26.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

karnataka state whether:

Font size:

26.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಖೆಯೊಂದಿಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕರಾವಳಿ ತೀರದವರೆಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಮಧ್ಯಾಹ್ನ ನಂತರ ಪಶ್ಚಿಮದ ಗಾಳಿಯ ಪ್ರಭಾವ ಹೆಚ್ಚಾಗುವುದರಿಂದ ಕರಾವಳಿಯಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು, ಆಗುಂಬೆ, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 27ರಿಂದ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಮುನ್ಸೂಚನೆಯಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

Prev Post ಲಾಜಿಸ್ಟಿಕ್ಸ್ ವೆಚ್ಚದಲ್ಲಿ ಮಿತವ್ಯಯ ಅತ್ಯಗತ್ಯ: ಎಂ ಬಿ ಪಾಟೀಲ ಸ್ಟೀಲ್ ಇಂಡಿಯಾ-2025’ ಸಮಾವೇಶದಲ್ಲಿ ಭಾಗಿ
Next Post ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ