ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ: ಸದುಪಯೋಗ ಪಡಿಸಿಕೊಳ್ಳಲು ಸಿಎಂ ಕರೆ*

Bangalore:

Font size:

ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ: ಸದುಪಯೋಗ ಪಡಿಸಿಕೊಳ್ಳಲು ಸಿಎಂ ಕರೆ

*ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ*

*ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ: ಸಿಎಂ*

ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ: ಸಿಎಂ ಕರೆ*

ಬೆಂಗಳೂರು ಫೆ 27: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು.
ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ.
ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ.
ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.

Prev Post ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ
Next Post ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ