ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

BANGALORE:

Font size:

ಖರ್ಗೆ ಅವರ ಮಾತಿಗೆ ನಾನು ಬದ್ಧನಾಗಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮಾ.03

“ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಡಿ.ಕೆ. ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದರ ಅಗತ್ಯವಿಲ್ಲ” ಎಂದು ಪ್ರತಿಕ್ರಿಯಿಸಿದರು.

Prev Post ಕರ್ನಾಟಕ ರಾಜ್ಯಪಾಲರ ರಾಜ್ಯ ವಿಧಾನ ಮಂಡಲದ ಭಾಷಣ (ದಿನಾಂಕ: 03-03-2025)
Next Post ಯಕ್ಷಗಾನ ನಮ್ಮ ದೇಶದ ಆಸ್ತಿ, ಅನುಮತಿ ಪ್ರಕ್ರಿಯೆ ಮತ್ತಷ್ಟು ಸರಳೀಕರಣ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್