ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭೇಟಿ

Sulya , Mangalore:

Font size:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಕೊರಗಜ್ಜ ದೇವಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತಂಬಿಲ ಸೇವಾ ಕಾರ್ಯದಲ್ಲಿ ಬಿಜೆಪಿ ಅದ್ಯಕ್ಷರಾದ ವಿಜಯೇಂದ್ರ ಭಾಗವಹಿಸಿ ಗುಳಿಗ ದೈವದ ಆಶೀರ್ವಾದ ಪಡೆದರು.

ತುಳುನಾಡಿನ ಆರಾಧನಾ ಪರಂಪರೆಯಲ್ಲಿ ದೈವದ ಆರಾಧನೆಗೆ ಪರಮಪವಿತ್ರ ಆಚರಣೆಯಲ್ಲಿ ರಾಷ್ಟ್ರದ ಅಭಿವೃದ್ಧಿ ಹಾಗೂ ಸುಭದ್ರತೆಗಾಗಿ ಮೂರನೇ ಬಾರಿ ಹೆಮ್ಮೆಯ ಪ್ರಧಾನಿ ಶ್ರೀ Narendra Modi ಯವರು ಪ್ರಧಾನಿಗಳಾಗಿ ಆಯ್ಕೆಯಾಗಲೆಂದು ನಮ್ಮ ಕಾರ್ಯಕರ್ತರು ಸಂಕಲ್ಪ ಮಾಡಿಕೊಂಡಿದ್ದ ವಿಶೇಷ ಹರಕೆಯ ಶ್ರೀ ಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳಿಗೆ ತುಂಬಿಲಸೇವೆ ಸಲ್ಲಿಸಿ ದೈವದ ಕೃಪೆಗೆ ಪಾತ್ರರಾದೆವು. ಶ್ರೀ ದೈವದ ಪ್ರಸಾದವನ್ನು ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ತಲುಪಿಸಲಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಎಸ್.ಅಂಗಾರ, ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಶ್ರೀ Harish Poonja , ಸಂಸದರಾದ ಶ್ರೀ Captain Brijesh Chowta , ಶಾಸಕರಾದ ಕು ಭಾಗೀರಥಿ ಮರುಳ್ಯ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮಂಡಲ ಮತ್ತು ಶಕ್ತಿಕೇಂದ್ರ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Prev Post ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ- ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ
Next Post ಮನೆ ಬಾಗಿಲಿಗೆ ಖಾತೆಯನ್ನು ಹಂಚುವ ವಿಷಯದಲ್ಲಿ ಶೇ. 60ರಷ್ಟು ಪ್ರಗತಿಯನ್ನು ಸಾಧಿಸಿದ್ದೇವೆ. : ಡಿ . ಕೆ ಶಿವಕುಮಾರ್