PRABHAVAA.COM

ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ನೂತನ ಜವಳಿ ನೀತಿ ಅನಾವರಣ: ಸಚಿವ ರುದ್ರಪ್ಪ ಲಮಾಣಿ

Bengaluru Urban:

Font size:

ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ನೂತನ ಜವಳಿ ನೀತಿ ಅನಾವರಣ: ಸಚಿವ ರುದ್ರಪ್ಪ ಲಮಾಣಿ

ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ನೂತನ ಜವಳಿ ನೀತಿ ಅನಾವರಣ: ಸಚಿವ ರುದ್ರಪ್ಪ ಲಮಾಣಿ

ಬೆಂಗಳೂರು, ನವೆಂಬರ್ 6: ರಾಜ್ಯದ ಜವಳಿ ಕ್ಷೇತ್ರದಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿರುವ ಕರ್ನಾಟಕ ಜವಳಿ ಮತ್ತು ಉಡುಪು ನೀತಿ 4.0 (2026–31) ಸಿದ್ಧವಾಗಿದ್ದು, ಶೀಘ್ರದಲ್ಲೇ ಮಾನ್ಯ ಮುಖ್ಯಮಂತ್ರಿಗಳಿಂದ ಅಧಿಕೃತವಾಗಿ ಅನಾವರಣಗೊಳ್ಳಲಿದೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ಕೈಮಗ್ಗ ಮತ್ತು ಜವಳಿ ಇಲಾಖೆಯ ಯೋಜನೆಗಳು ಹಾಗೂ ವಿವಿಧ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೂತನ ಜವಳಿ ನೀತಿಯಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಹೂಡಿಕೆ ಮತ್ತು ಉದ್ಯೋಗಾವಕಾಶಗಳನ್ನು ವಿಸ್ತರಿಸುವ ಹಲವು ಹೊಸ ಕ್ರಮಗಳನ್ನು ಅಳವಡಿಸಲಾಗಿದೆ ಎಂದರು.

“ಮಾನ್ಯ ಮುಖ್ಯಮಂತ್ರಿಗಳು ವಿಶೇಷ ಮುತುವರ್ಜಿ ವಹಿಸಿ ನೂತನ ಜವಳಿ ನೀತಿಯಲ್ಲಿ ಹಲವು ಹೊಸ ಅಂಶಗಳನ್ನು ಸೇರಿಸಿದ್ದಾರೆ. ಬೆಂಗಳೂರು ಸೇರಿದಂತೆ ಈಗಾಗಲೇ ಅಭಿವೃದ್ಧಿ ಹೊಂದಿರುವ ಪ್ರದೇಶಗಳಿಗೆ ಮಾತ್ರ ಸೀಮಿತವಾಗದೆ, ರಾಜ್ಯದ ಇತರ ಭಾಗಗಳಿಗೂ ಜವಳಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯನ್ನು ವಿಸ್ತರಿಸುವುದು ಈ ನೀತಿಯ ಪ್ರಮುಖ ಉದ್ದೇಶವಾಗಿದೆ,”* ಎಂದು ಸಚಿವರು ಹೇಳಿದರು.

“ರೇಷ್ಮೆ ಕ್ಷೇತ್ರವು ಕರ್ನಾಟಕದ ಗುರುತಿನ ಭಾಗವಾಗಿದೆ. ರೇಷ್ಮೆ ನೂಲು ಉತ್ಪಾದನೆಯಿಂದ ಹಿಡಿದು ಮೌಲ್ಯವರ್ಧಿತ ಉತ್ಪನ್ನಗಳವರೆಗೆ ಸಂಪೂರ್ಣ ಮೌಲ್ಯ ಸರಪಳಿಗೆ ಹೊಸ ಹೂಡಿಕೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ನಮ್ಮ ಉದ್ದೇಶ,” ಎಂದು ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು.

ಸಭೆಯಲ್ಲಿ PM-MITRA ಪಾರ್ಕ್, ಕಲಬುರಗಿ, ವಿವಿಧ ಜವಳಿ ಪಾರ್ಕ್‌ಗಳು, ಕೈಮಗ್ಗ ಮತ್ತು ಜವಳಿ ಇಲಾಖೆಯ 2026–27ನೇ ಸಾಲಿನ ಯೋಜನೆಗಳು, ಸಹಕಾರ ಸಂಘಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಸೇರಿದಂತೆ ಇಲಾಖೆಯ ವಿವಿಧ ಸಂಸ್ಥೆಗಳ ಕಾರ್ಯಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.

ಅಧಿಕಾರಿಗಳು ಯೋಜನೆಗಳ ಅನುಷ್ಠಾನದಲ್ಲಿ ನಿಗದಿತ ಗುರಿ ಸಾಧಿಸುವುದರ ಜೊತೆಗೆ, ಕೈಮಗ್ಗ ನೇಕಾರರು, ಜವಳಿ ಉದ್ಯಮಿಗಳು, ಎಂಎಸ್‌ಎಂಇಗಳು ಹಾಗೂ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ತ್ವರಿತವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಸಭೆಯಲ್ಲಿ ಜವಳಿ ಅಭಿವೃದ್ಧಿ ಆಯುಕ್ತ ಎ.ಬಿ. ಬಸವರಾಜು, ಐಎಎಸ್, ಹೆಚ್ಚುವರಿ ನಿರ್ದೇಶಕರಾದ ಸಿ.ಎಸ್. ಯೋಗೇಶ್ ಮತ್ತು ಶ್ರೀಧರ್ ನಾಯಕ್, ಕಾವೇರಿ ಹ್ಯಾಂಡ್‌ಲೂಮ್ಸ್ ವ್ಯವಸ್ಥಾಪಕ ನಿರ್ದೇಶಕಿ ಸೌಮ್ಯ ಎಂ. ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಗೃಹಲಕ್ಷ್ಮಿಯರ ಮೊಗದಲ್ಲಿ ಮಂದಹಾಸ, ಸ್ವಾವಲಂಬನೆಯ ಬದುಕಿಗೆ ಭರವಸೆ
Next Post 371(J) ಸಮಿತಿ ಸೇವಾ ವಿಚಾರಗಳಿಗೆ ಮಾತ್ರವಲ್ಲ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೂ ಗಮನಹರಿಸಲಿ: ಡಾ. ಅಜಯ್ ಧರ್ಮಸಿಂಗ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News