21.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

Bangalore:

Font size:

21.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ, ಮುಂಜಾನೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ( ಇವತ್ತು ಮುಂಜಾನೆ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗಿದೆ). ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ, ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಸುತ್ತಮುತ್ತ ಸಂಜೆ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಬಳ್ಳಾರಿ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ದಾವಣಗೆರೆಯ ಒಂದೆರಡು ಕಡೆಯೂ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಸಂಜೆ, ರಾತ್ರಿ ವೇಳೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 21ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಎಪ್ರಿಲ್ 25ರಿಂದ ಮತ್ತೆ ಮಳೆಯ ಮುನ್ಸೂಚೆನೆ ಇದೆ.

ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಕಡಿಮೆಯಾಗುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಅಂದರೆ ಪೂರ್ವ ದಿಕ್ಕಿನಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಾಗುವ ಲಕ್ಷಣಗಳಿವೆ.

Prev Post ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
Next Post ಸಮಾಜದ ನಾಲ್ಕೂ ಅಂಗಗಳ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ: ಸಿ.ಎಂ ಸಿದ್ದರಾಮಯ್ಯ