ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್

BANGALURU:

Font size:

ರಾಜಕೀಯ ಪಿತೂರಿಯಿಂದ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜ.27

"ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಕೇಳಿದಾಗ, "ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆ ಈಗಾಗಲೇ ತನಿಖೆ ಮಾಡುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ನಂತರ ನಾನು ಮಾತನಾಡುತ್ತೇನೆ" ಎಂದು ತಿಳಿಸಿದರು.

ಮುಡಾ ಪ್ರಕರಣ ಸಿಬಿಐ ತನಿಖೆ ನೀಡಬೇಕು ಎಂಬ ವಿಚಾರವಾಗಿ ಕೇಳಿದಾಗ, "ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ. ಈ ಕುರಿತಾಗಿ ಬಂದಿರುವ ನ್ಯಾಯಾಲಯದ ತೀರ್ಪುಗಳನ್ನು ನನ್ನ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದ್ದೇನೆ" ಎಂದು ತಿಳಿಸಿದರು.

ಸರ್ಕಾರ ಸುಭದ್ರವಾಗಿದೆ

ಸಿಎಂ ಹುದ್ದೆ ವಿಚಾರವಾಗಿ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, "ಆ ರೀತಿಯಾಗಿ ಯಾರೂ ಏನೂ ಮಾತನಾಡಿಲ್ಲ. ಸರ್ಕಾರ ಸುಭದ್ರವಾಗಿದೆ. ನಾವೆಲ್ಲರೂ ಸಿಎಂ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು.

Prev Post ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಹೊಸ ವರ್ಷದ ಕ್ಯಾಲೆಂಡರ್ ಅನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದಲ್ಲಿ ಸೋಮವಾರ ಬಿಡುಗಡೆ ಮಾಡಿದರು
Next Post ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ - ಆರು ತಿಂಗಳ ಹಿಂದೆ ಸಂಚು, ಶಶಿ ತೇವರ್‌ಗಾಗಿ ಶೋಧ