ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

BANGALORE:

Font size:

ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಫೆ.13:

"ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.

ಬಿಎಂಆರ್ ಸಿಎಲ್ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ. ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು" ಎಂದು ತಿಳಿಸಿದರು

Prev Post ಕೋವಿಡ್ ಸಂದರ್ಭದ ಸಂಕಷ್ಟಗಳನ್ನು ಮುದ್ರಣ ಮಾಧ್ಯಮ ಜೀರ್ಣಿಸಿಕೊಂಡು ಮುಂದುವರೆದಿದೆ: ಕೆ.ವಿ.ಪಿ*
Next Post ಜಿಮ್: ವೋಲ್ವೊದಿಂದ 1,500 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ