ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರಿಂದ ಬಸವ ಜಯಂತಿಯ ಶುಭಾಶಯಗಳು

Banglore:

Font size:

ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರಿಂದ ಬಸವ ಜಯಂತಿಯ ಶುಭಾಶಯಗಳು

ದೇವಸ್ಥಾನಗಳನ್ನು ನಿರಾಕರಿಸಿ, ದೇವರ ಕಲ್ಪನೆಯನ್ನು ಮನುಷ್ಯನ ಶರೀರಕ್ಕೆ ಸ್ಥಳಾಂತರಗೊಳಿಸಿ, ದೇಹವನ್ನೇ ದೇವಾಲಯವನ್ನಾಗಿ ಮಾಡಿದವರು ಬಸವಣ್ಣ.

ಪುರೋಹಿತಶಾಹಿ ಕಲ್ಪಿಸಿದ ಸ್ವರ್ಗ - ನರಕಾದಿ ಶೋಷಕ ತಂತ್ರಗಳನ್ನು ಧಿಕ್ಕರಿಸಿ ಇಹದ ಬದುಕಿನ ಮೇಲಿನ ಪ್ರೀತಿಯನ್ನು ಮೂಢಿಸಿದ, ಅನೇಕ ಅವೈಚಾರಿಕವಾದ ಆಚರಣೆಗಳನ್ನೂ ಮೂಢನಂಬಿಕೆಗಳನ್ನು ತಿರಸ್ಕರಿಸಿದ, ವೃತ್ತಿಯ ತಾರತಮ್ಯಗಳ ಮೇಲಿನಿಂದ ಮನುಷ್ಯನ ಸಾಮಾಜಿಕ ಅಂತಸ್ತನ್ನು ಪರಿಗಣಿಸದೆ ಕಾಯಕವೆಲ್ಲವೂ ಪೂಜ್ಯವೆಂದು ಸಾರಿದವರು ಬಸವಣ್ಣ.

ನಾವಿಂದು ಸಂಘರ್ಷಮಯವಾದ ಸಾಮಾಜಿಕ ಮತ್ತು ರಾಜಕೀಯ ವ್ಯವಸ್ಥೆಯ ಬಂಧಿಯಾಗಿದ್ದೇವೆ. ನಾ‍ಲ್ಕು ದಿಕ್ಕುಗಳಿಂದಲೂ ಹಿಂಸೆ, ಸೇಡು, ಪ್ರತಿಕಾರಗಳ ಘೋಷಣೆಗಳು ಮೊಳಗುತ್ತಿರುವ ಈ ಕಾಲದಲ್ಲಿ ಬಸವಣ್ಣನವರು ನೀಡಿದ್ದ ‘‘ದಯೆಯೇ ಧರ್ಮದ ಮೂಲವಯ್ಯಾ’’ ಎಂಬ ಶಾಂತಿ-ಸೌಹಾರ್ದತೆಯ ಮಂತ್ರವನ್ನು ನಾವೆಲ್ಲರೂ ಮನನ ಮಾಡಿಕೊಳ್ಳಬೇಕಾಗಿದೆ.

ಅಂತಹ ಅರಿವಿನ ಬೆಳಕನ್ನು ನಮ್ಮೆಲ್ಲರಲ್ಲಿಯೂ ಬಸವಣ್ಣ ಮೂಡಿಸಲಿ ಎಂದು ಹಾರೈಸುತ್ತೇನೆ.
ನಾಡಬಂಧುಗಳಿಗೆ ಬಸವ ಜಯಂತಿಯ ಶುಭಾಶಯಗಳು.

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಏಪ್ರಿಲ್ 30:
ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದ

Prev Post ಕೇಂದ್ರ ಸರ್ಕಾರ ಭಾರತೀಯರನ್ನು ಸುಳ್ಳಿನ ಪ್ರವಾಹದಲ್ಲಿ ಮುಳುಗಿಸಿ ಬೆಲೆ ಏರಿಕೆಯ ಬರೆ ಹಾಕುತ್ತಿದೆ: ಸಿ.ಎಂ ಸಿದ್ದರಾಮಯ್ಯ
Next Post * ಬಸವಣ್ಣನ ತತ್ವ ಆದರ್ಶಗಳು ಆಚರಣೆಗೆ ಸೀಮಿತವಾಗಬಾರದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್