Font size:
ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ
ನಗರದ ಮಾದವಾರ ಬಳಿ ಇರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIEC)ದಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟ್ಯೂರಿಸಂ ಸೊಸೈಟಿ ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಎರಡನೇ ಆವೃತ್ತಿಯ ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸ್ ಪೋ -2025ರ ಸಮಾವೇಶವನ್ನು ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ್ ರವರು ಉದ್ಘಾಟಿಸಿ, ಕರ್ನಾಟಕ ದ ವೈಶಿಷ್ಟತೆಗಳ ಬಗ್ಗೆ ಹಲವಾರು ಮಳಿಗೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದ ಕೊಂಡರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಂ.ನಾಗರಾಜು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಸಲ್ಮಾ ಕೆ.ಫಹೀಮ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಡಾ.ಕೆ.ವಿ ರಾಜೇಂದ್ರ, ರವರು ಸೇರಿದಂತೆ ಇತರರು ಉಪಸ್ಥಿತರಿದ್ದರು.








