ಸುಹಾಸ್ ಶೆಟ್ಟಿ ಹತ್ಯೆ ಪೊಲೀಸರ ನೇರ ಕೈವವಾಡ - ಶಾಸಕ ಕೋಟ್ಯಾನ್ ಆರೋಪ
from Jayaram Udupi
ಮಂಗಳೂರು: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ನೇರ ಕೈವಾಡವಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಜತೆಗೆ ಬಜ್ಪೆ ಪೊಲೀಸ್ ಠಾಣೆಯ ಪೊಲೀಸರ ಸಹಕಾರದಿಂದ ಈ ಹತ್ಯೆ ನಡೆಸಲಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಶಾಸಕ ಉಮಾನಾಥ ಕೋಟ್ಯಾನ್, ಸಮಗ್ರ ತನಿಖೆಗಾಗಿ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಸುಹಾಸ್ ಹತ್ಯೆ ನಡೆದ ಸ್ಥಳದಲ್ಲಿ ೨೫ ಮಂದಿ ಇದ್ದು, ಆರೋಪಿಗಳಿಗೆ ರಕ್ಷಣೆ ನೀಡಿದ್ದಾರೆ. ಸುತ್ತಲೂ ಕೋಟೆ ನಿರ್ಮಾಣ ಮಾಡಿ ಸುಹಾಸ್ ಹತ್ಯೆ ನಡೆಸಲು ಬಿಟ್ಟಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಈ ಹತ್ಯೆ ನಡೆದಿದೆ. ಬುರ್ಖಾಧಾರಿ ಮಹಿಳೆಯರೂ ಆರೋಪಿಗಳನ್ನು ಪಾರು ಮಾಡಿದ್ದಾರೆ. ಹತ್ಯೆಗೂ ಮುನ್ನವೇ ಪೊಲೀಸರು ಹಾಗೂ ಆರೋಪಿಗಳ ನಡುವೆ ಒಡಂಬಡಿಕೆ ಆಗಿತ್ತು. ಆದ್ದರಿಂದಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರೂ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುಹಾಸ್ ಶೆಟ್ಟಿ ಅವರ ರಕ್ಷಣೆಗೆ ಮುಂದಾಗಿಲ್ಲ. ಒಡಂಬಡಿಕೆಯ ಭಾಗವಾಗಿ ಪೊಲೀಸರು ನಡೆದುಕೊಂಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು.
ಜಿಲ್ಲೆಗೆ ಆಗಮಿಸಿದ ಗೃಹ ಸಚಿವರು, ಉಸ್ತುವಾರಿ ಸಚಿವರು ಸ್ಥಳೀಯ ಶಾಸಕರನ್ನು ಸಭೆಗೆ ಆಹ್ವಾನಿಸಿಲ್ಲ. ಆದರೆ, ಮುಸ್ಲಿಂ ಮುಖಂಡರ ಜತೆ ಸಭೆ ನಡೆಸಿದ್ದಾರೆ. ಹತ್ಯೆಯಾದ ಸುಹಾಸ್ ಶೆಟ್ಟಿ ಮನೆಗೂ ತೆರಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಜ್ಪೆಯಲ್ಲಿ ಹಿಂದುವಿನ ಕೊಲೆ ಆಗಿದೆ. ಆದರೆ, ಪೊಲೀಸರು ರಾತ್ರಿ ವೇಳೆ ಮಹಿಳೆಯರು ಇರುವ ಹಿಂದುಗಳ ಮನೆ ಮೇಲೆಯೇ ದಾಳಿ ನಡೆಸಿ ಬೆದರಿಸುತ್ತಿದ್ದಾರೆ. ಮೂಡುಶೆಡ್ಡೆಯಲ್ಲಿ ಪ್ರದೀಪ್ ಎಂಬವರ ಮನೆಗೆ , ಕಳವಾರಿನ ಮನೆಯೊಂದಕ್ಕೆ ರಾತ್ರಿ ಪೊಲೀಸರು ತೆರಳಿದ್ದಾರೆ. ಯಾವ ಮುಸಲ್ಮಾನರ ಮನೆಗೂ ಪೊಲೀಸರು ರಾತ್ರಿ ಹೋಗಿಲ್ಲ ಎಂದರು.
ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ರೌಡಿಶೀಟರ್ ಎಂದು ಆರೋಪಿಸಲಾಗುತ್ತಿದೆ. ಒಂದು ಪ್ರಕರಣವಿದ್ದರೂ ಪೊಲೀಸರು ರೌಡಿಶೀಟರ್ ಹಾಕುತ್ತಾರೆ. ಹಾಗಿದ್ದಲ್ಲಿ ರೌಡಿಶೀಟರ್‌ನನ್ನು ಕೊಲ್ಲಲು ಪೊಲೀಸರು ರೌಡಿಗಳನ್ನು ಕಳುಹಿಸಬಹುದೇ ಎಂದು ಪ್ರಶ್ನಿಸಿದರು.
ಸ್ಪೀಕರ್ ಸ್ಥಾನದಲ್ಲಿದ್ದವರು ರಾಜಕೀಯ ಮಾಡಬಾರದು. ಆದರೆ, ಯು.ಟಿ. ಖಾದರ್ ಅವರು ಸದಾ ಸುದ್ದಿಗೋಷ್ಠಿ ನಡೆಸುತ್ತಿರುತ್ತಾರೆ. -ಝಿಲ್ ಕುಟುಂಬದ ಪರವಾಗಿ ಮಾತನಾಡಿದ ಖಾದರ್, -ಝಿಲ್ ಸಹೋದರ ಆರೋಪಿಯಾದ ಬಳಿಕ ಏನು ಹೇಳುತ್ತಾರೆ? ಎಂದರು.
ಶಾಸಕ ಹರೀಶ್ ಪೂಂಜ ಅವರ ಶಾಸಕ ಸ್ಥಾನ ಅನರ್ಹತೆಗೆ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಅವರ ಮೇಲೆ ವಿನಾಕಾರಣ ಪ್ರಕರಣ ದಾಖಲಿಸಲಾಗುತ್ತಿದೆ. ಪೂಂಜ ಅವರನ್ನು ಅನರ್ಹಗೊಳಿಸಿ ನೋಡಲಿ ಎಂದರು.
ಬಜ್ಪೆ ಬಳಿಯ -ಪ್ಲ್ಯಾಟ್‌ವೊಂದರಲ್ಲಿ ಹತ್ಯೆ ಪ್ರಕರಣದ ಆರೋಪಿಗಳು ವಾಸಿಸುತ್ತಿದ್ದಾರೆ. ಪ್ರಶಾಂತ್, ಸುಖಾನಂದ ಶೆಟ್ಟಿ ಹತ್ಯೆ ಆರೋಪಿಗಳು ಇದೇ -ಟ್‌ನಲ್ಲಿ ಇದ್ದರು. ಸುಹಾಸ್ ಕೊಲೆ ಆರೋಪಿಗಳು ಕೊಲೆಗೂ ಮುನ್ನ ವ್ಯವಸ್ಥಿತ ಯೋಜನೆ ರೂಪಿಸಿ ಇದೇ -ಟ್‌ನಿಂದ ತೆರಳಿದ್ದಾರೆ. ಪೊಲೀಸರು ಇದುವರೆಗೆ ಈ -ಟ್‌ಗೆ ತೆರಳಿ ಪರಿಶೀಲನೆ ನಡೆಸಿಲ್ಲ ಎಂದು ಆರೋಪಿಸಿದ ಅವರು, ಮಂಗಳೂರು ನಗರ ಪೊಲೀಸ್ ಆಯುಕ್ತರಂತಹ ಅಽಕಾರಿಯನ್ನು ನಾನು ಇದುವರೆಗೆ ನೋಡಿಲ್ಲ. ಎಲ್ಲದರಲ್ಲೂ ಅವರು ಡೀಲಿಂಗ್ ನಡೆಸುತ್ತಿದ್ದಾರೆ. ಮರಳುಗಾರಿಕೆ, ಇಸ್ಪೀಟ್, ಸಿಂಗಲ್ ನಂಬರ್ ಗೇಮ್ ಅವ್ಯಾಹತವಾಗಿ ನಡೆಯುತ್ತಿದೆ. ಕಮಿಷನರ್‌ಗೆ ಹಣ ನೀಡಬೇಕು ಎಂದು ಸಾಮಾನ್ಯ ಪೇದೆಯೂ ಹೇಳುತ್ತಿದ್ದಾರೆ ಎಂದರು.
ಸುಹಾಸ್ ಶೆಟ್ಟಿ ಅವರು ಆತ್ಮರಕ್ಷಣೆಗಾಗಿ ತನ್ನ ವಾಹನದಲ್ಲಿ ಇರಿಸಿಕೊಂಡಿದ್ದ ಆಯುಧಗಳನ್ನು ಪೊಲೀಸರು ಒತ್ತಾಯಪೂರ್ವಕವಾಗಿ ತೆಗೆಸಿದ್ದರು. ಪೊಲೀಸರ ಸಹಕಾರದಿಂದಲೇ ಈ ಕೊಲೆ ಆಗಿದೆ. ಆರೋಪಿಗಳನ್ನು ಪೊಲೀಸರು ಹಿಡಿದಿಲ್ಲ. ಒಡಂಬಡಿಕೆಯ ಭಾಗವಾಗಿ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಬಂಧನವಾದ ಬಳಿಕ ಪೊಲೀಸರು ಆರೋಪಿಗಳ ಮೈಮುಟ್ಟಿಲ್ಲ. ಸುಹಾಸ್ ಹತ್ಯೆಗೆ -ಝಿಲ್ ಸಹೋದರ ಐದು ಲಕ್ಷ ರೂ. ನೀಡಿದ್ದ ಎಂದು ಹೇಳಲಾಗಿದೆ. ಆದರೆ, ದುಬೈನಿಂದ ೫೦ ಲಕ್ಷ ರೂ. ಹಣ ನೀಡಲಾಗಿದೆ ಎಂದು ಉಮಾನಾಥ ಕೋಟ್ಯಾನ್ ಆಪಾದಿಸಿದರು.
ಬಜ್ಪೆ, ಸುರತ್ಕಲ್, ಪಣಂಬೂರು ಪೊಲೀಸ್ ಠಾಣೆಯ ಕೆಲ ಪೊಲೀಸರ ಮೊಬೈಲ್ ಕರೆಗಳನ್ನು ಪರಿಶೀಲಿಸಿದರೆ ಈ ಕೊಲೆಗೆ ಪೊಲೀಸರ ಸಹಕಾರ ಹಾಗೂ ಕೊಲೆ ಹಿಂದೆ ಯಾರಿದ್ದಾರೆ ಎಂಬುದು ಬಹಿರಂಗವಾಗಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಶಾಂತಿಪ್ರಸಾದ್ ಹೆಗ್ಡೆ, ಮುಖಂಡರಾದ ಈಶ್ವರ ಕಟೀಲ್, ದಿನೇಶ್, ರಂಜಿತ್, ರಾಜೇಶ್, ವಿಜಯ್, ಅರುಣ್ ಶೇಟ್ ಉಪಸ್ಥಿತರಿದ್ದರು.
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸಲು ಕಾಂಗ್ರೆಸ್ ಸರ್ಕಾರ ನಿರಾಕರಿಸುತ್ತಿರುವುದು, ಹಿಂದೇಟು ಹಾಕುತ್ತಿರುವುದು ಆತಂಕಕ್ಕೆ ಹಾಗೂ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಈ ನಿರಾಕರಣೆ ನಡೆಯು ಕೇವಲ ಆಡಳಿತಾತ್ಮಕ ವಿಳಂಬ ಮಾತ್ರವಲ್ಲ. ರಾಜ್ಯ ಸರ್ಕಾರದ ಆಶ್ರಯದಲ್ಲಿ ಬೆಳೆಯುತ್ತಿರುವ ಇಸ್ಲಾಮಿಕ್ ಮೂಲಭೂತವಾದಿ ಶಕ್ತಿಗಳೊಂದಿಗಿನ ಮೈತ್ರಿಯನ್ನು ರಕ್ಷಿಸಲು ದುರುದ್ದೇಶಪೂರ್ವಕವಾಗಿ ತನಿಖೆ ತಡೆಯುವ ಪ್ರಯತ್ನದ ಪ್ರತಿಬಿಂಬಿವಾಗಿದೆ ಎಂದರು.
ಸುಹಾಸ್ ಶೆಟ್ಟಿ ಪ್ರಕರಣದ ಪಾರದರ್ಶಕ ತನಿಖೆಯಾಗಬೇಕು ಮತ್ತು ಇದನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಒಪ್ಪಿಸಬೇಕು. ಇದೊಂದು ಕೊಲೆ ಪ್ರಕರಣ ಮಾತ್ರವಲ್ಲ , ಕರ್ನಾಟಕ ವನ್ನು ವಿಷಪೂರಿತಗೊಳಿಸುವ ,ರಕ್ತ ಸಿಕ್ತಗೊಳಿಸುವ ಪ್ರಕರಣವಾಗಿದೆ. ಜನರ ವಿಶ್ವಾಸ ಗಳಿಸಲು ಈ ಪ್ರಕರಣವನ್ನು ಎನ್ ಐಎಗೆ ಒಪ್ಪಿಸುವುದು ಸೂಕ್ತ ಎಂದರು.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನ್ಯಾಯೋಚಿತ ತನಿಖೆಗೆ ಬೆಂಬಲ ನೀಡಬೇಕಾಗಿದ್ದ ಸ್ಫೀಕರ್ ತನಿಖೆಯ ಆರಂಭದ ಮೊದಲೇ ತನಿಖೆಯ ದಾರಿ ತಪ್ಪಿಸುವ ರೀತಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಸುಹಾಸ್ ಕೊಲೆ ಪ್ರಕರಣದ ಓರ್ವ ಆರೋಪಿಯಾಗಿರುವ ವ್ಯಕ್ತಿಯನ್ನು ಸಮರ್ಥಿಸಿಕೊಂಡು ಕ್ಲೀನ್ ಚಿಟ್ ನೀಡಿರುವುದು ಅಚ್ಚರಿ ಮೂಡಿಸಿದೆ. ಸ್ಪೀಕರ್ ಗೆ ಕ್ಲೀನ್ ಚಿಟ್ ನೀಡುವ ಆತುರತೆ ಏನಿತ್ತು ಎಂದು ಪ್ರಶ್ನಿದರು.
ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಕರಣಗಳು ಇಸ್ಲಾಮಿಕ್ ಮೂಲಭೂತವಾದ ಮತ್ತು ರಾಷ್ಟ್ರೀಯತೆಯ ಮಧ್ಯೆ ನಡೆಯುವ ಹೋರಾಟವಾಗಿದೆ. ಇದನ್ನು ಕೇವಲ ಕಮ್ಯುನಲ್ ಹೋರಾಟ, ವೈಯಕ್ತಿಕ ದ್ವೇಷ, ರಿವೇಂಜ್ ಕ್ಲಿಲ್ಲಿಂಗ್ ಎಂದು ಬಾಲಿಶವಾಗಿ ಮಾತನಾಡಬಾರದು.
ರಾಷ್ಡ್ರವಿರೋಧಿ, ಇಸ್ಲಾಮಿಕ್ ಮೂಲಭೂತವಾದ, ಜಿಹಾದಿ ಎಲಿಮೆಂಟ್ ಗಳ ಪಾತ್ರವನ್ನು ಮರೆಮಾಚುವ ಪ್ರಯತ್ನ ವನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಪಿಎಫ್ ಐ ಕಾರ್ಯಕರ್ತರಿಗೆ ಲಾಜೆಸ್ಟಿಕ್ ಮತ್ತು ಹಣದ ವ್ಯವಸ್ಥೆ ಆಗುತ್ತಿದೆ ಎಂದು ಇಂಡಿಯಾ ಟುಡೇ ಪತ್ರಿಕೆಯಲ್ಲಿ ಪ್ರಕಟವಾಗಿತ್ತು ಎಂದು ಅವರು ಹೇಳಿದರು. ಪಿಎಫ್‌ಐ ಚಟುವಟಿಕೆಗಳಿಗೆ ಕರ್ನಾಟಕವನ್ನು ಸುರಕ್ಷಿತ ತಾಣವಾಗಿ ರಾಜ್ಯ ಸರಕಾರ ಮಾಡುತ್ತಿದೆ. ಕಾಂಗ್ರೆಸ್ ಸರಕಾರದ ಮಾದರಿ ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಪ್ರತಿಬಿಂಬಿತವಾಗಿದೆ. ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡುವಲ್ಲಿ ಉತ್ಸಾಹ ತೋರಿದ ಕಾಂಗ್ರೆಸ್ ನಾಯಕರು ಸುಹಾಸ್ ಶೆಟ್ಟಿಗೆ ರೌಡಿಶೀಟರ್ ಎಂಬ ಹಣೆಪಟ್ಟಿ ಕಟ್ಟಿ ಪ್ರಕರಣದ ಸೈದ್ಧಾಂತಿಕ ವಾಸ್ತವಿಕ ತೆಯನ್ನು ಮರೆಮಾಚುವ ಪ್ರಯತ್ನ ನಡೆಸಿದರು. ಇದು ದ.ಕ ಮತ್ತು ಕರಾವಳಿ ಜನರ ಮೇಲೆ ಕಾಂಗ್ರೆಸ್ ಮಾಡಿರುವ ದ್ರೋಹದ ಪ್ರಕ್ರಿಯೆ ಯ ಮುಂದುವರಿದ ಭಾಗ ಎಂದು ಬಣ್ಣಿಸಿದರು.
ಆರಂಭದಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ವೈಯಕ್ತಿಕ, ಬಳಿಕ ಕಮ್ಯುನಲ್ ಪ್ರಕರಣವನ್ನು ಬಿಂಬಿಸಲಾಯಿತು ಎಂದರು.
ಬಿಜೆಪಿ ನಾಯಕರಾದ ಹರಿಕೃಷ್ಣ ಬಂಟ್ವಾಳ, ಪ್ರೇಮಾನಂದ ಶೆಟ್ಟಿ, ವಕ್ತಾರ ಅರುಣ್ ಶೇಟ್, ವಸಂತ ಪೂಜಾರಿ, ಪ್ರಶಾಂತ್ ಪಾರೆಂಕಿ ಉಪಸ್ಥಿತರಿದ್ದರು.