ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ.ಪಾಟೀಲ

New Delhi:

Font size:

ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ.ಪಾಟೀಲ

ನವದೆಹಲಿ: ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.

ಮೊದಲಿಗೆ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ಮಾಡಿದ ಸಚಿವರು, ನಂತರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಅಲ್ಲಿಂದ ಜೋಶಿ ಅವರ ಸಂಸತ್ತಿನ ಕಚೇರಿಗೆ ತೆರಳಿದ ಪಾಟೀಲರು, ಅವರ ಕಚೇರಿಯಲ್ಲಿ ಸಮಾವೇಶ ಕುರಿತು ರಾಜ್ಯದ ನಾಯಕರೊಂದಿಗೆ ಸಭೆ ನಡೆಸಿದರು.

ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಂಡ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದರು.

ಪಾಟೀಲ ಅವರು ಬುಧವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಕೇಂದ್ರ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ, ಸಮಾವೇಶಕ್ಕೆ ಆಹ್ವಾನಿಸಲಿದ್ದಾರೆ.

Prev Post ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ ಡಾ.ಶಾಲಿನಿ ರಜನೀಶ್ ಮುಖ್ಯ ಕಾರ್ಯದರ್ಶಿಗಳು,ಕರ್ನಾಟಕ ಸರ್ಕಾರ
Next Post ರಾಜಭವನದಲ್ಲಿ ರಾಜ್ಯ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತರು ಹಾಗೂ ಆಯುಕ್ತರ ಪ್ರಮಾಣ ಸ್ವೀಕಾರ ಸಮಾರಂಭ