PRABHAVAA.COM

ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ, ಸ್ವಾವಲಂಬನೆಯ ಬದುಕಿಗೆ ಭರವಸೆ

Bengaluru Urban:

Font size:

ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ, ಸ್ವಾವಲಂಬನೆಯ ಬದುಕಿಗೆ ಭರವಸೆ

ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ, ಸ್ವಾವಲಂಬನೆಯ ಬದುಕಿಗೆ ಭರವಸೆ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ. ಶಿವಕುಮಾರ್ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ "ಗೃಹಲಕ್ಷ್ಮಿ" ಯೋಜನೆಯ ಫಲಾನುಭವಿಗಳೊಂದಿಗೆ ಆತ್ಮೀಯ ಸಂವಾದ ನಡೆಸಿದರು. ಈ ವೇಳೆ ಮಹಿಳೆಯರು ಈ ಯೋಜನೆಯಿಂದ ತಮ್ಮ ಬದುಕಿನಲ್ಲಿ ಮೂಡಿರುವ ಬದಲಾವಣೆಗಳು, ತಮಗೆ ದೊರೆತಿರುವ ಆರ್ಥಿಕ ಸ್ವಾತಂತ್ರ್ಯ ಹಾಗೂ ವೈಯಕ್ತಿಕ ಅನುಭವಗಳನ್ನು ಮುಖ್ಯಮಂತ್ರಿಗಳೊಂದಿಗೆ ಹಂಚಿಕೊಂಡರು.

ಬಳಿಕ ಫಲಾನುಭವಿಗಳು ತಾವೇ ಕೈಯಾರೆ ತಯಾರಿಸಿದ್ದ ಪುಟ್ಟದಾದ ತೊಟ್ಟಿಲು, ದೀಪ ಸೇರಿದಂತೆ ವಿವಿಧ ಕರಕುಶಲ ವಸ್ತುಗಳನ್ನು ಮುಖ್ಯಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದರು. ಮಹಿಳೆಯರ ಕೈಯಲ್ಲಿ ಅರಳಿದ ಸೃಜನಶೀಲತೆ, ಅವರ ಮಾತುಗಳಲ್ಲಿದ್ದ ಆತ್ಮವಿಶ್ವಾಸ, ಮೊಗದಲ್ಲಿದ್ದ ಸಂತಸ ಕಂಡು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಗೃಹಲಕ್ಷ್ಮಿಯರಿಗೆ ಈ ದೀಪಾವಳಿಯ ಶುಭ ಸಂದರ್ಭದಲ್ಲಿ ಸೌಭಾಗ್ಯ, ಸಮೃದ್ಧಿ ಮತ್ತು ಗೌರವದ ಸಂಕೇತವಾದ ಬಾಗಿನ ನೀಡಿ, ಅವರೊಂದಿಗೆ ಕುಳಿತು ಭೋಜನ ಸವಿದರು.

ಮಹಿಳೆಯರು ಕೇವಲ ಕುಟುಂಬದ ಆರ್ಥಿಕ ನಿರ್ವಹಣೆಯಲ್ಲಿ ಪಾಲುದಾರರಾಗದೆ, ಸ್ವಂತ ದುಡಿಮೆ, ಉದ್ಯಮಶೀಲತೆ ಮತ್ತು ಸ್ವಾವಲಂಬನೆಯ ಮೂಲಕ ತಮ್ಮದೇ ಆದ ಗುರುತನ್ನು ರೂಪಿಸಿಕೊಳ್ಳುತ್ತಿರುವುದು "ಗೃಹಲಕ್ಷ್ಮಿ" ಯೋಜನೆಯ ಆಶಯಕ್ಕೆ ಮತ್ತಷ್ಟು ಅರ್ಥ ತುಂಬಿದೆ. ಮಹಿಳೆಯರ ಬದುಕಿನಲ್ಲಿ ಮೂಡುತ್ತಿರುವ ಈ ಆತ್ಮವಿಶ್ವಾಸ ಮತ್ತು ಸಂತಸವೇ ಯೋಜನೆಯ ಆಶಯಕ್ಕೆ ಸಾರ್ಥಕತೆ ನೀಡಿದೆ.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಎಚ್.ಎಂ.ರೇವಣ್ಣ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪದ್ಮಾವತಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ತುಷಾರ್ ಗಿರಿನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕ ಡಾ.ಮಹೇಶ್ ಬಾಬು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Comments

Leave a Comment

Prev Post ₹200 ಕೋಟಿ ಹೂಡಿಕೆ: ಸಚಿವ ಎಂ.ಬಿ.ಪಾಟೀಲ ಸಮ್ಮುಖದಲ್ಲಿ ಬೇಯರ್ ಕಂಪನಿ ಜತೆ ಒಪ್ಪಂದಕ್ಕೆ ಸಹಿ
Next Post ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ನೂತನ ಜವಳಿ ನೀತಿ ಅನಾವರಣ: ಸಚಿವ ರುದ್ರಪ್ಪ ಲಮಾಣಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News