PRABHAVAA.COM

₹200 ಕೋಟಿ ಹೂಡಿಕೆ: ಸಚಿವ ಎಂ.ಬಿ.ಪಾಟೀಲ ಸಮ್ಮುಖದಲ್ಲಿ ಬೇಯರ್ ಕಂಪನಿ ಜತೆ ಒಪ್ಪಂದಕ್ಕೆ ಸಹಿ

Bengaluru Urban:

Font size:

₹200 ಕೋಟಿ ಹೂಡಿಕೆ: ಸಚಿವ ಎಂ.ಬಿ.ಪಾಟೀಲ ಸಮ್ಮುಖದಲ್ಲಿ ಬೇಯರ್ ಕಂಪನಿ ಜತೆ ಒಪ್ಪಂದಕ್ಕೆ ಸಹಿ

₹200 ಕೋಟಿ ಹೂಡಿಕೆ: ಸಚಿವ ಎಂ.ಬಿ.ಪಾಟೀಲ ಸಮ್ಮುಖದಲ್ಲಿ ಬೇಯರ್ ಕಂಪನಿ ಜತೆ ಒಪ್ಪಂದಕ್ಕೆ ಸಹಿ

ಬೆಂಗಳೂರು: ಆರೋಗ್ಯ ಸೇವೆ ಮತ್ತು ಕೃಷಿ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದ ಕಂಪನಿಯಾಗಿರುವ ಜರ್ಮನಿ ಮೂಲದ ಬೇಯರ್ ಸೈನ್ಸ್ ಅಂಡ್ ಇನ್ನೋವೇಶನ್ ಬೆಂಗಳೂರಿನ ಸಮೀಪ ತನ್ನ ಅತ್ಯಾಧುನಿಕ ಉತ್ಪಾದನಾ ಸ್ಥಾವರ ಅಭಿವೃದ್ಧಿಗೆ ₹200 ಕೋಟಿ ಹೂಡಿಕೆ ಮಾಡಲಿದ್ದು, ಈ ಸಂಬಂಧ ಅದು ಶುಕ್ರವಾರ ಸರಕಾರದೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ಇದು ನೆರವೇರಿತು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಬೇಯರ್ ಕಂಪನಿಯ ಸಿಎಫ್ಒ ವಿನೀತ್ ಜಿಂದಾಲ್ ಒಡಂಬಡಿಕೆಗೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲರು, ಬೇಯರ್ ಕಂಪನಿಯು ಮುಂದಿನ 7 ವರ್ಷಗಳಲ್ಲಿ ಹಂತಹಂತವಾಗಿ ಈ ಹೂಡಿಕೆ ಮಾಡಲಿದೆ. ಇದರಿಂದ 220 ಉದ್ಯೋಗಗಳು ಸೃಷ್ಟಿಯಾಗಲಿವೆ. ತಾವು ಇತ್ತೀಚೆಗೆ ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ನೆದರ್ಲೆಂಡ್ಸ್ ಪ್ರವಾಸ ಕೈಗೊಂಡಿದ್ದಾಗ ಆಮ್ಸ್ಟರ್ ಡ್ಯಾಮ್ ನಲ್ಲಿ ಕಂಪನಿಯ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಗಿತ್ತು ಎಂದಿದ್ದಾರೆ.

ರಸಗೊಬ್ಬರ, ಕೀಟನಾಶಕ ಮತ್ತು ಶಿಲೀಂದ್ರನಾಶಕ ಮುಂತಾದವನ್ನು ಉತ್ಪಾದಿಸುವ ಈ ಕಂಪನಿಯು ಹೂಡಿಕೆಯಿಂದ 220 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಂಪನಿಯು ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೂ ಮೊದಲೇ ಯೋಜನೆಯ ಭೂಮಿಪೂಜೆ ನೆರವೇರಿಸಲು ಬಯಸಿದ್ದು, ತ್ವರಿತವಾಗಿ ತಯಾರಿಕೆ ಚಟುವಟಿಕೆಗಳನ್ನು ಆರಂಭಿಸಲು ಉತ್ಸುಕವಾಗಿದೆ. ಕಂಪನಿಯು ಈಗಾಗಲೇ ಬೆಂಗಳೂರಿನಲ್ಲಿ ತನ್ನ ಸೇವಾ ಮತ್ತು ನಾವೀನ್ಯತೆಯ ಹಬ್ ಹಾಗೂ ಚಾಮರಾಜ ನಗರದಲ್ಲಿ ಬೆಳೆ ಪರೀಕ್ಷಾ ಕೇಂದ್ರವನ್ನು ಹೊಂದಿದೆ. ಭಾರತದಲ್ಲಿ ಇದು 125 ವರ್ಷಗಳಿಂದಲೂ ಇದ್ದು 11 ಸಾವಿರ ಜನರಿಗೆ ಕೆಲಸ ಕೊಟ್ಟಿದೆ. ದೇಶದಲ್ಲಿ ಬೇಯರ್ ಕಂಪನಿಯು 7 ಉತ್ಪಾದನಾ ಸ್ಥಾವರಗಳು ಮತ್ತು 3 ಜಿಇಸಿ ಕೇಂದ್ರಗಳನ್ನು ಹೊಂದಿದೆ ಎಂದು ಅವರು ನುಡಿದಿದ್ದಾರೆ.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಖುಷ್ಬೂ ಗೋಯಲ್ ಚೌಧರಿ, ಕೆಐಎಡಿಬಿ ಗೋವಿಂದ ರೆಡ್ಡಿ ಉಪಸ್ಥಿತರಿದ್ದರು.

Comments

Leave a Comment

Prev Post ಬಿಜೆಪಿಗೂ ಮೆಟ್ರೋ ಉದ್ಘಾಟನೆಗೂ ಏನು ಸಂಬಂಧ: ಸಿಎಂ ಡಿ ಕೆ ಶಿವಕುಮಾರ್
Next Post ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ, ಸ್ವಾವಲಂಬನೆಯ ಬದುಕಿಗೆ ಭರವಸೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News