ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾದ ಪ್ರಧಾನಿ ಮೋದಿ: ಸಿ.ಎಂ.ವಾಗ್ದಾಳಿ

BANGALORE:

Font size:

ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ: ಸಿ.ಎಂ ಆಕ್ರೋಶ

ಬಿಜೆಪಿ ಯಾವ‌ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ಮಾತಾಡುತ್ತಿದೆ? 4ರೂ ಹಾಲಿನ ದರ ಹೆಚ್ಚಿಸಿ ಈ 4 ರೂಪಾಯಿಯನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಸರ್ಕಾರಕ್ಕೆ ಬರಲ್ಲ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ವಿಚಾರದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಆರೋಪ ಪಟ್ಟಿ ಹಾಕಿದ್ದನ್ನು ತೀವ್ರವಾಗಿ ಖಂಡಿಸಿದ ಸಿಎಂ

RSS ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ಹೀಗಾಗಿ ಈ RSS ಪರಿವಾರಕ್ಕೆ ಭಾರತದ ಬೆಲೆಯೂ ಗೊತ್ತಿಲ್ಲ. ಸ್ವಾತಂತ್ರ್ಯದ ಬೆಲೆಯೂ ಗೊತ್ತಿಲ್ಲ: ಸಿ.ಎಂ ಟೀಕೆ

RSS ನವರ ದೇಶದ್ರೋಹದ ವಿರುದ್ಧ ಮತ್ತೊಂದು ಸ್ವಾತಂತ್ರ್ಯ ಹೋರಾಟದ ಮಾದರಿ ದೇಶಾದ್ಯಂತ ನಡೆಸೋಣ. ಸಜ್ಜಾಗಿ: ಕಾರ್ಯಕರ್ತರಿಗೆ ಮುಖ್ಯಮಂತ್ರಿ ಕರೆ

ಬೆಂಗಳೂರು ಏ 17:

ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.

ಭಾಷಣದ ಇತರೆ ಹೈಲೈಟ್ಸ್...

ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ

ಸುಳ್ಳೇ ಬಿಜೆಪಿಯ ಮನೆ ದೇವರು. RSS ಸುಳ್ಳಿನ ಮಹಾ ಕಾರ್ಖಾನೆ

ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ

*ನಾವು ಸುಳ್ಳಿನ ಕಾರ್ಖಾನೆ RSS ನ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು

ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ

ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ?

*ರಾಜ್ಯದ ಉದ್ದಗಲಕ್ಕೂ

ಹಾಲಿನ ಬೆಲೆ 4 ರೂ ಹೆಚ್ಚಳ ಮಾಡಿರುವುದು ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ

Prev Post ಬೆಂಗಳೂರು-ವಿಜಯಪುರ ರೈಲು ಪ್ರಯಾಣ: 14ರಿಂದ 10 ಗಂಟೆಗೆ ಇಳಿಸಲು ತ್ವರಿತ ಕ್ರಮಕ್ಕೆ ಎಂ.ಬಿ.ಪಾಟೀಲ ಸೂಚನೆ
Next Post ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ*