹೆಚ್ಚಿಸಲು ಮಹಿಳಾ ತರಬೇತಿದಾರರಿಗೆ 1,200 ರೂ.ಗಳ ವಾರ್ಷಿಕ ಬೋಧನಾ ಶುಲ್ಕ ವಿನಾಯಿತಿ ನೀಡಲಾಗುವುದು.
261. ಐಟಿಐ ವಿದ್ಯಾರ್ಥಿಗಳಿಗೆ ಎರಡು ಹೆಚ್ಚುವರಿ ವಿಷಯಗಳಲ್ಲಿ ಬೋಧನೆ ಮಾಡುವ ಮೂಲಕ ಉನ್ನತ ವ್ಯಾಸಂಗ ಅಥವಾ ಉತ್ತಮ ಉದ್ಯೋಗ ಪಡೆದುಕೊಳ್ಳುವ ಅವಕಾಶ ಕಲ್ಪಿಸಲು ಪದವಿ ಪೂರ್ವ ಪ್ರಮಾಣ ಪತ್ರವನ್ನು ನೀಡಲಾಗುವುದು.
262. ಕೊಪ್ಪಳದ ಜಿಟಿಟಿಸಿ–ಎಂಎಸ್ಡಿಸಿಯಲ್ಲಿ M/s Aequs Toy Cluster Industry ಯ ಕಾರ್ಯತಂತ್ರದ ಸಹಯೋಗದೊಂದಿಗೆ Precision Tool Engineering ನಲ್ಲಿ ತಂತ್ರಜ್ಞಾನ ಕೇಂದ್ರವನ್ನು ಕೆ.ಕೆ.ಆರ್.ಡಿ.ಬಿ.ಯ 10 ಕೋಟಿ ರೂ.ಗಳ ಅನುದಾನದೊಂದಿಗೆ ಒಟ್ಟಾರೆ 20 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುವುದು.
263. ಜಿಲ್ಲೆಗಳಲ್ಲಿ ಬೇಡಿಕೆ ಆಧಾರಿತ ಕೌಶಲ್ಯ ಅಭಿವೃದ್ಧಿಯನ್ನು ಬೆಂಬಲಿಸಲು ಒಂದು ಕೋಟಿ ರೂ. ವೆಚ್ಚದಲ್ಲಿ Challenge fund ಸ್ಥಾಪಿಸಲಾಗುವುದು. ಈ ನಿಧಿ ಸ್ಥಳೀಯ ಕಾರ್ಮಿಕ ಹಾಗೂ ಉದ್ಯೋಗ ಸಂಬಂಧಿತ ಸವಾಲುಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ.
264. ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ (KSDA) ಅಡಿಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಜೊತೆಗೂಡಿ ಕರ್ನಾಟಕ ಕೌಶಲ್ಯ ಬುದ್ಧಿಮತ್ತೆ ಮತ್ತು ಕಾರ್ಯತಂತ್ರ ಘಟಕವನ್ನು (KSISU) ಸ್ಥಾಪಿಸಲಾಗುವುದು. ಆಯ್ದ ದೇಶಗಳು ಮತ್ತು ಸಂಸ್ಥೆಗಳೊಂದಿಗೆ ಪಾಲುದಾರಿಕೆಯ ಮೂಲಕ ಜಾಗತಿಕ ಕೌಶಲ್ಯ ಮೈತ್ರಿಕೂಟಗಳನ್ನು ಆರಂಭಿಸಲಾಗುವುದು.
265. ಬಹು ವೇದಿಕೆಗಳ ಮೂಲಕ ಪ್ರಸ್ತುತ ನೀಡಲಾಗುತ್ತಿರುವ ಎಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನೆಗಳು ಮತ್ತು ಸೇವೆಗಳನ್ನು ಸಂಯೋಜಿಸಿ ಏಕೀಕೃತ ಕೌಶಲ್ಯ ಅಭಿವೃದ್ಧಿ ಪೋರ್ಟಲ್ ಅನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
266. ಗ್ರಾಮೀಣ ಭಾಗದಲ್ಲಿ ವಯೋವೃದ್ಧರ ಕ್ಷೇಮಾಭಿವೃದ್ಧಿ ಜೊತೆಗೆ ಬಾಣಂತಿಯರು ಹಾಗೂ ಶಿಶುಗಳ ಆರೈಕೆ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಉದ್ದೇಶದಿಂದ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಮಾನ್ಯತೆ ಪಡೆದ ಸಂಸ್ಥೆಗಳ ಮೂಲಕ ʻಆರೈಕೆ ಉದ್ಯಮಶೀಲತಾ ತರಬೇತಿʼಯನ್ನು ನೀಡಲಾಗುವುದು.
267. 2026 ಅನ್ನು ʻಅಂತಾರಾಷ್ಟ್ರೀಯ ರೈತ ಮಹಿಳಾ ವರ್ಷʼವೆಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಉತ್ತೇಜನದೊಂದಿಗೆ ಸುಸ್ಥಿರ ಮತ್ತು ದೀರ್ಘಾವಧಿಯ ಗ್ರಾಮೀಣಾಭಿವೃದ್ಧಿಗಾಗಿ 5,000 ರೈತ ಮಹಿಳೆಯರಿಗೆ ಆಧುನಿಕ ಕೃಷಿ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುವುದು.
268. ನಗರ ಪ್ರದೇಶಗಳ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣ ಒದಗಿಸಲು ಸಮೀಕ್ಷೆ ನಡೆಸುವುದು, ಗುರುತಿನ ಚೀಟಿಗಳು ಮತ್ತು ಮಾರಾಟ ಪ್ರಮಾಣ ಪತ್ರಗಳನ್ನು ನೀಡಲು ಹಾಗೂ ಪಟ್ಟಣ ಮಾರಾಟ ಸಮಿತಿಗಳನ್ನು ರಚಿಸುವುದಕ್ಕಾಗಿ ಏಳು ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
269. ಐದನೇ ರಾಜ್ಯ ಹಣಕಾಸು ಆಯೋಗವು 2026-2030ರ ವರದಿಯನ್ನು ಸಲ್ಲಿಸಿದೆ. ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ಸಾಲೇತರ ನಿವ್ವಳ ಸ್ವಂತ ರಾಜಸ್ವ ಆದಾಯದ (NLNORR) ಪ್ರಮಾಣವನ್ನು ಶೇ.48ರಿಂದ ಶೇ.50ಕ್ಕೆ ಹೆಚ್ಚಿಸಲಾಗುವುದು. ಇದರಲ್ಲಿ ಶೇ.35ರಷ್ಟನ್ನು ಪಂಚಾಯತ್ ರಾಜ್ ಸಂಸ್ಥೆಗಳಿಗೆ ಹಾಗೂ ಶೇ.15ರಷ್ಟನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗುವುದು.
270. ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಒಟ್ಟಾರೆ
69,488 ಕೋಟಿ ರೂ. ಮೊತ್ತದ ಕಾಮಗಾರಿಗಳು ಅನುಮೋದನೆಯಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಪಾಲು 30,888 ಕೋಟಿ ರೂ.ಗಳಾಗಿದ್ದು, ರಾಜ್ಯ ಸರ್ಕಾರದ ಪಾಲು 38,600 ಕೋಟಿ ರೂ.ಗಳಾಗಿರುತ್ತದೆ. ಕೇಂದ್ರ ಸರ್ಕಾರದಿಂದ ಇದುವರೆಗೆ ಕೇವಲ 11,786 ಕೋಟಿ ರೂ.ಗಳನ್ನು ಮಾತ್ರ
ಬಿಡುಗಡೆ ಮಾಡಿದ್ದು, ಇನ್ನೂ 19,102 ಕೋಟಿ ರೂ.ಗಳನ್ನು
ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಾಗಿರುತ್ತದೆ.
ರಾಜ್ಯ ಸರ್ಕಾರದಿಂದ ಒದಗಿಸಬೇಕಾದ ಅನುದಾನದಲ್ಲಿ ಈಗಾಗಲೇ 27,098 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು,
11,502 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡದಿದ್ದರೂ ಸಹ ಈ ಯೋಜನೆಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಒಟ್ಟಾರೆ 15,500 ಕೋಟಿ ರೂ.ಗಳಷ್ಟು ಅನುದಾನವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. 2026-27ನೇ ಸಾಲಿನಲ್ಲಿ ಈ ಯೋಜನೆಗಾಗಿ 10,433 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿರುತ್ತದೆ.
271. ಗ್ರಾಮೀಣ ಕುಟುಂಬಗಳಿಗೆ ಜೀವನೋಪಾಯ ಭದ್ರತೆಯನ್ನು ಒದಗಿಸುವ ಮಹತ್ವಾಕಾಂಕ್ಷೆಯಿಂದ ಯು.ಪಿ.ಎ. ಸರ್ಕಾರವು 2004ರಲ್ಲಿ ಜಾರಿಗೆ ತಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು (MGNREGS) ಗ್ರಾಮೀಣ ಭಾಗದಲ್ಲಿ ವಿಕೇಂದ್ರೀಕೃತ ಯೋಜನೆಯನ್ನು ರೂಪಿಸುವುದಕ್ಕೆ ಉತ್ತೇಜನ ನೀಡುವುದರೊಂದಿಗೆ ಗ್ರಾಮೀಣ ಮೂಲಸೌಕರ್ಯ ಮತ್ತು ದೀರ್ಘಕಾಲೀನ ಬಾಳಿಕೆ ಬರುವ ಸಮುದಾಯ
ಆಸ್ತಿಗಳ ಸೃಷ್ಟಿಗೆ ಮಹತ್ವದ ಕೊಡುಗೆಯನ್ನು ನೀಡಿರುತ್ತದೆ.
ಈ ಯೋಜನೆಯಡಿ ರಾಜ್ಯದಲ್ಲಿ ಸುಮಾರು 182 ಕೋಟಿ ಮಾನವ ದಿನಗಳ ಉದ್ಯೋಗವು ಸೃಜನೆಯಾಗಿರುತ್ತದೆ. ಒಟ್ಟಾರೆ
61,000 ಕೋಟಿ ರೂ. ವೇತನ ಪಾವತಿಸಲಾಗಿದ್ದು, ಸುಮಾರು
77 ಲಕ್ಷ ಆಸ್ತಿಗಳು ನಿರ್ಮಾಣವಾಗಿರುತ್ತವೆ. ಪ್ರಸಕ್ತ ವರ್ಷದಲ್ಲೇ ಸುಮಾರು 71 ಲಕ್ಷ ಗ್ರಾಮೀಣ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆದಿರುತ್ತವೆ.
272. ಇದೀಗ ಕೇಂದ್ರ ಸರ್ಕಾರವು ಈ ಯೋಜನೆಯನ್ನು ರದ್ದುಗೊಳಿಸಿ VB-G-RAM-G ಯೋಜನೆಯನ್ನು ಜಾರಿಗೆ ತಂದಿದ್ದು, ಇದು ನರೇಗಾ ಯೋಜನೆಯ ಮೂಲೋದ್ದೇಶವಾದ ಹಕ್ಕು ಆಧಾರಿತ (Rights-based) ದೃಷ್ಟಿಕೋನವನ್ನು ದುರ್ಬಲಗೊಳಿಸುವ ಕ್ರಮವಾಗಿದೆ ಹಾಗೂ ಮಹಾತ್ಮಾ ಗಾಂಧಿಯವರ ಗ್ರಾಮ ಸ್ವರಾಜ್ ಪರಿಕಲ್ಪನೆಗೆ ವಿರುದ್ಧವಾಗಿರುತ್ತದೆ.
273. ಈ ಯೋಜನೆಯ ಜಾರಿಯಿಂದ ಈ ಕೆಳಗಿನ ಅನಾಹುತಗಳು ಸೃಷ್ಟಿಯಾಗಿರುತ್ತವೆ:
· ಬೇಡಿಕೆ ಆಧಾರಿತ ಉದ್ಯೋಗ ಖಾತರಿಯಿಂದ ದೂರ ಸರಿದು ಕೇಂದ್ರದಿಂದ ನಿರ್ಧರಿಸಲ್ಪಡುವ ಉದ್ಯೋಗ ಹಂಚಿಕೆ ವ್ಯವಸ್ಥೆಗೆ ಅವಕಾಶವಾಗುವುದು.
· ಸಂವಿಧಾನದ 73ನೇ ತಿದ್ದುಪಡಿಯ ಮೂಲ ತತ್ವಕ್ಕೆ ವಿರುದ್ಧವಾಗಿದ್ದು, ಪಂಚಾಯಿತಿಗಳ ನಿರ್ಧರಣಾಧಿಕಾರಕ್ಕೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
· ಯೋಜನೆಯ ರೂಪಿಸುವಿಕೆ ಮತ್ತು ಅನುಷ್ಠಾನಗಳ ಕೇಂದ್ರೀಕರಣ ಹೆಚ್ಚಳವಾಗುವುದು.
· ಪರೋಕ್ಷವಾಗಿ ಗುತ್ತಿಗೆದಾರರ ಭಾಗವಹಿಸುವಿಕೆಗೆ ಅವಕಾಶ ನೀಡುವ ವ್ಯವಸ್ಥೆಯಿಂದಾಗಿ ಗ್ರಾಮೀಣ ಕಾರ್ಮಿಕರಿಗೆ ನೇರ ಉದ್ಯೋಗ ಅವಕಾಶಗಳು ಕಡಿಮೆಯಾಗುವವು.
· ಕೇಂದ್ರದಿಂದ ಹೇರಲ್ಪಡುವ ಆಡಳಿತಾತ್ಮಕ ಮತ್ತು ನಿಯಾಮಕ ನಿಯಂತ್ರಣಗಳಿಂದ ಕಾಮಗಾರಿಗಳ ಸಮಯೋಚಿತ ಜಾರಿಗೆ ಅಡಚಣೆ ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.
274. ಗ್ರಾಮ ಪಂಚಾಯಿತಿಗಳನ್ನು ಸಬಲಗೊಳಿಸಿ ಗ್ರಾಮೀಣ ಜೀವನೋಪಾಯವನ್ನು ಬಲಪಡಿಸಿದ್ದ ಹಿಂದಿನ ವ್ಯವಸ್ಥೆಯನ್ನು ಪುನಃಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ನಮ್ಮ ಸರ್ಕಾರವು ತೀವ್ರವಾಗಿ ಆಗ್ರಹಿಸುತ್ತದೆ. ಗ್ರಾಮೀಣ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಹಾಗೂ ವಿಕೇಂದ್ರೀಕೃತ ಆಡಳಿತದ ತತ್ವಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು, ಅಗತ್ಯವಿದ್ದಲ್ಲಿ ಕಾನೂನು ಹೋರಾಟವನ್ನೂ ಸಹ ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ.
275. ಕಲ್ಯಾಣ ಕರ್ನಾಟಕದ ರಸ್ತೆ ಅಭಿವೃದ್ಧಿಗಾಗಿ ʻಕಲ್ಯಾಣ ಪಥʼ ಯೋಜನೆಯಡಿ 1,000 ಕೋಟಿ ರೂ.ಗಳ ವೆಚ್ಚದಲ್ಲಿ 1,125 ಕಿ.ಮೀ ಉದ್ದದ ರಸ್ತೆ ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ವಿವಿಧ ಹಂತದ ಪ್ರಗತಿಯಲ್ಲಿರುತ್ತವೆ. ಇದುವರೆಗೆ ಈ ಉದ್ದೇಶಕ್ಕಾಗಿ
238 ಕೋಟಿ ರೂ.ಗಳ ವೆಚ್ಚ ಭರಿಸಿದ್ದು, ಉಳಿಕೆ ಕಾಮಗಾರಿಗಳನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು.
276. ADB ನೆರವಿನೊಂದಿಗೆ ಗ್ರಾಮೀಣ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸುವ
ʻಪ್ರಗತಿ ಪಥʼ ಯೋಜನೆಯಡಿ 7,110 ಕಿ.ಮೀ. ಉದ್ದದ
1,೨92 ರಸ್ತೆಗಳ ಅಭಿವೃದ್ಧಿಯನ್ನು 5,190 ಕೋಟಿ ರೂ.ಗಳ ವೆಚ್ಚದಲ್ಲಿ ಅನುಮೋದಿಸಲಾಗಿದೆ. ಇದರಲ್ಲಿ 783 ರಸ್ತೆಗಳ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, 655 ರಸ್ತೆಗಳ ಡಿ.ಪಿ.ಆರ್.ಗಳನ್ನು ತಯಾರಿಸಲಾಗಿದೆ. ಇದಕ್ಕಾಗಿ 2026-27ನೇ ಸಾಲಿನಲ್ಲಿ
500 ಕೋಟಿ ರೂ.ಗಳನ್ನು ಒದಗಿಸಲಾಗಿರುತ್ತದೆ.
277. ಕುಡಿಯುವ ನೀರಿನ ಮೇಲ್ಮಟ್ಟ ಜಲಾಗಾರಗಳ (OHT) ದೀರ್ಘಕಾಲಿಕ ಕಾರ್ಯಕ್ಷಮತೆಯನ್ನು ಖಚಿತಪಡಿಸುವ ಉದ್ದೇಶದಿಂದ 1,000 ಮೇಲ್ಮಟ್ಟ ಜಲಾಗಾರಗಳ ಸ್ವಚ್ಛತೆ, ಸುರಕ್ಷತೆ, ದುರಸ್ಥಿ ಹಾಗೂ ಕಾರ್ಯಾಚರಣೆ ಮತ್ತು ನಿರ್ವಹಣಾ ವ್ಯವಸ್ಥೆಗಳ ಸುಧಾರಣೆ ಮತ್ತು ಪುನಃಶ್ಚೇತನ ಕಾರ್ಯವನ್ನು ಒಟ್ಟಾರೆ
30 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
278. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕಿನ ಬನ್ನಿಕೊಪ್ಪ ಹಾಗೂ 23 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು 125 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
279. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಚಿರಸ್ಥಾಯಿಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ʻಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿʼ ಎಂದು ನಾಮಕರಣ ಮಾಡಲಾಗುವುದು.
280. ಗ್ರಾಮ ಪಂಚಾಯಿತಿಗಳ ಆಸ್ತಿಗಳ ನಗದೀಕರಣ ಮತ್ತು ಮೌಲ್ಯವರ್ಧನೆಗೆ ಸ್ಥಳೀಯ ಆರ್ಥಿಕ ಬಲವರ್ಧನೆ ಕಾರ್ಯಕ್ರಮವನ್ನು (Local Economy Accelerator Program) ಆರಂಭಿಸಲಾಗುವುದು. ಈ ಯೋಜನೆಯಡಿ ಪ್ರಾಯೋಗಿಕವಾಗಿ ಪ್ರತಿ ವಿಭಾಗದ ಐದು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದಲ್ಲಿ ಅವಶ್ಯವಿರುವ ಸೌಲಭ್ಯಗಳನ್ನು ಒಳಗೊಂಡ ಆದಾಯೋತ್ಪನ್ನ ಘಟಕಗಳನ್ನು ಪ್ರಸಕ್ತ ವರ್ಷ 25 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಿ ನಿರ್ವಹಿಸಲಾಗುವುದು.
281. ವಿದ್ಯುಚ್ಛಕ್ತಿ ಬಿಲ್ಲುಗಳ ಪಾವತಿಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸ್ವಯಂ ಸುಸ್ಥಿರಗೊಳಿಸಲು (Self-Sustainable) ಹಾಗೂ ಅವಶ್ಯವಿರುವ ವಾರ್ಷಿಕ ಅಂದಾಜು 4,000 MW ವಿದ್ಯುಚ್ಛಕ್ತಿಯನ್ನು ಉತ್ಪಾದಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ Solar Micro Grid ಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವ ʻಅನಂತʼ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
ಯೋಜನೆ
282. ರಾಜ್ಯದ ಅಭಿವೃದ್ಧಿ ಮತ್ತು ಪ್ರಾದೇಶಿಕ ಅಸಮತೋಲನೆ
ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ನೀಡಲು
ಪ್ರೊ ಎಂ. ಗೋವಿಂದರಾವ್ರವರ ಅಧ್ಯಕ್ಷತೆಯಲ್ಲಿ ನಮ್ಮ ಸರ್ಕಾರದಿಂದ ರಚಿಸಿದ್ದ ಸಮಿತಿಯು ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಹಲವು ಉಪಕ್ರಮಗಳುಳ್ಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುತ್ತದೆ. ಈ ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸಲಾಗುವುದು.
283. ಸಂಪನ್ಮೂಲ ಹಾಗೂ ಆರ್ಥಿಕ ಮತ್ತು ಸಾಮಾಜಿಕ ಮೂಲಸೌಕರ್ಯ ಕೊರತೆಗಳ ಆಧಾರದ ಮೇಲೆ ರಾಜ್ಯದ ತಾಲ್ಲೂಕುಗಳನ್ನು ನಾಲ್ಕು ಗುಂಪುಗಳನ್ನಾಗಿ ವಿಂಗಡಿಸಿ ತಲಾ
59 ತಾಲ್ಲೂಕುಗಳನ್ನು ಅತ್ಯಂತ ಹಿಂದುಳಿದ, ಅತೀ ಹಿಂದುಳಿದ, ಕಡಿಮೆ ಅಭಿವೃದ್ಧಿ ಹೊಂದಿದ ಹಾಗೂ ಮುಂದುವರೆದ ತಾಲ್ಲೂಕುಗಳೆಂದು ಸಮಿತಿಯಿಂದ ಗುರುತಿಸಲಾಗಿದೆ.
284. ಸಮಿತಿಯಿಂದ ಗುರುತಿಸಲಾದ ಅಭಿವೃದ್ಧಿ ಕೊರತೆ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಸಂಪನ್ಮೂಲ ವೃದ್ಧಿ ಮತ್ತು ಆರ್ಥಿಕ ಹಾಗೂ ಸಾಮಾಜಿಕ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೃಷಿ, ನೀರಾವರಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಪೌಷ್ಟಿಕತೆ, ನಗರಾಭಿವೃದ್ಧಿ, ಪ್ರವಾಸೋದ್ಯಮ ಮತ್ತು ರಸ್ತೆ ಸಂಪರ್ಕ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ಸಮಿತಿಯು ಶಿಫಾರಸ್ಸು ಮಾಡಿರುತ್ತದೆ.
285. ಸಮಿತಿಯ ಶಿಫಾರಸ್ಸುಗಳಿಗೆ ತಾತ್ವಿಕವಾಗಿ ಒಪ್ಪಿಗೆಯನ್ನು ನೀಡಲಾಗಿದ್ದು, ಅವುಗಳನ್ನು 2026-27ನೇ ಸಾಲಿನಿಂದ ಹಂತ ಹಂತವಾಗಿ ಅನುಷ್ಠಾನಗೊಳಿಸಲು ನಮ್ಮ ಸರ್ಕಾರವು ಬದ್ಧವಾಗಿರುತ್ತದೆ. ಪ್ರಸಕ್ತ ಸಾಲಿಗೆ ಆಯವ್ಯಯದಲ್ಲಿ
ಈ ಉದ್ದೇಶಕ್ಕಾಗಿ 4,291 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿರುತ್ತದೆ.
286. ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದಿಂದ ಶಿಕ್ಷಣ, ಆರೋಗ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ, ಕೃಷಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಎಂಬ ಐದು ಆದ್ಯತಾ ವಲಯಗಳನ್ನು ಗುರುತಿಸಿ ವರದಿಯನ್ನು ನೀಡಿದ್ದು, ವರದಿಯಲ್ಲಿನ ಶಿಫಾರಸ್ಸುಗಳನ್ನು ಪರಿಶೀಲಿಸಿ ಯೋಜನೆಗಳನ್ನು ರೂಪಿಸಲು ಕ್ರಮವಹಿಸಲಾಗುವುದು.
287. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರವು ಬದ್ಧವಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಕಳೆದ ಮೂರು ವರ್ಷಗಳ ಅವಧಿಯಲ್ಲಿ
13,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ
ಕ್ರಿಯಾ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸಕ್ತ ಸಾಲಿಗೂ 5,000 ಕೋಟಿ ರೂ.ಗಳ
ಕ್ರಿಯಾ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು. ಮಂಡಳಿಯ ವಿವಿಧ ವಿವೇಚನಾ ಮತ್ತು ಮ್ಯಾಕ್ರೋ ಅನುದಾನಗಳಲ್ಲಿ ಶೇ.40ರಷ್ಟು ಅನುದಾನವನ್ನು ಆರೋಗ್ಯ, ಶಿಕ್ಷಣ ಮತ್ತು ಅಪೌಷ್ಠಿಕತೆ ನಿವಾರಣೆ ಕಾರ್ಯಕ್ರಮಗಳಿಗಾಗಿ ಮೀಸಲಿರಿಸಲಾಗುವುದು.
288. ರಾಜ್ಯದ GSDP ಗೆ ಕಲ್ಯಾಣ ಕರ್ನಾಟಕದ ಕೊಡುಗೆಯನ್ನು ಹೆಚ್ಚಿಸುವ ಗುರಿಯೊಂದಿಗೆ ವಿವಿಧ ವಲಯಗಳಲ್ಲಿ ನೀತಿಗಳನ್ನು ರೂಪಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಈ ಉದ್ದೇಶ ಸಾಧನೆಗಾಗಿ ಪ್ರತ್ಯೇಕ ಯೋಜನೆ, ನೀತಿ ಮತ್ತು ದತ್ತಾಂಶ ವಿಶ್ಲೇಷಣಾ ವಿಭಾಗವನ್ನು ಸ್ಥಾಪಿಸಲಾಗುವುದು.
289. ಪ್ರಸ್ತುತ ಕೈಬರಹದಲ್ಲಿ ಒದಗಿಸಲಾಗುತ್ತಿರುವ 2015ಕ್ಕಿಂತ ಮೊದಲಿನ ದಾಖಲೆಗಳನ್ನು ಡಿಜಿಟಲ್ ರೂಪಕ್ಕೆ ಪರಿವರ್ತಿಸಿ
ʻಇ-ಜನ್ಮ’ ಜನನ–ಮರಣ ನೋಂದಣಿ ತಂತ್ರಾಂಶದ ಮೂಲಕ ಡಿಜಿಟಲ್ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಈ ಉದ್ದೇಶಕ್ಕಾಗಿ 10 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
290. ವಿವಿಧ ಕ್ಷೇತ್ರಗಳ ವಿಷಯ ತಜ್ಞರ ಸಹಕಾರದೊಂದಿಗೆ
ʻ5ನೇ ಆವೃತ್ತಿಯ ಕರ್ನಾಟಕ ರಾಜ್ಯ ಮಾನವ ಅಭಿವೃದ್ಧಿ
ವರದಿ–2026ʼ ಹಾಗೂ ʻರಾಜ್ಯ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031ʼ ಗಳನ್ನು ಸಿದ್ಧಪಡಿಸಲಾಗುವುದು.
291. ಗ್ರಾಮ ಮಟ್ಟದಿಂದ ಯೋಜನೆಗಳನ್ನು ಸಿದ್ಧಪಡಿಸಲು
26 ಜಿಲ್ಲೆಗಳಲ್ಲಿ ಜಿಲ್ಲಾ ಯೋಜನಾ ಸಮಿತಿಗಳನ್ನು
ರಚಿಸಿದ್ದು, ʻಜನರ ಯೋಜನೆʼಯನ್ನು (People’s Plan) ರೂಪಿಸಲಾಗುವುದು.
292. KKRDB ಅನುದಾನದಿಂದ ಜೇವರ್ಗಿಯಲ್ಲಿ ಒಂದು Knowledge Park ಅನ್ನು ಸ್ಥಾಪಿಸಲಾಗುವುದು.
ನಗರಾಭಿವೃದ್ಧಿ
293. ಬೆಂಗಳೂರು ಕೇವಲ ಒಂದು ನಗರವಷ್ಟೇ ಅಲ್ಲ. ಇದು ಅಸಂಖ್ಯಾತ ಕನಸುಗಳ ನೆಲೆಬೀಡು. ನಾಡಪ್ರಭು ಕೆಂಪೇಗೌಡರ ಆಡಳಿತದಿಂದ ಹಿಡಿದು ಇಂದಿನ ಸ್ಟಾರ್ಟ್ಅಪ್ ಕ್ರಾಂತಿಯವರೆಗೆ ಈ ನಗರವು ತನ್ನದೇ ಆದ ವೈಶಿಷ್ಟತೆಯನ್ನು ಹೊಂದಿದೆ. ಬೆಂಗಳೂರನ್ನು ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರವನ್ನಾಗಿ ಮಾಡುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿರುತ್ತದೆ. 2025-26ನೇ ಸಾಲಿನಲ್ಲಿ ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ:
· ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ 1,255 ಕೋಟಿ ರೂ.ಗಳ ಮೊತ್ತದ ವಾರ್ಡ್ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ.
· 1,700 ಕೋಟಿ ರೂ.ಗಳ ಮೊತ್ತದಲ್ಲಿ ೧೫೮ ಕಿ.ಮೀ. ಉದ್ದದ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ.
· 1,936 ಕೋಟಿ ರೂ.ಗಳ ಮೊತ್ತದ ಮುಖ್ಯ ಮತ್ತು ಉಪಮುಖ್ಯ (Arterial and Sub Arterial) ರಸ್ತೆಗಳ ಅಭಿವೃದ್ಧಿ.
· ಸಿಲ್ಕ್ಬೋರ್ಡ್ ಜಂಕ್ಷನ್ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರ ವರ್ತುಲ ರಸ್ತೆಯನ್ನು ಅಭಿವೃದ್ಧಿಪಡಿಸುವ 450 ಕೋಟಿ ರೂ.ಗಳ ಯೋಜನೆ.
· 273 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ರಾಜಕಾಲುವೆಗಳ ಮೇಲ್ದರ್ಜೆಗೇರಿಸುವುದು ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳು.
294. ಬೆಂಗಳೂರಿನ ನಾಗರಿಕರಿಗೆ ಪಾರದರ್ಶಕ, ಜನಸ್ನೇಹಿ, ಸಹಭಾಗಿತ್ವವುಳ್ಳ ತುರ್ತು ಸ್ಪಂದನೆಯ ಆಡಳಿತವನ್ನು ಒದಗಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಹಾಗೂ ಐದು ಮಹಾನಗರ ಪಾಲಿಕೆಗಳನ್ನು ಸ್ಥಾಪಿಸಲಾಗಿದೆ.
295. 2025-26ನೇ ಸಾಲಿನಲ್ಲಿ ಬೆಂಗಳೂರು ಅಭಿವೃದ್ಧಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ 3,000 ಕೋಟಿ ರೂ. ಅನುದಾನವನ್ನು 7,000 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿಯೂ ಈ ಅನುದಾನವನ್ನು ಮುಂದುವರೆಸಲಾಗುವುದು.
296. ರಸ್ತೆಗಳ ದೀರ್ಘ ಕಾಲದ ಬಾಳಿಕೆಗಾಗಿ ಮುಂದಿನ ಮೂರು ವರ್ಷಗಳಲ್ಲಿ 450 ಕಿ.ಮೀ ಗೂ ಹೆಚ್ಚು ಉದ್ದದ ರಸ್ತೆಗಳನ್ನು
3,000 ಕೋಟಿ ರೂ.ಗಳ ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡಲಾಗುವುದು.
297. ಬೆಂಗಳೂರು ನಗರ ಪಾಲಿಕೆಗಳ ಸ್ವಂತ ಸಂಪನ್ಮೂಲದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 175 ಜಂಕ್ಷನ್ಗಳ ಸೌಂದರ್ಯೀಕರಣ,
500 ಕಿ.ಮೀ. ಉದ್ದದ ಪಾದಚಾರಿ ಮಾರ್ಗವನ್ನು ಮೇಲ್ದರ್ಜೆಗೇರಿಸಲು ಮತ್ತು 100 Sky Walk ಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ.
298. ವಿಶ್ವಬ್ಯಾಂಕ್ ನೆರವಿನ ಜಲಭದ್ರತೆ ಮತ್ತು ವಿಪತ್ತು ನಿರೋಧಕ ಕಾರ್ಯಕ್ರಮದ ಕ್ರಿಯಾಯೋಜನೆಯಡಿ ರಾಜಕಾಲುವೆಗಳ ಅಭಿವೃದ್ಧಿ / ಮೇಲ್ದರ್ಜೆಗೇರಿಸುವ ಕಾಮಗಾರಿಗಳನ್ನು ಒಟ್ಟು
2,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಟೆಂಡರ್ ಕರೆದು ಅನುಷ್ಠಾನಗೊಳಿಸಲಾಗುತ್ತಿದೆ.
299. ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯ ಐದು ಮಹಾನಗರ
ಪಾಲಿಕೆಗಳು ತಮ್ಮ Balance Sheet ಆಧಾರದಲ್ಲಿ
ʻಮುನಿಸಿಪಲ್ ಬಾಂಡ್’ಗಳನ್ನು ಹೊರಡಿಸುವ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ ಸಂಪನ್ಮೂಲವನ್ನು ಕ್ರೋಢೀಕರಿಸಲಾಗುವುದು.
300. 2027ರ ಅಂತ್ಯದೊಳಗೆ ಬೆಂಗಳೂರಿಗೆ ಹೊಸ ಪರಿಷ್ಕೃತ ಮಾಸ್ಟರ್ ಪ್ಲಾನ್-2041 ಅನ್ನು (RMP) ಜಾರಿಗೊಳಿಸಲಾಗುವುದು. ಇದರ ಜೊತೆಗೆ ಸಮಗ್ರ ಮೊಬಿಲಿಟಿ ಯೋಜನೆಯನ್ನು (CMP) ಆರು ತಿಂಗಳೊಳಗೆ ರೂಪಿಸಲಾಗುವುದು.
301. ʻನಮ್ಮ ಮೆಟ್ರೋ’ ದೇಶದ ಎರಡನೇ ಅತಿದೊಡ್ಡ ಮೆಟ್ರೋ ರೈಲು ಜಾಲವಾಗಿದೆ. ಪ್ರಸ್ತುತ ಕಾರ್ಯಾಚರಣಾ ಜಾಲವು 96 ಕಿ.ಮೀ. ಆಗಿದ್ದು, ಇದರಿಂದ ಪ್ರತಿ ದಿನ 10 ಲಕ್ಷ ಪ್ರಯಾಣಿಕರಿಗೆ ಪ್ರಯೋಜನಕಾರಿಯಾಗಿದೆ. ಇಲ್ಲಿಯವರೆಗೂ ವೆಚ್ಚವಾಗಿರುವ 67,460 ಕೋಟಿ ರೂ.ಗಳಲ್ಲಿ ನಮ್ಮ ಸರ್ಕಾರದ ಪಾಲು
೫೯,೩೭೬ ಕೋಟಿ ರೂ. ಹಾಗೂ ಕೇಂದ್ರ ಸರ್ಕಾರದ ಪಾಲು
8,084 ಕೋಟಿ ರೂ.ಗಳಾಗಿರುತ್ತದೆ. ಇದು ರಾಜ್ಯ ಸರ್ಕಾರದ ಪಾಲಿನ ಶೇ.೮೮ರಷ್ಟರ ಎದುರಾಗಿ ಕೇಂದ್ರದ ಪಾಲು ಕೇವಲ
ಶೇ.12 ರಷ್ಟಿರುತ್ತದೆ.
302. 2026–27ರ ಹಣಕಾಸು ವರ್ಷದಲ್ಲಿ ಒಟ್ಟು 41 ಕಿ.ಮೀ. ಹೆಚ್ಚುವರಿ ಮೆಟ್ರೋ ಮಾರ್ಗಗಳನ್ನು ಪೂರ್ಣಗೊಳಿಸಲು ಯೋಜಿಸಲಾಗಿದೆ. ಇದರಿಂದ ದಿನಕ್ಕೆ 15 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
303. ಹೊರ ವರ್ತುಲ ರಸ್ತೆಯ ಮೆಟ್ರೋ ವಯಾಡಕ್ಟ್ ಉದ್ದಕ್ಕೂ
9 ಕಿ.ಮೀ ಪಾದಚಾರಿ ನಡಿಗೆ ಮಾರ್ಗವನ್ನು ಅಂದಾಜು
160 ಕೋಟಿ ರೂ.ಗಳ ವೆಚ್ಚದಲ್ಲಿ ಹೊರ ವರ್ತುಲ ಕಂಪನಿಗಳ ಸಂಘದ (ORRCA) ಪ್ರಾಯೋಜಕತ್ವದಲ್ಲಿ ನಿರ್ಮಿಸಲಾಗುವುದು.
304. ಬೆಂಗಳೂರು ನಗರದ ಸುಮಾರು 1.40 ಕೋಟಿ ಜನರಿಗೆ ಕುಡಿಯುವ ನೀರು ಪೂರೈಸಲು ಕಾವೇರಿ ನೀರು ಸರಬರಾಜು ಯೋಜನೆಯ 1 ರಿಂದ 5ನೇ ಹಂತಗಳ ಮೂಲಕ ಒಟ್ಟು 2,225 MLD ನೀರು ಪೂರೈಸಲಾಗುತ್ತಿದೆ. ಇದೀಗ JICA ನೆರವಿನಿಂದ 6,939 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿಯಾಗಿ ಆರು ಟಿ.ಎಂ.ಸಿ. ನೀರನ್ನು ಪೂರೈಸಲು ಕಾವೇರಿ 6ನೇ ಹಂತದ ಯೋಜನೆಯನ್ನು ನಮ್ಮ ಸರ್ಕಾರದಿಂದ ರೂಪಿಸಲಾಗಿದೆ.
305. ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ತುಮಕೂರು ರಸ್ತೆಯಿಂದ ಹೊಸೂರು ರಸ್ತೆಯವರೆಗೆ 73 ಕಿ.ಮೀ ಉದ್ದದ ಬೆಂಗಳೂರು ಬಿಸ್ನೆಸ್ ಕಾರಿಡಾರ್ ಭಾಗ-1 ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ರೈತರಿಗೆ ಸಮರೋಪಾದಿಯಲ್ಲಿ ಪರಿಹಾರ ವಿತರಿಸಲಾಗುತ್ತಿದೆ. ಈ ರಸ್ತೆಯನ್ನು ನಾಲ್ಕು ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
306. ಹೆಬ್ಬಾಳ ಜಂಕ್ಷನ್ ನಿಂದ ಹೆಚ್.ಎಸ್.ಆರ್ ಲೇಔಟ್ ಸಿಲ್ಕ್ ಬೋರ್ಡ್ ವರೆಗಿನ ಉತ್ತರ-ದಕ್ಷಿಣ ಕಾರಿಡಾರ್ ಯೋಜನೆ ಹಾಗೂ ಕೆ.ಆರ್.ಪುರಂ ನಿಂದ ಮೈಸೂರು ರಸ್ತೆಯವರೆಗಿನ
ಪೂರ್ವ-ಪಶ್ಚಿಮ ಕಾರಿಡಾರ್ ಯೋಜನೆಯ ಒಟ್ಟಾರೆ 40 ಕಿ.ಮಿ. ಉದ್ದದ ಸುರಂಗ ಮಾರ್ಗವನ್ನು 40,000 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ BOOT ಮಾದರಿಯಲ್ಲಿ ಕೈಗೊಳ್ಳಲು ಅನುಮೋದಿಸಲಾಗಿದೆ. ಮೊದಲನೇ ಹಂತದಲ್ಲಿ 17 ಕಿ.ಮಿ. ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ಯೋಜನೆಯನ್ನು 17,780 ಕೋಟಿ ರೂ.ಗಳ ಮೊತ್ತಕ್ಕೆ ಟೆಂಡರ್ ಕರೆಯಲಾಗಿದೆ.
307. ಹೆಬ್ಬಾಳ ಜಂಕ್ಷನ್ನಿಂದ ಮೇಖ್ರಿ ಸರ್ಕಲ್ ವರೆಗೆ ಸುರಂಗ ಮಾರ್ಗ (Tunnel Road) ಹಾಗೂ ಮೇಲು ಸೇತುವೆ (Elevated) ರಸ್ತೆಯನ್ನು 2,250 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಿಸಲಾಗುವುದು.
308. ಬೆಂಗಳೂರು ನಗರದ ದಟ್ಟಣೆಯನ್ನು ಕಡಿಮೆ ಮಾಡಲು ನೆಲಮಂಗಲ-ತಾವರೆಕೆರೆ-ಬಿಡದಿ ಮಧ್ಯಂತರ ವರ್ತುಲ ರಸ್ತೆಯನ್ನು BMRDA ಹಾಗೂ ಸ್ಥಳೀಯ ಯೋಜನಾ ಪ್ರಾಧಿಕಾರಗಳ ಆರ್ಥಿಕ ಸಂಪನ್ಮೂಲಗಳಿಂದ ನಿರ್ಮಿಸಲಾಗುವುದು.
309. ಮುಖ್ಯಮಂತ್ರಿಗಳ ಅಮೃತ್ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ ಹಂತ-4 ರಡಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು 3,885 ಕೋಟಿ ರೂ.ಗಳ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಇಲ್ಲಿಯವರೆಗೂ ರಾಜ್ಯ ಸರ್ಕಾರದಿಂದ 1,716 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 500 ಕೋಟಿ ರೂ.ಗಳನ್ನು ಒದಗಿಸಲಾಗುವುದು.
310. ರಾಜ್ಯದ ನಗರಗಳ ಸ್ವಚ್ಛತೆಯನ್ನು ಕಾಪಾಡುವ ದೃಷ್ಟಿಯಿಂದ ಒಳಚರಂಡಿ ಕಾಮಗಾರಿಗಳನ್ನು ಅಣ್ಣಿಗೇರಿ, ಗುಂಡ್ಲುಪೇಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಭದ್ರಾವತಿ, ದೇವನಹಳ್ಳಿ ಮತ್ತು ಮೈಸೂರಿನ ಕೆಲವು ಭಾಗಗಳಲ್ಲಿ ಕೈಗೊಳ್ಳಲಾಗುವುದು. ಜೊತೆಗೆ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ micro ಅನುದಾನದ ನೆರವಿನೊಂದಿಗೆ ಆಳಂದ, ಅಫ್ಜಲ್ಪುರ, ಚಿತ್ತಾಪುರ, ಯಾದಗಿರಿ, ಹರಪನಹಳ್ಳಿ, ಜೇವರ್ಗಿ ಹಾಗೂ ಸುರಪುರ ಪಟ್ಟಣಗಳಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.
311. ಹೊಸದಾಗಿ ಮೇಲ್ದರ್ಜೆಗೇರಿಸಲಾದ ರಾಯಚೂರು, ಬೀದರ್ ಮತ್ತು ಹಾಸನ ಮಹಾನಗರ ಪಾಲಿಕೆಗಳಿಗೆ ಮಹಾತ್ಮಾಗಾಂಧಿ ನಗರ ವಿಕಾಸ್ ಯೋಜನೆ 2.0ರಡಿ 2026-27ನೇ ಸಾಲಿನಲ್ಲಿ ತಲಾ
200 ಕೋಟಿ ರೂ.ಗಳನ್ನು ಒದಗಿಸಲಾಗುವುದು.
312. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಏಕೀಕೃತ ಆಸ್ತಿ
ತೆರಿಗೆ ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜನೆಗೊಳಿಸಲಾಗುವುದು. ತೆರಿಗೆ ಬೇಡಿಕೆ ಮತ್ತು ಬಾಕಿ ವಿವರಗಳನ್ನು ಸ್ವಯಂ ಚಾಲಿತವಾಗಿ ಸೃಜಿಸುವ Unified Property Tax ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
313. ನಗರ ಸ್ಥಳೀಯ ಸಂಸ್ಥೆಗಳ ಸ್ಥಿರಾಸ್ತಿಗಳು ಹಾಗೂ ವಾಣಿಜ್ಯ ಸಂಕೀರ್ಣಗಳ ನಿರ್ವಹಣಾ ಪ್ರಕ್ರಿಯೆಯನ್ನು ಸರಳಗೊಳಿಸಲು ಹಾಗೂ ಏಕರೂಪದ ನೀತಿಯನ್ನು ಪಾಲಿಸಲು ʻThe Estate Management Rules, 2026ʼ ಅನ್ನು ಜಾರಿಗೊಳಿಸಲಾಗುವುದು.
314. ನಗರ ಪ್ರದೇಶಗಳ ಆಯ್ದ ಜಾಗಗಳಲ್ಲಿ ಸ್ಥಳೀಯ ಸಸ್ಯಗಳನ್ನು ದಟ್ಟವಾಗಿ ನೆಟ್ಟು ನೈಸರ್ಗಿಕ ಹಸಿರು ಪ್ರದೇಶಗಳನ್ನಾಗಿಸಲು
100 ʻMiyawaki ಪಾರ್ಕ್ʼ ಗಳನ್ನು ನಿರ್ಮಿಸಲಾಗುವುದು.
315. ನಮ್ಮ ಸರ್ಕಾರವು ಅಸ್ತಿತ್ವಕ್ಕೆ ಬಂದ ನಂತರ ನಾಲ್ಕು ನಗರಸಭೆಗಳನ್ನು ಮಹಾನಗರ ಪಾಲಿಕೆಗಳನ್ನಾಗಿ, 13 ಪುರಸಭೆಗಳನ್ನು ನಗರಸಭೆಗಳನ್ನಾಗಿ, ಮೂರು ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ ಹಾಗೂ 16 ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ.
316. ಉನ್ನತ ವ್ಯಾಸಂಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ಬರುವ ವಿದ್ಯಾರ್ಥಿಗಳಿಗಾಗಿ ಧಾರವಾಡದಲ್ಲಿ ನಾಲ್ಕು ಹಾಗೂ ಬೆಂಗಳೂರಿನಲ್ಲಿ ಎರಡು ʻವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ʼ ಗಳನ್ನು ಪ್ರಾರಂಭಿಸಲಾಗುವುದು.
317. ಕಲಬುರಗಿ ನಗರಕ್ಕೆ 24/7 ಶಾಶ್ವತವಾಗಿ ಗುಣಮಟ್ಟದ ನೀರನ್ನು ಒದಗಿಸಲು ಅಂದಾಜು 1,863 ಕೋಟಿ ರೂ. ವೆಚ್ಚದ ಕಾಮಗಾರಿಗೆ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು.
318. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುತ್ತಿರುವ ವಿವಿಧ ಭಾಗಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಒದಗಿಸಲಾಗುವುದು.
ಇಂಧನ
319. ರಾಜ್ಯದ ಬೆನ್ನೆಲುಬಾಗಿರುವ 21 ಲಕ್ಷ ರೈತರ ಕೃಷಿ ಚಟುವಟಿಕೆಗೆ ಜೀವನಾಡಿಯಾಗಿರುವ 36 ಲಕ್ಷಗಳಷ್ಟು ನೀರಾವರಿ
ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ಸಹಾಯಧನ ಯೋಜನೆಯಡಿ ಕಳೆದ ಮೂರು ವರ್ಷಗಳಲ್ಲಿ 48 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ 19,290 ಕೋಟಿ ರೂ. ಒದಗಿಸಲಾಗಿದೆ.
320. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʻಗೃಹ ಜ್ಯೋತಿʼ ಯೋಜನೆಯಡಿ ಇದುವರೆಗೆ 1.74 ಕೋಟಿ ಗ್ರಾಹಕರು ನೊಂದಾಯಿಸಿರುತ್ತಾರೆ. ಕಳೆದ ಮೂರು ವರ್ಷಗಳಲ್ಲಿ
ಈ ಯೋಜನೆಗೆ 28 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, ಪ್ರಸಕ್ತ ವರ್ಷದಲ್ಲಿ 10,578 ಕೋಟಿ ರೂ. ಒದಗಿಸಲಾಗುವುದು.
321. KUSUM-C ಯೋಜನೆಯಡಿ ನೀರಾವರಿ ಪಂಪ್ಸೆಟ್ಗಳ ವಿಕೇಂದ್ರೀಕೃತ ಫೀಡರ್ ಸೌರೀಕರಣವನ್ನು ಕೈಗೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ 2,777 MW ಸಾಮರ್ಥ್ಯದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುವುದು.
322. ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರವು ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಎಂಬ ಹೊಸ ಯೋಜನೆಯನ್ನು KUSUM-C ಮಾದರಿಯಲ್ಲಿ ಜಾರಿಗೆ ತರಲಿದೆ. ಈ ಯೋಜನೆಯಡಿ KPTCL ಉಪ ಕೇಂದ್ರಗಳಲ್ಲಿ Renewable Energy Service Company (RESCO) ಮಾದರಿಯಲ್ಲಿ ಅಂದಾಜು 10,500 ಕೋಟಿ ರೂ. ವೆಚ್ಚದಲ್ಲಿ 3,000 MW ಕ್ಷಮತೆಯ ಸೌರ ವಿದ್ಯುತ್ ಸ್ಥಾವರಗಳನ್ನು ಪ್ರಾರಂಭಿಸಲಾಗುವುದು.
323. KPTCL ವತಿಯಿಂದ ಪ್ರಸರಣ ಜಾಲವನ್ನು ವೃದ್ಧಿಸಲು
2025-26ನೇ ಸಾಲಿನಲ್ಲಿ 100 ಹೊಸ ಉಪ ಕೇಂದ್ರಗಳನ್ನು ಸ್ಥಾಪಿಸಲು ಕ್ರಮಕೈಗೊಂಡಿದ್ದು, 2026-27ನೇ ಸಾಲಿನಲ್ಲಿಯೂ ಸಹ 100 ಹೊಸ ಉಪ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿದೆ.
324. 2025-26ನೇ ಸಾಲಿನಲ್ಲಿ ನವೀಕರಿಸಬಹುದಾದ ಇಂಧನ ಸಮತೋಲನ ಮತ್ತು ಗರಿಷ್ಠ ಲೋಡ್ ನಿರ್ವಹಣೆಗಾಗಿ
1,000 MWh ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ (BESS) ಅಳವಡಿಕೆಯನ್ನು ಏಳು ಸಬ್ ಸ್ಟೇಷನ್ಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ. 2026-27ನೇ ಸಾಲಿನಲ್ಲಿ 2,000 MWh BESS ಯೋಜನೆಯನ್ನು ಅಂದಾಜು 3,400 ಕೋಟಿ ರೂ. ವೆಚ್ಚದಲ್ಲಿ ಹುಲಿಯೂರು, ಪಾವಗಡ ಮತ್ತು ಕುಷ್ಟಗಿಯ ಸಬ್ ಸ್ಟೇಷನ್ಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು.
325. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಎಸ್ಕಾಂಗಳ ಸಹಯೋಗದೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಅಂದಾಜು
777 ಕೋಟಿ ರೂ.ಗಳ ವೆಚ್ಚದಲ್ಲಿ 1,250 ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಪಿ.ಎಮ್ಇ ಡ್ರೈವ್ ಯೋಜನೆಯಡಿ ಸ್ಥಾಪಿಸಲಾಗುವುದು.
326. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ನವೋದ್ಯಮಗಳನ್ನು ಉತ್ತೇಜಿಸಲು IIM ಬೆಂಗಳೂರು, University of New South Wales, ಆಸ್ಟ್ರೇಲಿಯಾ ಹಾಗೂ IISc ಬೆಂಗಳೂರು ಇವರ ಸಹಯೋಗದಲ್ಲಿ ಸ್ಟಾರ್ಟ್ಅಪ್ಗಳಿಗೆ Incubation Centre ಅನ್ನು 20 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
ಲೋಕೋಪಯೋಗಿ
327. 2025-26ನೇ ಸಾಲಿನಲ್ಲಿ 216 ಸೇತುವೆಗಳ ನಿರ್ಮಾಣ, 288 ಸೇತುವೆ ದುರಸ್ತಿ ಹಾಗೂ 386 ಕಾಲುಸಂಕಗಳ (Foot Bridge) ನಿರ್ಮಾಣ ಕಾಮಗಾರಿಗಳನ್ನು 2,000 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ಅನುಮೋದಿಸಲಾಗಿದೆ. ಈ ಕಾರ್ಯಕ್ರಮವನ್ನು ಮುಂದುವರೆಸಿ ಸೇತುವೆಗಳ ನಿರ್ಮಾಣಕ್ಕಾಗಿ ಮುಂದಿನ ಎರಡು ವರ್ಷಗಳಲ್ಲಿ 2,000 ಕೋಟಿ ರೂ. ಮೊತ್ತವನ್ನು ಒದಗಿಸಲಾಗುವುದು.
328. 400 ಕೋಟಿ ರೂ. ಅಂದಾಜು ಮೊತ್ತದ 135 ಕಿ.ಮೀ. ಉದ್ದದ ವಾಗ್ದಾರಿ-ರಿಬ್ಬನ್ಪಲ್ಲಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಯನ್ನು ಕೆ.ಕೆ.ಆರ್.ಡಿ.ಬಿ ಯಿಂದ ಶೇ.50 ರಷ್ಟು ಅನುದಾನ ಒದಗಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು.
329. ಇಲಾಖೆಯ ಅಧೀನದ ಆಸ್ತಿ ದಾಖಲೆಗಳನ್ನು Land Plan survey ಮಾಡಿ Digitization ಹಾಗೂ Record Room ನಿರ್ಮಾಣವನ್ನು ಒಟ್ಟಾರೆ ಐದು ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗುವುದು.
330. ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಮತ್ತು ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲುಸಂಕಗಳನ್ನು
(Foot Bridge) ನಿರ್ಮಿಸಲಾಗುವುದು.
331. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (SHDP)
ಹಂತ-5 ಘಟ್ಟ-I ರಡಿ 1,512 ಕಿ.ಮೀ ಉದ್ದದ ರಸ್ತೆಯನ್ನು
4,000 ಕೋಟಿ ರೂ. ಮೊತ್ತದಲ್ಲಿ ಈಗಾಗಲೇ ಕೈಗೆತ್ತಿಕೊಂಡಿದ್ದು, ಮುಂದುವರೆದು, ಘಟ್ಟ-II ರಡಿ 1,846 ಕಿ.ಮೀ ಉದ್ದದ ರಸ್ತೆಯನ್ನು 5,000 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುವುದು.
332. ರಾಯಚೂರು ಜಿಲ್ಲೆಯ ಕಲ್ಮಲಾ-ಸಿಂಧನೂರು ರಸ್ತೆಯ ಒಟ್ಟು
77 ಕಿ.ಮೀ ಉದ್ದದ ಪೈಕಿ 60 ಕಿ.ಮೀ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಈಗಾಗಲೇ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿಸಿದ್ದು, ಉಳಿದ 17 ಕಿ.ಮೀ ಉದ್ದದ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು.
333. 2026-27ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಮುಂದುವರೆದ ಯೋಜನೆಗಳಡಿ 2,200 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ಹಾಗೂ 3,500 ಕಿ.ಮೀ ಉದ್ದದ ಜಿಲ್ಲಾ ರಸ್ತೆಗಳನ್ನು 5,776 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
334. KSHIP-IV ಅಡಿಯಲ್ಲಿ ADB ನೆರವಿನೊಂದಿಗೆ ಒಟ್ಟು ವೆಚ್ಚ
5,736 ಕೋಟಿ ರೂ. ಯೋಜನಾ ವೆಚ್ಚದಲ್ಲಿ ರಾಜ್ಯದಾದ್ಯಂತ ಸುಮಾರು 875 ಕಿ.ಮೀ ಉದ್ದದ ರಸ್ತೆ ಕಾಮಗಾರಿಗಳ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಅನುಮೋದನೆ ಪಡೆದು ಟೆಂಡರ್ ಆಹ್ವಾನಿಸಲು ಕ್ರಮವಹಿಸಲಾಗುವುದು. (ಅನುಬಂಧ-೬)
335. ರಾಜ್ಯದ ವಿವಿಧ ಇಲಾಖೆಗಳಡಿ ನಿರ್ಮಿಸಲಾಗುವ ಕಟ್ಟಡಗಳ ವಿನ್ಯಾಸ ಮತ್ತು ವೆಚ್ಚದಲ್ಲಿ ಏಕರೂಪತೆಯನ್ನು ತರಲು ಒಂದು ತಜ್ಞರ ಸಮಿತಿ ರಚಿಸಲಾಗುವುದು. ಎಲ್ಲಾ ಇಲಾಖೆಗಳಡಿಯಲ್ಲಿನ ಕಟ್ಟಡಗಳ ವಿನ್ಯಾಸ ಮತ್ತು ಅಂದಾಜುಗಳನ್ನು ಸದರಿ ಸಮಿತಿಯ ಶಿಫಾರಸ್ಸಿನಂತೆ ಅಂತಿಮಗೊಳಿಸಲಾಗುವುದು.
336. ರಾಜ್ಯಪಾಲರ ಕಛೇರಿಯ ಆವರಣದಲ್ಲಿನ ಆಡಳಿತಾತ್ಮಕ ಬ್ಲಾಕ್, ಒಳಾಂಗಣ ಕ್ರೀಡಾಂಗಣ ಹಾಗೂ ಅಧಿಕಾರಿಗಳ ವಸತಿ ಗೃಹಗಳನ್ನು 27 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.
ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ
337. ದೇಶದ 3ನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು ತಗ್ಗಿಸಲು ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ತಾಂತ್ರಿಕ ಅಭಿಪ್ರಾಯ ಪಡೆದು ಕಾರ್ಯಸಾಧ್ಯತಾ ವರದಿಯನ್ನು ಸಿದ್ಧಪಡಿಸಲಾಗುವುದು.
338. ರಾಜ್ಯದಲ್ಲಿನ ಏಳು ದೇಶೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ ಈವರೆಗೂ 1,593 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿಗೆ
200 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿರುತ್ತದೆ.
339. ವಿಜಯಪುರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಗಳ ಆವರಣದಲ್ಲಿ ಕ್ರಮವಾಗಿ Flight Training School ಹಾಗೂ Manufacturing / Assembly of Aircraft ಚಟುವಟಿಕೆಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.
340. ಉತ್ತರ ಕನ್ನಡ ಜಿಲ್ಲೆಯ ತದಡಿ ಪ್ರದೇಶದಲ್ಲಿ ಪರಿಸರ ಸ್ನೇಹಿ ವಸತಿ ವ್ಯವಸ್ಥೆ, ಪ್ರವಾಸಿ ಮಾಹಿತಿ ಕೇಂದ್ರಗಳು, ಪರಿಸರ ಸ್ನೇಹಿ Walking corridor ಮತ್ತು ಇತರೆ ಮೂಲಸೌಕರ್ಯಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
341. ರೈಲ್ವೆ ಇಲಾಖೆಯೊಂದಿಗೆ 50:50 ರ ಅನುಪಾತದಲ್ಲಿ ವೆಚ್ಚ ಹಂಚಿಕೆ ಆಧಾರದ ಮೇಲೆ 9 ರೈಲ್ವೆ ಮಾರ್ಗಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಪೈಕಿ ಏಳು ರೈಲ್ವೆ ಮಾರ್ಗಗಳಿಗೆ ಭೂಸ್ವಾಧೀನಕ್ಕಾಗಿ
2,950 ಕೋಟಿ ರೂ. ಗಳನ್ನು ಹಾಗೂ ನಿರ್ಮಾಣ ಕಾಮಗಾರಿಗಳಿಗಾಗಿ 2,682 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. 2026-27ನೇ ಸಾಲಿನ ಆಯವ್ಯಯದಲ್ಲಿ
600 ಕೋಟಿ ರೂ.ಗಳನ್ನು ಮೀಸಲಿರಿಸಿದೆ. (ಅನುಬಂಧ-೭)
342. ಬೆಂಗಳೂರು ಉಪನಗರ ರೈಲು ಯೋಜನೆಯ ನಾಲ್ಕು ಕಾರಿಡಾರ್ಗಳ ಪೈಕಿ ಕಾರಿಡಾರ್-2ಕ್ಕೆ (ಬೆನ್ನಿಗಾನಹಳ್ಳಿ-ಚಿಕ್ಕಬಾಣಾವರ) ಅಗತ್ಯವಿರುವ ಶೇ.100ರಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಕಾಮಗಾರಿಯು ಪ್ರಗತಿಯಲ್ಲಿರುತ್ತದೆ. ಕಾರಿಡಾರ್-4ಕ್ಕೆ (ಹೀಲಲಿಗೆ-ರಾಜಾನುಕುಂಟೆ) ಅಗತ್ಯವಿರುವ ಭೂಮಿಯ ಭೂಸ್ವಾಧೀನ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಡಿಸೆಂಬರ್ 2030ರ ಅಂತ್ಯಕ್ಕೆ ಎರಡು ಕಾರಿಡಾರ್ಗಳನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಪ್ರಸಕ್ತ ಸಾಲಿನಲ್ಲಿ ಈ ಕಾಮಗಾರಿಗಳಿಗೆ 500 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
343. ಬೈಯಪ್ಪನಹಳ್ಳಿ-ಹೊಸೂರು ಹಾಗೂ ಯಶವಂತಪುರ-ಚನ್ನಸಂದ್ರ ದ್ವಿಪಥೀಕರಣ ಯೋಜನೆಗಳಡಿಯಲ್ಲಿ 70 ಕಿ.ಮೀ. ರೈಲು ಮಾರ್ಗಗಳ ಯೋಜನೆಗೆ ರಾಜ್ಯ ಸರ್ಕಾರದ ಪಾಲು 406 ಕೋಟಿ ರೂ. ಸೇರಿದಂತೆ ಒಟ್ಟಾರೆ 812 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ
14 ಕಿ.ಮೀ ದ್ವಿಗುಣಗೊಳಿಸುವ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಈ ಕಾಮಗಾರಿಗಳಿಗೆ 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
344. ಬಂದರುಗಳು ಮತ್ತು ಸರಕು ಸಾಗಾಣಿಕೆ ವಲಯದ ಅಭಿವೃದ್ಧಿಗಾಗಿ ʻಸಮಗ್ರ ಮಲ್ಟಿಮೋಡಲ್ ಲಾಜಿಸ್ಟಿಕ್ಸ್ ನೀತಿʼ ಅನ್ನು ರೂಪಿಸಲಾಗುವುದು.
345. ಪಂಜರ ಮೀನು ಸಾಕಾಣಿಕೆ, ನವೀಕರಿಸಬಹುದಾದ
ಇಂಧನ ಉತ್ಪಾದನೆಗೆ ಸಂಬಂಧಿತ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ʻKarnataka State Off Shore Resources Development & Utilization Policyʼ ಅನ್ನು ರೂಪಿಸಲಾಗುವುದು.
ವಾಣಿಜ್ಯ ಮತ್ತು ಕೈಗಾರಿಕೆ
346. ಹೊಸ ಕೈಗಾರಿಕಾ ನೀತಿ 2025-30ರಡಿ ಪ್ರಪ್ರಥಮ ಬಾರಿಗೆ ಅತಿ ಹಿಂದುಳಿದ ಪ್ರದೇಶಗಳಿಗೆ ಶೇ.5ರಷ್ಟು ಹಾಗೂ ಹಿಂದುಳಿದ ಪ್ರದೇಶಗಳಿಗೆ ಶೇ.3ರಷ್ಟು ಹೆಚ್ಚುವರಿ ಪ್ರೋತ್ಸಾಹವನ್ನು ನೀಡುವ ಮೂಲಕ ಬೆಂಗಳೂರಿನಿಂದಾಚೆಯೂ ಕೈಗಾರಿಕಾಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
347. ರಾಜ್ಯದಲ್ಲಿ ಹೂಡಿಕೆಗೆ ಪೂರಕವಾಗುವಂತೆ ಸುಲಲಿತವಾಗಿ ಉದ್ಯಮ ನಡೆಸಲು ಅತ್ಯಾಧುನಿಕ ಏಕಗವಾಕ್ಷಿ ಪೋರ್ಟಲ್ ಅನ್ನು ಮೈಕ್ರೋಸಾಫ್ಟ್ ವತಿಯಿಂದ ಅಭಿವೃದ್ಧಿಪಡಿಸಿದ್ದು, ಹೂಡಿಕೆಗೆ ಅವಶ್ಯವಿರುವ ಸಮಗ್ರ ಮಾಹಿತಿಯೊಂದಿಗೆ ಸುಮಾರು
30 ಇಲಾಖೆಗಳ 100ಕ್ಕೂ ಹೆಚ್ಚು ಸೇವೆಗಳನ್ನು ಏಕೀಕರಣ ಮಾಡಲಾಗಿದೆ.
348. ರಾಜ್ಯದಲ್ಲಿ ಸುಲಲಿತ ವ್ಯವಹಾರಗಳಿಗೆ ಒತ್ತು ನೀಡಲು ಕರ್ನಾಟಕ ನಿರಪರಾಧೀಕರಣ (ಉಪಬಂಧಗಳ ತಿದ್ದುಪಡಿ) ಅಧಿನಿಯಮ, 2025ನ್ನು ಜಾರಿಗೆ ತರುವ ಮೂಲಕ ರಾಜ್ಯದ ಒಟ್ಟು
13 ಅಧಿನಿಯಮಗಳಡಿಯಲ್ಲಿನ 278 ಅನುಚ್ಛೇದಗಳನ್ನು ಕ್ರಿಮಿನಲ್ ಅಪರಾಧ ವ್ಯಾಪ್ತಿಯಿಂದ ಹೊರತುಪಡಿಸಲಾಗಿದೆ.
349. ಪ್ರಸಕ್ತ ಸಾಲಿನಲ್ಲಿ ಜೀವಿತಾವಧಿ ಮುಗಿದ ವಾಹನಗಳನ್ನು ಸುರಕ್ಷಿತ ರೀತಿಯಲ್ಲಿ ವಿಲೇವಾರಿ ಮಾಡಲು KIADB ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ವಾಹನ ಸ್ಕ್ರ್ಯಾಪಿಂಗ್ (Vehicle Scrapping) ಸೌಲಭ್ಯ ಘಟಕವನ್ನು ಸ್ಥಾಪಿಸಲಾಗುವುದು.
350. ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾರವರಿಂದ ಮಂಡ್ಯದಲ್ಲಿ 500 ಕೋಟಿ ರೂ.ಗಳ ವೆಚ್ಚದಲ್ಲಿ ಅತ್ಯಾಧುನಿಕ ನಿರ್ಮಾಣ ಮತ್ತು ಮೂಲಸೌಕರ್ಯ ಸಲಕರಣೆಗಳ ಪರೀಕ್ಷಾ ಘಟಕ’ ವನ್ನು ಸ್ಥಾಪಿಸಲು ರಾಜ್ಯ ಸರ್ಕಾರದ ವತಿಯಿಂದ 100 ಎಕರೆ ಜಮೀನನ್ನು ನೀಡಲಾಗುವುದು.
351. KIADB ಏರೋಸ್ಪೇಸ್ ಪಾರ್ಕ್ನಲ್ಲಿ ಏರೋಸ್ಪೇಸ್ ಕಾಮನ್ ಫೆಸಿಲಿಟಿ ಸೆಂಟರ್ ಅನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ
1೦ ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.
352. ಉನ್ನತ ಮಟ್ಟದ ಜಾಗತಿಕ ಸಮ್ಮೇಳನಗಳು, ಶೃಂಗಸಭೆಗಳು ಮತ್ತು ಪ್ರದರ್ಶನಗಳನ್ನು (MICE) ಆಯೋಜಿಸಲು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮೈಸೂರು ಲ್ಯಾಂಪ್ ವರ್ಕ್ಸ್ ಲಿಮಿಟೆಡ್ನ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶ
ಕೇಂದ್ರ ಸಂಕೀರ್ಣವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು.
353. ಉತ್ತರ ಕರ್ನಾಟಕದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಸುಮಾರು 1,000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ನ್ನು ಅಭಿವೃದ್ಧಿಪಡಿಸಲಾಗುವುದು.
354. ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು KIADB ವತಿಯಿಂದ ಅಭಿವೃದ್ಧಿಪಡಿಸಲಾಗುವುದು.
355. NGEF ಆವರಣದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಟ್ರೀ ಪಾರ್ಕ್ ಯೋಜನೆಯ ಮೊದಲನೆಯ ಹಂತವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆ ಮಾಡಲಾಗುವುದು. ಎರಡನೇ ಹಂತದಡಿ ಸಾಂಸ್ಕೃತಿಕ ಮತ್ತು ಕ್ರೀಡಾ ಕೇಂದ್ರವನ್ನು ಪಿ.ಪಿ.ಪಿ ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗುವುದು.
356. ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ಯೋಜನೆಯಡಿ 30,000 ಕೋಟಿ ರೂ.ಗಳ ಹೂಡಿಕೆಯನ್ನು ಆಕರ್ಷಿಸುವುದರೊಂದಿಗೆ 75,000 ಉದ್ಯೋಗಾವಕಾಶವನ್ನು ಕಲ್ಪಿಸುವ ಸದುದ್ದೇಶದಿಂದ ʻಧಾರವಾಡ ಕೈಗಾರಿಕಾ ನೋಡ್ʼಗೆ ಸಂಬಂಧಿಸಿದಂತೆ 1,000 ಎಕರೆಯನ್ನು ಭೂಸ್ವಾಧೀನ ಮಾಡಲು 600 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಗಳನ್ನು ಮೀಸಲಿಡಲಾಗಿದೆ.
357. MSME ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಮತ್ತು ಉದ್ಯೋಗಾವಕಾಶವನ್ನು ಕಲ್ಪಿಸಲು MSE-CDP ಯೋಜನೆಯಡಿ ೨೦೨೬-೨೭ನೇ ಸಾಲಿಗೆ 10 ಕ್ಲಸ್ಟರ್ಗಳನ್ನು ೧೫ ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
358. MSME ಗಳನ್ನು ಪ್ರೋತ್ಸಾಹಿಸಲು KSSIDC ಮೂಲಕ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಎಂಟು ಕೈಗಾರಿಕಾ ವಸಾಹತುಗಳನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುತ್ತಿದೆ. 2026-27ನೇ ಸಾಲಿನಲ್ಲಿ ವಿಜಯಪುರದ ಮುದ್ದೇಬಿಹಾಳ ಹಾಗೂ ಬಳ್ಳಾರಿಯ ಕಂಪ್ಲಿಯಲ್ಲಿ ಎರಡು ವಸಾಹತುಗಳನ್ನು ಹೊಸದಾಗಿ ಪ್ರಾರಂಭಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು
10 ಕೈಗಾರಿಕಾ ವಸಾಹತುಗಳಲ್ಲಿ 1,500 ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು.
359. ರಾಜ್ಯದ ನೇಕಾರರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಲು ಮತ್ತು ಅವರ ಜೀವನ ಮಟ್ಟವನ್ನು ಸುಧಾರಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗಿದೆ:
· ನೇಕಾರರ ಸಮ್ಮಾನ್ ಯೋಜನೆಯಡಿ ಒಟ್ಟು 1.30 ಲಕ್ಷ ನೇಕಾರರಿಗೆ ವಾರ್ಷಿಕ 5,000 ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದೆ.
· ವಿದ್ಯುತ್ ಸಹಾಯಧನ ಯೋಜನೆಯಡಿ 01 ರಿಂದ 10 ಹೆಚ್.ಪಿ. ವರೆಗೆ ಉಚಿತವಾಗಿ ಮತ್ತು 10 ರಿಂದ 20 ಹೆಚ್.ಪಿ. ವರೆಗಿನ ಘಟಕಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸಲಾಗುತ್ತಿದೆ.
· ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ 20 ಹೆಚ್.ಪಿ.ಯಿಂದ
200 ಹೆಚ್.ಪಿ. ವರೆಗಿನ ವಿದ್ಯುತ್ ಮಗ್ಗ ನೇಕಾರರಿಗೆ ಪ್ರತಿ ಯೂನಿಟ್ಗೆ ಶೇ.50ರಷ್ಟು ಸಹಾಯಧನ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ.
· ನೇಕಾರರ ಏಳಿಗೆಗಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟಾರೆಯಾಗಿ
225 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.
360. ರಾಜ್ಯದಲ್ಲಿರುವ ಸಹಕಾರಿ ನೂಲಿನ ಗಿರಣಿಗಳನ್ನು ಪ್ರೋತ್ಸಾಹಿಸಲು ಪ್ರತಿ ಯೂನಿಟ್ಗೆ 3 ರೂ. ರಂತೆ ವಿದ್ಯುತ್ ಸಹಾಯಧನವನ್ನು ಒದಗಿಸಲಾಗುವುದು.
361. ಕಲಬುರಗಿ ಜಿಲ್ಲೆಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್ನಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು 390 ಕೋಟಿ ರೂ.ಗಳನ್ನು ಅನುಮೋದಿಸಿದೆ. ಈ ಯೋಜನೆಗಾಗಿ 2026-27ನೇ ಸಾಲಿಗೆ
75 ಕೋಟಿ ರೂ.ಗಳನ್ನು ಒದಗಿಸಲಾಗುವುದು.
362. 2025-26ನೇ ಸಾಲಿನ ಸಕ್ಕರೆ ಹಂಗಾಮಿಗೆ ಕೇಂದ್ರ ಸರ್ಕಾರವು ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಶೇ. 10.25 ಸಕ್ಕರೆ ಇಳುವರಿಯಂತೆ
3,55೦ ರೂ.ಗಳ ಎಫ್.ಆರ್.ಪಿ. ದರವನ್ನು ನಿಗದಿಪಡಿಸಿದೆ. ರಾಜ್ಯದಲ್ಲಿ ಕಬ್ಬು ಬೆಳೆಯುವ ರೈತರಿಗೆ ತಗಲುವ ವಾಸ್ತವಿಕ ವೆಚ್ಚವನ್ನು ಹಾಗೂ ಎಥೆನಾಲ್ ಮತ್ತು ವಿದ್ಯುತ್ ಉತ್ಪಾದನೆಯಂತಹ ವಿವಿಧ ಸಹ-ಉತ್ಪಾದನಾ (co-generation) ಚಟುವಟಿಕೆಗಳಿಂದ ಕಾರ್ಖಾನೆಗಳಿಗೆ ಆಗುವ ಲಾಭವನ್ನು ಗಣನೆಗೆ ತೆಗೆದುಕೊಳ್ಳದೆ ಅವೈಜ್ಞಾನಿಕವಾಗಿ ದರವನ್ನು ನಿಗದಿಪಡಿಸಲಾಗಿದೆ. ಇದರಿಂದ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಸಿಗದೆ ರೈತರು ಸಂಕಷ್ಟಗೊಳಗಾಗಿರುತ್ತಾರೆ. ರೈತರ ಹಿತದೃಷ್ಟಿಯನ್ನು ಕಾಪಾಡುವ ನಿಟ್ಟಿನಲ್ಲಿ ಒಂದು ಬಾರಿಯ ಕ್ರಮವಾಗಿ ಆರ್ಥಿಕ ನೆರವು ನೀಡಲು ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 50 ರೂ.ಗಳನ್ನು ಪಾವತಿಸಲು 300 ಕೋಟಿ ರೂ. ಒದಗಿಸಲಾಗಿದೆ.
363. ಕರ್ನಾಟಕ ತೈಲ ಮಾರುಕಟ್ಟೆ ಕಂಪನಿಗಳಿಗೆ ನಿಗದಿಪಡಿಸಲಾದ ಎಥೆನಾಲ್ ಖರೀದಿ ಪ್ರಮಾಣವು ನಮ್ಮ ರಾಜ್ಯದ ಉತ್ಪಾದನಾ ಸಾಮರ್ಥ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿರುವುದಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರೂ ಪರಿಗಣನೆಯಾಗದೇ ಇರುವುದರಿಂದ, ನಮ್ಮ ರೈತರು ಮಾರುಕಟ್ಟೆ ಏರಿಳಿತಗಳು ಮತ್ತು ಬೆಲೆ ಅನಿಶ್ಚಿತತೆಗೆ ಒಳಗಾಗಿರುತ್ತಾರೆ. ಆದ್ದರಿಂದ, ರಾಜ್ಯ ಸರ್ಕಾರದ ಕೋಟಾವನ್ನು ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಗುವುದು.
364. ಜಿಲ್ಲಾ ಮಟ್ಟದಲ್ಲಿ ಕಾರ್ಖಾನೆವಾರು ಪ್ರತ್ಯೇಕ ತಂಡಗಳ ಮುಖಾಂತರ 2025-26ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನಲ್ಲಿ ಕನಿಷ್ಟ ತಿಂಗಳಿಗೆ ಎರಡು ಬಾರಿ ಸಕ್ಕರೆ ಇಳುವರಿಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ 2022-23ನೇ ಸಾಲಿನಲ್ಲಿದ್ದ ಸಕ್ಕರೆ ಇಳುವರಿ ಪ್ರಮಾಣ ಶೇ.9.91 ರಿಂದ 2025-26ನೇ ಸಾಲಿನಲ್ಲಿ ಶೇ.11ಕ್ಕೆ ಗಣನೀಯವಾಗಿ ಏರಿಕೆಯಾಗಿರುತ್ತದೆ.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ
ಹಳೆಮತದ ಕೊಳೆಯೆಲ್ಲ ಹೊಸಮತಿಯ ಹೊಳೆಯಲ್ಲಿ
ಕೊಚ್ಚಿ ಹೋಗಲಿ; ಬರಲಿ ವಿಜ್ಞಾನ ಬುದ್ಧಿ
- ರಾಷ್ಟ್ರಕವಿ ಕುವೆಂಪು
365. ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಕರ್ನಾಟಕವು ದೇಶದಲ್ಲೇ ಮುಂಚೂಣಿಯಲ್ಲಿದೆ. ನಮ್ಮ ರಾಜ್ಯವು ಭಾರತದ ಐಟಿ ರಫ್ತುಗಳಲ್ಲಿ ಶೇ.43ರಷ್ಟು ಕೊಡುಗೆಯನ್ನು ನೀಡಿದೆ. ಹೊಸ ಐಟಿ ನೀತಿ
2025–30 ಅಡಿಯಲ್ಲಿ 2030ರ ವೇಳೆಗೆ ಸಾಫ್ಟ್ವೇರ್ ರಫ್ತು
11.5 ಲಕ್ಷ ಕೋಟಿ ರೂ. ತಲುಪುವ ನಿರೀಕ್ಷೆಯಿದೆ.
366. ಕರ್ನಾಟಕ ರಾಜ್ಯವು 18 ಸಾವಿರಕ್ಕೂ ಹೆಚ್ಚು ಸಕ್ರಿಯ ಸ್ಟಾರ್ಟ್ಅಪ್ಗಳ ಕೇಂದ್ರವಾಗಿದ್ದು, ಜಾಗತಿಕ ಸ್ಟಾರ್ಟ್ಅಪ್ ಪರಿಸರಗಳಲ್ಲಿ ಕಳೆದ ವರ್ಷದ 21ನೇ ಸ್ಥಾನದಿಂದ 14ನೇ ಸ್ಥಾನಕ್ಕೇರಿದೆ. AI ಮತ್ತು
ಬಿಗ್ ಡೇಟಾ ಕ್ಷೇತ್ರದಲ್ಲಿ ವಿಶ್ವದ ಟಾಪ್ 50 AI ನಗರಗಳಲ್ಲಿ ಬೆಂಗಳೂರು 5ನೇ ಸ್ಥಾನದಲ್ಲಿದೆ.
367. ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ ಕಾರ್ಯಕ್ರಮವು (LEAP) ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿ ನವೋದ್ಯಮ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು 1,000 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು;
· ದೀರ್ಘಕಾಲೀನ ಉದ್ಯಮ-ಶೈಕ್ಷಣಿಕ ಪಾಲುದಾರಿಕೆಗಳ ಮೂಲಕ ಉದ್ಯೋಗಾವಕಾಶ ಹೆಚ್ಚಿಸಲು KDEM ಸಂಸ್ಥೆಯ ಸಹಯೋಗದೊಂದಿಗೆ “Super 100 Industry-Academia Adoption Program” ಅನ್ನು ಜಾರಿಗೊಳಿಸಲಾಗುವುದು.
· ಕೆ–ಕಾಂಬಿನೇಟರ್ (K-Combinator) ಮೂಲಕ ನವೋದ್ಯಮಿಗಳಿಗೆ ವೇಗವರ್ಧಕ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.
· ರಾಜ್ಯದ 2ನೇ ಮತ್ತು 3ನೇ ಹಂತದ ನಗರಗಳಾದ ಹುಬ್ಬಳ್ಳಿ, ಕಲಬುರಗಿ, ಹೊಸಕೋಟೆ ಮತ್ತು ಮೈಸೂರಿನಲ್ಲಿ ಉದ್ಯಮಿಗಳಿಗೆ Incubation ಸೌಲಭ್ಯಗಳನ್ನು ಒದಗಿಸಲು ಕಿಯೋನಿಕ್ಸ್ ಸಂಸ್ಥೆಯ ಮೂಲಕ ಪ್ಲಗ್-ಅಂಡ್-ಪ್ಲೇ ಸೌಲಭ್ಯದ ʻಲೀಪ್ ಲ್ಯಾಬ್ಸ್ʼ ಗಳನ್ನು ಸ್ಥಾಪಿಸಲಾಗುವುದು.
368. ಇ.ಎಸ್.ಡಿ.ಎಂ ಮತ್ತು ಸೆಮಿಕಂಡಕ್ಟರ್ ವಲಯದಲ್ಲಿ ನಮ್ಮ ರಾಜ್ಯವು ಅಗ್ರಸ್ಥಾನದಲ್ಲಿದೆ. ಇತ್ತೀಚಿನ ದಿನಗಳಲ್ಲಿ ಪ್ರಮುಖ ಜಾಗತಿಕ ಕಂಪನಿಗಳಾದ Foxconn, LAM Research, Applied Materials ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಿದ್ದು ಹೆಮ್ಮೆಯ ವಿಷಯವಾಗಿದೆ. ಬೃಹತ್ ಕಂಪನಿಗಳಿಂದ 45 ಸಾವಿರ ಕೋಟಿ ರೂ.ಗಳ ಹೂಡಿಕೆ ಅಂದಾಜಿಸಿದೆ.
369. ಪ್ರಸ್ತುತ ಸಾಲಿನಲ್ಲಿ AI ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೆಳಕಂಡ ಉಪಕ್ರಮಗಳನ್ನು ಜಾರಿಗೊಳಿಸಲಾಗುವುದು:
· IISc ಅಧೀನದಲ್ಲಿರುವ ಪ್ರತಿಷ್ಠಾನವಾದ AI ಮತ್ತು ರೋಬೋಟಿಕ್ಸ್ ತಂತ್ರಜ್ಞಾನ ಪಾರ್ಕ್ (ART-PARK), ISRO ಮತ್ತು ಕಿಯೋನಿಕ್ಸ್ ಸಹಯೋಗದಲ್ಲಿ ʻಬೆಂಗಳೂರು ರೋಬೋಟಿಕ್ಸ್ ಮತ್ತು AI ಇನ್ನೊವೇಶನ್ ಝೋನ್ʼ (BRAINz) ಎಂಬ ರೋಬೋಟಿಕ್ಸ್ ಮತ್ತು AI ಕ್ಯಾಂಪಸ್ ಅನ್ನು ಸ್ಥಾಪಿಸಲಾಗುವುದು.
· IIIT ರಾಯಚೂರಿನಲ್ಲಿ AI ಶ್ರೇಷ್ಠತಾ ಕೇಂದ್ರವನ್ನು ಐದು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
370. ಕರ್ನಾಟಕವು Global Capability Center (GCC) ನೀತಿಯನ್ನು ಪರಿಚಯಿಸಿದ ಮೊದಲ ರಾಜ್ಯವಾಗಿದೆ. ನಮ್ಮ ಸರ್ಕಾರದ ಸಕಾರಾತ್ಮಕ ನೀತಿಯಿಂದ ಇದುವರೆಗೂ ರಾಜ್ಯದಲ್ಲಿ 550ಕ್ಕೂ ಹೆಚ್ಚು GCCಗಳು ಕಾರ್ಯನಿರ್ವಹಿಸುತ್ತಿವೆ. GCC ನೀತಿಯಡಿಯಲ್ಲಿ 2029ರ ವೇಳೆಗೆ ರಾಜ್ಯದಲ್ಲಿ 500 ಹೊಸ GCCಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಿದ್ದು, ಇದರಿಂದಾಗಿ 3.5 ಲಕ್ಷ ಜನರಿಗೆ ಉದ್ಯೋಗ ಮತ್ತು ಸುಮಾರು 50 ಬಿಲಿಯನ್ ಡಾಲರ್ ಆರ್ಥಿಕ ಉತ್ಪಾದನೆ ಸಾಧ್ಯವಾಗಲಿದೆ. ಕಿಯೋನಿಕ್ಸ್ ಮೂಲಕ ಮಂಗಳೂರಿನಲ್ಲಿ ಐಟಿ ಪಾರ್ಕ್ ಅನ್ನು ಅಭಿವೃದ್ಧಿಗೊಳಿಸಿ
GCC ಅನ್ನು ಪ್ರೋತ್ಸಾಹಿಸಲಾಗುವುದು.
371. ಮೈಸೂರಿನಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಿದ್ದರಿಂದ 100 ಕಂಪನಿಗಳಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರಿನ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ವಿಕೇಂದ್ರೀಕೃತ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಮೈಸೂರು ನಗರವನ್ನು ರಾಜ್ಯದ ಎರಡನೇ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು.
372. ಡ್ರೋನ್ಗಳ ಪರೀಕ್ಷೆ ಮತ್ತು ಕಾರ್ಯಕ್ಷಮತೆ ಮೌಲ್ಯಮಾಪನಕ್ಕೆ ಬೆಂಬಲ ನೀಡುವ ಉದ್ದೇಶದಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡ್ರೋನ್ ಪರೀಕ್ಷಾ ಸೌಲಭ್ಯ ಕೇಂದ್ರ ಸ್ಥಾಪಿಸಲು ಉದ್ದೇಶಿಸಿದೆ.
373. ಪರಿಣಾಮಕಾರಿ ನರ ಶಸ್ತ್ರಚಿಕಿತ್ಸೆಗೆ ಪೂರಕವಾಗಲು Advanced Surgical Assistive Robot ಗಳನ್ನು IIIT ಬೆಂಗಳೂರು ಮತ್ತು NIMHANS ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿನ್ಯಾಸಗೊಳಿಸಲು ನಾಲ್ಕು ಕೋಟಿ ರೂ.ಗಳನ್ನು ಒದಗಿಸಲಾಗುವುದು.
374. ಹೊಸದಾಗಿ ಸ್ಥಾಪಿಸಲಾದ Institute of Advanced Genome Editing and Gene Therapy ಮತ್ತಿತರ ಬಯೋಟೆಕ್ನಾಲಜಿ ಆಧಾರಿತ ಪ್ರಯೋಗಾಲಯಗಳಿಗೆ ಸ್ಥಳಾವಕಾಶ ಕಲ್ಪಿಸಲು ಮಾನವ ತಳಿಶಾಸ್ತ್ರ ಕೇಂದ್ರದಲ್ಲಿ ಒಟ್ಟು 20 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲಸೌಲಭ್ಯವನ್ನು ಒದಗಿಸಲಾಗುವುದು.
375. ಬೆಂಗಳೂರಿನಲ್ಲಿ ಅತ್ಯಾಧುನಿಕ AI ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸುವ ಉದ್ದೇಶದಿಂದ Institute of Bioinformatics and Applied Biotechnology, Centre for Cellular and Molecular Platforms ಹಾಗೂ NASSCOM ಸಂಸ್ಥೆಯ ಸಹಭಾಗಿತ್ವದಲ್ಲಿ ಒಟ್ಟು 16 ಕೋಟಿ ರೂ. ಗಳ ವೆಚ್ಚದಲ್ಲಿ ಎರಡು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
376. ಮುಂದಿನ ಐದು ವರ್ಷಗಳಲ್ಲಿ ಕ್ವಾಂಟಂ ಕ್ಷೇತ್ರದಲ್ಲಿ ಅವಶ್ಯವಿರುವ ಉತ್ಕೃಷ್ಟ ಮಾನವ ಸಂಪನ್ಮೂಲವನ್ನು ಪೂರೈಸಲು ಸಂಶೋಧಕರು ಹಾಗೂ ತಂತ್ರಜ್ಞರನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಕ್ವಾಂಟಮ್ ರೋಡ್ ಮ್ಯಾಪ್ನ ಪ್ರಥಮ ಹಂತದ ಅನುಷ್ಠಾನಕ್ಕೆ
10 ಕೋಟಿ ರೂ.ಗಳ ಅನುದಾನ ಒದಗಿಸಿದೆ.
377. ಬೆಂಗಳೂರಿನ ಆದಿನಾರಾಯಣ ಹೊಸಹಳ್ಳಿಯಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ʻವಿಜ್ಞಾನ ನಗರʼ ವನ್ನು (Science City)
233 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಇದಕ್ಕೆ ಅನುಮೋದನೆ ದೊರೆತ ನಂತರ ವಾಸ್ತುವಿನ್ಯಾಸ ತಯಾರಿಸಲು ಕ್ರಮಕೈಗೊಳ್ಳಲಾಗುವುದು.
378. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅರಿವು ಮೂಡಿಸುವ ಉದ್ದೇಶದೊಂದಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಹಾಗೂ 11 ಜಿಲ್ಲೆಗಳಲ್ಲಿ ತಾರಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರಸ್ತುತ ಸಾಲಿನಲ್ಲಿ 6 ಹೊಸ ತಾರಾಲಯಗಳನ್ನು ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಯಾದಗಿರಿ, ಕೊಪ್ಪಳ ಹಾಗೂ ಬೀದರ್ ಜಿಲ್ಲೆಗಳಲ್ಲಿ ತಲಾ ನಾಲ್ಕು ಕೋಟಿ ರೂ.ಗಳಂತೆ ಒಟ್ಟು
24 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
ಕನ್ನಡ ಮತ್ತು ಸಂಸ್ಕೃತಿ
ಜನಮನದ ನುಡಿಯಾಗಿ ಬಾಳು ತಾಯಿ,
ಮೂಕಜನರಿಗು ಕೂಡ ಬರಲಿ ಬಾಯಿ
-ದಿನಕರ ದೇಸಾಯಿ
379. ರಾಜ್ಯದ ವಿವಿಧ ಕಲಾ ಪ್ರಕಾರಗಳನ್ನು ಒಂದೆಡೆ ಸೇರಿಸಿ ʻಬೆಂಗಳೂರು ಹಬ್ಬʼ ಸಂಯೋಜಕರ ಸಹಯೋಗದೊಂದಿಗೆ ಪ್ರತಿ ವರ್ಷ ರಂಗಭೂಮಿ, ಲಲಿತಕಲೆ, ಚಿತ್ರಕಲೆ, ಶಿಲ್ಪಕಲೆ ಇತ್ಯಾದಿ ಕಲಾಪ್ರಕಾರಗಳ ಕಾರ್ಯಕ್ರಮಗಳನ್ನು ಆಯೋಜಿಸಲು ಐದು ಕೋಟಿ ರೂ.ಗಳನ್ನು ನೀಡಲಾಗುವುದು.
380. ಎಲ್ಲಾ ಜಾನಪದ ಹಾಗೂ ಬುಡಕಟ್ಟು ಕಲಾವಿದರು, ವಿದ್ವಾಂಸರು ಹಾಗೂ ಜಾನಪದ ವಾದ್ಯಗಾರರನ್ನು ಒಳಗೊಂಡ ಸಮಾವೇಶಗಳನ್ನು ʻಜಾನಪದ ಸಂಗಮ’ ಶೀರ್ಷಿಕೆಯಲ್ಲಿ ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು.
381. ರಾಷ್ಟ್ರಕವಿ ಡಾ|| ಜಿ.ಎಸ್.ಶಿವರುದ್ರಪ್ಪರವರ ಜನ್ಮಶತಮಾನೋತ್ಸವ ಅಂಗವಾಗಿ ಅವರ ಗೀತೆಗಳ ಗಾಯನ, ವಿಚಾರ ಸಂಕಿರಣ, ಕವಿಗೋಷ್ಠಿ, ಆಯ್ದ ಕೃತಿಗಳ ಇಂಗ್ಲೀಷ್ ಅನುವಾದ,
ಸಾಹಿತ್ಯ ವಾಚಿಕೆ ಹಾಗೂ ಜಿ.ಎಸ್.ಎಸ್. ಪ್ರಶಸ್ತಿ ನೀಡಲು
ಎರಡು ಕೋಟಿ ರೂ. ಒದಗಿಸಲಾಗುವುದು.
382. ಭಾವೈಕ್ಯತೆಯ ಹರಿಕಾರ ಸಂತ ಶಿಶುನಾಳ ಶರೀಫ ಹಾಗೂ ವೀರರಾಣಿ ಬೆಳವಡಿ ಮಲ್ಲಮ್ಮ ಇವರುಗಳ ಹೆಸರಿನಲ್ಲಿ ಪ್ರತ್ಯೇಕವಾಗಿ ಪ್ರತಿಷ್ಠಾನ ಸ್ಥಾಪಿಸಲಾಗುವುದು.
383. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಯು.ಆರ್. ಅನಂತಮೂರ್ತಿಯವರ ಹೆಸರಿನಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಒಂದು ಅಧ್ಯಯನ ಪೀಠವನ್ನು ಸ್ಥಾಪಿಸಲಾಗುವುದು.
384. ಮಕ್ಕಳಿಗಾಗಿ ಪಂಪ, ರನ್ನ, ಜನ್ನ, ಬಸವಾದಿ ಶರಣರು, ಸರ್ವಜ್ಞ, ಕನಕ, ಪುರಂದರ, ಲಕ್ಷ್ಮೀಶ, ಸಂಚಿ ಹೊನ್ನಮ್ಮ ಇತ್ಯಾದಿ ಪ್ರಾಚೀನ ಕವಿಗಳ ಹಾಗೂ ಕುವೆಂಪು, ಶಿವರಾಮ ಕಾರಂತ, ದೇವನೂರು ಮಹದೇವ ಮುಂತಾದವರ ಕೃತಿಗಳ ಬಣ್ಣದ ಚಿತ್ರಗಳು ಮತ್ತು ಸಣ್ಣ ವಾಕ್ಯಗಳ ಪುಸ್ತಕಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಮುದ್ರಿಸಿ ಪ್ರಕಟಿಸಲಾಗುವುದು.
385. ಗೋರ್ ಬಂಜಾರ ಸಮುದಾಯದ ಇತಿಹಾಸ, ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ, ಆಹಾರ ಪದ್ದತಿ, ಕಸುಬು ಇತ್ಯಾದಿಗಳನ್ನು ದಾಖಲಿಸಲು ಬಂಜಾರ ವಿಶ್ವಕೋಶವನ್ನು ಪ್ರಕಟಿಸಲಾಗುವುದು.
386. ದಲಿತ ಸಾಹಿತ್ಯ ಚಳುವಳಿಗೆ 50 ವರ್ಷ ತುಂಬಿದ ಸಂದರ್ಭದಲ್ಲಿ ದಲಿತ ಕವಿ ಸಿದ್ದಲಿಂಗಯ್ಯರವರ ಸಾಹಿತ್ಯವೂ ಸೇರಿದಂತೆ
50 ವರ್ಷಗಳಲ್ಲಿ ರಚನೆಯಾದ ದಲಿತ ಸಾಹಿತ್ಯವನ್ನು ಸಂಪಾದಿಸಿ ʻಅರ್ಧಶತಮಾನದ ದಲಿತ ಸಾಹಿತ್ಯʼ ಎಂಬ ಹೆಸರಿನಲ್ಲಿ ಪುಸ್ತಕವನ್ನು ಪ್ರಕಟಿಸಲಾಗುವುದು. ಇದಕ್ಕಾಗಿ ಒಂದು ಕೋಟಿ ರೂ. ಒದಗಿಸಲಾಗುವುದು.
387. ದಲಿತ ಕವಿ ಸಿದ್ದಲಿಂಗಯ್ಯ ಮತ್ತು ಡಾ. ಡಿ.ಆರ್. ನಾಗರಾಜ ರವರುಗಳ ಹೆಸರಿನಲ್ಲಿ ಟ್ರಸ್ಟ್ ರಚಿಸಲು ಕ್ರಮ ಕೈಗೊಳ್ಳಲಾಗುವುದು.
388. ಕಾಗೋಡು ಸತ್ಯಾಗ್ರಹಕ್ಕೆ ಸಂಬಂಧಿಸಿದ ಕಥಾವಸ್ತುವನ್ನು ಒಳಗೊಂಡ ನಾ. ಡಿಸೋಜ ವಿರಚಿತ ʻಕೊಳಗʼ ಕಾದಂಬರಿಯನ್ನು ಆಧರಿಸಿದ ನಾಟಕವನ್ನು ರಾಜ್ಯಾದ್ಯಂತ ಪ್ರದರ್ಶಿಸಲಾಗುವುದು.
389. ರಾಷ್ಟ್ರಕವಿ ಕುವೆಂಪುರವರ ಮಲೆಗಳಲ್ಲಿ ಮದುಮಗಳು ರಂಗರೂಪಕದಂತೆ ಖ್ವಾಜಾ ಬಂದೇ ನವಾಜ್ರವರ ಕುರಿತು ಅಹೋರಾತ್ರಿ ನಾಟಕವನ್ನು ಏರ್ಪಡಿಸಲಾಗುವುದು.
390. ಚಾಮರಾಜೇಂದ್ರ ದೃಶ್ಯ ಕಲಾ ಕಾಲೇಜಿನ (ಕಾವಾ) ಸಂಸ್ಥೆಯ ಆವರಣದಲ್ಲಿ ಸುಸಜ್ಜಿತ ಕಲಾ ಗ್ಯಾಲರಿ ಸಭಾಂಗಣ ನಿರ್ಮಾಣ, ಲ್ಯಾಂಡ್ಸ್ಕೇಪಿಂಗ್ ಶಿಲ್ಪಕಲಾ ಕೃತಿಗಳ ಪೆಡೆಸ್ಟಲ್ಗಳ ನಿರ್ಮಾಣ ಇತ್ಯಾದಿ ಮೂಲಸೌಕರ್ಯಗಳನ್ನು ಕಲ್ಪಿಸಲು ಎರಡು ಕೋಟಿ ರೂ. ಗಳನ್ನು ಒದಗಿಸಲಾಗುವುದು.
391. ಕರ್ನಾಟಕ ರಾಜ್ಯದ ಸಂಸ್ಕೃತಿಯ ಅಂಗವಾಗಿರುವ ಹವ್ಯಕ
ಭಾಷೆಯ ಬೆಳವಣಿಗೆಗೆ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗುವುದು.
392. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಅಂಡಮಾನ್ ದ್ವೀಪದಲ್ಲಿ ಕರಾಳ ಶಿಕ್ಷೆಗೊಳಗಾದ ಕರ್ನಾಟಕದ 59 ಕನ್ನಡಿಗರ ವೀರಗಾಥೆಯ ಕುರಿತು ʻಅನಾಮಿಕ ಸ್ವಾತಂತ್ರ್ಯ ಹೋರಾಟಗಾರರುʼ ಎಂಬ ಕೃತಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟಿಸಲಾಗುವುದು.
393. ಕರ್ನಾಟಕ ಏಕೀಕರಣಕ್ಕೆ ಪ್ರಮುಖ ಕಾರಣವಾದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ವಿವಿಧ ಚಟುವಟಿಕೆಗಳಿಗಾಗಿ ಎರಡು ಕೋಟಿ ರೂ. ಅನುದಾನ ಒದಗಿಸಲಾಗುವುದು.
394. ಕೋಲಾರದ ʻಆದಿಮʼ, ಮೈಸೂರಿನ ʻರಂಗನಿರಂತರʼ ಮತ್ತು ಬೆಂಗಳೂರಿನ ʻಸಮುದಾಯʼ ಸಂಸ್ಥೆಗಳಿಗೆ ಅನುದಾನ ನೀಡುವುದರ ಮೂಲಕ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುವುದು.
395. ತಿಗಳ ಸಮಾಜವು ರಾಜ್ಯದಲ್ಲಿ 180 ಕರಗ ಉತ್ಸವಗಳನ್ನು ಆಚರಿಸುತ್ತ ಬಂದಿರುತ್ತಾರೆ. ಸದರಿ ಉತ್ಸವಕ್ಕೆ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.
396. ತುಮಕೂರಿನ ಡಾ|| ಗುಬ್ಬಿ ವೀರಣ್ಣ ಕಲಾಮಂದಿರವನ್ನು ಉನ್ನತೀಕರಿಸಲು ಮೂರು ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
ಯುವ ಸಬಲೀಕರಣ ಮತ್ತು ಕ್ರೀಡೆ
397. ಬೆಂಗಳೂರಿನ ಹೆಸರಘಟ್ಟ ಕೆರೆಯಲ್ಲಿ ಪಿಪಿಪಿ ಮಾದರಿಯಲ್ಲಿ Kayaking, Canoeing Centre of Excellence ಸ್ಥಾಪನೆ ಮಾಡಲಾಗುವುದು.
398. ʻಸಶಕ್ತ ಕರ್ನಾಟಕʼ ಕಾರ್ಯಕ್ರಮದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ, ಹಂಪಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್ಗಳನ್ನು ತಲಾ 10 ಲಕ್ಷ ರೂ. ವೆಚ್ಚದಲ್ಲಿ ಆಯೋಜಿಸಲಾಗುವುದು. ಇದರೊಂದಿಗೆ 10 ಜಿಲ್ಲಾ ಕೇಂದ್ರಗಳಲ್ಲಿ ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್ಗಳನ್ನು ಪ್ರಸಿದ್ಧ ಕ್ರೀಡಾಪಟುಗಳ ಹೆಸರಿನಲ್ಲಿ ಆಯೋಜನೆ ಮಾಡಲಾಗುವುದು.
399. ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು ಮೈಸೂರಿನಲ್ಲಿರುವ ದಟ್ಟಗಳ್ಳಿಯಲ್ಲಿ ಗುರುತಿಸಲಾದ ಜಾಗದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಿಸಲಾಗುವುದು.
400. ಬಂಗಾರಪೇಟೆ, ಮುದ್ದೇಬಿಹಾಳ, ಗುಳೇದಗುಡ್ಡ, ಕನಕಪುರ, ಕುಕನೂರು ಮತ್ತು ಮಸ್ಕಿಯಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ತಲಾ ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
401. ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ವಿಜ್ಞಾನ ಸೇವೆಗಳನ್ನು ಒದಗಿಸಲು ಕಲಬುರಗಿಯಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸಲಾಗುವುದು.
402. ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.
403. ವಿಜಯನಗರ ಜಿಲ್ಲೆಯಲ್ಲಿರುವ ಕ್ರೀಡಾಂಗಣವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು KMERC ಅನುದಾನದಲ್ಲಿ ಮೇಲ್ದರ್ಜೆಗೇರಿಸಲಾಗುವುದು.
404. ಮಕ್ಕಳ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸುಸಜ್ಜಿತ ಕ್ರೀಡಾ ತರಬೇತಿ ವಸತಿ ನಿಲಯವನ್ನು ವಿರಾಜಪೇಟೆಯಲ್ಲಿ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು.
405. ಕುಸ್ತಿ ಪಟುಗಳನ್ನು ಪ್ರೋತ್ಸಾಹಿಸಲು ಬೆಳಗಾವಿಯ ಬೆಳಗುಂದಿಯಲ್ಲಿ ನೂತನ ಕುಸ್ತಿ ಅಖಾಡವನ್ನು ನಿರ್ಮಿಸಲಾಗುವುದು.
ಪ್ರವಾಸೋದ್ಯಮ
406. ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ʻಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆʼಯನ್ನು ರೂಪಿಸಲಾಗುವುದು. ಈ ತಾಣಗಳಲ್ಲಿ ವಾಯುಯಾನ
ಹಾಗೂ ಜಲಸಾಹಸ ಪ್ರವಾಸೋದ್ಯಮ ಭಾಗೀದಾರರ ಸಹಯೋಗದೊಂದಿಗೆ Sea Plane ಹಾಗೂ Heli Taxi ಗಳ ಮುಖಾಂತರ ಸಂಪರ್ಕ ಕಲ್ಪಿಸಲಾಗುವುದು. ಜೊತೆಗೆ
Joy Ride ಹಾಗೂ River Cruise ಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುವುದು.
407. ನಮ್ಮ ರಾಜ್ಯಕ್ಕೆ ಆಗಮಿಸುವ ಎಲ್ಲಾ ಪ್ರವಾಸಿಗಳಿಗೆ ಸುಮಧುರ, ಸಕಾರಾತ್ಮಕ ಅನುಭವವನ್ನು ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗಳಿಗೆ ಮೃದು ಕೌಶಲ್ಯ ತರಬೇತಿ ನೀಡುವುದರ ಮೂಲಕ ವೃತ್ತಿಪರತೆಯನ್ನು ವೃದ್ಧಿಗೊಳಿಸಲು ಒಂದು ಕೋಟಿ ರೂ.ಗಳನ್ನು ಒದಗಿಸಲಾಗುವುದು.
408. ಪ್ರವಾಸ ಮಾರ್ಗದರ್ಶಕರಿಗೆ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯ ತರಬೇತಿ ನೀಡಲು ಡಿಪ್ಲೋಮಾ ಕೋರ್ಸ್ ಅನ್ನು ಪ್ರಾರಂಭಿಸಲಾಗುವುದು.
409. ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಅಭಿವೃದ್ಧಿಪಡಿಸಲಾಗುವುದು.
410. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿಯಿಂದ ಕೈಮರದವರೆಗೆ PPP ಮಾದರಿಯಲ್ಲಿ ರೋಪ್-ವೇ ನಿರ್ಮಿಸಲಾಗುವುದು.
411. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.
412. ರಾಜ್ಯದ ಸಂರಕ್ಷಿತ 844 ಸ್ಮಾರಕಗಳ ಹಾಗೂ 1,000 ಅಸುರಕ್ಷಿತ ಸ್ಮಾರಕಗಳ ರಕ್ಷಣೆ ಮಾಡುವ ಹಿತದೃಷ್ಟಿಯಿಂದ 1,000 ಸ್ಮಾರಕ ಮಿತ್ರರನ್ನು ಗುರುತಿಸಿ ತರಬೇತಿ ನೀಡಲಾಗುವುದು. ಇವರುಗಳನ್ನು ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಕ್ರಮವಹಿಸಲಾಗುವುದು.
413. ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರವು ಸಮಗ್ರವಾದ ಯೋಜನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ರೂಪಿಸಿದೆ. ಭಾರತ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ತೀರುವಳಿ ಹಾಗೂ UNESCO ಸಹಮತಿ ಪಡೆದು ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ
414. ಮಾನವ-ವನ್ಯ ಪ್ರಾಣಿ ಸಂಘರ್ಷ ನಿವಾರಣೆಯು ಅತೀ ಮುಖ್ಯವಾದ ಕಾರ್ಯವಾಗಿರುವುದರಿಂದ ಕಳೆದ ಮೂರು ವರ್ಷಗಳಲ್ಲಿ, ಈ ಕೆಳಕಂಡ ಉಪಕ್ರಮಗಳಿಗಾಗಿ ಒಟ್ಟಾರೆ
1,044 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ:
· ಬೆಳೆ ಹಾನಿ, ಜಾನುವಾರು ನಷ್ಟ, ಮಾನವ ಪ್ರಾಣ ಹಾನಿ ಇತ್ಯಾದಿ ಪರಿಹಾರ;
· ಹೊಸದಾಗಿ ಮೂರು ಆನೆ ಕಾರ್ಯಪಡೆಗಳು ಮತ್ತು ಒಂದು ಹೊಸ ಚಿರತೆ ಕಾರ್ಯಪಡೆಯ ರಚನೆ; ಕಾರ್ಯಪಡೆಗಳಿಗಾಗಿ ಹೊಸದಾಗಿ 35೮ ಹುದ್ದೆಗಳ ಸೃಜನೆ;
· ರೈಲ್ವೆ ಬ್ಯಾರಿಕೇಡ್, ಟ್ರೆಂಚಿಂಗ್, ಸೋಲಾರ್ ಫೆನ್ಸಿಂಗ್ ಇತರೆ ರಕ್ಷಣಾ ಕಾರ್ಯ.
415. ಮಾನವ–ವನ್ಯಪ್ರಾಣಿ ಸಂಘರ್ಷವನ್ನು ಕಡಿಮೆ ಮಾಡುವ ಉದ್ದೇಶದಿಂದ ʻಕರ್ನಾಟಕ ಮಾನವ–ವನ್ಯಪ್ರಾಣಿ ಸಂಘರ್ಷ ನಿವಾರಣಾ ಕಾರ್ಯತಂತ್ರ ಯೋಜನೆʼಯನ್ನು ಅನುಷ್ಠಾನಗೊಳಿಸಲು ಮುಂದಿನ ಐದು ವರ್ಷದಲ್ಲಿ 1,500 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 269 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ.
416. ಉದ್ಯಾನ ನಗರಿ ಬೆಂಗಳೂರಿನ ಹೆಸರಘಟ್ಟ ಹುಲ್ಲುಗಾವಲಿನ ಒಟ್ಟು 5,676 ಎಕರೆ ವಿಸ್ತೀರ್ಣದ ಪ್ರದೇಶವನ್ನು ʻಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲುʼ ಎಂದು ಘೋಷಿಸಿದ್ದು,
ಈ ಪ್ರದೇಶದ ಆವಾಸಸ್ಥಾನ ಸಂರಕ್ಷಣೆ ಮತ್ತು ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು.
417. ಬೆಂಗಳೂರು ಹೊರವಲಯದ ವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಚಿರತೆಗಳನ್ನು ಸೆರೆಹಿಡಿಯಲ್ಪಟ್ಟ ಸಂದರ್ಭಗಳಲ್ಲಿ ಅವುಗಳ ಪುನರ್ವಸತಿಗಾಗಿ ಬನ್ನೇರುಘಟ್ಟದಲ್ಲಿ ಐದು ಕೋಟಿ ರೂ.ಗಳ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರವನ್ನು ಸ್ಥಾಪಿಸಲಾಗುವುದು.
418. ಅರಣ್ಯ ಇಲಾಖೆಯಲ್ಲಿನ ವಿವಿಧ ವೃಂದಗಳಲ್ಲಿನ 2,000 ಹುದ್ದೆಗಳನ್ನು 2026-27ನೇ ಆರ್ಥಿಕ ವರ್ಷದಲ್ಲಿ ಭರ್ತಿ ಮಾಡುವ ಮೂಲಕ ಇಲಾಖೆಯನ್ನು ಸಬಲೀಕರಣಗೊಳಿಸಲಾಗುವುದು.
419. ಮೈಸೂರು ಮೃಗಾಲಯ ಹಾಗೂ ಬನ್ನೇರುಘಟ್ಟ ಉದ್ಯಾನವನದ ಕಡೆಗೆ ಪ್ರವಾಸಿಗರನ್ನು ಆಕರ್ಷಿಸಲು ಹಾಗೂ ಪ್ರವಾಸಿಗರ ಅನುಕೂಲತೆಗಾಗಿ PPP ಮಾದರಿಯಲ್ಲಿ ಪ್ರಕೃತಿ ನಿರೂಪಣಾ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು.
420. ರಾಷ್ಟ್ರೀಯ ಅರಣ್ಯ ನೀತಿಯಂತೆ ರಾಜ್ಯದ ಶೇ.10 ಕ್ಕಿಂತ ಕಡಿಮೆ ಅರಣ್ಯ ಹೊದಿಕೆ ಹೊಂದಿರುವ ಕಲ್ಯಾಣ ಕರ್ನಾಟಕ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ವಿಶೇಷ ಆದ್ಯತೆ ನೀಡಿ, 75,000 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯೀಕರಣ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ KKRDB ವತಿಯಿಂದ 50 ಕೋಟಿ ರೂ. ಸೇರಿದಂತೆ ಒಟ್ಟು 150 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗುವುದು.
421. ಬೆಂಗಳೂರು ಉತ್ತರ ತಾಲ್ಲೂಕಿನ ಮಾದಪ್ಪನಹಳ್ಳಿಯ 153 ಎಕರೆ ಪ್ರದೇಶವನ್ನು ಶ್ವಾಸತಾಣವನ್ನಾಗಿ ಪರಿವರ್ತಿಸಿ, ʻಸಾಂಸ್ಕೃತಿಕ ನಾಯಕ ಬಸವಣ್ಣ ಜೈವಿಕ ವೈವಿಧ್ಯ ಉದ್ಯಾನʼವನ್ನು ನಿರ್ಮಿಸಲಾಗುವುದು.
422. ವಾಯು ಗುಣಮಟ್ಟ ಮಾಪನ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ 15 ಹೊಸ ನಿರಂತರ ಪರಿವೇಷ್ಠಿಕ ವಾಯು ಗುಣಮಟ್ಟ ಮಾಪನ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
423. ಕರ್ನಾಟಕದ ಪ್ರಸಿದ್ಧ ಪರಿಸರವಾದಿ ವೃಕ್ಷಮಾತೆ ʻಸಾಲುಮರದ ತಿಮ್ಮಕ್ಕʼ ಇವರ ಸ್ಮರಣಾರ್ಥ ಹುಲಿಕಲ್ಕುದೂರು ಹತ್ತಿರ ಸ್ಮಾರಕವನ್ನು ನಿರ್ಮಿಸಲಾಗುವುದು.
ಕಂದಾಯ
424. ʻಕರ್ನಾಟಕ ಲ್ಯಾಂಡ್ ಸ್ಟಾಕ್ (Land Stack) ಯೋಜನೆʼಯಡಿ ಭೂಮಿ, ಮೋಜಿಣಿ, ಕಾವೇರಿ, ಇ-ಸ್ವತ್ತು, ಇ-ಆಸ್ತಿಯಲ್ಲಿರುವ ಜಮೀನು/ಆಸ್ತಿಯ ದತ್ತಾಂಶಗಳನ್ನು GIS-ಆಧಾರಿತ ಡಿಜಿಟಲ್ ವೇದಿಕೆಯಲ್ಲಿ ಸಮಗ್ರವಾಗಿ ಕ್ರೋಢೀಕರಿಸಿ ಏಕರೂಪದಲ್ಲಿ ದಾಖಲೆಗಳನ್ನು ನಿರ್ವಹಿಸಲಾಗುವುದು.
425. ʻಭೂಮಿ' ತಂತ್ರಾಂಶವನ್ನು ಪ್ರಸ್ತುತ ತಂತ್ರಜ್ಞಾನಕ್ಕೆ ತಕ್ಕಂತೆ ಸಮಗ್ರವಾಗಿ ಆಧುನೀಕರಿಸುವುದರ ಮೂಲಕ 10ಕ್ಕೂ ಹೆಚ್ಚು ಇಲಾಖೆಗಳೊಂದಿಗೆ ಸಂಪರ್ಕ ಹೊಂದಿರುವ ʻಭೂಮಿ-8.0ʼ ಸಾಫ್ಟ್ವೇರ್ ಅನ್ನು ಸುಮಾರು 50 ಕೋಟಿ ರೂ.ಗಳಲ್ಲಿ ಅಭಿವೃದ್ಧಿಪಡಿಸಲಾಗುವುದು.
426. ಕಂದಾಯ ಇಲಾಖೆಯ 43 ಸೇವೆಗಳ ಪಾರದರ್ಶಕತೆ ಮತ್ತು ನಿಖರತೆಯನ್ನು ಕಾಯ್ದುಕೊಳ್ಳಲು E-KYC ಮತ್ತು Face Recognition ಕಡ್ಡಾಯಗೊಳಿಸಲಾಗುವುದು ಮತ್ತು 'ಕುಟುಂಬ', 'ಫ್ರೂಟ್ಸ್' ಮತ್ತು 'ಭೂಮಿ' ದತ್ತಾಂಶಗಳನ್ನು ಸಂಯೋಜಿಸಿ, ನಿರ್ಣಯ ನೆರವು ವ್ಯವಸ್ಥೆ ಸೌಲಭ್ಯ (Decision Support System) ಒದಗಿಸಲಾಗುವುದು.
427. ಭೂ ವ್ಯಾಜ್ಯಗಳ ಇತ್ಯರ್ಥದಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಾತ್ರಿಪಡಿಸಲು 'ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ' (KAT) ಮತ್ತು 'ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ'ಗಳ ಕಲಾಪಗಳನ್ನು CCMS ಮತ್ತು RCCMS ತಂತ್ರಾಂಶಗಳನ್ನು ಸಂಯೋಜಿಸಿ, ಇದರೊಂದಿಗೆ ಎಲ್ಲಾ ಕಂದಾಯ ನ್ಯಾಯಾಲಯಗಳ ಕಲಾಪಗಳನ್ನು
Live Streaming ಮಾಡಲು ಮತ್ತು Video Conference ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ.
428. ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ವರ್ಗಾವಣೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ತಂತ್ರಜ್ಞಾನ ಆಧಾರಿತ ಕೌನ್ಸೆಲಿಂಗ್ (Counselling) ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.
429. ಭೂಮಾಪನ ಇಲಾಖೆಯಲ್ಲಿ ಮೂಲ ದಾಖಲೆಗಳು
160 ವರ್ಷಕ್ಕೂ ಹೆಚ್ಚು ಹಳೆಯದಾಗಿದ್ದು, ಇವುಗಳನ್ನು ಸಂರಕ್ಷಣೆ ಮಾಡಬೇಕಾಗಿರುವುದರಿಂದ ರಾಜ್ಯದ ಎಲ್ಲಾ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಿಗಳಲ್ಲಿ ನವೀಕೃತ ಅಭಿಲೇಖಾಲಯಗಳನ್ನು 72 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
430. ಇಲಾಖೆಯಲ್ಲಿ 50 ಲಕ್ಷಕ್ಕಿಂತಲೂ ಹೆಚ್ಚಿಗೆ ಇರುವ ಟಿಪ್ಪಣಿಗಳು ಮತ್ತು ಎಫ್.ಎಂ.ಬಿ.ಗಳು ಮತ್ತು ಒಂದು ಕೋಟಿಗೂ ಹೆಚ್ಚು ಅಟ್ಲಾಸ್ ಗಳನ್ನು ಆಟೋಕ್ಯಾಡ್ (AutoCAD) ಮತ್ತು ಸರ್ವರ್ಗಳನ್ನು ಖರೀದಿಸಿ GIS ತಂತ್ರಾಂಶದ ಮೂಲಕ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ.
431. ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾಗುತ್ತಿರುವ ʻಅನುಭವ ಮಂಟಪʼ ಕಾಮಗಾರಿಯು ಅಂತಿಮ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು.
432. ಕಾವೇರಿ ತಂತ್ರಾಂಶದಲ್ಲಿನ ತೊಡಕುಗಳನ್ನು ನಿವಾರಿಸಿ
ನೋಂದಣಿ ವ್ಯವಸ್ಥೆಯನ್ನು ಇನ್ನಷ್ಟು ಸುಗಮಗೊಳಿಸಲು
65 ಕೋಟಿ ರೂ.ಗಳ ವೆಚ್ಚದಲ್ಲಿ ಕಾವೇರಿ 3.0 ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. ಇದು AI ಮೂಲಕ ಕಾಗದರಹಿತ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ. ಈ ವ್ಯವಸ್ಥೆಯನ್ನು ಎಲ್ಲಾ ಇಲಾಖೆಗಳಲ್ಲಿರುವ ಆಸ್ತಿ ನಿರ್ವಹಣಾ ವ್ಯವಸ್ಥೆಗಳೊಂದಿಗೆ ಸಂಯೋಜಿಸಲಾಗುವುದು.
433. ಉಪ ನೋಂದಣಾಧಿಕಾರಿಗಳ ಕಛೇರಿಗಳಿಗೆ ಜನರ ಓಡಾಟವನ್ನು ಕಡಿಮೆ ಮಾಡಲು ನೋಂದಣಿ ಕಾಯ್ದೆ 2025 ತಿದ್ದುಪಡಿ ಮೂಲಕ ಸರ್ಕಾರಿ ಇಲಾಖೆಗಳು ಮತ್ತು ಸರ್ಕಾರಿ ಸಂಸ್ಥೆಗಳು ರಿಮೋಟ್ನೋಂದಣಿಯನ್ನು ಸಕ್ರಮಗೊಳಿಸಲಾಗಿದೆ. ಮುಂದುವರೆದು, ಬೃಹತ್ಡೆವಲಪರ್ಗಳಿಂದ RERA ಅನುಮೋದಿತ ಯೋಜನೆಗಳಂತಹ ಅನುಸೂಚಿತ ಖಾಸಗಿ ಸಂಸ್ಥೆಗಳಿಗೆ ರಿಮೋಟ್ನೋಂದಣಿಯನ್ನು ಸಕ್ರಮಗೊಳಿಸಲು ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಮಾನ್ಯ ರಾಷ್ಟ್ರಪತಿಗಳ ಅನುಮೋದನೆಗೆ ಸಲ್ಲಿಸಲಾಗಿದೆ.
434. ಡಿಜಿಟಲ್ ಇ-ಸ್ಟ್ಯಾಂಪಿಂಗ್ ಮತ್ತು ಸಂಪೂರ್ಣ ಕಾಗದ ರಹಿತ ನೋಂದಣಿಗಾಗಿ (End to End Paperless Registration) ನವೀನ ಪ್ಲಾಟ್ಫಾರ್ಮ್ನ್ನು ಅಭಿವೃದ್ಧಿಪಡಿಸಲಾಗುವುದು. ಸ್ಟಾಂಪ್ ಉತ್ಪಾದನೆ ಮತ್ತು ದಸ್ತಾವೇಜನ್ನು ಬರೆದುಕೊಡುವುದರೊಂದಿಗೆ ದಸ್ತಾವೇಜಿನ ಸಂಗ್ರಹಣೆ, ಮರುಪಡೆಯುವಿಕೆ ಮತ್ತು ಡಿಜಿಟಲ್ ಹಂಚಿಕೆಯವರೆಗಿನ ಎಲ್ಲಾ ಪ್ರಕ್ರಿಯೆಗಳನ್ನು ಆನ್ಲೈನ್ನಲ್ಲಿ ಕೈಗೊಳ್ಳಲಾಗುವುದು.
435. ನೋಂದಣಿ ಇಲಾಖೆಯಲ್ಲಿ 2003ಕ್ಕಿಂತ ಹಿಂದಿನ ಲೆಗಸಿ ದಾಖಲೆಗಳನ್ನು ಭೌತಿಕವಾಗಿ ದೀರ್ಘಕಾಲದವರೆಗೆ ಸಂಗ್ರಹಣೆ, ಸಂರಕ್ಷಣೆ ಮಾಡುವ ಉದ್ದೇಶದಿಂದ 207 ಉಪ ನೋಂದಣಿ ಕಛೇರಿಗಳನ್ನು ಡಿಜಿಟಲೀಕರಣಗೊಳಿಸಲಾಗುವುದು.
436. ಉಪ ನೋಂದಣಿ ಕಛೇರಿಗಳಲ್ಲಿ ನಾಗರಿಕರಿಗೆ ಉತ್ತಮ ಅನುಭವವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಪ್ರತಿ ಜಿಲ್ಲೆಯ ಒಂದು ಕಛೇರಿಯನ್ನು ʻನೋಂದಣಿ ಖಾತರಿ ಕೇಂದ್ರವಾಗಿʼ ನವೀಕರಿಸಲಾಗುವುದು. ಅಲ್ಲದೆ, ಪಾಸ್ಪೋರ್ಟ್ಸೇವಾ ಕೇಂದ್ರಗಳ ಮಾದರಿಯಲ್ಲಿ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಐದು ವಿಶ್ವ ದರ್ಜೆಯ ಉಪ ನೋಂದಣಿ ಕೇಂದ್ರಗಳನ್ನು ತೆರೆಯಲಾಗುವುದು.
437. ವಿಶ್ವಬ್ಯಾಂಕ್ ನೆರವಿನಿಂದ ಒಟ್ಟು 5,000 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ನೀರು ಸಂರಕ್ಷಣೆ ಮತ್ತು ಸ್ಥಿತಿ ಸ್ಥಾಪಕತ್ವ ಕಾರ್ಯಕ್ರಮದಡಿ (KWSRP) ಬೆಂಗಳೂರು ನಗರದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಮತ್ತು ರಾಜ್ಯದಲ್ಲಿ ವಿವಿಧ ವಿಪತ್ತು ನಿರ್ವಾಹಣೆ ಯೋಜನೆಯ ಕಾಮಗಾರಿಗಳನ್ನು ಐದು ವರ್ಷ ಅವಧಿಗೆ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
438. ಮಳೆ ಮತ್ತು ಹವಾಮಾನ ದತ್ತಾಂಶದ ವಿಶ್ವಾಸಾರ್ಹ
ಪ್ರಸರಣವನ್ನು ಖಚಿತಪಡಿಸಿ ಮುನ್ಸೂಚನೆ ನೀಡಲು ಸದ್ಯಕ್ಕೆ ಕಾರ್ಯನಿರ್ವಹಿಸುತ್ತಿರುವ 5,150 ಮಳೆ ಮಾಪನ ಕೇಂದ್ರಗಳನ್ನು ಅಂದಾಜು 40 ಕೋಟಿ ರೂ.ಗಳ ವೆಚ್ಚದಲ್ಲಿ ಬದಲಿಸಲು ಕ್ರಮವಹಿಸಲಾಗುವುದು.
439. ವಿಪತ್ತು ಪರಿಹಾರ ಅನುದಾನವನ್ನು ಹೆಚ್ಚಿಸಿ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಪರಿಗಣಿಸುವಂತೆ ರಾಜ್ಯವು 16ನೇ ಹಣಕಾಸು ಆಯೋಗಕ್ಕೆ ಒತ್ತಾಯ ಮಾಡಿತ್ತು. ಆಯೋಗವು ರಾಜ್ಯದ ಎಲ್ಲಾ ಶಿಫಾರಸ್ಸುಗಳನ್ನು ಅಂಗೀಕರಿಸದಿದ್ದರೂ, ಒಟ್ಟು ವಿಪತ್ತು ಪರಿಹಾರ ಅನುದಾನಗಳಲ್ಲಿ ರಾಜ್ಯದ ಪಾಲು
15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.3.56 ರಿಂದ 16ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.4.12ಕ್ಕೆ ಹೆಚ್ಚಳವಾಗಿರುತ್ತದೆ. 16ನೇ ಹಣಕಾಸು ಆಯೋಗದ
ಶಿಫಾರಸ್ಸಿನಂತೆ 2026-27ನೇ ಸಾಲಿಗೆ ಕೇಂದ್ರ ಸರ್ಕಾರದಿಂದ
ಒಟ್ಟು 1,162 ಕೋಟಿ ರೂ. ಮೊತ್ತವನ್ನು ವಿಪತ್ತು ಪರಿಹಾರ ಕಾರ್ಯಗಳಿಗೆ ನೀಡಬೇಕಾಗುವುದು.
440. ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಹಾಗೂ ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ʻಪ್ರಜಾಸೌಧʼ ಗಳನ್ನು ನಿರ್ಮಿಸಲಾಗುವುದು.
ಮುಜರಾಯಿ
441. ಕರ್ನಾಟಕ ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿ.ಬಿ.ಟಿ ಮೂಲಕ ವಿತರಿಸಲು ಉದ್ದೇಶಿಸಲಾಗಿದೆ. ಈ ಉದ್ದೇಶಕ್ಕೆ ಐದು ಕೋಟಿ ರೂ. ಅನುದಾನ ಮೀಸಲಿರಿಸಿದೆ.
442. ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ದೇವಾಲಯಗಳಿಗೆ ಒಳಪಟ್ಟಿರುವ 259 ಕಲ್ಯಾಣಿಗಳನ್ನು ಮೂರು ವರ್ಷಗಳಲ್ಲಿ ಪುನರುಜ್ಜೀವನಗೊಳಿಸಲು ʻಜಲ ನಿಧಿ ಕಲ್ಯಾಣಿಗಳ ಪುನಃಶ್ಚೇತನ ಯೋಜನೆʼ ಕೈಗೊಳ್ಳಲಾಗುತ್ತಿದೆ. ಈ ಉದ್ದೇಶಕ್ಕೆ
ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.
443. ʻಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯʼ ಮತ್ತು ʻಕೊಲ್ಲೂರು
ಶ್ರೀ ಮೂಕಾಂಬಿಕಾ ದೇವಾಲಯʼಗಳಿಗೆ ಮೂಲಭೂತ ಸೌಲಭ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲು ಉದ್ದೇಶಿಸಿದೆ.
444. ಹೊರ ರಾಜ್ಯದ ಪುಣ್ಯಕ್ಷೇತ್ರಗಳಲ್ಲಿರುವ ಕರ್ನಾಟಕ ರಾಜ್ಯದ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ಧಿಪಡಿಸಲು ಈ ಕೆಳಕಂಡಂತೆ ಕ್ರಮ ಕೈಗೊಳ್ಳಲಾಗುವುದು:-
· ವಾರಣಾಸಿಯಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿರುವುರಿಂದ ಹೊಸ ರಾಜ್ಯ ಛತ್ರವನ್ನು ನಿರ್ಮಿಸಲಾಗುವುದು.
· ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಸೇರಿದ ಜಾಗದಲ್ಲಿ ಪ್ರಸ್ತುತ ಇರುವ ಛತ್ರವು ಶಿಥಿಲಗೊಂಡಿದ್ದು, ಇದರ ನವೀಕರಣವನ್ನು ಕೈಗೊಳ್ಳಲಾಗುವುದು.
· ಶ್ರೀಶೈಲಂ ಕ್ಷೇತ್ರದಲ್ಲಿ ಹೊಸದಾಗಿ ಯಾತ್ರಿನಿವಾಸ ನಿರ್ಮಾಣ ಮಾಡಲಾಗುವುದು.
· ತುಳಜಾಪುರದಲ್ಲಿ ಪ್ರಸ್ತುತ ಇರುವ ಛತ್ರವನ್ನು ಹೊಸದಾಗಿ ನಿರ್ಮಾಣ ಮಾಡಲಾಗುವುದು.
445. ಬೆಂಗಳೂರು ನಗರದ ಹೃದಯ ಭಾಗವಾದ ಕೆಂಪೇಗೌಡ ವೃತ್ತದಲ್ಲಿ ಇಲಾಖೆಗೆ ಸೇರಿದ ಬಂಡಿಶೇಷಮ್ಮ ಛತ್ರದ ಜಾಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿ ನಿಲಯ ಹಾಗೂ ವಾಣಿಜ್ಯ ಸಂಕೀರ್ಣವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ (PPP) ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
446. ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳ ವರ್ಗಾವಣೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ತಂತ್ರಜ್ಞಾನ ಆಧಾರಿತ ಕೌನ್ಸೆಲಿಂಗ್ (Counselling) ವ್ಯವಸ್ಥೆಯನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ
447. ಶ್ರೀ ಆರ್.ವಿ. ದೇಶಪಾಂಡೆರವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಸಲ್ಲಿಸಿರುವ 10 ವರದಿಗಳಲ್ಲಿನ 6,031 ಶಿಫಾರಸ್ಸುಗಳ ಪೈಕಿ 2,014 ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲಾಗಿದೆ. ಉಳಿದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
448. ರಾಜ್ಯದ ಎಲ್ಲಾ ಅಂಗನವಾಡಿಗಳು, ಶಾಲೆಗಳು, ಕಾಲೇಜುಗಳು ಹಾಗೂ ವಸತಿನಿಲಯಗಳಲ್ಲಿ AI ಆಧಾರಿತ Facial Recognition ಸಾಫ್ಟ್ವೇರ್ ಮುಖಾಂತರ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಹಾಗೂ ಪ್ರತಿದಿನದ ಫಲಾನುಭವಿಗಳ ಹಾಜರಾತಿ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುವುದು.
ಇ-ಆಡಳಿತ
449. ಇಲಾಖೆಯಲ್ಲಿ ಲಭ್ಯವಿರುವ ದತ್ತಾಂಶವನ್ನು ವಿಶ್ಲೇಷಿಸಿ ಅದರ ಆಧಾರದ ಮೇಲೆ ನಿರ್ಧಾರವನ್ನು ಕೈಗೊಳ್ಳಲು ನೀತಿಗಳ ರಚನೆ, ಮೇಲ್ವಿಚಾರಣೆ ಮತ್ತು ಸರ್ಕಾರದ ಯೋಜನೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ದತ್ತಾಂಶ ವಿಶ್ಲೇಷಣಾ ಕೋಶವನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
450. ಗ್ರಾಮೀಣ ಪ್ರದೇಶದ ಯುವಕರನ್ನು ಅಗತ್ಯ ಕೌಶಲ್ಯದೊಂದಿಗೆ ಉದ್ಯೋಗಶೀಲರನ್ನಾಗಿ ಮಾಡಲು ಕೇಂದ್ರ ಸರ್ಕಾರದ
AI Mission ಸಹಭಾಗಿತ್ವದಲ್ಲಿ ರಾಜ್ಯದ 2ನೇ ಮತ್ತು 3ನೇ ಹಂತದ ನಗರಗಳಲ್ಲಿನ 50 ಸರ್ಕಾರಿ ಕಾಲೇಜುಗಳಲ್ಲಿ ಆಧುನಿಕ
AI ಪ್ರಯೋಗಾಲಯಗಳನ್ನು ಪ್ರಾರಂಭಿಸಲು 10 ಕೋಟಿ ರೂ. ಅನುದಾನ ಒದಗಿಸಲಾಗುವುದು.
ಖಜಾನೆ
451. 2025-26ನೇ ಸಾಲಿನಲ್ಲಿ ಖಜಾನೆ ಇಲಾಖೆಯು ಹಲವಾರು ಮಹತ್ವದ ಸುಧಾರಣೆಗಳನ್ನು ಜಾರಿಗೆ ತಂದಿದೆ. 2025-26ನೇ ಸಾಲಿನಲ್ಲಿ ವಾರ್ಷಿಕ 35 ಲಕ್ಷ ಬಿಲ್ಲುಗಳಲ್ಲಿ ಶೇ.40ರಷ್ಟು ಬಿಲ್ಲುಗಳನ್ನು ಕಾಗದರಹಿತ ಸಲ್ಲಿಕೆ ವಿಧಾನಕ್ಕೆ ಪರಿವರ್ತಿಸಲಾಗಿದೆ ಮತ್ತು ಉಳಿದ ಬಿಲ್ಲುಗಳನ್ನು 2026-27ನೇ ಸಾಲಿನಲ್ಲಿ ಕಾಗದರಹಿತ ಮಾಡುವ ಯೋಜನೆ ಇದೆ. 50 ಕ್ಕೂ ಹೆಚ್ಚು ಸಾರ್ವಜನಿಕ ಉದ್ದಿಮೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ ಹಣಕಾಸು ಮೇಲ್ವಿಚಾರಣೆಯನ್ನು ನಿರ್ವಹಿಸಲು ರಾಜ್ಯ PFMS ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ. HRMS ವ್ಯವಸ್ಥೆಗಳಲ್ಲಿ ಸುಧಾರಣೆ ತರಲಾಗಿದ್ದು, ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರ ವೇತನ ಪ್ರಕ್ರಿಯೆ ಸಮಯವನ್ನು ಒಂದು ವಾರದೊಳಗೆ ತ್ವರಿತಗೊಳಿಸಲಾಗುತ್ತಿದೆ ಮತ್ತು ನಿವೃತ್ತ ನೌಕರರಿಗೆ ಪಿಂಚಣಿ ದಾಖಲೆಗಳ ಡಿಜಿಟಲ್ ಸಲ್ಲಿಕೆ ಮತ್ತು ಟ್ರ್ಯಾಕಿಂಗ್ ಸೌಲಭ್ಯ ಒದಗಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
452. ರಾಜ್ಯದಲ್ಲಿ ಚಲನಚಿತ್ರ ಹಾಗೂ ಇತರೆ ಚಿತ್ರೀಕರಣಗಳಿಗೆ ಅಗತ್ಯವಿರುವ ವಿವಿಧ ಇಲಾಖೆಗಳ ಅನುಮತಿಗಳನ್ನು ಏಕಗವಾಕ್ಷಿ ವ್ಯವಸ್ಥೆಯಲ್ಲಿ ಒಂದೇ ವೇದಿಕೆಯಲ್ಲಿ ನೀಡುವ ಸಲುವಾಗಿ
ʻಸಿನಿ ಮಿತ್ರ’ ಎಂಬ ಆನ್ಲೈನ್ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
453. ರಾಜ್ಯದ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು
ಮತ್ತು ಚಿತ್ರೀಕರಣ ಸ್ಥಳಗಳ ಮಾಹಿತಿಯನ್ನು ಒಳಗೊಂಡ ʻಕರ್ನಾಟಕ ಫಿಲ್ಮ್ ಲೊಕೇಷನ್ ಡಿಜಿಟಲ್ ಮ್ಯಾಪ್ʼನ್ನು ಒಂದು ಕೋಟಿ ರೂ. ಗಳಲ್ಲಿ ಅಭಿವೃದ್ಧಿಪಡಿಸಲಾಗುವುದು.
454. ಗುಣಾತ್ಮಕ ಚಲನಚಿತ್ರಗಳಿಗೆ ನೀಡಲಾಗುತ್ತಿದ್ದ ಸಹಾಯಧನವು ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, 2025-26 ನೇ ಸಾಲಿನಲ್ಲಿ ಮೂರು ವರ್ಷಗಳ ಚಲನಚಿತ್ರಗಳನ್ನು ಗುರುತಿಸಿ ನಮ್ಮ ಸರ್ಕಾರದಲ್ಲಿ ಸಹಾಯಧನವನ್ನು ನೀಡಲಾಗಿರುತ್ತದೆ. ಪ್ರಸಕ್ತ ಸಾಲಿಗೆ ಉಳಿದ ಮೂರು ವರ್ಷಗಳ ಚಲನಚಿತ್ರಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸಹಾಯಧನವನ್ನು ನೀಡಲು 20 ಕೋಟಿ ರೂ. ಗಳನ್ನು ಒದಗಿಸಲಾಗುವುದು.
455. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ವಿಚಾರಧಾರೆಗಳನ್ನು ಯುವಜನರಿಗೆ ತಿಳಿಸಲು ಮತ್ತು ಜಿಲ್ಲಾ ಗಾಂಧಿ ಭವನಗಳನ್ನು ಪುನಃಶ್ಚೇತನಗೊಳಿಸಲು ‘ಮಹಾತ್ಮಾ ಗಾಂಧಿ ಜನ ಶಿಕ್ಷಣ ಕೇಂದ್ರʼ ಯೋಜನೆಯನ್ನು ರೂಪಿಸಿ ಜಾರಿಗೊಳಿಸಲಾಗುವುದು.
456. ಇಲಾಖೆಯಲ್ಲಿ ಲಭ್ಯವಿರುವ ಛಾಯಾಚಿತ್ರಗಳು ಹಾಗೂ ವೀಡಿಯೊ ಡಾಕ್ಯುಮೆಂಟರಿಗಳನ್ನು ಡಿಜಿಟಲ್ಮಾದರಿಗೆ ಪರಿವರ್ತಿಸಿ, ʻಡಿಜಿಟಲ್ ದೃಶ್ಯ ಕರ್ನಾಟಕʼ ಎಂಬ ವೇದಿಕೆಯೊಂದನ್ನು ಕಲ್ಪಿಸಲಾಗುವುದು. ಇದಕ್ಕಾಗಿ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.
457. ಮೈಸೂರು ಫಿಲ್ಮ್ ಸಿಟಿಯನ್ನು ಸ್ಥಾಪಿಸಲು ಈ ಮೊದಲು
500 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿತ್ತು.
ಫಿಲ್ಮ್ ಸಿಟಿ ಸೌಲಭ್ಯಗಳನ್ನು ಒಳಗೊಂಡಂತೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ಥೀಮ್ ಪಾರ್ಕ್, ಸ್ಟಾರ್ ಹೊಟೇಲ್ ಮತ್ತು ರೆಸ್ಟೋರೆಂಟ್ಗಳನ್ನು ಒಳಗೊಂಡು PPP ಮಾದರಿಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿ ವ್ಯವಹಾರ ವಹಿವಾಟುದಾರರನ್ನು ನೇಮಿಸಲಾಗಿದೆ.
458. ದಿವಂಗತ ಪುಟ್ಟಣ್ಣ ಕಣಗಾಲ್ರವರ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲಾಗುವುದು.
459. ಮಹಾತ್ಮಾ ಗಾಂಧೀಜಿರವರು ಭೇಟಿ ಕೊಟ್ಟ ರಾಜ್ಯದ ವಿವಿಧ ಸ್ಥಳಗಳಲ್ಲಿ ಅವರ ಸ್ಮರಣಾರ್ಥ ಗಾಂಧಿ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲಾಗುವುದು.
ಒಳಾಡಳಿತ
460. ಕಳೆದ ಮೂರು ವರ್ಷದ ಅವಧಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ 5,911 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಗೃಹ ಇಲಾಖೆಯಲ್ಲಿ ಖಾಲಿ ಇರುವ ಒಟ್ಟಾರೆ 8,000 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು.
461. ಗೃಹ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿಯನ್ನು ಕ್ರಮಬದ್ಧವಾಗಿ, ಪಾರದರ್ಶಕವಾಗಿ ಹಾಗೂ ನಿಯಮಿತವಾಗಿ ನಡೆಸಲು ಶಾಶ್ವತ ಪೊಲೀಸ್ ಮತ್ತು ಪೊಲೀಸ್ ಸಹಾಯಕ ಸೇವೆಗಳ ನೇಮಕಾತಿ ಮಂಡಳಿಯನ್ನು ಸ್ಥಾಪಿಸಲಾಗುವುದು.
462. ಇಲಾಖೆಯ ಸಿಬ್ಬಂದಿಗಳಿಗೆ ಸುಸಜ್ಜಿತ ವಸತಿಗೃಹಗಳನ್ನು ಒದಗಿಸಲು ರೂಪಿಸಿದ 2,000 ಕೋಟಿ ರೂ.ಗಳ ಮೊತ್ತದ ಪೊಲೀಸ್ ಗೃಹ 2025 ಯೋಜನೆಗೆ ಇದುವರೆಗೆ 1,257 ಕೋಟಿ ರೂ.ಗಳನ್ನು ಒದಗಿಸಿದ್ದು, ಐದು ಹಂತಗಳಲ್ಲಿ 4,914 ವಸತಿಗೃಹಗಳ
ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಸಕ್ತ ಸಾಲಿನಲ್ಲಿ 250 ಕೋಟಿ ರೂ.ಗಳ ವೆಚ್ಚದಲ್ಲಿ ವಸತಿಗೃಹಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ.
463. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲದ ಅಧಿವೇಶನದ ಸಮಯದಲ್ಲಿ ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗುವ ಸಿಬ್ಬಂದಿಗಳಿಗೆ ವಸತಿ ಸೌಲಭ್ಯವನ್ನು ಒದಗಿಸುವುದಕ್ಕಾಗಿ 20 ಕೋಟಿ ರೂ.ಗಳ ವೆಚ್ಚದಲ್ಲಿ 1,000 ಸಿಬ್ಬಂದಿಗಳಿಗೆ ಶಾಶ್ವತ ಬ್ಯಾರಕ್ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.
464. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಗೂ ಸಂಚಾರ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸುವ ದೃಷ್ಟಿಯಿಂದ 2026-27ನೇ ಸಾಲಿನಲ್ಲಿ 12 ನೂತನ ಪೋಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು (ಅನುಬಂಧ-೮). ಮುಂದುವರೆದು, ಪ್ರಸಕ್ತ ವರ್ಷದಲ್ಲಿ ನಿವೇಶನ ಲಭ್ಯವಿರುವ 10 ಪೊಲೀಸ್ ಠಾಣೆ ಕಟ್ಟಡಗಳನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.
465. ಸಾರ್ವಜನಿಕರ ಭದ್ರತೆ ಮತ್ತು ಸೂಕ್ಷ್ಮ ನಿಗಾವಣೆ ದೃಷ್ಟಿಯಿಂದ ಗೃಹ ಇಲಾಖೆಯಲ್ಲಿ ಚಲನಶೀಲತೆಯನ್ನು ಹೆಚ್ಚಿಸಲು ಪ್ರಸಕ್ತ ಸಾಲಿನಲ್ಲಿ 75 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ವಾಹನಗಳನ್ನು ಒದಗಿಸಲಾಗುವುದು.
466. ಕೇಂದ್ರ ಪುರಸ್ಕೃತ ಪೊಲೀಸ್ ಆಧುನೀಕರಣ ಯೋಜನೆಯಡಿ ಅತ್ಯಾಧುನಿಕ ಸಂಪರ್ಕ ಸಾಧನಗಳು, ಫೋರೆನ್ಸಿಕ್ ಉಪಕರಣಗಳು, ಸಿಸಿಟಿವಿ, Body worn Camera, Anti-Drone, Drone ಮತ್ತು ಇತರೆ ಉಪಕರಣಗಳನ್ನು ಒದಗಿಸಲು ಕೇಂದ್ರ ಮತ್ತು ರಾಜ್ಯದ ಪಾಲು ಸೇರಿದಂತೆ ಒಟ್ಟಾರೆ 354 ಕೋಟಿ ರೂ.ಗಳ ಕ್ರಿಯಾಯೋಜನೆಯನ್ನು ರೂಪಿಸಿದ್ದು, 142 ಕೋಟಿ ರೂ.ಗಳ ರಾಜ್ಯದ ಪಾಲನ್ನು ಒದಗಿಸಲು ಕ್ರಮವಹಿಸಲಾಗುವುದು.
467. ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿ
ಮಾಡಲು Zero Tolerance to Drugs ಧ್ಯೇಯದೊಂದಿಗೆ
ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಘಟಕವನ್ನು
10 ಕೋಟಿ ರೂ.ಗಳ ವೆಚ್ಚದಲ್ಲಿ ಬಲಪಡಿಸಲಾಗುವುದು.
468. ದ್ವೇಷ ಭಾಷಣ ಮತ್ತು ಸಂಭಾವ್ಯ ಕೋಮು ಗಲಭೆಯನ್ನು ನಿಯಂತ್ರಿಸಿ ಸಮಾಜದಲ್ಲಿ ಸೌಹಾರ್ದಯುತ ವಾತಾವರಣವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ರಾಜ್ಯದಲ್ಲಿ ವಿಶೇಷ ಕಾರ್ಯಪಡೆಯನ್ನು ಸ್ಥಾಪಿಸಲಾಗಿದ್ದು ಪ್ರಸಕ್ತ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೂರು ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ.
469. ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿನ ಸಂಚಾರ ದಟ್ಟಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ದೃಷ್ಟಿಯಿಂದ ವಿವಿಧ ಸಂಚಾರ ನಿರ್ವಹಣೆ ಸಂಸ್ಥೆಗಳಿಂದ ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತಿರುವ ದತ್ತಾಂಶವನ್ನು ಸಂಗ್ರಹಿಸಿ ವಿಶ್ಲೇಷಿಸುವುದರ ಮೂಲಕ ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು 25 ಕೋಟಿ ರೂ.ಗಳ ವೆಚ್ಚದಲ್ಲಿ ಸಂಯೋಜಿತ ಡಿಜಿಟಲ್ ವೇದಿಕೆಯನ್ನು ರೂಪಿಸಲಾಗುವುದು.
470. ಬೆಂಗಳೂರು ನಗರ ಒಳಗೊಂಡಂತೆ ನಗರ ಪ್ರದೇಶಗಳಲ್ಲಿನ ಪೊಲೀಸಿಂಗ್ ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಗರ ಪೊಲೀಸಿಂಗ್ ನಾವೀನ್ಯತೆ ಸಂಸ್ಥೆಯನ್ನು (Urban Policing Innovation Centre) ಸೃಜಿಸಿ ಜಿ.ಬಿ.ಎ. ಹಾಗೂ ಕಾರ್ಪೋರೇಟ್ ಸಂಸ್ಥೆಗಳ ಸಹಯೋಗದೊಂದಿಗೆ ಸಿ.ಎಸ್.ಆರ್. ನಿಧಿಯನ್ನು ಬಳಸಿಕೊಂಡು ನಿರ್ವಹಿಸಲು ಉದ್ದೇಶಿಸಲಾಗಿದೆ.
471. ಸಾರ್ವಜನಿಕರ ಅನುಸರಣೆ ಭಾರವನ್ನು (Compliance Burden) ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ರಾಜ್ಯದಲ್ಲಿನ ಎಲ್ಲಾ ವರ್ಗದ ಕಟ್ಟಡಗಳಿಗೆ ನೀಡಲಾಗುವ ಕ್ಲಿಯರೆನ್ಸ್ ನವೀಕರಣ ಪ್ರಮಾಣಪತ್ರ ಹಾಗೂ ಬಹುಮಹಡಿ ಕಟ್ಟಡವಲ್ಲದ ಕಟ್ಟಡಗಳಿಗೆ ನೀಡಲಾಗುವ ಸಮಾಪನ ಪತ್ರದ ನವೀಕರಣ ಅವಧಿಯನ್ನು
ಎರಡು ವರ್ಷಗಳಿಂದ ಐದು ವರ್ಷಗಳಿಗೆ ಹೆಚ್ಚಿಸಲು ಕ್ರಮವಹಿಸಲಾಗುವುದು. ಮುಂದುವರೆದು, ಈಗಾಗಲೇ ನೀಡಲಾಗಿರುವ ಪ್ರಮಾಣಪತ್ರಗಳನ್ನು ಸಹ ಉಳಿಕೆ ಅವಧಿಯ ಶುಲ್ಕವನ್ನು ಪಡೆದು ಐದು ವರ್ಷಗಳ ಅವಧಿಗೆ ನವೀಕರಿಸಲಾಗುವುದು.
472. ಹೆಚ್ಚಿನ ಅಗ್ನಿ ಸುರಕ್ಷತೆಗಾಗಿ ಕೈಗೆತ್ತಿಕೊಳ್ಳಲಾಗಿರುವ K-SAFE-2 ಯೋಜನೆಯಡಿ 2026-27 ನೇ ಸಾಲಿಗೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಹಾಗೂ ವಾಹನಗಳು, ಅತ್ಯಾಧುನಿಕ ಅಗ್ನಿಶಮನ ಮತ್ತು ರಕ್ಷಣಾ ಉಪಕರಣಗಳನ್ನು ಒದಗಿಸಲು ಪ್ರಸಕ್ತ ಸಾಲಿಗೆ
50 ಕೋಟಿ ರೂ.ಗಳನ್ನು ಮೀಸಲಿರಿಸಿದೆ.
473. ರಾಜ್ಯದಲ್ಲಿ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತಗಳನ್ನು ತಡೆಗಟ್ಟಲು ಪ್ರಸಕ್ತ ವರ್ಷದಲ್ಲಿ 52-54 ಮೀಟರ್ ಎತ್ತರಕ್ಕೆ ತಲುಪುವ ಒಂದು ಏರಿಯಲ್ ಲ್ಯಾಡರ್ ಪ್ಲಾಟ್ಫಾರಂ ವಾಹನವನ್ನು ಒದಗಿಸಲಾಗುವುದು.
474. ಅಗ್ನಿ ಶಮನ ಕಾರ್ಯಕ್ಕೆ ನಿಯೋಜಿತರಾಗುವ ಅಗ್ನಿಶಾಮಕ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಪ್ರಸಕ್ತ ನೀಡಲಾಗುತ್ತಿರುವ ಆಹಾರ ಭತ್ಯೆಯನ್ನು 150 ರೂ.ಗಳಿಂದ
300 ರೂ.ಗಳಿಗೆ ಹೆಚ್ಚಿಸಲಾಗುವುದು.
475. ಬೆಂಗಳೂರಿನಲ್ಲಿ ಗರಿಷ್ಠ ಭದ್ರತಾ ಕೇಂದ್ರ ಕಾರಾಗೃಹ ಹಾಗೂ ವಿಜಯಪುರ ಮತ್ತು ಬೀದರ್ಗಳಲ್ಲಿ ತಲಾ 1,000 ಬಂದಿಗಳ ಸಾಮರ್ಥ್ಯದ ಜಿಲ್ಲಾ ಕೇಂದ್ರ ಕಾರಾಗೃಹಗಳನ್ನು ಒಟ್ಟಾರೆ
471 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುತ್ತದೆ. ಮಂಗಳೂರು ಕೇಂದ್ರ ಕಾರಾಗೃಹದ ಎರಡನೇ ಹಂತದ ಕಾಮಗಾರಿಯನ್ನು ಮತ್ತು ರಾಯಚೂರು ಜಿಲ್ಲಾ ಕೇಂದ್ರ ಕಾರಾಗೃಹಗಳ ನಿರ್ಮಾಣ ಕಾರ್ಯವನ್ನು ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.
476. ʻಆಪರೇಷನ್ ಪರಿಶುದ್ಧೀಕರಣʼ ದಡಿಯಲ್ಲಿ ಎಲ್ಲಾ ಕಾರಾಗೃಹಗಳಲ್ಲಿ ಮೊಬೈಲ್, ಗಾಂಜಾ ಹಾಗೂ ಇನ್ನಿತರ ನಿಷೇಧಿತ ವಸ್ತುಗಳ ಬಳಕೆ, ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು Artificial Intrusion Detection System, ಸಿಸಿಟಿವಿ, ಬಾಡಿವೋರ್ನ್ ಕ್ಯಾಮರಾ ಸೇರಿದಂತೆ ಇನ್ನಿತರ ಅತ್ಯಾಧುನಿಕ ಭದ್ರತಾ ತಪಾಸಣಾ ಉಪಕರಣಗಳನ್ನು 20 ಕೋಟಿ ರೂ.ಗಳ ವೆಚ್ಚದಲ್ಲಿ ಒದಗಿಸಲಾಗುವುದು.
477. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ “ಮಾದಕ ದ್ರವ್ಯ ವ್ಯಸನ ಮುಕ್ತ ಕೇಂದ್ರ”ವನ್ನು ಸ್ಥಾಪಿಸಲಾಗುವುದು.
ಸಾರಿಗೆ
478. ಮಹಿಳಾ ಸಬಲೀಕರಣದ ಸದುದ್ದೇಶದಿಂದ ಜಾರಿಗೆ ತರಲಾಗಿರುವ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಇದುವರೆಗೆ 6೮೪ ಕೋಟಿ ಟ್ರಿಪ್ಗಳಲ್ಲಿ ಮಹಿಳಾ ಫಲಾನುಭವಿಗಳು ಪ್ರಯಾಣ ಸೌಲಭ್ಯ ಪಡೆದಿರುತ್ತಾರೆ.
ಈ ಯೋಜನೆಯ ಅನುಷ್ಠಾನಕ್ಕಾಗಿ 2026-27ನೇ ಸಾಲಿಗೆ
5,300 ಕೋಟಿ ರೂ.ಗಳನ್ನು ಒದಗಿಸಲಾಗುವುದು.
479. ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿಗಳಿಗೆ ಹಿಂದಿನ ಸರ್ಕಾರ
ದಿನಾಂಕ: 01.03.2023 ರಿಂದ ಜಾರಿಗೆ ಬರುವಂತೆ ವೇತನವನ್ನು ಪರಿಷ್ಕರಿಸಿದ್ದು, ಅದಕ್ಕೂ ಮೊದಲಿನ ಅವಧಿಯ ವೇತನ ಪರಿಷ್ಕರಣೆಯ ವ್ಯತ್ಯಾಸದ ಮೊತ್ತವನ್ನು ಪಾವತಿ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಸದರಿ ಅವಧಿಯ ವೇತನ ಪರಿಷ್ಕರಣೆ ಬಾಕಿ ಬೇಡಿಕೆಯನ್ನು ಸಹಾನುಭೂತಿಯಿಂದ ಪರಿಶೀಲಿಸಿ ದಿನಾಂಕ: 01.01.2021 ರಿಂದ 28.02.2023 ರವರೆಗಿನ ವೇತನ ಬಾಕಿಯನ್ನು ಪಾವತಿಸಲು ಹಾಗೂ ದಿನಾಂಕ: 01.04.2025 ರಿಂದ ಜಾರಿಗೆ ಬರುವಂತೆ ವೇತನವನ್ನು ಪರಿಷ್ಕರಿಸಲು ನಮ್ಮ
ಸರ್ಕಾರ ನಿಶ್ಚಯಿಸಿರುತ್ತದೆ. ವೇತನ ಬಾಕಿ ಪಾವತಿಗಾಗಿ
1,271 ಕೋಟಿ ರೂ.ಗಳನ್ನು ಒದಗಿಸಲಾಗುವುದು.
480. ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸೇವೆಯನ್ನು ಉತ್ತಮಪಡಿಸಲು 2025-26ನೇ ಸಾಲಿನಲ್ಲಿ ಘೋಷಿಸಿದ 2,000 ಡೀಸೆಲ್ ಬಸ್ಸುಗಳನ್ನು ನೇರ ಖರೀದಿ ಮೂಲಕ ಒದಗಿಸಲು ಈಗಾಗಲೇ ಕ್ರಮವಹಿಸಲಾಗಿರುತ್ತದೆ. ಇದೂ ಸೇರಿದಂತೆ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಒಟ್ಟಾರೆ 6,596 ಸಂಖ್ಯೆಯ ಬಸ್ಸುಗಳನ್ನು ನಿಗಮಗಳಿಗೆ ಒದಗಿಸಲಾಗಿರುತ್ತದೆ. 2026-27ನೇ ಸಾಲಿನಲ್ಲಿ 1,000 ಡೀಸೆಲ್ ಬಸ್ಸುಗಳನ್ನು ಒದಗಿಸಲಾಗುವುದು.
481. ವಿಶ್ವಬ್ಯಾಂಕ್ ನೆರವಿನೊಂದಿಗೆ 2,000 ಕೋಟಿ ರೂ.ಗಳ ಮೊತ್ತದ Karnataka Electric Bus Program (KEBP) ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಇದರಡಿ BMTCಸಂಸ್ಥೆಯ
32 ಹಾಗೂ ಇತರೆ ರಸ್ತೆ ಸಾರಿಗೆ ನಿಗಮಗಳ 62 ಎಲೆಕ್ಟ್ರಿಕ್ ಬಸ್ ಡಿಪೋಗಳನ್ನು ಅಭಿವೃದ್ಧಿಪಡಿಸುವುದರೊಂದಿಗೆ 4,000 ವಿದ್ಯುತ್ ಚಾಲಿತ ಬಸ್ಸುಗಳನ್ನು ಒದಗಿಸಲಾಗುವುದು.
482. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಅಪಘಾತ ಸ್ಥಳಗಳನ್ನು (Accident Black Spots) ಗುರುತಿಸಲು ಮತ್ತು ಅವುಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಐ.ಐ.ಟಿ. ಮದ್ರಾಸ್ ಮತ್ತು ಎನ್.ಐ.ಸಿ. ರವರ ಸಹಯೋಗದೊಂದಿಗೆ
ಡ್ಯಾಶ್ ಬೋರ್ಡ್ ಒಳಗೊಂಡ ಆಧುನಿಕ ತಂತ್ರಾಂಶವನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.
483. ರಾಜ್ಯದಲ್ಲಿ ಸ್ವಂತ ಕಟ್ಟಡ ಹೊಂದಿರುವ 25 ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಡ್ರೈವಿಂಗ್ ಟ್ರ್ಯಾಕ್ಗಳು ಹಾಗೂ ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್ ಕಟ್ಟಡಗಳ ಮೇಲ್ಛಾವಣಿಯಲ್ಲಿ 10 ಕೋಟಿ ರೂ.ಗಳ ವೆಚ್ಚದಲ್ಲಿ Roof Top Solar ಅಳವಡಿಸುವ ಯೋಜನೆಯನ್ನು ಜಾರಿಗೊಳಿಸಲಾಗುವುದು.
484. ತುಮಕೂರಿನಲ್ಲಿ 5 ಕೋಟಿ ರೂ.ಗಳ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್ ಅನ್ನು ನಿರ್ಮಿಸಲು ಉದ್ದೇಶಿಸಲಾಗಿದೆ.
485. ಚಿಕ್ಕಮಗಳೂರು ಹಾಗೂ ತುಮಕೂರಿನಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು 12 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.
486. ರಾಮದುರ್ಗ, ಹೊನ್ನಾಳಿ ಮತ್ತು ಗದಗದಲ್ಲಿ ನೂತನ ಬಸ್ಸು ನಿಲ್ದಾಣಗಳನ್ನು ಹಾಗೂ ತರೀಕೆರೆಯಲ್ಲಿ ಬಸ್ಸು ಡಿಪೋ ಅನ್ನು ನಿರ್ಮಿಸಲಾಗುವುದು.
ಕಾನೂನು
487. ಕಳೆದ ಸಾಲಿನಲ್ಲಿ ವಿಶೇಷ ಲೋಕ್ ಅದಾಲತ್ಗಳನ್ನು ನಡೆಸಿ
2.82 ಕೋಟಿ ಸಿವಿಲ್ ಪ್ರಕರಣಗಳನ್ನು ಮತ್ತು 1,113 ಭೂಸ್ವಾಧೀನ ಪ್ರಕರಣಗಳನ್ನು ಅನುಕ್ರಮವಾಗಿ 9,978 ಕೋಟಿ ರೂ. ಮತ್ತು
132 ಕೋಟಿ ರೂ.ಗಳ ಪರಿಹಾರದ ಮೊತ್ತದೊಂದಿಗೆ ಇತ್ಯರ್ಥಪಡಿಸಲಾಗಿದೆ.
488. ನ್ಯಾಯಾಂಗ ವ್ಯವಸ್ಥೆಯನ್ನು ಸುಧಾರಣೆಗೊಳಿಸಲು ಮೂಲಭೂತ ಸೌಕರ್ಯಗಳಾದ ಕೋರ್ಟ್ ಕಟ್ಟಡ ಹಾಗೂ ನ್ಯಾಯಾಧೀಶರಿಗೆ ವಸತಿ ಗೃಹ ನಿರ್ಮಾಣಕ್ಕಾಗಿ 175 ಕೋಟಿ ರೂ.ಗಳನ್ನು ಒದಗಿಸಲಾಗುವುದು.
489. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ನಿರ್ಮಾಣ ಮಾಡಲಾಗುವುದು.
490. ಕಾಗದರಹಿತ, ಸಮರ್ಥ ಮತ್ತು ನಾಗರಿಕ-ಕೇಂದ್ರಿತ ನ್ಯಾಯಾಂಗವನ್ನು ಜಾರಿಗೆ ತರಲು ಬೆಂಗಳೂರು, ಧಾರವಾಡ, ಕಲಬುರಗಿ ಮತ್ತು ಮೈಸೂರು ನಗರಗಳಲ್ಲಿ ಪ್ರಾಯೋಗಿಕವಾಗಿ
ʻಇ-ಕೋರ್ಟ್ʼ ಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.
491. ಅಡ್ವೋಕೇಟ್ ಜನರಲ್ರವರ ಕಛೇರಿಗೆ ಗ್ರಂಥಾಲಯ, ವಿ.ಸಿ. ಸೌಲಭ್ಯ ಒದಗಿಸಲು ಹಾಗೂ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಕಛೇರಿಗಳಲ್ಲಿನ CCMS ಮತ್ತು e-filing ಗೆ ಅಗತ್ಯವಿರುವ ಮೂಲ ಸೌಕರ್ಯವನ್ನು ಉನ್ನತೀಕರಿಸಲು ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.
492. ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಗೊಳಿಸಿ ಕಡಿಮೆ ಮಾಡಬಹುದಾಗಿದ್ದು, ಮಧ್ಯಸ್ಥಿಕೆಯಲ್ಲಿ ಆಸಕ್ತಿ ಇರುವ ನ್ಯಾಯಾಧೀಶರು ಮತ್ತು ವಕೀಲರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ.
493. ಸರ್ಕಾರದಿಂದ ರಚಿಸಲ್ಪಡುವ ಎಲ್ಲಾ ಕಾನೂನುಗಳನ್ನು ಕನ್ನಡದಲ್ಲಿ ಸಿದ್ಧಪಡಿಸಲಾಗುವುದು. ಅಲ್ಲದೇ, ಕೇಂದ್ರ ಸರ್ಕಾರವು ಇಲ್ಲಿಯವರೆಗೂ ಅಧಿನಿಯಮಿಸಿದ ಎಲ್ಲಾ ಕಾನೂನುಗಳನ್ನು ಕನ್ನಡಕ್ಕೆ ಭಾಷಾಂತರಿಸಲಾಗುವುದು.
ತೆರಿಗೆ ಪ್ರಸ್ತಾವನೆಗಳು
ವಾಣಿಜ್ಯ ತೆರಿಗೆ
494. ಆರ್ಥಿಕ ವರ್ಷ 2025-26ರ ಫೆಬ್ರವರಿ ತಿಂಗಳವರೆಗೆ
೭೪,೧೬೦ ಕೋಟಿ ರೂ.ಗಳ ಜಿ.ಎಸ್.ಟಿ ತೆರಿಗೆ ಸಂಗ್ರಹವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.೫.೮ ರಷ್ಟು ಹೆಚ್ಚಳವಾಗಿರುತ್ತದೆ. ಮಾರಾಟ ತೆರಿಗೆ ಮತ್ತು ವೃತ್ತಿ ತೆರಿಗೆ ಒಳಗೊಂಡು, ಒಟ್ಟು ವಾಣಿಜ್ಯ ತೆರಿಗೆಯಿಂದ ಫೆಬ್ರವರಿ 2026ರವರೆಗೆ ೧,೦೦,೪೬೨ ಕೋಟಿ ರೂ.ಗಳು ಸ್ವೀಕೃತವಾಗಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.೮.೧ ರಷ್ಟು ಹೆಚ್ಚಳವಾಗಿರುತ್ತದೆ.
495. ಕೈಗಾರಿಕೆ ಮತ್ತು ಸಾರಿಗೆ ವಲಯಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ದ್ರವೀಕೃತ ನೈಸರ್ಗಿಕ ಅನಿಲ (LNG) ಮೇಲಿನ ಕರ್ನಾಟಕ ಮಾರಾಟ ತೆರಿಗೆ ದರವನ್ನು ಪ್ರಸ್ತುತ ಇರುವ 14.34% ರಿಂದ 5%ಕ್ಕೆ ಇಳಿಸುವುದಕ್ಕೆ ಪ್ರಸ್ತಾಪಿಸಲಾಗಿದೆ.
496. ಕರ್ನಾಟಕ ವೃತ್ತಿಗಳ, ಕಸುಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಿನ ತೆರಿಗೆ ಅಧಿನಿಯಮ, 1976ರ ಅಡಿಯಲ್ಲಿ, ತೆರಿಗೆದಾಯಕ ವ್ಯಕ್ತಿಯು ವರ್ಷಕ್ಕೆ ಪಾವತಿಸಬೇಕಾದ ಸಂಪೂರ್ಣ ತೆರಿಗೆಯನ್ನು ಸಲ್ಲಿಸಿದ ಸಂದರ್ಭದಲ್ಲಿ, ಆ ವರ್ಷಕ್ಕೆ ಸಂಬಂಧಿಸಿದ ವಿವರಪಟ್ಟಿಕೆ ಸಲ್ಲಿಸುವ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ತಿದ್ದುಪಡಿ ತರಲಾಗುವುದು. ಇದಲ್ಲದೆ ವೃತ್ತಿ ತೆರಿಗೆಯಿಂದ ವಿನಾಯಿತಿ ಹೊಂದಿರುವ ವ್ಯಕ್ತಿಗಳಿಗೆ ಕೂಡ ವಿವರಪಟ್ಟಿಕೆ ಸಲ್ಲಿಸುವ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ಅಧಿನಿಯಮದಲ್ಲಿ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಾಗುವುದು.
497. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಗ್ರೂಪ್-ಎ ವೃಂದದ ಅಧಿಕಾರಿಗಳಿಗೆ ದೇಶದಲ್ಲೇ ಮೊದಲ ಬಾರಿಗೆ ರಚನಾತ್ಮಕ, ವಸ್ತುನಿಷ್ಠ, ಪಾರದರ್ಶಕವಾದ ಕಾರ್ಯಕ್ಷಮತೆ ಆಧಾರದ ಮೇಲೆ ಮೌಲ್ಯಮಾಪನ ವ್ಯವಸ್ಥೆಯನ್ನು ನಿರ್ದಿಷ್ಠ ಮಾನದಂಡಗಳ ಆಧಾರಗಳ ಮೇಲೆ ಕೈಗೊಳ್ಳಲಾಗುವುದು. ಈ ನೀತಿಯನ್ನು ಅನುಸರಿಸಿ ಇಲಾಖೆಯ ಜಂಟಿ ಆಯುಕ್ತರವರೆಗಿನ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್ಮೂಲಕ ವರ್ಗಾವಣೆ ಮಾಡಲು ಉದ್ದೇಶಿಸಿದೆ.
498. 2026-27ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆಯ ಗುರಿಯನ್ನು ೧,೨೫,೦೦೦ ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ.
ಅಬಕಾರಿ
499. ಕರ್ನಾಟಕ ಅಬಕಾರಿ ಕಾಯ್ದೆಯು 60 ವರ್ಷಗಳ ಹಿಂದೆ ಜಾರಿಗೆ ತಂದಿದ್ದು, ಈ ಕಾಯ್ದೆಯ ಹಲವು ನಿಬಂಧನೆಗಳು ಪ್ರಸಕ್ತ ಕಾಲಮಾನಕ್ಕೆ ಹೊಂದಿಕೆಯಾಗುವುದಿಲ್ಲ. ಕಳೆದ ಎರಡು ವರ್ಷಗಳಲ್ಲಿ, ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮಹತ್ವದ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ವಿವಿಧ ಸನ್ನದುಗಳ ಮಾನ್ಯತೆಯನ್ನು ಒಂದು ವರ್ಷದಿಂದ ಐದು ವರ್ಷಗಳಿಗೆ ವಿಸ್ತರಿಸಲಾಗಿದೆ. ಆನ್ಲೈನ್ ಅನುಮೋದನೆ ಪ್ರಕ್ರಿಯೆಯನ್ನು 16 ಹಂತಗಳಿಂದ 7 ಹಂತಗಳಿಗೆ ಸರಳೀಕರಿಸಲಾಗಿದ್ದು, ಎರಡು ದಿನಗಳೊಳಗೆ ಅನುಮೋದನೆ ನೀಡಲಾಗುತ್ತಿದೆ.
500. ಅಬಕಾರಿ ಇಲಾಖೆಯಲ್ಲಿ ಜಾರಿಗೊಳಿಸಲಾದ ವರ್ಗಾವಣಾ ನಿಯಮಗಳನ್ವಯ ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ ಮುಖ್ಯ ಪೇದೆ/ಪೇದೆಗಳ ಗ್ರೂಪ್-ಸಿ ವೃಂದದ ನೌಕಾರರ ವರ್ಗಾವಣೆಗಳನ್ನು ಡಿಜಿಟಲ್ ಕೌನ್ಸಿಲಿಂಗ್ ಮೂಲಕ ಮಾಡಲಾಗಿದೆ. ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆಯನ್ನು ಮತ್ತಷ್ಟು ಹೆಚ್ಚಿಸಲು ಅಬಕಾರಿ ಉಪ ಅಧೀಕ್ಷಕರು ಮತ್ತು ಅಬಕಾರಿ ಅಧೀಕ್ಷಕರುಗಳ ವರ್ಗಾವಣೆಯನ್ನು ಸಹ ಡಿಜಿಟಲ್ ಕೌನ್ಸಿಲಿಂಗ್ ಮೂಲಕ ಮಾಡಲು ಕ್ರಮವಹಿಸಲಾಗುವುದು.
501. ರಾಜ್ಯ ಸರ್ಕಾರ ರಚಿಸಿದ ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಹೊಸ ಅಬಕಾರಿ ತೆರಿಗೆ ಮತ್ತು ಮದ್ಯ ನಿಯಂತ್ರಣ ರೂಪುರೇಷೆಗಳನ್ನು ಒಳಗೊಂಡ ಕರಡು ವರದಿಯನ್ನು ಶೀಘ್ರದಲ್ಲೇ ಸಲ್ಲಿಸಲಿದೆ. ಪ್ರಸ್ತಾವಿತ ಸುಧಾರಣೆಗಳು ಪಾರದರ್ಶಕತೆಯನ್ನು ಬಲಪಡಿಸಿ, ಮದ್ಯ ನಿಯಂತ್ರಣ ಕ್ರಮಗಳನ್ನು ಕಾಲೋಚಿತವಾಗಿ ಸುಧಾರಿಸಲಿದೆ ಹಾಗೂ ರಾಜ್ಯದಾದ್ಯಂತ ಅಬಕಾರಿ ಇಲಾಖೆಗೆ ಸಂಬಂಧಿಸಿದ ವ್ಯವಹಾರಗಳನ್ನು ಸರಳೀಕರಿಸಲಿದೆ.
502. ಮದ್ಯಪಾನದ ದುಷ್ಪರಿಣಾಮಗಳು ಸಮಾಜದ ಮೇಲೆ ಉಂಟುಮಾಡುವ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಮದ್ಯದ ಅಂಶವನ್ನು (Alcohol-in-Beverage – AIB) ಆಧರಿಸಿದ ತೆರಿಗೆ ಪದ್ದತಿಯು gold standard ಆಗಿದೆ. ಏಪ್ರಿಲ್ 2026ರಿಂದ ಪಾನೀಯಗಳಲ್ಲಿ ಇರುವ ಮದ್ಯದ ಅಂಶವನ್ನು ಆಧಾರವಾಗಿಟ್ಟುಕೊಂಡ ಅಬಕಾರಿ ಸುಂಕ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.
503. ಅಬಕಾರಿ ಸುಂಕವು ಏಕರೂಪವಾಗಿರಲಿದ್ದು, ಹೆಚ್ಚುವರಿ ಅಬಕಾರಿ ಸುಂಕವನ್ನು ನಿರ್ದಿಷ್ಟ ಮಿತಿಯೊಳಗೆ ex-factory ದರ ಪಟ್ಟಿಗಳ ಆಧಾರದ ಮೇಲೆ ವಿಧಿಸಲಾಗುವುದು. ಇದರಿಂದ ಮದ್ಯ ಬೆಲೆಯಲ್ಲಿ ತೀವ್ರ ಬದಲಾವಣೆಯಾಗದೆ, ಕ್ರಮೇಣವಾಗಿ ವ್ಯತ್ಯಾಸವಾಗುವಂತೆ ಖಚಿತ ಪಡಿಸಲಾಗುವುದು.
504. ಮುಂದಿನ ಮೂರರಿಂದ ನಾಲ್ಕು ವರ್ಷಗಳಲ್ಲಿ, ನಾವು ಎಲ್ಲಾ ಪಾನೀಯಗಳ ಮೇಲೆ ಏಕರೂಪವಾಗಿ ಅನ್ವಯಿಸುವಂತೆ ಪ್ರತಿ ಲೀಟರ್ನಲ್ಲಿ ಮದ್ಯದ ಅಂಶವನ್ನು ಆಧರಿಸಿ ಅಬಕಾರಿ ಸುಂಕ ವಿಧಿಸುವ ಪ್ರಕ್ರಿಯೆಗೆ ಹಂತ ಹಂತವಾಗಿ ಪರಿವರ್ತನೆಗೊಳ್ಳುತ್ತೇವೆ.
505. ಹೊಸ ನೀತಿಯಡಿ ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರವಾಗುವುದನ್ನು ಮುಕ್ತಗೊಳಿಸಲಾಗುವುದು. ಮಾರುಕಟ್ಟೆ ಪರಿಗಣನೆ ಆಧಾರದ ಮೇಲೆ ಮದ್ಯ ಉತ್ಪನ್ನಗಳನ್ನು ಸ್ಲ್ಯಾಬ್ಗಳಲ್ಲಿ ಇರಿಸುವ ಅಧಿಕಾರವನ್ನು ಸಂಪೂರ್ಣವಾಗಿ ಉತ್ಪಾದಕರಿಗೆ ನೀಡಲಾಗುವುದು.
506. ದರ ನಿಗದಿ ಸ್ಲ್ಯಾಬ್ಗಳನ್ನು ತರ್ಕಬದ್ಧಗೊಳಿಸುವ ಸಲುವಾಗಿ ಪ್ರಸ್ತುತ ಇರುವ 16 ಸ್ಲ್ಯಾಬ್ಗಳನ್ನು 8 ಸ್ಲ್ಯಾಬ್ಗಳಿಗೆ ಇಳಿಸಲಾಗುವುದು.
507. ಅಬಕಾರಿ ಇಲಾಖೆಯು ಕೇವಲ ತೆರಿಗೆ ಸಂಗ್ರಹಣೆ ಮತ್ತು ತೆರಿಗೆ ಅನುಸರಣೆಯ ಮೇಲೆ ಕೇಂದ್ರೀಕರಿಸಲಿದ್ದು, ಆರೋಗ್ಯ ಇಲಾಖೆಯು ಮದ್ಯಪಾನದಿಂದ ಉಂಟಾಗುವ ನಕಾರಾತ್ಮಕ ಪರಿಣಾಮಗಳು, ಆರೋಗ್ಯ ಕಾರ್ಯಕ್ರಮಗಳು, ಮದ್ಯ ವ್ಯಸನಮುಕ್ತಿ ಮತ್ತು ಪುನರ್ವಸತಿ ಕಾರ್ಯಕ್ರಮಗಳನ್ನು ನಿರ್ವಹಿಸಲಿದೆ.
508. ತೆರಿಗೆ ಸೋರಿಕೆಯನ್ನು ತಡೆಯಲು ತಂತ್ರಜ್ಞಾನ ಆಧಾರಿತ ಬ್ಲಾಕ್ಚೈನ್ ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆಗಳನ್ನು ಜಾರಿಗೆ ತರಲಾಗುವುದು. ಮದ್ಯ ರವಾನೆಗೆ ಬೆಂಗಾವಲು ವ್ಯವಸ್ಥೆಯ ಬದಲಿಗೆ ಜಿಯೋ-ಫೆನ್ಸ್ಡ್ ಇ-ಲಾಕ್ (geo-fenced e-lock systems) ವ್ಯವಸ್ಥೆಯನ್ನು ಅಳವಡಿಸಲಾಗುತ್ತದೆ. ಈ ಕ್ರಮಗಳು real-time ಮೇಲ್ವಿಚಾರಣೆಗೆ ಅವಕಾಶ ಕಲ್ಪಿಸುವ ಮೂಲಕ ಪಾರದರ್ಶಕತೆಯನ್ನು ಹೆಚ್ಚಿಸುತ್ತವೆ.
509. ಉತ್ಪಾದನಾ ಸನ್ನದುಗಳನ್ನು ಸ್ವಯಂಚಾಲಿತವಾಗಿ ನವೀಕರಿಸಲಾಗುವುದು. ಲೇಬಲ್ ಅನುಮೋದನೆಗಳು, CL-5 (ಸಾಂದರ್ಭಿಕ ಸನ್ನದುಗಳು) ಮತ್ತು RVB ಸನ್ನದುಗಳು
(ಐದು ವರ್ಷಗಳ ಅವಧಿಗೆ) ಆನ್ಲೈನ್ನಲ್ಲಿ ಸ್ವಯಂ ಘೋಷಣೆ ಮತ್ತು ಶುಲ್ಕ ಪಾವತಿಯ ಷರತಿಗೊಳಪಟ್ಟು, ಯಾವುದೇ ಹಸ್ತಕ್ಷೇಪವಿಲ್ಲದೆ deemed approval ವ್ಯವಸ್ಥೆಯಡಿ ಅನುಮೋದಿಸಲಾಗುವುದು. ಡಿಸ್ಟಿಲರಿಗಳು ಮತ್ತು ಬ್ರೂವರಿಗಳಿಗೆ 24 ಗಂಟೆಗಳ ಕಾರ್ಯಾಚರಣೆ ಮತ್ತು ರವಾನೆ ಮಾಡಲು ಅನುಮತಿ ನೀಡಲಾಗುತ್ತದೆ. ಬಿಯರ್ ಲೇಬಲ್ಗಳಲ್ಲಿ ಮಾಲ್ಟ್ ಮತ್ತು ಸಕ್ಕರೆ ಅಂಶವನ್ನು ಕಡ್ಡಾಯವಾಗಿ ನಮೂದಿಸುವ ಅಗತ್ಯತೆಯನ್ನು ರದ್ದುಗೊಳಿಸಲಾಗುವುದು.
510. ಮದ್ಯ ವಲಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಡಿಸ್ಟಿಲರಿಗಳು ಮತ್ತು ಬ್ರೂವರಿಗಳು ಪ್ರವಾಸಿಗರಿಗೆ ಮದ್ಯ ಸವಿಯಲು ಮತ್ತು ತಮ್ಮ ಆವರಣದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಪ್ರವಾಸಿಗರಿಗೆ ಮಾರಾಟ ಮಾಡಲು ಅವಕಾಶ ನೀಡಲಾಗುವುದು.
511. ಸಂಪನ್ಮೂಲ ಕ್ರೋಢೀಕರಣ ಸಮಿತಿಯ ಕರಡು ವರದಿಯನ್ನು ಶೀಘ್ರದಲ್ಲೇ ಸಾರ್ವಜನಿಕ ಸಮಾಲೋಚನೆಗಾಗಿ ಇಡಲಾಗುವುದು. ಮೇಲೆ ತಿಳಿಸಲಾದ ಕ್ರಮಗಳ ಹೊರತಾಗಿ, ಶಾಸಕಾಂಗ ಅನುಮೋದನೆ ಅಗತ್ಯವಿರುವ ಸುಧಾರಣೆಗಳನ್ನು ಸಮಗ್ರವಾಗಿ ಹೊಸ ಅಬಕಾರಿ ಮಸೂದೆಯಲ್ಲಿ ಪರಿಚಯಿಸಲಾಗುವುದು. ಇದರಿಂದ ಅಬಕಾರಿ ವಲಯದಲ್ಲಿ ಪಾರದರ್ಶಕತೆ ತರಲು ಮತ್ತು Ease of Doing Business ಹೆಚ್ಚಿಸಲು ಸಹಕಾರಿಯಾಗಲಿದೆ.
512. 2025-26ನೇ ಸಾಲಿನಲ್ಲಿ ಫೆಬ್ರವರಿ ತಿಂಗಳ ಅಂತ್ಯದವರೆಗೆ ಅಬಕಾರಿ ತೆರಿಗೆಯಿಂದ ಒಟ್ಟು ೩೬,೪೯೨ ಕೋಟಿ ರೂ.ಗಳ ರಾಜಸ್ವ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.೧೨.೭ ರಷ್ಟು ಬೆಳವಣಿಗೆಯಾಗಿದೆ.
513. 2026-27ನೇ ಸಾಲಿಗೆ ೪೫,೦೦೦ ಕೋಟಿ ರೂ.ಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ.
ನೋಂದಣಿ ಮತ್ತು ಮುದ್ರಾಂಕ
514. 2025-26ನೇ ಸಾಲಿನಲ್ಲಿ ಫೆಬ್ರವರಿ ತಿಂಗಳ
ಅಂತ್ಯದವರೆಗೆ ನೋಂದಣಿ ಮತ್ತು ಮುದ್ರಾಂಕ ಶುಲ್ಕದಿಂದ
ಒಟ್ಟು ೨೨,೬೨೯ ಕೋಟಿ ರೂ.ಗಳ ರಾಜಸ್ವ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.೧೨.೩ ರಷ್ಟು ಬೆಳವಣಿಗೆಯಾಗಿದೆ.
515. 2026-27ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ೨೯,೦೦೦ ಕೋಟಿ ರೂ.ಗಳ ರಾಜಸ್ವ ಗುರಿಯನ್ನು ನಿಗದಿಪಡಿಸಿದೆ.
ಮೋಟಾರು ವಾಹನ
516. ವಾಹನ ಮಾರಾಟವು ಪ್ರಸಕ್ತ ವರ್ಷದಲ್ಲಿ ಚೇತರಿಕೆ ಕಂಡಿದೆ. ಜನವರಿ ತಿಂಗಳ ಅಂತ್ಯದವರೆಗೆ ದ್ವಿಚಕ್ರ ವಾಹನಗಳ ಮಾರಾಟವು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.13 ರಷ್ಟು ಹೆಚ್ಚಳವಾಗಿದ್ದು, ಕಾರುಗಳ ಮಾರಾಟದಲ್ಲಿ ಶೇ.4 ರಷ್ಟು ಹೆಚ್ಚಳವಾಗಿದೆ.
517. 2025-26ನೇ ಸಾಲಿನಲ್ಲಿ ಫೆಬ್ರವರಿ ತಿಂಗಳ ಅಂತ್ಯದವರೆಗೆ ಮೋಟಾರು ವಾಹನ ತೆರಿಗೆಯಿಂದ ಒಟ್ಟು ೧೧,೬೩೦ ಕೋಟಿ ರೂ.ಗಳ ರಾಜಸ್ವ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ
ಶೇ.೮.೫ ರಷ್ಟು ಬೆಳವಣಿಗೆಯಾಗಿದೆ.
518. 2026-27ನೇ ಸಾಲಿನಲ್ಲಿ ಸಾರಿಗೆ ಇಲಾಖೆಗೆ ೧೫,೫೦೦ ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಗಣಿ ಮತ್ತು ಭೂವಿಜ್ಞಾನ
519. ಕರ್ನಾಟಕ ಉಪ ಖನಿಜ ನಿಯಮಗಳು, 1994 ಕ್ಕೆ ತಿದ್ದುಪಡಿ ಮಾಡಿ, ಉಪ ಖನಿಜಗಳ ಸಾಗಣೆಗಾಗಿ ಜಿ.ಎಸ್.ಟಿ ಪೋರ್ಟಲ್ ಮೂಲಕ e-way ಬಿಲ್ಗಳನ್ನು ಕಡ್ಡಾಯಗೊಳಿಸಲಾಗುವುದು. ಇದರಿಂದ ಸ್ವಾಮ್ಯ ಶುಲ್ಕ ಮತ್ತು ಜಿ.ಎಸ್.ಟಿ ವಂಚನೆಯನ್ನು ತಡೆಗಟ್ಟಬಹುದಾಗಿದೆ ಮತ್ತು ಹೆಚ್ಚಿನ ರಾಜಸ್ವ ಸ್ವೀಕೃತವಾಗಲಿದೆ.
520. ಕರ್ನಾಟಕ ಸಣ್ಣ ಖನಿಜ ನಿಯಮಗಳಿಗೆ ತಿದ್ದುಪಡಿ ತಂದು ಕ್ವಾರಿ ಹೊಂಡಗಳು ಮತ್ತು ಅತಿಕ್ರಮಣ ಪ್ರದೇಶಗಳ ಮೇಲೆ ದಂಡ ವಿಧಿಸಲು ಒಂದು ಬಾರಿ ಇತ್ಯರ್ಥ ಯೋಜನೆಯಡಿ (OTS) ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಯೋಜನೆಯಿಂದ 2026–27ನೇ ಸಾಲಿನಲ್ಲಿ ೨,೦೦೦ ಕೋಟಿ ರೂ.ಗಳು ಸಂಗ್ರಹಣೆಯಾಗುವ ನಿರೀಕ್ಷೆಯಿದೆ.
521. ಸರ್ವೋಚ್ಛ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ
ರಾಜ್ಯ ಸರ್ಕಾರವು ಪ್ರಮುಖ ಖನಿಜಗಳ ಮೇಲೆ ಸ್ವಾಮ್ಯ ಶುಲ್ಕದ ಜೊತೆಗೆ ಗಣಿಗಾರಿಕೆ ಮೇಲೆ ತೆರಿಗೆ ವಿಧಿಸಲು ಕಾಯಿದೆ ರಚಿಸಿದ್ದು, ಪ್ರಸ್ತುತ ಕೇಂದ್ರ ಸರ್ಕಾರದ ಅನುಮೋದನೆ ದೊರಕದೆ ಕಳೆದ ಒಂದು ವರ್ಷದಿಂದ ವಿಳಂಬವಾಗಿರುತ್ತದೆ. ಕೇಂದ್ರ ಸರ್ಕಾರದೊಂದಿಗೆ ಅಗತ್ಯ ಸಂವಹನ ಮಾಡುವ ಮೂಲಕ ಅನುಮೋದನೆ ನಿರೀಕ್ಷಿಸಿ, 2026–27ನೇ ಸಾಲಿಗೆ ಖನಿಜ ಗಣಿಗಾರಿಕೆ ತೆರಿಗೆಯಿಂದ ೩,೦೦೦ ಕೋಟಿ ರೂ.ಗಳ ರಾಜಸ್ವವನ್ನು ಅಂದಾಜಿಸಲಾಗಿದೆ.
522. 2025-26ನೇ ಸಾಲಿನಲ್ಲಿ ಫೆಬ್ರವರಿ ತಿಂಗಳ ಅಂತ್ಯದವರೆಗೆ ಗಣಿಗಾರಿಕೆಯಿಂದ ೭,೮೫೪ ಕೋಟಿ ರೂ.ಗಳ ಸ್ವಾಮ್ಯ ಶುಲ್ಕ ಸ್ವೀಕೃತವಾಗಿದೆ.
523. 2026-27ನೇ ಸಾಲಿಗೆ ಗಣಿಗಾರಿಕೆಯಿಂದ ೧೧,೦೦೦ ಕೋಟಿ ರೂ. ಸ್ವಾಮ್ಯ ಶುಲ್ಕವನ್ನು ಅಂದಾಜಿಸಲಾಗಿದೆ.
ಪರಿಷ್ಕೃತ ಅಂದಾಜು
524. 2025-26ರ ಪರಿಷ್ಕೃತ ಅಂದಾಜಿನಲ್ಲಿ ಒಟ್ಟು ಸ್ವೀಕೃತಿಗಳು ೩,೯೩,೫೭೨ ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ. ರಾಜಸ್ವ ಸ್ವೀಕೃತಿಗಳು ೨,೭೭,೪೦೨ ಕೋಟಿ ರೂ.ಗಳೆಂದು ಅಂದಾಜಿಸಲಾಗಿದ್ದು, ಇದರಲ್ಲಿ ರಾಜ್ಯದ ಸ್ವಂತ ತೆರಿಗೆ
ರಾಜಸ್ವವು ೧,೯೩,೧೦೦ ಕೋಟಿ ರೂ.ಗಳು, ತೆರಿಗೆಯೇತರ
ರಾಜಸ್ವವು ೧೭,೫೦೦ ಕೋಟಿ ರೂ.ಗಳು ಮತ್ತು ಕೇಂದ್ರದಿಂದ ೬೬,೮೦೨ ಕೋಟಿ ರೂ.ಗಳ ರಾಜಸ್ವ ಸ್ವೀಕೃತಿ ಸೇರಿದೆ.
525. 2025-26ರ ಪರಿಷ್ಕೃತ ಅಂದಾಜಿನಲ್ಲಿ, ಒಟ್ಟು ವೆಚ್ಚವು
೩,೯೫,೩೦೭ ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ,
ಇದರಲ್ಲಿ ೩,೦೨,೮೫೧ ಕೋಟಿ ರೂ.ಗಳ ರಾಜಸ್ವ ವೆಚ್ಚ
ಮತ್ತು ಸಾಲ ಮರುಪಾವತಿ ಒಳಗೊಂಡು ಬಂಡವಾಳ
ವೆಚ್ಚ ೯೨,೪೫೬ ಕೋಟಿ ರೂ.ಗಳು ಸೇರಿದೆ.
ಆಯವ್ಯಯ ಅಂದಾಜು 2026-27
526. 2026-27ನೇ ಸಾಲಿಗೆ ಒಟ್ಟು ೩,೧೫,೦೫೦ ಕೋಟಿ ರೂ.ಗಳ
ರಾಜಸ್ವ ಸ್ವೀಕೃತಿಯನ್ನು ಅಂದಾಜಿಸಲಾಗಿದೆ. ಇದರಲ್ಲಿ
೨,೨೦,೦೦೦ ಕೋಟಿ ರೂ.ಗಳ ಸ್ವಂತ ತೆರಿಗೆ ರಾಜಸ್ವ,
೧೬,೦೦೦ ಕೋಟಿ ರೂ.ಗಳ ತೆರಿಗೆಯೇತರ ರಾಜಸ್ವ ಮತ್ತು ಕೇಂದ್ರ ಸರ್ಕಾರದ ಸ್ವೀಕೃತಿ ೭೯,೦೫೦ ಕೋಟಿ ರೂ.ಗಳು ಸೇರಿವೆ.
527. 2026-27ನೇ ಸಾಲಿಗೆ ಒಟ್ಟು ೧,೩೨,೦೦೦ ಕೋಟಿ ರೂ.ಗಳ ಸಾಲ ಮತ್ತು ೧೯೦ ಕೋಟಿ ರೂ.ಗಳ ಸಾಲೇತರ ಬಂಡವಾಳ ಸ್ವೀಕೃತಿಯನ್ನು ಅಂದಾಜಿಸಲಾಗಿದೆ. ಈ ಎಲ್ಲಾ ಸ್ವೀಕೃತಿಗಳು ಸೇರಿ 2026-27ನೇ ಸಾಲಿನಲ್ಲಿ ಒಟ್ಟು ೪,೪೭,೨೪೦ ಕೋಟಿ ರೂ.ಗಳ ಸ್ವೀಕೃತಿಯನ್ನು ಅಂದಾಜಿಸಲಾಗಿದೆ.
528. 2026-27ನೇ ಸಾಲಿನ ಆಯವ್ಯಯದಲ್ಲಿ ಒಟ್ಟು
೪,೪೮,೦೦೪ ಕೋಟಿ ರೂ.ಗಳ ವೆಚ್ಚವನ್ನು ಅಂದಾಜಿಸಲಾಗಿದೆ, ಇದರಲ್ಲಿ ೩,೩೮,೦೦೭ ಕೋಟಿ ರೂ.ಗಳ ರಾಜಸ್ವ ವೆಚ್ಚ,
೭೪,೬೮೨ ಕೋಟಿ ರೂ.ಗಳ ಬಂಡವಾಳ ವೆಚ್ಚ ಮತ್ತು
೩೫,೩೧೬ ಕೋಟಿ ರೂ.ಗಳ ಸಾಲ ಮರುಪಾವತಿ ಒಳಗೊಂಡಿದೆ.
529. 2026-27ನೇ ಸಾಲಿಗೆ, ೨೨,೯೫೭ ಕೋಟಿ ರೂ.ಗಳ ರಾಜಸ್ವ ಕೊರತೆಯನ್ನು ಅಂದಾಜಿಸಲಾಗಿದೆ. ವಿತ್ತೀಯ ಕೊರತೆ
೯೭,೪೪೯ ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದ್ದು, ಜಿ.ಎಸ್.ಡಿ.ಪಿ ಯ ಶೇ. ೨.೯೫ ರಷ್ಟಿದೆ. 2026-27 ರ ಅಂತ್ಯಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆಗಳು ೮,೨೪,೩೮೯ ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದ್ದು, ಜಿ.ಎಸ್.ಡಿ.ಪಿಯ ಶೇ.೨೪.೯೪ ರಷ್ಟಿದೆ. 2026-27ನೇ ಸಾಲಿಗೆ ರಾಜ್ಯದ ವಿತ್ತೀಯ ಕೊರತೆ ಮತ್ತು ಒಟ್ಟು ಹೊಣೆಗಾರಿಕೆಗಳನ್ನು, ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡದಂತೆ ಪಾಲನೆ ಮಾಡಲಾಗಿದ್ದು, ವಿತ್ತೀಯ ಶಿಸ್ತನ್ನು ಕಾಯ್ದುಕೊಳ್ಳಲಾಗಿದೆ.
ಸನ್ಮಾನ್ಯ ಸಭಾಧ್ಯಕ್ಷರೇ,
530. ಮಹಾತ್ಮಾ ಗಾಂಧೀಜಿಯವರ ಸರ್ವೋದಯ, ಸ್ವಾವಲಂಬನೆ ಮತ್ತು ಅಂತ್ಯೋದಯ ತತ್ವಗಳು ಈ ಆಯವ್ಯಯದ ನೈತಿಕ ಅಡಿಪಾಯವಾಗಿವೆ. “ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಅಭಿವೃದ್ಧಿ” ಎಂಬ ಗಾಂಧೀಜಿಯ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ, ಬುದ್ಧನ ಕರುಣೆ, ಬಸವಣ್ಣನವರ ಕಾಯಕ ನಿಷ್ಠೆ, ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಹಾದಿಯಲ್ಲಿ ಸಾಗುವ ಪ್ರಯತ್ನ ನಮ್ಮದು.
531. ಕಲ್ಯಾಣ ಕಾರ್ಯಕ್ರಮಗಳಿಂದ ಸಬಲೀಕರಣಕ್ಕೆ, ಸಬಲೀಕರಣದಿಂದ ಹೊಸ ಅವಕಾಶಗಳಿಗೆ, ಮತ್ತು ಈ ಅವಕಾಶಗಳಿಂದ ಸುಸ್ಥಿರ ಆರ್ಥಿಕ ಪ್ರಗತಿಗೆ ದಾರಿ ಮಾಡಿಕೊಡುವ ಮೂಲಕ, ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸುವ, ನಮ್ಮ ಸಂಕಲ್ಪಕ್ಕೆ ಪೂರಕವಾದ ಈ ಆಯವ್ಯಯವನ್ನು ನಿಮ್ಮ ಮುಂದಿಡಲು ನನಗೆ ಅಪಾರ ಹೆಮ್ಮೆ ಮತ್ತು ಸಂತೋಷವಾಗುತ್ತಿದೆ.
532. ನಾನು 2026-27ನೇ ಸಾಲಿನ ಈ ಆಯವ್ಯಯವನ್ನು ಗೌರವಾನ್ವಿತ ಸದನದ ಪರಿಗಣನೆಗೆ ಮಂಡಿಸುತ್ತಿದ್ದೇನೆ ಮತ್ತು
ಅದರಂತೆ ಮಾರ್ಚ್ 31, 2027ರವರೆಗಿನ ವೆಚ್ಚವನ್ನು ನಿರ್ವಹಿಸಲು ಪೂರ್ಣ ಆಯವ್ಯಯವನ್ನು ಅಂಗೀಕರಿಸಲು ಕೋರುತ್ತಿದ್ದೇನೆ.
ಜೈ ಹಿಂದ್
ಜೈ ಕರ್ನಾಟಕ
ಅನುಬಂಧ – ೧
2026-27ನೇ ಸಾಲಿನ ಆಯವ್ಯಯ ಕಂಡಿಕೆ – ೯೬
(ಜಲಸಂಪನ್ಮೂಲ ಇಲಾಖೆ)
2026-27ನೇ ಸಾಲಿನಲ್ಲಿ ಮುಕ್ತಾಯಗೊಳಿಸಲು ಉದ್ದೇಶಿಸಿದ ಯೋಜನೆಗಳು
1. ಚಚಡಿ ಏತ ನೀರಾವರಿ ಯೋಜನೆ
2. ಮುರಗೋಡು ಏತ ನೀರಾವರಿ ಯೋಜನೆ
3. ಗೊಡಚಿನಮಲ್ಕಿ ಏತ ನೀರಾವರಿ ಯೋಜನೆ
4. ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆ
5. ಶ್ರೀ ಅಡವಿಸಿದ್ದೇಶ್ವರ ಏತ ನೀರಾವರಿ ಯೋಜನೆ
6. ಶಂಕರಲಿಂಗ ಏತ ನೀರಾವರಿ ಯೋಜನೆ
7. ಮೆಳ್ಳಿಗೇರಿ-ಹಲಗಲಿ ಏತ ನೀರಾವರಿ ಯೋಜನೆ
8. ಸಾಲಾಪುರ ಏತ ನೀರಾವರಿ ಯೋಜನೆ
9. ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ (ವಿಸ್ತರಣೆ)
10. ದೇವತ್ಕಲ್ ಏತ ನೀರಾವರಿ ಯೋಜನೆ
11. ನಂದವಾಡಗಿ ಏತ ನೀರಾವರಿ ಯೋಜನೆ
12. ನಾಗರಬೆಟ್ಟ ಏತ ನೀರಾವರಿ ಯೋಜನೆ
13. ಹಳಿಯಾಳ ಕೆರೆ ತುಂಬಿಸುವ ಯೋಜನೆ
14. ಶಿರಹಟ್ಟಿ ಕೆರೆ ತುಂಬಿಸುವ ಯೋಜನೆ
15. ರಾಯಬಾಗ ಕೆರೆ ತುಂಬಿಸುವ ಯೋಜನೆ
16. ಕುಡುಚಿ ಕೆರೆ ತುಂಬಿಸುವ ಯೋಜನೆ
17. ಮುಂಡಗೋಡ ಕೆರೆ ತುಂಬಿಸುವ ಯೋಜನೆ
18. ಗುಂಜಳ್ಳಿ ಕೆರೆ ತುಂಬಿಸುವ ಯೋಜನೆ
19. ಬೋರಿ ಕೆರೆ ತುಂಬಿಸುವ ಯೋಜನೆ
20. ಗೋವಿನಕೋವಿ ಮತ್ತು ಹನುಮಸಾಗರ ಕೆರೆ ತುಂಬಿಸುವ ಯೋಜನೆ
21. ರಾಯಚೂರು ತಾಲ್ಲೂಕಿನಡಿ 18 ಕೆರೆ ತುಂಬಿಸುವ ಯೋಜನೆ
22. ಗುರುಮಿಠಕಲ್ ತಾಲ್ಲೂಕಿನಡಿ 20 ಕೆರೆ ತುಂಬಿಸುವ ಯೋಜನೆ
23. ದೇವದುರ್ಗ ತಾಲ್ಲೂಕಿನಡಿ 14 ಕೆರೆ ತುಂಬಿಸುವ ಯೋಜನೆ
24. ಮರದೂರು ಕುಡಿಯುವ ನೀರಿನ ಯೋಜನೆ
25. ಮುತ್ತಿನಮುಳುಸೂಗೆ ಯೋಜನೆ
26. ಮಲ್ಲಿಪಟ್ಟಣ ಯೋಜನೆ
27. ದುದ್ದ ಮತ್ತು ಶಾಂತಿಗ್ರಾಮ ಕುಡಿಯುವ ನೀರಿನ ಯೋಜನೆ
28. ಅಮಾನಿಕೆರೆ ಕುಡಿಯುವ ನೀರಿನ ಯೋಜನೆ
29. ಶ್ರೀರಂಗ ಕುಡಿಯುವ ನೀರಿನ ಯೋಜನೆ
30. ಚಿಕ್ಕನಾಯಕನಹಳ್ಳಿ ಕುಡಿಯುವ ನೀರಿನ ಯೋಜನೆ
31. ಗರ್ಲಾಪುರ ಮತ್ತು ಇನ್ನಿತರೆ 12 ಕೆರೆ ತುಂಬಿಸುವ ಯೋಜನೆ
32. ದುದ್ದ ಮತ್ತು ಜಾವಗಲ್ ಹೋಬಳಿಯ 45 ಕೆರೆ ತುಂಬಿಸುವ ಯೋಜನೆ
33. ಚನ್ನರಾಯಪಟ್ಟಣ ತಾಲ್ಲೂಕಿನ 124 ಕೆರೆ ತುಂಬಿಸುವ ಯೋಜನೆ
34. ಗುಬ್ಬಿ ಮತ್ತು ಸಿರಾ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ
35. ಕೆ.ಆರ್.ಎಸ್. ಯೋಜನೆಯಡಿಯಲ್ಲಿ ಬರುವ ವಿಶ್ವೇಶ್ವರಯ್ಯ ಮುಖ್ಯ ನಾಲೆಯ ಆಧುನೀಕರಣ
36. ಹೆಬ್ಬಕವಾಡಿ ಮತ್ತು ನಿಡಘಟ್ಟ ಶಾಖಾ ನಾಲೆ
37. ಹಾರಂಗಿ ಯೋಜನೆಯ ಎಡದಂಡೆ ನಾಲೆಯ ಆಧುನೀಕರಣ
ಅನುಬಂಧ-೨
2026-27ನೇ ಸಾಲಿನ ಆಯವ್ಯಯ ಕಂಡಿಕೆ – ೯೭
(ಜಲಸಂಪನ್ಮೂಲ ಇಲಾಖೆ)
ಆಡಳಿತಾತ್ಮಕ ಅನುಮೋದನೆ ನೀಡಿರುವ ಕಾಮಗಾರಿಗಳು
1. ಚನ್ನರಾಯಪಟ್ಟಣ ತಾಲ್ಲೂಕಿನ 18 ಕೆರೆಗಳನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ತುಂಬಿಸುವ ಯೋಜನೆ.
2. ಹೊಸಹೊಳಲು ಎಡಮೇಲ್ದಂಡೆ ನಾಲೆ ಆಧುನೀಕರಣ.
3. ಅರಸೀಕೆರೆ ತಾಲ್ಲೂಕಿನಲ್ಲಿ ಎತ್ತಿನಹೊಳೆ ಗುರುತ್ವ ಕಾಲುವೆ ಅಡಿಯಲ್ಲಿ 9 ಕೆರೆಗಳ ಸುಧಾರಣೆ ಕಾಮಗಾರಿಗಳು.
4. ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಕೃಷ್ಣಾ ನದಿಯಿಂದ ನೀರು ತುಂಬಿಸುವ ಯೋಜನೆ.
5. ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲ್ಲೂಕು, ಮದಗ-ಮಾಸೂರು ಕೆರೆಯ ಆಧುನೀಕರಣ.
6. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆ.
7. ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕಿನ ಯಡಗೊಪ್ಪ ಕೆರೆ ತುಂಬಿಸುವ ಯೋಜನೆ.
8. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗುಡವಿ ಕೆರೆ ತುಂಬಿಸುವ ಯೋಜನೆ.
9. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಬ್ಯಾರೇಜ್/ಬ್ರಿಡ್ಜ್ಕಂ ಬ್ಯಾರೇಜ್ಗಳನ್ನು ನಿರ್ಮಿಸುವ ಯೋಜನೆ.
10. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆ.
11. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭದ್ರಾ ನದಿಗೆ ತಡೆಗೋಡೆ ನಿರ್ಮಾಣ.
12. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಭದ್ರಾ ನದಿಗೆ ಸಂಪರ್ಕ ರಸ್ತೆ ಸುಧಾರಣೆ.
13. ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲ್ಲೂಕಿನ ದೊಣಬಘಟ್ಟ ಏತ ನೀರಾವರಿ ಯೋಜನೆ.
14. ವಿಜಯಪುರ ಜಿಲ್ಲೆಯ ಚಡಚಣ ಏತ ನೀರಾವರಿ ಯೋಜನೆ.
15. ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಮತ್ತು ಇತರೆ ಪ್ರದೇಶಗಳಿಗೆ ನೀರಾವರಿ ಸೌಲಭ್ಯದ ಯೋಜನೆ.
16. ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಸಾಲಗುಂದ ಏತ ನೀರಾವರಿ ಯೋಜನೆ.
17. ಮುಳ್ಳೂರು ಗ್ರಾಮದ ಸಮೀಪ ಸಿಂಧನೂರು ಹಳ್ಳದ ಮೇಲೆ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.
18. ಮಾನ್ವಿ ತಾಲ್ಲೂಕಿನ ಯದ್ವಿಹಾಳ ಗ್ರಾಮದ ಸಮೀಪಅಚ್ಚುಕಟ್ಟಿಗೆ ನೀರು ಒದಗಿಸುವ ಹಾಗೂ ಸರ್ವಿಸ್ ರಸ್ತೆ ಅಭಿವೃದ್ಧಿ.
19. ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಆರ್ಕಾವತಿ ನದಿ ತೀರ ಅಭಿವೃದ್ಧಿ.
20. ಶಿಂಷಾ ನದಿಗೆ ಸರಗೂರಿನಿಂದ ಹೊಸಪುರವರೆಗೆ ಸೇತುವೆ ನಿರ್ಮಾಣ.
21. ಸತ್ತೆಗಾಲಾ ಕೆರೆ ತುಂಬಿಸುವ ಯೋಜನೆ.
22. ರಾಮನಗರ ಹಾಗೂ ಕನಕಪುರ ತಾಲ್ಲೂಕುಗಳಲ್ಲಿ 46 ಕೆರೆಗಳನ್ನು ತುಂಬಿಸುವ ಯೋಜನೆ.
23. ಯಾದಗಿರಿ ಜಿಲ್ಲೆಯ ಕರ್ನಾಳ್ಏತ ನೀರಾವರಿ ಯೋಜನೆ.
24. ಗುಂಡ್ಲುಪೇಟೆ ತಾಲ್ಲೂಕಿನ ಒಣಗಿದ ಕೆರೆಗಳನ್ನು ತುಂಬಿಸುವ ಯೋಜನೆ.
25. ಚಾಮರಾಜ ಬಲದಂಡೆ ನಾಲೆಯ ಅಕ್ವಾಡಕ್ಸ್ ಪುನರ್ ನಿರ್ಮಾಣ.
26. ರಾಮಸಮುದ್ರ ಕಾಲುವೆಯ ಚಾಮಲಾಪುರ, ಕಗ್ಗೇರೆ ಹಾಗೂ ಬನ್ನಿಕುಪ್ಪೆ ಶಾಖಾ ನಾಲೆಗಳಿಗೆ ಸಿ.ಸಿ. ಲೈನಿಂಗ್.
27. ಕೃಷ್ಣರಾಜನಗರ ಶಾಖಾ ನಾಲೆಗೆ ಸಿಮೆಂಟ್ ಕಾಂಕ್ರೀಟ್ ಲೈನಿಂಗ್.
28. ಹಾರಂಗಿ ಜಲಾಶಯ ಯೋಜನೆಯಡಿ ಪಿರಿಯಾಪಟ್ಟಣ ಏತ ನೀರಾವರಿ ಕಾಲುವೆಯ ರೀ-ಮಾಡೆಲಿಂಗ್.
29. ಡಿ.ಡಿ. ಅರಸ್ ಕಾಲುವೆಯ ಪುನರ್ವಿನ್ಯಾಸ.
30. ಮೈಸೂರು ತಾಲ್ಲೂಕಿನ ಬಿದ್ರಹಳ್ಳಿಹುಂಡಿ ಬಳಿ ಕಾಲುವೆಯ ಆಧುನೀಕರಣ.
31. ಟಿ. ನರಸೀಪುರ ತಾಲ್ಲೂಕಿನ ಹಾರೋಹಳ್ಳಿ ಬಳಿ ಕಾಲುವೆಯ ಆಧುನೀಕರಣ.
32. ಕಬಿನಿ ಬಲದಂಡೆ ನಾಲೆಯ ವಿತರಣಾ ನಾಲೆ ಸಂ.35ರ ಆಧುನೀಕರಣ.
33. ಟಿ. ನರಸೀಪುರ ತಾಲ್ಲೂಕಿನ ರಾಜರಾಜೇಶ್ವರಿ ಕಾಲುವೆ ಹಾಗೂ ಹರೋಹಳ್ಳಿ ಹೈ ಲೆವೆಲ್ ಕಾಲುವೆಗಳ ಸುಧಾರಣೆ.
34. ಟಿ. ನರಸೀಪುರ ತಾಲ್ಲೂಕಿನ ಹಾರೋಹಳ್ಳಿ ಹೈ ಲೆವೆಲ್ ಹಾಗೂ ಲೋ ಲೆವೆಲ್ ಕಾಲುವೆಗಳ ಆಯಕಟ್ಟನ್ನು ಹೆಚ್ಚಿಸಲು ನೀರನ್ನು ಎತ್ತುವ ಯೋಜನೆ.
35. ಟಿ. ನರಸಿಪುರ ತಾಲ್ಲೂಕಿನ ಆರ್.ಪಿ. ಕಾಲುವೆಯ ಹರೋಹಳ್ಳಿ ಪಿಕಪ್ ಕಾಲುವೆ ಹಾಗೂ ಬಂಡಿಬಚ್ಚಲು ಶಾಖಾ ಕಾಲುವೆಯ ಸುಧಾರಣೆ.
36. ಮೈಸೂರು ತಾಲ್ಲೂಕಿನ ಚಿಕ್ಕಂಕನಹಳ್ಳಿ ಕೆರೆಯ ಅಡಿಯಲ್ಲಿ ಇರುವ ಕಿಗ್ಗಾಲುವೆ ಮತ್ತು ಮೆಗ್ಗಾಲುವೆಗಳ ಆಧುನೀಕರಣ.
37. ಕಬಿನಿ ಅಣೆಕಟ್ಟೆಯ ಮೇಲ್ಬಾಗದಲ್ಲಿ ಪುನರುಜ್ಜೀವನ ಕಾಮಗಾರಿ.
38. ಮೈಸೂರು ಜಿಲ್ಲೆ, ಟಿ. ನರಸೀಪುರ ತಾಲ್ಲೂಕಿನ ನಂಜಾಪುರ ಏತ ನೀರಾವರಿ ಯೋಜನೆ.
39. ಹಾರಂಗಿ ಬಲದಂಡೆ ಕಾಲುವೆಯ ಆಧುನೀಕರಣ.
40. ಕಟ್ಟೆಮಳವಾಡಿ ಕಾಲುವೆ ಹಾಗೂ ವಡಕೆಕಟ್ಟೆ ಹೈ ಲೆವೆಲ್ ಕಾಲುವೆಗಳ ಸುಧಾರಣೆ.
41. ವರುಣಾ ಕೆರೆಯ ಪುನರುಜ್ಜೀವನ ಮತ್ತು ಸಂರಕ್ಷಣೆ.
42. ಹಾರಂಗಿ ಜಲಾಶಯದ ಕೆಳಭಾಗದಲ್ಲಿ ಸೇತುವೆ ನಿರ್ಮಾಣ.
43. ಹಾರಂಗಿ ಎಡದಂಡೆ ನಾಲೆಯ ಅಡಿಯಲ್ಲಿ ಸುಧಾರಣೆ.
44. ಹೇಮಾವತಿ ಯೋಜನೆಯಡಿ ನಾಗಮಂಗಲ ಶಾಖಾ ನಾಲೆಯ
ರೀ-ಮಾಡೆಲಿಂಗ್.
45. ಮದ್ದೂರು ತಾಲ್ಲೂಕಿನ ಸೂಳೆಕೆರೆಯ ಜೀರ್ಣೋದ್ಧಾರ.
46. ಮದ್ದೂರು ತಾಲ್ಲೂಕಿನ ಸೂಳೆಕೆರೆ ನಾಲೆಗಳ ಅಭಿವೃದ್ಧಿ.
47. ಹೇಮಾವತಿ ಎಡದಂಡೆ ಕಾಲುವೆ (HLBC) ಅಡಿಯಲ್ಲಿ ಪುನರ್ನಿರ್ಮಾಣ.
48. ಮದ್ದೂರು ತಾಲ್ಲೂಕಿನ ಕಾಲುವೆಗಳ ಆಧುನೀಕರಣ.
49. ಟಿ. ನರಸೀಪುರ ಮತ್ತು ಮಳವಳ್ಳಿ ತಾಲ್ಲೂಕುಗಳಲ್ಲಿ ವಿವಿಧ ಶಾಖಾ ನಾಲೆಗಳ ಅಭಿವೃದ್ಧಿ.
50. ವಿಶ್ವೇಶ್ವರಯ್ಯ ನಾಲಾ ಜಾಲದಡಿಯಲ್ಲಿ ಬರುವ ನಾಲೆಗಳ ಅಭಿವೃದ್ಧಿ.
51. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಸಿಡಿಎಸ್ನಾಲೆಗಳ ಅಭಿವೃದ್ಧಿ ಕಾಮಗಾರಿ.
52. ಕಬಿನಿ ಎಡದಂಡೆ ನಾಲೆಯ ಅಭಿವೃದ್ಧಿ.
53. ಹೇಮಾವತಿ ನದಿಯಿಂದ ನಾಗಮಂಗಲ ಹಾಗೂ ಚನ್ನರಾಯಪಟ್ಟಣ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆ.
54. ನವಿಲುತೀರ್ಥ ಅಣೆಕಟ್ಟಿನ ಕೆಳಭಾಗದಲ್ಲಿ ಮಲಪ್ರಭಾ ನದಿಗೆ ಅಕ್ವೆಡಕ್ಟ್ ನಿರ್ಮಾಣ.
55. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಗೆ ನೀರು ತುಂಬಿಸುವ ಯೋಜನೆ.
56. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಗೊಣ್ಣಾಗರ ಗ್ರಾಮದ ಹತ್ತಿರ ಮಲಪ್ರಭಾ ನದಿಯಿಂದ ಕೊರೆದ ಭಾಗಕ್ಕೆ ತಡೆಗೋಡೆ ನಿರ್ಮಾಣ.
57. ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನಲ್ಲಿ ಅಸ್ತಿತ್ವದಲ್ಲಿರುವ ಯರಗಟ್ಟಿ
ಏತ ನೀರಾವರಿ ಯೋಜನೆ.
58. ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನಲ್ಲಿ ಅಸ್ತಿತ್ವದಲ್ಲಿರುವ ರೇಣುಕಾ
ಏತ ನೀರಾವರಿ ಯೋಜನೆ.
59. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಸಮೀಪ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.
60. ಬಾಗಲಕೋಟೆ ಜಿಲ್ಲೆಯ ಕೆರೂರು ಏತ ನೀರಾವರಿ ಯೋಜನೆ.
61. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಮಲಪ್ರಭಾ ಎಡದಂಡೆ ಕಾಲುವೆಯ ಆಧುನೀಕರಣ.
62. ಹುಬ್ಬಳ್ಳಿ-ಧಾರವಾಡ (ಪೂರ್ವ) ವಿಧಾನಸಭಾ ಮತಕ್ಷೇತ್ರದಲ್ಲಿ ಕೆಂಪಕೆರೆ ತುಂಬಿಸುವ ಯೋಜನೆ.
63. ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಕೆರೆಗಳಿಗೆ ಬೇಡ್ತಿ ನದಿಯಿಂದ ನೀರು ತುಂಬಿಸುವ ಯೋಜನೆ.
64. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ 41 ಕೆರೆಗಳನ್ನು ತುಂಬಿಸುವ ಯೋಜನೆ.
65. ಕೊಟ್ಟಗೆರೆ ಗ್ರಾಮದ ಸಮೀಪ 21 ಕೆರೆಗಳನ್ನು ತುಂಬಿಸುವ ಯೋಜನೆ.
66. ಗೂಳೂರು-ಹೆಬ್ಬೂರು ಕುಡಿಯುವ ನೀರಿನ ಯೋಜನೆ.
67. ಚಳ್ಳಕೆರೆ ತಾಲ್ಲೂಕಿನ ಗೋಸಿಕೆರೆ ಗ್ರಾಮದ ಸಮೀಪ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.
68. ಚಳ್ಳಕೆರೆ ತಾಲ್ಲೂಕಿನ ಗುಡಿಹಳ್ಳಿ ಮತ್ತು ತಪ್ಪಗೊಂಡನಹಳ್ಳಿ ಗ್ರಾಮಗಳ ನಡುವೆ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ
69. ಚಳ್ಳಕೆರೆ ತಾಲ್ಲೂಕಿನ ತೊರೆಬೀರನಹಳ್ಳಿ ಮತ್ತು ಬೆಳಗೆರೆ ಗ್ರಾಮಗಳ ನಡುವೆ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ.
70. ಚಿಕ್ಕಬಳ್ಳಾಪುರ ಜಿಲ್ಲೆಯ ಗಂಟಲ ಮಲ್ಲಮ್ಮ ಕಣಿವೆಯ ಮೇಲೆ ಮಣ್ಣಿನ ಅಣೆಕಟ್ಟು ನಿರ್ಮಾಣ.
71. ಸುವರ್ಣಾವತಿ ನದಿಯ ವ್ಯಾಪ್ತಿಯ ಸರಣಿ ಕೆರೆಗಳ, ಫೀಡರ್ ನಾಲೆಗಳ ಹಾಗೂ ಅಡ್ಡಮೋರಿ ಕಾಮಗಾರಿ.
72. ಗುಂಡಾಲ್ ನದಿಯ ಅಡಿಯಲ್ಲಿ ಬರುವ ಸರಣಿ ಕೆರೆಗಳ ಸಮಗ್ರ ಅಭಿವೃದ್ಧಿ.
73. ಸುವರ್ಣಾವತಿ ಜಲಾಶಯದ ನಾಲೆಗಳ ಅಭಿವೃದ್ಧಿ.
74. ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಕೆರೆಗಳನ್ನು ತುಂಬುವ ಕಾಮಗಾರಿ.
75. ಮಲಪ್ರಭಾ ಯೋಜನೆಯಡಿ ರೋಣ ಮತಕ್ಷೇತ್ರದಲ್ಲಿ ಕಾಲುವೆಗಳ ಆಧುನೀಕರಣ.
ಅನುಬಂಧ-3
2026-27ನೇ ಸಾಲಿನ ಆಯವ್ಯಯ ಕಂಡಿಕೆ – ೧೦೨ (ಸಣ್ಣ ನೀರಾವರಿ ಇಲಾಖೆ)
ಅನುಮೋದನೆ ನೀಡಿದ ಕಾಮಗಾರಿಗಳು
1. ಕಡೂರು ತಾಲ್ಲೂಕಿನಲ್ಲಿ 25 ಕೆರೆಗಳಿಗೆ ನೀರು ತುಂಬಿಸುವ ಹಾಗೂ ಕಾಲುವೆ ಆಧುನೀಕರಣ.
2. ಅಜ್ಜಂಪುರದಲ್ಲಿ 19 ಕೆರೆಗಳಿಗೆ ಏತ ನೀರಾವರಿ ಯೋಜನೆ.
3. ಪಾಂಡವಪುರ ಬಳಘಟ್ಟ ಯೋಜನೆಯಲ್ಲಿ ಕೈಬಿಟ್ಟ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ.
4. ಮಡಿಕೇರಿ–ಕುಶಾಲನಗರ ಪ್ರದೇಶದಲ್ಲಿ ಚೆಕ್ ಡ್ಯಾಂ ಮತ್ತು ನಾಲೆ ನಿರ್ಮಾಣ ಕಾಮಗಾರಿ.
5. ಮದ್ದೂರು ತಾಲ್ಲೂಕಿನಲ್ಲಿ ಶಿಂಷಾ ನದಿಗೆ ಬ್ರಿಡ್ಜ್ ಕಂ ಚೆಕ್ ಡ್ಯಾಂ ನಿರ್ಮಾಣ.
6. ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಲ್ಲಿ ಸರಣಿ ಚೆಕ್ ಡ್ಯಾಂ ನಿರ್ಮಾಣ.
7. ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಅರೆಕೆರೆ ಬಳಿ 12 ಕೆರೆಗಳಿಗೆ ಕಾವೇರಿ ನದಿಯಿಂದ ಏತ ನೀರಾವರಿ.
8. ಮಳವಳ್ಳಿ ಕುಂತೂರು ಭಾಗದ ಕೆರೆಗಳಿಗೆ ಏತ ನೀರಾವರಿ.
9. ಪೊನ್ನಂಪೇಟೆ ಭಾಗದಲ್ಲಿ ಚೆಕ್ ಡ್ಯಾಂ ಹಾಗೂ ನಾಲೆ ನಿರ್ಮಾಣ.
10. ವರುಣ ಕ್ಷೇತ್ರದ ಗ್ರಾಮಗಳ ಕೆರೆಗಳಿಗೆ ಏತ ನೀರಾವರಿ ಕಾಮಗಾರಿ.
11. ಉಳ್ಳಾಲದಲ್ಲಿ ನೇತ್ರಾವತಿ ಎಡದಂಡೆ ಸಂರಕ್ಷಣೆ ಕಾಮಗಾರಿ.
12. ಹೊಸಕೋಟೆ 59 ಕೆರೆಗಳಿಗೆ ಸಂಸ್ಕರಿಸಿದ ನೀರಿನಿಂದ ಏತ ನೀರಾವರಿ.
13. ಕಲಬುರಗಿ ಜಿಲ್ಲೆಯ ಸೇಡಂ ಬೀರನಹಳ್ಳಿ ಬಳಿ ಏತ ನೀರಾವರಿ ಯೋಜನೆ.
14. ಯಲಬುರ್ಗಾ–ಕುಕನೂರು ಕೆರೆಗಳ ಆಧುನೀಕರಣ ಹಾಗೂ ಬ್ರಿಡ್ಜ್-ಕಂ-ಬ್ಯಾರೇಜ್ ಕಾಮಗಾರಿ.
15. ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲ್ಲೂಕಿನ ಭಕ್ತರಹಳ್ಳಿ ಬಳಿ ಹೊಸ ಕೆರೆ ನಿರ್ಮಾಣ.
16. ಬೆಂಗಳೂರು–ಶಿಡ್ಲಘಟ್ಟ ಭಾಗದ 164 ಕೆರೆಗಳಿಗೆ ಏತ ನೀರಾವರಿ ಯೋಜನೆ.
17. ಕೋಲಾರ ಜಿಲ್ಲೆಯ ಅಮಾನಿಕೆರೆಗೆ ಕಾಲುವೆ ತಡೆಗೋಡೆ ಮತ್ತು ಗೇಟ್ ನಿರ್ಮಾಣ.
18. ಕೋಲಾರ ಜಿಲ್ಲೆಯ ಪೋಷಕ ಕಾಲುವೆ ಅಭಿವೃದ್ಧಿ ಹಾಗೂ ಪ್ರವಾಹ ನಿಯಂತ್ರಣ.
19. ಹಾವೇರಿ ಜಿಲ್ಲೆಯ ಹಾನಗಲ್ ಭಾಗದ 111 ಕೆರೆಗಳಿಗೆ ವರದಾ ನದಿಯಿಂದ
ಏತ ನೀರಾವರಿ.
20. ಬಾಗಲಕೋಟೆ ತಾಲ್ಲೂಕಿನಲ್ಲಿ ಪ್ರಧಾನ ಲೆಕ್ಕ ಶೀರ್ಷಿಕೆಯ ಕಾಮಗಾರಿ.
21. ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯ ಗೋಪಾಲಪುರ ಕೆರೆಯಿಂದ
119 ಕೆರೆಗಳಿಗೆ ಏತ ನೀರಾವರಿ ಯೋಜನೆ.
22. ರಾಯಚೂರು ಜಿಲ್ಲೆಯ ಮುದ್ಲಾಪೂರ ಏತ ನೀರಾವರಿ ಪುನರುಜ್ಜೀವನ.
23. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ದದ್ದಲ್ ಬಳಿ ಏತ ನೀರಾವರಿ ಪುನರುಜ್ಜೀವನ.
24. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ವ್ಯಾಪ್ತಿಯಲ್ಲಿ ಬರುವ ಬೀದರ್, ವಿಜಯನಗರ, ಬಳ್ಳಾರಿ, ಕಲಬುರಗಿ, ಯಾದಗಿರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಡಿ ಸಣ್ಣ ನೀರಾವರಿ ಕಾಮಗಾರಿಗಳಿಗೆ ಅನುದಾನ.
25. ಚಿಕ್ಕಬಳ್ಳಾಪುರ ಜಿಲ್ಲೆ, ಬಾಗೇಪಲ್ಲಿ ತಾಲ್ಲೂಕಿನ ಮುದ್ದಹಳ್ಳಿ ಕೊಮಟ್ಟಳ್ಳ ಕುಂಟೆ
ಕೆರೆ ಮರುನಿರ್ಮಾಣ.
26. ಧಾರವಾಡ ಜಿಲ್ಲೆಯ ಕಿತ್ತೂರ ಗ್ರಾಮದಲ್ಲಿ ಹೊಸ ಕೆರೆ ನಿರ್ಮಾಣ.
27. ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಕುಂಬಳಕುಂಟೆ–ಹುಲಿಕೆರೆ ನಡುವೆ ಜಿನುಗು ಕೆರೆ ನಿರ್ಮಾಣ.
28. ಹಾಸನ ಜಿಲ್ಲೆಯ ಬಾಗೂರು ಕೆರೆ ಅಭಿವೃದ್ಧಿ ಕಾಮಗಾರಿ.
29. ಹಿರೇಕೆರೂರು ತಾಲ್ಲೂಕಿನ ಪೂರಕ ಕಾಲುವೆ ಮತ್ತು ಕೆರೆ ಸುಧಾರಣೆ.
30. ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕೋಡೂರು ಗ್ರಾಮದಲ್ಲಿ ಹಳ್ಳಕ್ಕೆ ತಡೆಗೋಡೆ ಮತ್ತು ರಿವಿಟ್ಮೆಂಟ್ ನಿರ್ಮಾಣ.
31. ಸಾಗರ ತಾಲ್ಲೂಕಿನ ಶಿರವಾಳ ಏತ ನೀರಾವರಿ ವಿತರಣಾ ಕಾಲುವೆ ಅಭಿವೃದ್ಧಿ.
32. ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಸೀಗೇಹಳ್ಳ ಚೆಕ್ ಡ್ಯಾಂ ಕೋಡಿ ದುರಸ್ತಿ.
33. ಕೂಡ್ಲಿಗಿ ತಾಲ್ಲೂಕಿನ ತಿಪ್ಪೇಹಳ್ಳಿ ಬಳಿ ಕೆರೆ ಅಭಿವೃದ್ಧಿ ಕಾಮಗಾರಿ.
34. ಮೈಸೂರು ಜಿಲ್ಲೆಯ ಕರಿಗಳ ಕೆರೆ ಹಾಗೂ ನಾಲೆ ಅಭಿವೃದ್ಧಿ.
35. ಮೈಸೂರು ಜಿಲ್ಲೆಯ ಹೆಮ್ಮಿಗೆ–ಮುದುಗನೂರು ಫೀಡರ್ ನಾಲೆ ಅಭಿವೃದ್ಧಿ.
36. ನಂಜನಗೂಡು ತಾಲ್ಲೂಕು ಕಾರ್ಯಗ್ರಾಮದಲ್ಲಿರುವ ಇಂಗು ಕೆರೆಯ ಅಭಿವೃದ್ಧಿ ಕಾಮಗಾರಿ.
37. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ದಾಸನಾಳ ಇಂಗು ಕೆರೆ ಸುಧಾರಣೆ.
38. ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಕೆರೆಯಿಂದ ಪೋಷಕ ಕಾಲುವೆ ಅಭಿವೃದ್ಧಿ.
39. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಕೆರೆ ಅಭಿವೃದ್ಧಿ.
40. ಬೀದರ ಜಿಲ್ಲೆಯ ಹುಮನಾಬಾದ ತಾಲ್ಲೂಕಿನ ಹಳ್ಳಿಖೇಡ ಕೆರೆ ಅಭಿವೃದ್ಧಿ.
41. ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಅಂಬೆಸಾಂಗವಿ ಕೆರೆ ಮತ್ತು ಕಾಲುವೆ ಸುಧಾರಣೆ.
42. ಬಾದಾಮಿ ತಾಲ್ಲೂಕಿನ ಗಂಜಿಕೆರೆ ಸುಧಾರಣೆ ಕಾಮಗಾರಿ.
43. ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಹೊನ್ನನಾಯಕನಹಳ್ಳಿ ಕೆರೆ ಹಾಗೂ ಹಳ್ಳ ಅಭಿವೃದ್ಧಿ.
44. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕೆರೆ ಏರಿ ಮತ್ತು ಕೋಡಿ ಅಭಿವೃದ್ಧಿ.
45. ಚಿತ್ರದುರ್ಗ ತಾಲ್ಲೂಕಿನ ಕೊಳಹಾಳು ದೊಡ್ಡ ಕೆರೆಗೆ ತಡೆಗೋಡೆ ಮತ್ತು ದುರಸ್ತಿ.
46. ಚಿತ್ರದುರ್ಗ ಜಿಲ್ಲೆ, ಮೊಳಕಾಲ್ಮೂರು ತಾಲ್ಲೂಕಿನ ವೆಂಕಾಟಪುರ ಡೈಕ್ ಪಾಥ್ ವೇ ದುರಸ್ತಿ.
47. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ಕರಿಯಮ್ಮನಹಟ್ಟಿ ಸಣ್ಣ ಕೆರೆ ಕೋಡಿ ನಿರ್ಮಾಣ.
48. ಚಿಕ್ಕಮಗಳೂರು ಜಿಲ್ಲೆಯ ಕೆರೆಗಳ ಏರಿ ಮತ್ತು ಚಾನೆಲ್ ಪುನಃಶ್ಚೇತನ.
49. ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಕಿರಿಕೊಡ್ಲಿ ಕೆರೆ ಅಭಿವೃದ್ಧಿ.
50. ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಕುಂಜಿಲ ಸಾರ್ವಜನಿಕ ಕೆರೆ ಅಭಿವೃದ್ಧಿ.
51. ಮಾಗಡಿ ತಾಲ್ಲೂಕಿನ ಗೌರಮ್ಮನ ಕೆರೆ ಹಳ್ಳಕ್ಕೆ ಡ್ರೈನ್ ನಿರ್ಮಾಣ.
52. ಕಲಬುರಗಿ ಜಿಲ್ಲೆಯ ಯಳವಂತಿ ಬಳಿ ಸ್ಥಳೀಯ ನಾಲೆಗೆ ಅಣೆಕಟ್ಟು ನಿರ್ಮಾಣ.
53. ಕೊಪ್ಪಳ ಜಿಲ್ಲೆ, ಗಂಗಾವತಿ ತಾಲ್ಲೂಕಿನ ಮರಕುಂಬಿ ಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ.
54. ಚಿಂತಾಮಣಿ ತಾಲ್ಲೂಕಿನ ತುಳುವನೂರು ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.
55. ಚಿಕ್ಕಬಳ್ಳಾಪುರ ಜಿಲ್ಲೆ, ಗುಡಿಬಂಡೆ ತಾಲ್ಲೂಕಿನ ಅಮಾನಿ ಬೈರಸಾಗರ ಕೆರೆಗೆ ಕೋಡಿ ಕಂ ಬ್ರಿಡ್ಜ್ ನಿರ್ಮಾಣ.
56. ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕಿನ ಚಿತ್ರನಾಯಕನಹಳ್ಳಿ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.
57. ತುಮಕೂರು ಜಿಲ್ಲೆ, ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಚೆಕ್ ಡ್ಯಾಂ ದುರಸ್ತಿ ಮತ್ತು ರಕ್ಷಣಾ ಕಾಮಗಾರಿ.
58. ಸುಳ್ಯ ತಾಲ್ಲೂಕಿನ ಗುತ್ತಿಗಾರು ಕಮಿಲಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ.
59. ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲ್ಲೂಕಿನ ಕಗತೂರು ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.
60. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಂಸನೂರ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ.
61. ಮುಧೋಳ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ಹಾಗೂ ಬಿ.ಸಿ.ಬಿ ನಿರ್ಮಾಣ.
62. ರಬಕವಿ-ಬನಹಟ್ಟಿ ತಾಲ್ಲೂಕಿನ ಹೊಸೂರಲ್ಲಿ ಹಳ್ಳಕ್ಕೆ ಬಾಂದಾರ ನಿರ್ಮಾಣ.
63. ಬೀದರ್ ಜಿಲ್ಲೆ, ಚಿಟಗುಪ್ಪಾ ತಾಲ್ಲೂಕಿನ ಕೃಷ್ಣಾಪೂರವಾಡಿಯಲ್ಲಿ ಹಳ್ಳಕ್ಕೆ ಬಾಂದಾರ ನಿರ್ಮಾಣ.
64. ಬೀದರ್ ಜಿಲ್ಲೆ, ಚಿಟಗುಪ್ಪಾ ತಾಲ್ಲೂಕಿನ ಉಡಬಾಳದಲ್ಲಿ ಬಿ.ಸಿ.ಬಿ ಮೇಲ್ದಂಡೆಯಲ್ಲಿ
ಸಿ.ಡಿ ನಿರ್ಮಾಣ.
65. ಬೀದರ್ ಜಿಲ್ಲೆ, ಬಾಲ್ಕಿ ತಾಲ್ಲೂಕಿನ ಖಟಕ ಚಿಂಚೋಳಿಯಲ್ಲಿ ಬಿ.ಸಿ.ಬಿ ಸುಧಾರಣೆ.
66. ಬೀದರ್ ಜಿಲ್ಲೆ, ಹುಮನಾಬಾದ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ನಿರ್ಮಾಣ.
67. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ
ಚೆಕ್ ಡ್ಯಾಂ ಕಂ ಎಲ್.ಎಲ್.ಸಿ ನಿರ್ಮಾಣ.
68. ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಹಕ್ಕಿನಾಳು ಗ್ರಾಮದಲ್ಲಿ
ಚೆಕ್ ಡ್ಯಾಂ ನಿರ್ಮಾಣ.
69. ಬೆಂಗಳೂರು ದಕ್ಷಿಣ ಜಿಲ್ಲೆ, ಕನಕಪುರ ತಾಲ್ಲೂಕಿನ ಹೊಸದೊಡ್ಡಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ.
70. ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನ ಹಂಚಿನಾಳದಲ್ಲಿ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ.
71. ರಾಯಚೂರು ಜಿಲ್ಲೆ, ಮಸ್ಕಿ ತಾಲ್ಲೂಕಿನ ಜಾಲವಾಡಗಿಯಲ್ಲಿ ನಾಲೆಗೆ ಚೆಕ್ ಡ್ಯಾಂ ನಿರ್ಮಾಣ.
72. ವಿಜಯನಗರ ಜಿಲ್ಲೆ, ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಚೆಕ್ ಡ್ಯಾಂ ಕಂ ಬ್ರಿಡ್ಜ್ ನಿರ್ಮಾಣ.
73. ವಿಜಯಪುರ ಜಿಲ್ಲೆ, ಬಬಲೇಶ್ವರ ತಾಲ್ಲೂಕಿನ ಹಲವು ಹಳ್ಳಗಳಿಗೆ ಸರಣಿ ಚೆಕ್ ಡ್ಯಾಂ ನಿರ್ಮಾಣ.
74. ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ತಾಲ್ಲೂಕಿನ ಎರಡು ಹಳ್ಳಗಳಿಗೆ ಬಿ.ಸಿ.ಬಿ ನಿರ್ಮಾಣ.
75. ಶಿವಮೊಗ್ಗ ಜಿಲ್ಲೆ, ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಹೊಳೆಗೆ ಬ್ಯಾರೇಜ್ ನಿರ್ಮಾಣ.
76. ಸಾಗರ ತಾಲ್ಲೂಕಿನ ನಾಗವಳ್ಳಿಯಲ್ಲಿ ಹಳ್ಳಕ್ಕೆ ಬ್ಯಾರೇಜ್ ನಿರ್ಮಾಣ.
77. ಹಾವೇರಿ ಜಿಲ್ಲೆ, ರಟ್ಟಿಹಳ್ಳಿ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ಮತ್ತು ತಡೆಗೋಡೆ ನಿರ್ಮಾಣ.
78. ಹಾವೇರಿ ಜಿಲ್ಲೆ, ಶಿಗ್ಗಾಂವಿ ತಾಲ್ಲೂಕಿನಲ್ಲಿ ಸೇತುವೆ ಸಹಿತ ಚೆಕ್ ಡ್ಯಾಂ ನಿರ್ಮಾಣ.
79. ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ ಜಾವಗಲ್ ಭಾಗದಲ್ಲಿ ಎರಡು ಕಡೆ ಚೆಕ್ ಡ್ಯಾಂ ನಿರ್ಮಾಣ.
80. ಹಾಸನ ಜಿಲ್ಲೆ, ಸಾಲಗಾಮೆಯಲ್ಲಿ ಚೆಕ್ ಡ್ಯಾಂ ಕಂ ಬ್ರಿಡ್ಜ್ ನಿರ್ಮಾಣ.
81. ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ ಕೆಂಚನಕಟ್ಟೆಯಲ್ಲಿ ಚೆಕ್ ಡ್ಯಾಂ ನಿರ್ಮಾಣ.
82. ಬೀದರ್ ಜಿಲ್ಲೆ, ಭಾಲ್ಕಿ ತಾಲ್ಲೂಕಿನ ಡೊಂಗರಗಿ-ಖುದವಂತಪುರ ಏತ ನೀರಾವರಿ ಸುಧಾರಣೆ.
83. ರಾಯಚೂರು ಜಿಲ್ಲೆ, ಮಾನವಿ ತಾಲ್ಲೂಕಿನ ಜೀನೂರು-ಉದ್ಘಾಳ ಗ್ರಾಮಗಳಿಗೆ
ಏತ ನೀರಾವರಿ.
84. ರಾಯಚೂರು ಜಿಲ್ಲೆ, ಅಡವಿ ಖಾನಪುರದಲ್ಲಿ ತುಂಗಭದ್ರಾದಿಂದ ಏತ ನೀರಾವರಿ.
85. ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲ್ಲೂಕಿನ ಶಿರಿಯಾರದಲ್ಲಿ ಹೊಳೆ ಹೂಳು ತೆರವು ಮತ್ತು ಸಂರಕ್ಷಣೆ.
86. ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕಿನ ಐಗೂರು-ಅರೆಯೂರಿನಲ್ಲಿ ನಾಲೆ ಹಾಗೂ ತಡೆಗೋಡೆ ಅಭಿವೃದ್ಧಿ.
87. ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು ಭಾಗದಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ.
88. ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲ್ಲೂಕಿನ ಏನೆಕಲ್ಲಿನಲ್ಲಿ ಅಡ್ಡ ತೋಡಿಗೆ ತಡೆಗೋಡೆ ನಿರ್ಮಾಣ.
89. ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲ್ಲೂಕಿನಲ್ಲಿ ತಡೆಗೋಡೆ ನಿರ್ಮಾಣ.
90. ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನ ಅಮ್ಮಾಡಿಯಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ.
91. ದಕ್ಷಿಣ ಕನ್ನಡ ಜಿಲ್ಲೆ, ಮೂಡಬಿದ್ರೆ ತಾಲ್ಲೂಕಿನ ಪ್ರಾಂತ್ಯದಲ್ಲಿ ತಡೆಗೋಡೆ ನಿರ್ಮಾಣ.
92. ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲ್ಲೂಕಿನ ಗುತ್ತಿಗಾರಿನಲ್ಲಿ ತೋಡಿಗೆ ತಡೆಗೋಡೆ ನಿರ್ಮಾಣ.
93. ಹೊಸನಗರ ತಾಲ್ಲೂಕಿನ ದೊಬೈಲಿನಲ್ಲಿ ಪಿಕಪ್ ದುರಸ್ತಿ ಮತ್ತು ಪ್ರವಾಹ ಸಂರಕ್ಷಣೆ.
94. ಹಾವೇರಿ ಜಿಲ್ಲೆ, ಬ್ಯಾಡಗಿ ತಾಲ್ಲೂಕಿನ ಸಂಗೂರಿನಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ಅಳವಡಿಕೆ ಮತ್ತು ತಡೆಗೋಡೆ ನಿರ್ಮಾಣ.
95. ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಕೆರೆ ಅಭಿವೃದ್ಧಿ.
96. ವಿಜಯಪುರ ಜಿಲ್ಲೆ, ಸಿಂಧಗಿ ತಾಲ್ಲೂಕಿನ ಕೆಂಗನಾಳದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ.
97. ಬೀದರ್ ಜಿಲ್ಲೆ, ಚಿಟಗುಪ್ಪಾ ತಾಲ್ಲೂಕಿನ ಚಿಟಗುಪ್ಪಾ ಮಕ್ಕಾ ಕೆರೆ ಅಭಿವೃದ್ಧಿ.
98. ಬೀದರ್ ಜಿಲ್ಲೆ, ಹುಮನಾಬಾದ ತಾಲ್ಲೂಕಿನ ಫಾತಿಮಾಪುರ ಕೆರೆ ಅಭಿವೃದ್ಧಿ.
99. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ರಾವುತನಹಳ್ಳಿ ಏತ ನೀರಾವರಿ
ನಾಲೆ ಆಧುನೀಕರಣ.
100. ತುಮಕೂರು ಜಿಲ್ಲೆ, ನಿಡವಳಲು ಕೆರೆಯಲ್ಲಿ ಚೆಕ್ ಡ್ಯಾಂ ಕಂ ಕಾಸ್ವೇ ನಿರ್ಮಾಣ.
101. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಐಗೂರು ಕೆರೆ ಅಭಿವೃದ್ಧಿ.
102. ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲ್ಲೂಕಿನ ಬೆಳ್ಳಿಪ್ಪಾಡಿ ದೇವಸ್ಥಾನ ತಡೆಗೋಡೆ ನಿರ್ಮಾಣ.
103. ದಕ್ಷಿಣ ಕನ್ನಡ ಜಿಲ್ಲೆ, ಸುಳ್ಯ ತಾಲ್ಲೂಕಿನ ಮಂಡೆಕೋಲು ಕೃಷಿಭೂಮಿ ಸಂರಕ್ಷಣೆಗೆ ತಡೆಗೋಡೆ ನಿರ್ಮಾಣ.
104. ಹಾವೇರಿ ಜಿಲ್ಲೆ, ಶಿಗ್ಗಾಂವ ತಾಲ್ಲೂಕಿನ ತಡಸ-ಅಡವಿ ಸೋಮಾಪುರ ನಡುವೆ ಫೀಡರ್ ಕಾಲುವೆ ಅಭಿವೃದ್ಧಿ.
105. ಉತ್ತರ ಕನ್ನಡ ಜಿಲ್ಲೆ, ಸಿದ್ದಾಪುರ ತಾಲ್ಲೂಕಿನಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣ.
106. ಉತ್ತರ ಕನ್ನಡ ಜಿಲ್ಲೆ, ಶಿರಸಿ ತಾಲ್ಲೂಕಿನ ಸೊರೆಗುಪ್ಪದಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣ.
107. ಉತ್ತರ ಕನ್ನಡ ಜಿಲ್ಲೆ, ಸಿದ್ದಾಪುರ ತಾಲ್ಲೂಕಿನ ಶಿರಳಗಿಯಲ್ಲಿ ಸೇತುವೆ ಸಹಿತ ಬಾಂದಾರ ನಿರ್ಮಾಣ.
108. ತುಮಕೂರು ಜಿಲ್ಲೆ, ಶಿರಾ ತಾಲ್ಲೂಕಿನ ಯರಮಾದನಹಳ್ಳಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ.
109. ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ದೇವಸ್ಥಾನ ಹತ್ತಿರ ಚೆಕ್ ಡ್ಯಾಂ ನಿರ್ಮಾಣ.
110. ಬಾಗಲಕೋಟೆ ಜಿಲ್ಲೆ, ಮುಧೋಳ ತಾಲ್ಲೂಕಿನ ಕಸಬಾ ಜಂಬಗಿ ಬ್ಯಾರೇಜ್ ಹತ್ತಿರ ರಕ್ಷಣಾ ಗೋಡೆ ನಿರ್ಮಾಣ.
111. ಬಾಗಲಕೋಟೆ ಜಿಲ್ಲೆ, ಜಮಖಂಡಿ ತಾಲ್ಲೂಕಿನ ಗದ್ಯಾಳ ಕೆರೆ ಏರಿ ಸುಧಾರಣೆ.
112. ವಿಜಯಪುರ ಜಿಲ್ಲೆ, ಇಂಡಿ ತಾಲ್ಲೂಕಿನ ಗೊಳಸಾರದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ.
ಅನುಬಂಧ – 4
2026-27ನೇ ಸಾಲಿನ ಆಯವ್ಯಯ ಕಂಡಿಕೆ – ೨೫೦ (ಕಾರ್ಮಿಕ ಇಲಾಖೆ)
ಹಂತ-1ರಲ್ಲಿ ಅನುಮೋದನೆಯಾಗಿರುವ ಶ್ರಮಿಕ ವಸತಿ ಶಾಲೆಗಳ ವಿವರ
ಕ್ರ.ಸಂ ವಿಧಾನಸಭಾ ಕ್ಷೇತ್ರ ಕ್ರ.ಸಂ ವಿಧಾನಸಭಾ ಕ್ಷೇತ್ರ
1 ಹೊಸಕೋಟೆ 22 ಕುರುಗೋಡು
2 ಬಂಗಾರಪೇಟೆ 23 ಕೂಡಲಗಿ
3 ಹಿರಿಯೂರು 24 ರಾಯಚೂರು
4 ಪಾವಗಡ 25 ಕಲಘಟಗಿ
5 ಬಾಗೇಪಲ್ಲಿ 26 ಕಿತ್ತೂರು
6 ಶಿವಮೊಗ್ಗ 27 ಬೀಳಗಿ
7 ದಾವಣಗೆರೆ ಉತ್ತರ 28 ಇಂಡಿ
8 ಕನಕಪುರ 29 ಬ್ಯಾಡಗಿ
9 ಆನೇಕಲ್ 30 ರೋಣ
10 ವರುಣಾ 31 ಭಟ್ಕಳ
11 ಚಾಮರಾಜನಗರ 32 ಮಾಲೂರು
12 ಕಡೂರು 33 ಹೊಸದುರ್ಗ
13 ನಾಗಮಂಗಲ 34 ಕೊರಟಗೆರೆ
14 ಅರಸೀಕೆರೆ 35 ಮಾಯಕೊಂಡ
15 ಕಾಪು 36 ಕಾರಟಗಿ
16 ಪುತ್ತೂರು 37 ಸಿರಗುಪ್ಪ
17 ಸೋಮವಾರಪೇಟೆ 38 ಅಥಣಿ
18 ಕಲಬುರಗಿ 39 ರಾಮದುರ್ಗ
19 ಬಾಲ್ಕಿ 40 ಯಮಕನಮರಡಿ
20 ಶಾಹಪುರ 41 ಬೈಲಹೊಂಗಲ
21 ಯಲಬುರ್ಗ 42 ಹಳಿಯಾಳ
ಅನುಬಂಧ – 5
2026-27ನೇ ಸಾಲಿನ ಆಯವ್ಯಯ ಕಂಡಿಕೆ – ೨೫೦ (ಕಾರ್ಮಿಕ ಇಲಾಖೆ)
ಹಂತ-2ರಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಶಾಲೆಗಳ ವಿವರ
ಕ್ರ.ಸಂ ವಿಧಾನಸಭಾ ಕ್ಷೇತ್ರ ಕ್ರ.ಸಂ ವಿಧಾನಸಭಾ ಕ್ಷೇತ್ರ
1 ಕಾಗವಾಡ 18 ಆಳಂದ
2 ಸವದತ್ತಿ 19 ಗುರುಮಿಠಕಲ್
3 ಚಿಕ್ಕೋಡಿ-ಸದಲಗ 20 ಅಫಜಲಪುರ
4 ಬೆಳಗಾವಿ ಗ್ರಾಮಾಂತರ 21 ಶೋರಾಪುರ
5 ಮುದ್ದೇಬಿಹಾಳ 22 ಬೀದರ್
6 ಬಸವನ ಬಾಗೇವಾಡಿ 23 ಮಸ್ಕಿ
7 ಬಬಲೇಶ್ವರ 24 ರಾಯಚೂರು ಗ್ರಾಮಾಂತರ
8 ನಾಗಠಾಣ 25 ಕೊಪ್ಪಳ
9 ಸಿಂಧಗಿ 26 ಗದಗ
10 ಬಾಗಲಕೋಟೆ 27 ಶಿರಸಿ
11 ಬಾದಾಮಿ 28 ಹಾವೇರಿ
12 ಹುನಗುಂದ 29 ರಾಣೆಬೆನ್ನೂರು
13 ಮುಧೋಳ 30 ಶಿಗ್ಗಾಂವ
14 ನವಲಗುಂದ 31 ಹಾನಗಲ್
15 ಧಾರವಾಡ 32 ಹಿರೇಕೆರೂರು
16 ಕುಂದಗೋಳ 33 ಬಳ್ಳಾರಿ
17 ಚಿತ್ತಾಪುರ 34 ಸಂಡೂರು
35 ಹರಪನಹಳ್ಳಿ 50 ರಾಮನಗರ
36 ಚಳ್ಳಕೆರೆ 51
ದೇವನಹಳ್ಳಿ (ಗುಂಡಂಗೆರೆ ಕ್ರಾಸ್
-ತೂಬಗೇರಿ ಹೋಬಳಿ)
37 ಜಗಳೂರು
38 ಚನ್ನಗಿರಿ 52 ಮಳವಳ್ಳಿ
39 ಸೊರಬ 53 ಮದ್ದೂರು
40 ಸಾಗರ 54 ಮೇಲುಕೋಟೆ
41 ತರೀಕೆರೆ 55 ಮಂಡ್ಯ
42 ಕುಣಿಗಲ್ 56 ಶ್ರೀರಂಗಪಟ್ಟಣ
43 ತಿಪಟೂರು 57 ಉಲ್ಲಾಳ
44 ಮಧುಗಿರಿ 58 ಹೆಚ್.ಡಿ.ಕೋಟೆ
45 ಸಿರಾ ೫೯ ಪಿರಿಯಾಪಟ್ಟಣ
46 ಚಿಂತಾಮಣಿ 60 ಕೆ.ಆರ್.ನಗರ
47 ಕೆ.ಜಿ.ಎಫ್. 61 ನಂಜನಗೂಡು
48 ಮಾಗಡಿ 62 ವಿರಾಜಪೇಟೆ
49 ಚನ್ನಪಟ್ಟಣ
ಅನುಬಂಧ - 6
2026-27ನೇ ಸಾಲಿನ ಆಯವ್ಯಯ ಕಂಡಿಕೆ – ೩೩೪ (ಲೋಕೋಪಯೋಗಿ ಇಲಾಖೆ)
1) ಮಳವಳ್ಳಿ-ಬಾವಲಿ (ಕೇರಳ ಗಡಿ) (ಬನ್ನೂರು, ಹೆಚ್.ಡಿ.ಕೋಟೆ )-141 ಕಿ.ಮೀ.
2) ಹುಲ್ಲಹಳ್ಳಿ-ತಗಡೂರು-ಸಂತೇಮರಹಳ್ಳಿ-55 ಕಿ.ಮೀ
3) ಮಡಿಕೇರಿ-ದೋಣಿಗಲ್ (NH-75) (ಮಾದಪುರ, ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಮಾರ್ಗ)-95 ಕಿಮೀ.
4) ಹನೂರು-ರಾಂಪುರ-ಪಾಲಾರ್-70 ಕಿ.ಮೀ.
5) ಶ್ರೀರಂಗಪಟ್ಟಣ (ಪಾಂಡವಪುರ ರೈಲ್ವೆ ನಿಲ್ದಾಣ)- ಬಿ.ಎಮ್. ರೋಡ್ ಜಂಕ್ಷನ್ ಚನ್ನರಾಯಪಟ್ಟಣ (ಕೆ.ಆರ್.ಪೇಟೆ ಮಾರ್ಗ)-63 ಕಿ.ಮೀ.
6) ಮಾಗಡಿ-ಹುಣಸನಹಳ್ಳಿ (ತಮಿಳುನಾಡು ಗಡಿ) (ರಾಮನಗರ, ಕನಕಪುರ ಮಾರ್ಗ)-95 ಕಿ.ಮೀ.
7) ಚಡಚಣ-ಗಾಣಗಾಪುರ (ಝಳಕಿ, ಇಂಡಿ, ಅಫಜಲಪುರ ಮಾರ್ಗ)-115 ಕಿಮೀ.
8) ದಿಂಡವಾರ (SH-41) ನಾಲತವಾಡ (ಸೊಮನಾಳ್, ಸಾಸನೂರು, ಮುಖಿಹಳ್, ಹುಳಗಬಳ್ ಮಾರ್ಗ)-95 ಕಿ.ಮೀ
9) ಸಂಕೇಶ್ವರ - ಲೋಕಾಪುರ (ಕಮತ್ನೂರು ಕ್ರಾಸ್ – ಹುಕ್ಕೇರಿ – ಘಟಪ್ರಭ -ಅರಭಾವಿಮಠ – ವಡರಟ್ಟಿ – ಮಸಗುಪ್ಪಿ – ತಿಗಡಿ - ಯಾದವಾಡ ಮಾರ್ಗ) -
100 ಕಿಮೀ.
10) ಗಿಣಿಗೇರ-ಮುಂಡರಗಿ (ಕೊಪ್ಪಳ ಮಾರ್ಗ)-41 ಕಿ.ಮೀ.
11) ಮ್ಯಾದ್ನೇರಿ ಕ್ರಾಸ್ (NH-50)-ಕತ್ರಾಳ ಕ್ರಾಸ್ (NH-367) (ಬೇವಿನಕಟ್ಟೆ ಕ್ರಾಸ್)-45 ಕಿಮೀ
ಅನುಬಂಧ – 7
2026-27ನೇ ಸಾಲಿನ ಆಯವ್ಯಯ ಕಂಡಿಕೆ – ೩೪೧
(ಮೂಲಸೌಕರ್ಯ ಅಭಿವೃದ್ಧಿ ಇಲಾಖೆ)
ಕ್ರ. ಸಂ. ಯೋಜನೆಯ ಹೆಸರು
1 ಗಿಣಿಗೇರಾ-ರಾಯಚೂರು*
2 ತುಮಕೂರು-ರಾಯದುರ್ಗ*
3 ಚಿಕ್ಕಮಗಳೂರು-ಬೇಲೂರು
4 ಕುಡಚಿ-ಬಾಗಲಕೋಟೆ
5 ಗದಗ-ವಾಡಿ
6 ತುಮಕೂರು-ದಾವಣಗೆರೆ
7 ಬೇಲೂರು-ಹಾಸನ
8 ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು
9 ಧಾರವಾಡ-ಕಿತ್ತೂರು-ಬೆಳಗಾವಿ
* ಗಿಣಿಗೇರಾ-ರಾಯಚೂರು ಮತ್ತು ತುಮಕೂರು-ರಾಯದುರ್ಗ ರೈಲ್ವೆ ಮಾರ್ಗ ಕಾಮಗಾರಿಗಳ ನಿರ್ಮಾಣ ಮತ್ತು ಭೂಸ್ವಾಧೀನ ವೆಚ್ಚವು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ 50:50 ಅನುಪಾತ ಆಧಾರದ ಮೇಲೆ ಹಂಚಿಕೆಯಾಗಿರುತ್ತದೆ. ಉಳಿದ
ಏಳು ಕಾಮಗಾರಿಗಳ ಭೂಸ್ವಾಧೀನದ ಸಂಪೂರ್ಣ ವೆಚ್ಚವನ್ನು ಹಾಗೂ ಶೇ.೫೦ ರಷ್ಟು ನಿರ್ಮಾಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ.
ಅನುಬಂಧ-8
2026-27ನೇ ಸಾಲಿನ ಆಯವ್ಯಯ ಕಂಡಿಕೆ – ೪೬೪ (ಒಳಾಡಳಿತ ಇಲಾಖೆ)
ರಾಜ್ಯದಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ ಪೊಲೀಸ್ ಠಾಣೆಗಳ ವಿವರ
ಕ್ರ.ಸಂ. ಜಿಲ್ಲೆ ಪೊಲೀಸ್ ಠಾಣೆ
1 ದಕ್ಷಿಣ ಕನ್ನಡ ಮಾಣಿ ಪೊಲೀಸ್ ಠಾಣೆ
2 ದಕ್ಷಿಣ ಕನ್ನಡ ಸಜಿಪನಡು ಪೊಲೀಸ್ ಠಾಣೆ
3 ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ
4 ಬೆಳಗಾವಿ ಯರಗಟ್ಟಿ ಪೊಲೀಸ್ ಠಾಣೆ
5 ಯಾದಗಿರಿ ಕಕ್ಕೇರಾ ಪೊಲೀಸ್ ಠಾಣೆ
6 ಚಿತ್ರದುರ್ಗ ಹಿರಿಯೂರು ಸಂಚಾರ ಪೊಲೀಸ್ ಠಾಣೆ
7 ದಾವಣಗೆರೆ ಆನಗೋಡು ಪೊಲೀಸ್ ಠಾಣೆ
8 ಹಾವೇರಿ ತಿಳುವಳ್ಳಿ ಪೊಲೀಸ್ ಠಾಣೆ
9 ಮೈಸೂರು ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ
10 ವಿಜಯಪುರ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ
11 ಕೋಲಾರ ನರಸಾಪುರ ಕೈಗಾರಿಕಾ ವಲಯ ಪೊಲೀಸ್ ಠಾಣೆ
12 ಚಾಮರಾಜನಗರ ಗುಂಡ್ಲುಪೇಟೆ ಸಂಚಾರ ಪೊಲೀಸ್ ಠಾಣೆ






