ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ: ಡಿಸಿಎಂ ಡಿ.ಕೆ.ಶಿವಕುಮಾರ್

BANGALORE:

Font size:

ಪೆನ್ನಾರ್ ನದಿ ನೀರು ವಿವಾದ ಕುರಿತು ಚರ್ಚೆಗೆ ದೆಹಲಿ ಭೇಟಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾ.18:

“ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ ನೀಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು.

“ಪೆನ್ನಾರ್ ನದಿ ನೀರಿನ ವಿಚಾರವಾಗಿ ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿತ್ತು. ಆದರೆ ಸೋಮವಾರ ರಾತ್ರಿ ತಮಿಳುನಾಡಿನ ಪ್ರತಿನಿಧಿಗಳು ಬರುವುದಿಲ್ಲ, ಅವರು ಪ್ರತ್ಯೇಕವಾಗಿ ಮನವಿ ಸಲ್ಲಿಸುತ್ತಾರೆ ಎನ್ನುವ ಸಂದೇಶವಿದೆ. ಅಲ್ಲಿಗೆ ಹೋದಾಗ ಇದರ ಸತ್ಯಾಸತ್ಯತೆ ತಿಳಿಯುತ್ತದೆ. ಆದರೆ ನಾನು ಆಹ್ವಾನವನ್ನು ತಿರಸ್ಕರಿಸಬಾರದು ಎಂದು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ" ಎಂದರು.

"ಜೊತೆಗೆ ಇತರೇ ಇಲಾಖೆಗಳ ಸಚಿವರು, ಅರಣ್ಯ ಇಲಾಖೆಯ ಸಚಿವರನ್ನು ಸಮಯ ಸಿಕ್ಕರೆ ಭೇಟಿ ಮಾಡಿ ಚರ್ಚೆ ನಡೆಸಲಾಗುವುದು" ಎಂದು ಹೇಳಿದರು.

ಕಾಮಗಾರಿ ವೇಳೆ ವಿದ್ಯುತ್ ಕಂಬ ಬಿದ್ದು ಮಹಿಳೆಯರು ಮೃತಪಟ್ಟಿರುವ ವಿಚಾರದ ಬಗ್ಗೆ ಕೇಳಿದಾಗ, "ಕಾಮಗಾರಿ ಸ್ಥಳಗಳಲ್ಲಿ ಈ ರೀತಿಯ ಅವಘಡಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡುತ್ತೇನೆ" ಎಂದು ತಿಳಿಸಿದರು.

Prev Post ಅಂಬೇಡ್ಕರ್ ವಿರುದ್ದ ಜವಾಹರಲಾಲ್ ನೇಹರೂ ಪ್ರಚಾರ ಮಾಡಿ ಅವರನ್ನು ಸೋಲಿಸಿದ್ದು: ಬಸವರಾಜ ಬೊಮ್ಮಾಯಿ
Next Post ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ