ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ. ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ
ಬೆಂಗಳೂರು . ಏ. ೧೬.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದಿದ್ದಾರೆ.
ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.
ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇ.ಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ.
--------
ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ
ಕಲಬುರ್ಗಿ, ಏಪ್ರಿಲ್ 16: ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು.
ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ
ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು.
ಸಾಮಾಜಿಕ, ಆರ್ಥಿಕ ಸಮೀಕ್ಷೆ ಇದಾಗಿದ್ದು, ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತಿಳಿಸಿದರು.
ದಾವಣಗೆರೆ ಮಹಿಳೆಗೆ ಥಳಿತ ಪ್ರಕರಣ: ಕಾನೂನು ಉಲ್ಲಂಘಿಸಿದರೆ ಬಲಿ ಹಾಕುತ್ತೇವೆ
ದಾವಣಗೆರೆಯಲ್ಲಿ ಅನೈತಿಕ ಸಂಬಂಧ ಆರೋಪಿಸಿ ನಡುರಸ್ತೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಕೂಡ, ಕಾನೂನು ಉಲ್ಲಂಘಿಸಿದರೆ ಯಾರು ಎಷ್ಟೇ ಪ್ರಬಲವಾಗಿದ್ದರೂ, ಬಲಿ ಹಾಕುತ್ತೇವೆ ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿಯದ್ದು ದ್ವೇಷದ ರಾಜಕಾರಣ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ರಾಜಕೀಯ ಉದ್ದೇಶದಿಂದ ಇದನ್ನು ಮಾಡುತ್ತಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿನ್ನೆ ಮೊನ್ನೆ ಪ್ರಾರಂಭವಾಗಿಲ್ಲ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ಆಸ್ತಿ ಮುಟ್ಟುಗೋಲು ಹಾಕುವುದು, ಚಾರ್ಚ್ ಶೀಟ್ ಹಾಕುವುದು ರಾಜಕೀಯ ದ್ವೇಷದಿಂದ ಮಾಡುತ್ತಿದ್ದಾರೆ ಎಂದರು.