ಮುಂಬಯಿಯ ಧಾರಾವಿಯ ಡೆಡ್ಲಿ ಗ್ಯಾಂಗ್ ನಿಂದ ನಡೆದಿದ್ದ ದರೋಡೆ ಮಂಗಳೂರು ಪೊಲೀಸರ ಮಹತ್ವದ ಕಾರ್ಯಾಚರಣೆ ರಾಜ್ಯದ ಅತಿದೊಡ್ಡ ದರೋಡೆ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು

Mangalore:

Font size:

ತಮಿಳುನಾಡಿನ ಮಧುರೈ ಸಮೀಪ ಇಬ್ಬರು ದರೋಡೆ ಕೋರರನ್ನು ಬಂಧಿಸಿದ ಪೊಲೀಸರ ತಂಡ

FRom Jayaram Udupi

ಮಂಗಳೂರು, ಜ. 20 -ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂಬಯಿಯ ಧಾರಾವಿಯ ಡೆಡ್ಲಿ ಗ್ಯಾಂಗ್ ನಿಂದ ನಡೆದಿದ್ದ ದರೋಡೆ ಮೂವರನ್ನು ಬಂಧಿಸುವಲ್ಲಿ ಯಶಸ್ವಯಾಗಿದ್ದಾರೆ.

10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು ಪೊಲೀಸ್​​ ಆಯುಕ್ತ ಅನುಪಮ್ ಅಗರ್ವಾಲ್​ ಖಚಿತಪಡಿಸಿದ್ದು, ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ್ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಧಿತ ಆರೋಪಿಗಳು.

ಮುಂಬೈ ಮೂಲದ ಗ್ಯಾಂಗ್ ನಿಂದ ದರೋಡೆಯಾಗಿದ್ದು, ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ್ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಂಧಿತರು. ಇನ್ನು ಬಂಧಿತರಿಂದ ಕಳ್ಳತನಕ್ಕೆ ಬಳಸಿದ್ದ ಫಿಯೆಟ್ ಕಾರು, ಹಣ, ಚಿನ್ನ ತುಂಬಿಕೊಂಡು ಪರಾರಿಯಾಗಿದ್ದ ಇವರುಗಳ ಬಳಿ ಎರಡು ಗೋಣಿ ಚೀಲಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇವರುಗಳ ಬಂಧನದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ವಿವರ ನೀಡಿದ್ದು ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಆರೋಪಿಗಳ ಬಂಧನವಾಗಿದೆ. ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ, ಮಣಿವಣ್ಣನ್ ಬಂಧಿತರು. ಬಂಧಿತರಿಂದ 2 ಗೋಣಿಚೀಲ, ತಲ್ವಾರ್‌, 2 ಪಿಸ್ತೂಲ್‌ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ವಿವರಗಳನ್ನು ನೀಡಿದ್ದಾರೆ.

ಉಳ್ಳಾಲ ತಾಲೂಕು ಕೆ.ಸಿ.ರೋಡ್‌ನ ಶಾಖೆಯಲ್ಲಿ ಜನವರಿ 17ರಂದು ಕೋಟೆಕಾರು ಬ್ಯಾಂಕ್​​ನಲ್ಲಿ ದರೋಡೆ ನಡೆಸಿದ್ದರು,ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕ್​​ನಲ್ಲಿ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಮಾಹಿತಿ ನೀಡಿದರು.

Prev Post .ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ- ಮುಖ್ಯಮಂತ್ರಿ ಸಿದ್ದರಾಮಯ್ಯ
Next Post ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟಿದ್ದು ಮಹಾತ್ಮ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ನಕಲಿ ಗಾಂಧಿಗಳು: ಪ್ರತಿಪಕ್ಷ ನಾಯಕ ಆರ್.ಅಶೋಕ